ಸುಂಟಿಕೊಪ್ಪ ಸೆ.12 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಸುಂಟಿಕೊಪ್ಪದ ರಾಮಮಂದಿರದಲ್ಲಿ ನಡೆಯುತ್ತಿರುವ 60ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಆದಿ ಚುಂಚನಗಿರಿ ಮಠದ ಸಂಗೀತ ಶಿಕ್ಷಕ ರವಿ ಭೂತನಕಾಡು ಅವರ ಗೀತಗಾಯನ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಕಾಣದ ಕಡಲಿಗೆ ಹಂಬಲಿಸಿದೆ ಮನ’ ‘ಕೋಡಗನ ಕೋಳಿ ನುಂಗಿತ್ತ”ಸ್ವಾಮಿ ಅಯ್ಯಪ್ಪ’ ‘ಮನದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಸೇರಿದಂತೆ ದಾಸರ ಗೀತೆಗಳು, ಭಕ್ತಿಗೀತೆಗಳು, ಜಾನಪದ ಗೀತೆಗಳು, ಭಾವಗೀತೆಗಳ ಮೂಲಕ ರವಿ ಭೂತನಕಾಡು ಭಕ್ತರನ್ನು ಸಂಗೀತದ ಮೂಲಕ ರಂಜಿಸಿದರು. ಇದರೊಂದಿಗೆ ಧನಂಜಯ ಅಗೋಳಿಕಜೆ ಅವರು ನಡೆಸಿಕೊಟ್ಟ ರಾಷ್ಟ್ರ ವಿಚಾರ ಮಂಥನ ಎಲ್ಲರ ಮನಸೂರೆಗೊಂಡಿತು. ರಾತ್ರಿ ಮಹಾಪೂಜೆ, ವಿಶೇಷ ಪೂಜೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಲೇಖಕ: admin
ಮಡಿಕೇರಿ ಸೆ.12 NEWS DESK : ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸೆ.13 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಸೆ.12 NEWS DESK : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ- ಎಚ್‍ಐವಿ ಏಡ್ಸ್ ಅರಿವು ಮಾಸಾಚರಣೆ- 2024ರ ಅಂಗವಾಗಿ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಡಿಕೇರಿಯ ಕೇಂದ್ರೀಯ ವಿದ್ಯಾಲಯದ ಕೆ ಸರ್ವದ್ ಶೆಣೈ ಮತ್ತು ನಹುಷ ಭೂಷಣ್ ನೌಶ ಭೂಷಣ್ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಈ ತಂಡ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ಹಾಗೂ ರೂ.6 ಸಾವಿರ ನಗದು ಪುರಸ್ಕಾರವನ್ನು ಪಡೆದುಕೊಂಡಿತು. ಕೂಡಿಗೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಸಿಂಜನ್ ಕೆ.ಜಿ ಹಾಗೂ ಆದಿತ್ಯ ಬಿ.ಎಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಕುಶಾಲನಗರದ ಫಾತಿಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಜೆಸಿಕಾ ಮನೋಜ್ ಮತ್ತು ಜೋಮಾ ಪಿ. ಜೋಸೆಫ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಮಾದಾಪುರದ…
ಸುಂಟಿಕೊಪ್ಪ NEWS DESK ಸೆ.11 : ಬೋಯಿಕೇರಿಯ ಇಂಚರ ಶ್ರೀ ಶಕ್ತಿ ಸಂಘದ 10ನೇ ವಾಷೀಕೋತ್ಸವವನ್ನು ಶ್ರೀ ರಾಘವೇಂದ್ರ ದೇವಸ್ಥಾನ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ಸಂಘದ ಮಹಿಳಾ ಸದಸ್ಯರಿಗೆ ಅಡುಗೆ ಸ್ಫರ್ಧೆಯನ್ನು ಆಯೋಜಿಸಲಾಗಿತ್ತು. ಮಹಿಳೆಯರು ಶುಚಿರುಚಿಯಾದ ಖಾದ್ಯಗಳನ್ನು ತಯಾರಿಸಿ ಸಂಭ್ರಮಿಸಿದರು. ವಿಜೇತರಿಗೆ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು. ನಂತರ ಪ್ರಧಾನಮಂತ್ರಿ ಮಾತೃ ವಂದನಾ ನೋಂದಣಿ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಪ್ರಬಾರ ಸಹಾಯಕ ಶಿಶು ಅಭಿವೃಧ್ದಿ ಯೋಜನಾಧಿಕಾರಿ ಸವಿತಾ ಕೀರ್ತನ್, ಅಂಗನವಾಡಿ ಕಾರ್ಯಕರ್ತೆ ಗೀತಾ, ಸಹಾಯಕಿ ಅನಿತಾ, ಇಂಚರ ಶ್ರೀ ಶಕ್ತಿ ಸಂಘದ ಪಧಾಧಿಕಾರಿಗಳು ಉಪಸ್ಥಿತರಿದ್ದರು.
ಗೋಣಿಕೊಪ್ಪ NEWS DESK ಸೆ.11 : ನಾಗರಿಕತೆಯ ಬೆಳವಣಿಗೆಗೆ ಮೂಲ ಕಾರಣಗಳಲ್ಲಿ ವಿಶ್ವಕರ್ಮ ಸಮುದಾಯದವರ ಸೇವೆಯು ಸರ್ವಶ್ರೇಷ್ಠವಾದದ್ದು ಎಂದು ಖ್ಯಾತ ಸಾಹಿತಿ ಡಾ.ಜೆ ಸೋಮಣ್ಣ ಪ್ರತಿಪಾದಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಮತ್ತು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಗೋಣಿಕೊಪ್ಪ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ದಿವಂಗತ ಸಂಪಾಜೆ ಸಣ್ಣಯ್ಯ ಪಟೇಲ್, ದಿವಂಗತ ಪುಟ್ಟಮ್ಮ, ದಿವಂಗತ ಹೆಬ್ಬಾಲೆ ನಂಜಾಚಾರ್ ಜ್ಞಾಪಕಾರ್ಥದ ಉಪನ್ಯಾಸದಲ್ಲಿ ಸಮಾಜಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ವಿಷಯವಾಗಿ ಮಾತನಾಡಿದರು. ಜಗತ್ತನ್ನು ನಿರ್ಮಾಣ ಮಾಡುವುದರಲ್ಲಿ ವಿಶ್ವ ಕರ್ಮ ಸಮುದಾಯದವರ ಕೊಡುಗೆ ಮಹತ್ವವಾದದ್ದು. ಯಾವುದೇ ಆಧುನಿಕ ತಂತ್ರಜ್ಞಾನಗಳ ಇಲ್ಲದೆ ಇರುವ ಕಾಲಘಟ್ಟದಲ್ಲಿ ಇಂಜಿನಿಯರ್ ಪದ ಹುಟ್ಟುವ ಪೂರ್ವದಲ್ಲಿ ವಿಶ್ವಕರ್ಮರು ತಮ್ಮದೇ ಆದ ಚಿಂತನೆಯಲ್ಲಿ ಈ ಜಗತ್ತನ್ನು ನಿರ್ಮಿಸಿದ್ದಾರೆ. ರಾಮಾಯಣ ಕಾಲದಲ್ಲಿ ರಾವಣ ಸೀತೆಯನ್ನು ಅಪಹರಿಸಲು ಬಳಸಿದ ಪುಷ್ಪಕ ವಿಮಾನ ವಿಶ್ವಕರ್ಮರ ಚಿಂತನೆಯಲ್ಲಿ ಹುಟ್ಟಿಕೊಂಡದ್ದು. ಲಂಕೆಯಂತಹ ಪ್ರಬುದ್ಧ ನಗರವನ್ನು ಕಟ್ಟಿದ ಹೆಗ್ಗಳಿಕೆಯು ಇವರದು ಜತೆಗೆ ಜಗತ್ತಿನಲ್ಲಿರುವ ಬಹುತೇಕ ಪಾರಂಪರಿಕ ಕಟ್ಟಡಗಳು,…
ಸೋಮವಾರಪೇಟೆ NEWS DESK ಸೆ.11 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 71ನೇ ವಾರ್ಷಿಕ ಮಹಾಸಭೆ ಸೆ.15ರ ಭಾನುವಾರ ಪೂರ್ವಾಹ್ನ 10 ಗಂಟೆಗೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ರೂಪಾ ಸತೀಶ್ ಹೇಳಿದರು. ಸಂಘದ ಒಟ್ಟು ವ್ಯವಹಾರ 2024ರ ದಿನಾಂಕ ಮಾರ್ಚ್ 31ಕ್ಕೆ 380 ಕೋಟಿಯಾಗಿದ್ದು, ಸಂಘದ ಒಟ್ಟು ದುಡಿಯುವ ಬಂಡವಾಳ 77.26 ಕೋಟಿಯಾಗಿರುತ್ತದೆ.2023-24ನೇ ಸಾಲಿಗೆ ಸಂಘವು 1.19 ಕೋಟಿ ಲಾಭ ಗಳಿಸಿರುತ್ತದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘದಲ್ಲಿ ಜಾಮೀನು ಸಾಲದ ವಿಮಾ ಯೋಜನೆ, ಪಿಗ್ಮಿ ಓವರ್‌ಡ್ರಾಫ್ಟ್ ಸಾಲದ ವಿಮಾ ಯೋಜನೆ,ಸ್ವಸಹಾಯ ಮತ್ತು ಜಂಟಿಭಾದ್ಯತಾ ಗುಂಪುಗಳ ಯೋಜನೆಯನ್ನು ರೂಪಿಸಲಾಗಿದೆ.ಹಿಂದಿನಿಂದಲೂ ಸಂಘವು ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ಎ ತರಗತಿಯನ್ನು ಪಡೆದುಕೊಂಡಿದ್ದು 2023-24ನೇ ಸಾಲಿಗೂ ಸಹ ಎ ತರಗತಿ ಪಡೆದುಕೊಂಡಿರುತ್ತದೆ ಎಂದರು. ಒಬ್ಬ ಸದಸ್ಯನ ಎಲ್ಲಾ ಸಾಲದ ಮಿತಿ ಗರಿಷ್ಠ 60 ಲಕ್ಷ ಆಗಿದ್ದು,ಸಂಘದಲ್ಲಿ ಯಶಸ್ವಿನಿ ರೈತರ ವಿಮಾ ಯೋಜನೆ ಜಾರಿಯಲ್ಲಿದ್ದು 2023-24ನೇ ಸಾಲಿನಲ್ಲಿ ಒಟ್ಟು…
ಮಡಿಕೇರಿ NEWS DESK ಸೆ.11 : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಬುಧವಾರ ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಟಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಬಿ, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಎನ್.ಎಚ್., ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು, ಅರಣ್ಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೈಯದ್ ಅಹಮದ್ ಷಾ ಹುಸೈನಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಪಿ.ಅಭಯಂಕರ್ ಇತರರು ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ಸಲ್ಲಿಸಿದರು. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ…
ಮಡಿಕೇರಿ NEWS DESK ಸೆ.11 : ನಗರದಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ವತಿಯಿಂದ ಶನಿವಾರಸಂತೆಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಘಟಕವಿದೆ. ಜೊತೆಗೆ ಕುಶಾಲನಗರದಲ್ಲಿ ನೂತನ ಬಸ್ ಘಟಕ ನಿರ್ಮಾಣವಾಗುತ್ತಿದೆ. ಈ ಎರಡು ಘಟಕಕ್ಕೆ ವಿಭಾಗೀಯ ಕಚೇರಿ ಆರಂಭಿಸಲು ಕಷ್ಟಸಾಧ್ಯ. ಆದ್ದರಿಂದ ಹತ್ತಿರದ ರಾಮನಾಥಪುರ ಇತರೆ ಒಟ್ಟು 4 ಘಟಕಗಳನ್ನು ಒಳಗೊಂಡು ಒಂದು ವಿಭಾಗೀಯ ಕಚೇರಿ ಆರಂಭಿಸಬೇಕು. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪ್ರಯತ್ನಿಸಲಾಗುವುದು ಎಂದು ಸಾರಿಗೆ ಸಚಿವರು ಹೇಳಿದರು. ಸರ್ಕಾರದ ಶಕ್ತಿ ಯೋಜನೆ ನಂತರ ಕರ್ನಾಟಕ ಸಾರಿಗೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮತ್ತು ಸುಧಾರಣೆಯಾಗಿದೆ. ಪ್ರತಿನಿತ್ಯ ಸಾವಿರಾರು ಮಹಿಳೆಯರು ಬಸ್‌ನಲ್ಲಿ ಸಂಚರಿಸುತ್ತಿದ್ದಾರೆ ಎಂದು…
ಮಡಿಕೇರಿ ಸೆ.11 NEWS DESK : ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು ಡಿಸೆಂಬರ್ ತಿಂಗಳಿನಲ್ಲಿ ವಜ್ರಮಹೋತ್ಸವ ಸಂಭ್ರಮದಲ್ಲಿದ್ದು, ಈ ಹಿನ್ನಲೆ ಸಂಸ್ಥೆಯ ಹಳೆ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸುವ ಉದ್ದೇಶದಿಂದ ಸೆ.22 ರಂದು ಹಳೇ ವಿದ್ಯಾರ್ಥಿಗಳ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘ ರಚನೆ ಹಾಗು ಸಂಸ್ಥೆಯ ವಜ್ರ ಮಹೋತ್ಸವ ಆಚರಣೆ ಕುರಿತು ಚರ್ಚೆ ನಡೆಸಲಾಗುವುದು. ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವ ಮೂಲಕ ವಜ್ರ ಮಹೋತ್ಸವದ ಯಶಸ್ವಿಗೆ ಕೈ ಜೋಡಿಸುವಂತೆ ಸಂಸ್ಥೆಯ ಪ್ರಾಂಶುಪಾಲ ಮಂದಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೆ.ವಿ.ರಾಜ ಸುಂದರಂ 9482246705, ಎಲ್.ಪಿ.ಪಾಲಾಕ್ಷ 9481882803, ಕೆ.ಎಸ್.ಅಶ್ವಿನಿ 9481469809 ಸಂಪರ್ಕಿಸಬಹುದಾಗಿದೆ.
ಪುತ್ತೂರು ಸೆ.11 NEWS DESK : ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್‍ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನಗಳ ಹೊಸಯುಗದ ಅನಾವರಣದ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2024 ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಪೋರೇಟ್ ಕಂಪೆನಿಗಳು ಅಂಕಗಳ ಪರಿಗಣನೆಗಿಂತ ನಿಗದಿತ ವಿಷಯಗಳ ಬಗ್ಗೆ ಹೊಂದಿರುವ ಪರಿಣತಿಯನ್ನು ಗಮನಿಸುತ್ತವೆ ಎಂದರು. ಇಂತಹ ಸಮ್ಮೇಳನಗಳು ಹೊಸ ಹೊಸ ವಿಷಯಗಳ ತಿಳುವಳಿಕೆಗೆ ಸಹಕಾರಿಯಾಗುತ್ತದೆ ಎಂದು ನುಡಿದರು. ಮಂಗಳೂರು ವಿನೀರ್ ಇಂಟರ್ನೇಶನಲ್ ಕನ್ಸಲ್‍ಟೆನ್ಸಿ ಯ ಸಹಸಂಸ್ಥಾಪಕ ಮೆಲ್ವಿನ್ ಸಿಕ್ವೇರಾ ಮಾತನಾಡಿ, ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನವನ್ನು ಕಲಿತುಕೊಳ್ಳುವುದು ಅತೀ ಅಗತ್ಯ ಇಲ್ಲವಾದರೆ ನಾವು ಬಹಳ ಹಿಂದುಳಿಯುತ್ತೇವೆ. ನಾವು ಕಲಿತುಕೊಂಡು ಅದನ್ನು ಸಮಾಜದ…






