ಮಡಿಕೇರಿ ಜು.24 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್‌ಸಿ ವತಿಯಿಂದ ವಿರಾಜಪೇಟೆ ಗಡಿಯಾರ ಕಂಬದ ಬಳಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಭೂಮಾಫಿಯಾದ ವಿರುದ್ಧ ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು. ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವರ ಪರ ನಡೆಸುತ್ತಿರುವ ಕಾನೂನು ಹೋರಾಟಕ್ಕೆ ವಿರುದ್ಧವಾಗಿ ಅರ್ಜಿ ಸಲ್ಲಿಸಲು ಕೆಲವು ಕೊಡವ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ ಎಂದು ನಾಚಪ್ಪ ಆರೋಪಿಸಿದರು. ಭಾಗಮಂಡಲದಲ್ಲಿ ಕೊಡವ ಟ್ರಸ್ಟ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನದ ಕಾಮಗಾರಿಗೆ ಭೂಪರಿವರ್ತನೆ ಮಾಡಲು ಅವಕಾಶ ನೀಡಿಲ್ಲ. ಬಲಾಢ್ಯ ಸಂವಿಧಾನೇತರ ಶಕ್ತಿಗಳು ಇದಕ್ಕೆ ಅಡ್ಡಿಯಾಗಿವೆ. ಆದರೆ ಭೂಮಾಫಿಯಾ ಮತ್ತು ಕಾರ್ಪೋರೇಟ್…
ಲೇಖಕ: admin
ಮಡಿಕೇರಿ ಜು.26 NEWS DESK : ಕೊಡಗು ಹಿಂದು ಜಾಗರಣ ವೇದಿಕೆ ಹಾಗೂ ಮಡಿಕೇರಿಯ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26 ರಂದು ಕಾರ್ಗಿಲ್ ವಿಜಯ್ ದಿವಸ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಮುಖ್ಯರಸ್ತೆಯಲ್ಲಿರುವ ಹುತಾತ್ಮ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುವುದು. ಮುಖ್ಯ ಅತಿಥಿಗಳಾಗಿ ಭಾರತೀಯ ನೌಕಾದಳದ ನಿವೃತ್ತ ಸೇನಾಧಿಕಾರಿ ಚೋಂಡಿರ ಸುರೇಶ್, ಮಾಜಿ ಸೈನ್ಯಾಧಿಕಾರಿಗಳು, ಗಣ್ಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಸಾಮಾಜಿಕ ಕಾರ್ಯಕರ್ತ ಎಸ್.ಜಯಪ್ರಕಾಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಕಾರ್ಯಕ್ರಮಕ್ಕೆ ದೇಶಾಭಿಮಾನಿಗಳು, ಮಾಜಿ ಯೋಧರು, ಸಂಘ-ಸಂಸ್ಥೆಗಳ ಪ್ರಮುಖರು, ಯುವಕರು, ವಿದ್ಯಾರ್ಥಿ ಸಮೂಹ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಿಂದು ಜಾಗರಣ ವೇದಕೆ ಕೊಡಗು ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಮಡಿಕೇರಿ ಜು.24 NEWS DESK : ಮಾನವೀಯ ಸ್ನೇಹಿತರ ಒಕ್ಕೂಟ ವತಿಯಿಂದ ಕಾರುಣ್ಯ ಕಾರ್ಯಕ್ರಮದ ಮೂಲಕ ನಗರದ ವಿಕಾಸ್ ಆಶ್ರಮದ ಹಿರಿಯ ಜೀವಗಳಿಗೆ ಸ್ವೆಟರ್, ಹೊದಿಕೆ ವಿತರಿಸಲಾಯಿತು. ವೃದ್ಧಾಶ್ರಮದ 31 ಹಿರಿಯ ಜೀವಗಳಿಗೆ ಸ್ವೆಟರ್, ಹೊದಿಕೆ, ಸ್ಕರ‍್ಫ್ , ಟೋಪಿ ಮುಂತಾದವುಗಳನ್ನು ವಿತರಿಸಿ ಪ್ರಶಂಸೆಗೆ ಪಾತ್ರರಾದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಡ್ಮಿನ್ ಶಶಿಕುಮಾರ್, ನಮ್ಮ ಒಕ್ಕೂಟವು ಸಮಾಜದಲ್ಲಿ ತೀರಾ ಬಡತನದಲ್ಲಿರುವಂತಹ ಫಲಾನುಭವಿಗಳಿಗೆ ಪ್ರಯೋಜನ ವಾಗುವಂತಹ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಂಡು ಮುಂದುವರಿಯುತ್ತಾ ಬಂದಿದೆ ಎಂದು ಹೇಳಿದರು. ಇಂತಹ ಕಾರುಣ್ಯ ಕಾರ್ಯಕ್ರಮಗಳನ್ನು ನಡೆಸುವ ಕುರಿತು ಪ್ರಸ್ತಾಪಿಸಿದಾಗಲೆಲ್ಲ ಒಕ್ಕೂಟದ ಸದಸ್ಯರು ಉದಾರ ಮನಸ್ಸಿನಿಂದ ಸಹಕರಿಸುತ್ತಾ ಬರುತ್ತಿದ್ದಾರೆ ಎಂದು ದಾನಿಗಳ ಕೊಡುಗೆಯನ್ನು ಸ್ಮರಿಸಿಕೊಂಡರು. ಕಳೆದ ಜೂನ್ ತಿಂಗಳಿನಲ್ಲಿ ಮಡಿಕೇರಿಯಲ್ಲಿ ನಡೆಸಿದ ಸಮ್ಮಿಲನ ಕಾರ್ಯಕ್ರಮದ ಬಳಿಕ ಒಕ್ಕೂಟದಲ್ಲಿ ಹೊಸ ಚೈತನ್ಯ ಮೂಡಿದೆ. ಸದಸ್ಯರುಗಳಲ್ಲಿ ಹೆಚ್ಚಿನ ಹುರುಪು ಉಲ್ಲಾಸ ಕಾಣಿಸಿಕೊಂಡಿದೆ ಎಂದರು. ನಾವು ನಡೆಸುತ್ತಿರುವ ಜನೋಪಯೋಗಿ ಕಾರ್ಯಕ್ರಮಗಳನ್ನು ಮೆಚ್ಚಿ ಸ್ವಯಂ ಪ್ರೇರಿತರಾಗಿ ಪ್ರತಿಮಾಸ ಮೊತ್ತವನ್ನು ಒಕ್ಕೂಟಕ್ಕೆ ನೀಡಲು…
ಮಡಿಕೇರಿ ಜು.24 NEWS DESK : ಬಾಳೆಲೆ ಗ್ರಾ.ಪಂ ವತಿಯಿಂದ ಗಂಧದಗುಡಿ ಕಾಲೋನಿಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ 2024 -25ನೇ ಸಾಲಿನ ಪಂಚಾಯಿತಿ ನಿಧಿಯ ಶೇ.25ರ ಅನುದಾನದಲ್ಲಿ ಮಲ್ಟಿಮೀಡಿಯಾ ಉತ್ತಮ ಗುಣಮಟ್ಟದ 50 ಕುರ್ಚಿ ಗಳನ್ನು ವಿತರಿಸಲಾಯಿತು. ಗ್ರಾ.ಪಂ ಅಧ್ಯಕ್ಷರಾದ ಮುಕ್ಕಾಟಿರ ಜಾನಕಿ ಕಾವೇರಪ್ಪ, ಸದಸ್ಯರುಗಳಾದ ಆದೇಂಗಡ ವಿನು ಉತ್ತಪ್ಪ, ಗ್ರೇಸಿ, ಅಭಿವೃದ್ದಿ ಅಧಿಕಾರಿ ಪರಮೇಶ್ವರ್, ಸಿಬ್ಬಂದಿಗಳಾದ ಮರ‍್ತಿ, ಮಣಿ ಪ್ರಮುಖರಾದ ಕುಮಾರ್, ಮಹಿಳಾ ಸಂಘ ಮತ್ತು ಸಂಜೀವಿನಿ ಒಕ್ಕೂಟದ ಪ್ರಮುಖರು ಹಾಜರಿದ್ದರು.
ಕಠ್ಮಂಡು ಜು.24 NEWS DESK : ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ ಬೆಳಗ್ಗೆ 19 ಜನರನ್ನು ಹೊತ್ತೊಯ್ದ ವಿಮಾನ ಟೇಕಾಫ್ ವೇಳೆ ಪತನಗೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯನ್ನು ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ಪತ್ರಿಕೆ ವರದಿ ಮಾಡಿದೆ. ವಿಮಾನವು ದೇಶೀಯ ಶರ‍್ಯ ಏರ್‌ಲೈನ್‌ಗೆ ಸೇರಿದ್ದು, ಹಿಮಾಲಯ ಗಣರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾದ ಪೋಖರಾದ ರೆಸರ‍್ಟ್ ಪಟ್ಟಣಕ್ಕೆ ತೆರಳುತ್ತಿತ್ತು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕರ‍್ಯದಲ್ಲಿ ತೊಡಗಿರುವಾಗ ಬೆಳಗ್ಗೆ ೧೧:೦೦ ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಮಡಿಕೇರಿ ಜು.24 NEWS DESK : ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆಯಲ್ಲಿ 2024-25ರ ಸಾಲಿನ ಪ್ರಥಮ ವರ್ಷದ ಬಿ.ಎ(ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ ಐಚ್ಛಿಕ), ಬಿ.ಕಾಂ ಮತ್ತು ಬಿ ಬಿ ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜು ಸುಸಜ್ಜಿತವಾದ ತರಗತಿ ಕೊಠಡಿಗಳನ್ನು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಶ್ಯಕತವಿರುವ 14,000 ಪುಸ್ತಕಗಳನ್ನು ಹೊಂದಿರುವ ವಿಶಾಲವಾದ ಗ್ರಂಥಾಲಯ, ಇ-ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ವೈಫೈ ಸೌಲಭ್ಯ, ಸಿ.ಸಿ.ಕ್ಯಾಮರಾ ಕಣ್ಗಾವಲಿನಲ್ಲಿರುವ ಸುಸಜ್ಜಿತ ಕಟ್ಟಡ, ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ,ಮಾದಕ ವಸ್ತು ನಿರ್ಮೂಲನಾ ಸಮಿತಿ,ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಧುನಿಕ ರೀತಿಯ ಬೋಧನಾ ಕ್ರಮ,ಉದ್ಯೋಗ ಮಾರ್ಗ ದರ್ಶನ ಕೇಂದ್ರ, ವಿದ್ಯಾರ್ಥಿ ನಿಲಯ, ಕ್ಯಾಂಟೀನ್ ವ್ಯವಸ್ಥೆ, ಇಕೋಕ್ಲಬ್, ವಿದ್ಯಾರ್ಥಿ ಭ್ರಾತೃತ್ವ ವೇದಿಕೆ, ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ಸಂಘ, ಅಂತರ ಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ ಕಾರ್ಯಕ್ರಮಗಳು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್.,ರೋವರ್ಸ್, ರೇಂಜರ್ಸ್, ರೆಡ್ ಕ್ರಾಸ್ ಮುಂತಾದ ಘಟಕಗಳು…
ಮಡಿಕೇರಿ ಜು.24 NEWS DESK : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯುಆರ್‌ಡಬ್ಲ್ಯು/ವಿಆರ್‌ಡಬ್ಲ್ಯು ಹುದ್ದೆಗಳು ಖಾಲಿ ಇದ್ದು ಬೌದ್ಧಿಕ ವಿಕಲತೆ ಹಾಗೂ ಮಾನಸಿಕ ಅಸ್ವಸ್ಥರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಆ.23 ರೊಳಗೆ ಅರ್ಜಿ ಸಲ್ಲಿಸಬಹುದು. ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‌ಡಬ್ಲ್ಯು) ಮಾಸಿಕ ಗೌರವಧನ ರೂ. 9 ಸಾವಿರ, ಎಸ್‌ಎಸ್‌ಎಲ್‌ಸಿ ಉತ್ತೀರ್ಣ, ಅನುತ್ತೀರ್ಣ, ಶೇ.40ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್‌ಡಬ್ಲ್ಯು) ಮಾಸಿಕ ಗೌರವಧನ ರೂ.9 ಸಾವಿರ, ಎಸ್‌ಎಸ್‌ಎಲ್‌ಸಿ ಉತ್ತೀರ್ಣ, ಅನುತ್ತೀರ್ಣ ಶೇ.೪೦ ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ: ಯುಆರ್‌ಡಬ್ಲ್ಯು: ನಗರಸಭೆ ಮಡಿಕೇರಿ, ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿ. ವಿಆರ್‌ಡಬ್ಲ್ಯು: ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಬೇಂಗೂರು, ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು, ನಾಲ್ಕೇರಿ,…
ಮಡಿಕೇರಿ ಜು.23 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ…
ಮಡಿಕೇರಿ ಜು.23 NEWS DESK : ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ಮಹಿಳಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಷಿಸ್ಟಂಟ್ ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಾನಿಕ್ ಮೆಕಾನಿಕ್ ೨ ವರ್ಷ ಎನ್‌ಸಿವಿಟಿ ಯೋಜನೆ ಬಾಕಿ ಉಳಿದಿರುವ ಸೀಟುಗಳು 31 ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಷಿಸ್ಟಂಟ್(1 ವರ್ಷ) ಬಾಕಿ ಉಳಿದಿರುವ ಸೀಟುಗಳು 11 ಪ್ರವೇಶಕ್ಕೆ ಆಗಸ್ಟ್, 31 ರವರೆಗೆ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಪ್ರವೇಶ ಮಾಡಲಾಗುವುದು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ಮಹಿಳಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜು.24 NEWS DESK : ಅರ್ವತ್ತೊಕ್ಕಲು ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಜು.27 ಮತ್ತು 28 ರಂದು ನಾಲ್ಕನೇ ವರ್ಷದ ಹಿಂದೂ ಬಾಂಧವರ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಕ್ಲಬ್‌ನ ಕಾರ್ಯದರ್ಶಿ ಗಿರಿ ಅಪ್ಪಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.28 ರಂದು ಬೆಳಿಗ್ಗೆ 8 ಗಂಟೆಗೆ ಅರ್ವತ್ತೊಕ್ಕಲು ಗ್ರಾಮದ ತಳೂರು.ಎಂ.ಚಂಗಪ್ಪ ಹಾಗೂ ತಳೂರು.ಎಂ.ಕುಶಾಲಪ್ಪ ಅವರ ಗದ್ದೆಯಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ಹಿರಿಯರಾದ ಪೊನ್ನೇಟಿ ಅಕ್ಕಮ್ಮ ಕುಟ್ಟಪ್ಪ, ಸ್ಥಳ ದಾನಿಗಳಾದ ತಳೂರು.ಎಂ.ಚಂಗಪ್ಪ, ತಳೂರು.ಎಂ.ಕುಶಾಲಪ್ಪ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ತಳೂರು ಕುಟುಂಬದ ಹಿರಿಯರಾದ ತಳೂರು ಮೊಣ್ಣಪ್ಪ, ತಳೂರು ಬೋಜಮ್ಮ ಯಂಕಪ್ಪ, ಕೃಷಿಕರಾದ ಪಟ್ಟಾಂದೀರ ಚಂಗಪ್ಪ, ಕಡ್ಲೇರ.ಎಂ.ಗಣೇಶ್, ಕೋಳುಮಾಡನ ಉತ್ತಪ್ಪ, ಮುಂಜಾಂದೀರ ರಮೇಶ್, ವಾಯುಸೇನೆಯ ನಿವೃತ್ತರಾದ ಜಬ್ಬಂಡ ಕುಟ್ಟಪ್ಪ, ಮುಂಜಾಂದೀರ ಕುಟುಂಬದ ಹಿರಿಯರಾದ ಮುಂಜಾಂದೀರ ದೇವಕ್ಕಿ ಸುಬ್ಬಯ್ಯ, ಕೋಳುಮಾಡನ ಕುಟುಂಬದ ಹಿರಿಯರಾದ ಕೋಳುಮಾಡನ ಪುಷ್ಪವೇಣಿ ನಾಣಯ್ಯ, ಚಾತುರನ ಕುಟುಂಬದ ಹಿರಿಯರಾದ ಚಾತುರನ ಗೌರಮ್ಮ, ನಿವೃತ್ತ ಮುಖ್ಯೋಪಧ್ಯಾಯಿನಿ…






