ಕುಶಾಲನಗರ ಜು.11 NEWS DESK : ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ, ಸರಕಾರಿ ಇಂಜಿನಿಯರಿಂಗ್ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಗೆ ಅಡ್ಡಿ ಉಂಟಾಗುತ್ತಿದೆ. ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತೊಡಕು ಉಂಟಾಗುವುದು ಸಹಜವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ.ಲೋಕೇಶ್ ಭರಣಿ ಅವರು ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಕಾರ್ಯದರ್ಶಿ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಜನಸಂಖ್ಯಾ ಸ್ಫೋಟದಿಂದ ಆಗುತ್ತಿರುವ ಪ್ರಸಕ್ತ ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಕುಶಾಲನಗರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ಇಂದೂಧರ್ ಅವರು ಪ್ರಾಸ್ತಾವಿಕ…
ಲೇಖಕ: admin
ಮಡಿಕೇರಿ ಜು.11 NEWS DESK : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಮೊಮ್ಮಗನೇ ಅಜ್ಜಿಯನ್ನು ಹತ್ಯೆ ಮಾಡಿರುವ ಆರೋಪದಡಿ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರವರ ಜಾನಕಿ(48) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಲೈನ್‌ಮನೆಯೊಂದರಲ್ಲಿ ವಾಸವಿದ್ದ ಜಾನಕಿ ಹಾಗೂ ಮೊಮ್ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಕಲಹ ಏರ್ಪಟ್ಟಿದೆ. ಈ ಸಂದರ್ಭ ಮೊಮ್ಮಗ ಹಲ್ಲೆ ಮಾಡಿದ್ದು, ಜಾನಕಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಪೊಲೀಸರು ಜಾನಕಿಯ ಪತಿ ಅಪ್ಪು ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಜು.11 NEWS DESK : ಜಗತ್ತಿನಲ್ಲಿಯೇ ರೋಟರಿ ಸಂಸ್ಥೆಯು ಅತ್ಯಂತ ಕ್ರಿಯಾಶೀಲ ಸೇವಾ ಸಂಸ್ಥೆಯಾಗಿ ಖ್ಯಾತವಾಗಿದ್ದು, ರೋಟರಿಯ ಸಾಮಾಜಿಕ ಹೊಣೆಯನ್ನು ಅತ್ಯಂತ ಯಶಸ್ಸಿಯಾಗಿ ಮುಂದುವರೆಸುವ ಮಹತ್ವದ ಹೊಣೆಗಾರಿಕೆ ಸದಸ್ಯರೆಲ್ಲರ ಮೇಲಿದೆ ಎಂದು ಮೈಸೂರಿನ ಉದ್ಯಮಿ, ರೋಟರಿ ಪ್ರಮುಖ ಯಶಸ್ವಿ ಸೋಮಶೇಖರ್ ಕರೆ ನೀಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪೊನ್ನಚ್ಚನ ಮಧುಸೂದನ್ ಮತ್ತು ಕಾಯ೯ದಶಿ೯ಯಾಗಿ ಕಟ್ಟೆಮನೆ ಸೋನಜಿತ್ ಅವರಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಜಾಗತಿಕವಾಗಿ 119 ವಷ೯ಗಳ ಭವ್ಯ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ಪ್ರತೀ ವಷ೯ ಕೋಟ್ಯಾಂತರ ಜನರಿಗೆ ಸೇವೆಯ ಮೂಲಕ ನೆರವು ನೀಡುತ್ತಲೇ ಬಂದಿದೆ, ರೋಟರಿ ಸದಸ್ಯರು ನೀಡುವ ದೇಣಿಗೆ ಜಗತ್ತಿನ ಯಾವುದೋ ಒಂದು ಭಾಗದಲ್ಲಿ ಸಂತ್ರಸ್ಥರಿಗೆ ತಲುಪುತ್ತಿದೆ ಎಂದು ಹೇಳಿದ ಸೋಮಶೇಖರ್, ರೋಟರಿ ಸಂಸ್ಥೆಯಲ್ಲಿ ಪ್ರತೀ ಜುಲೈನಲ್ಲಿ ಆಡಳಿತ ಮಂಡಳಿಯ ಬದಲಾವಣೆ ಮಾದರಿಯಾಗಿದ್ದು ಪ್ರಕೖತ್ತಿ ನಿಯಮವಾದ ಸೂಯೋ೯ದಯ ಮತ್ತು ಸೂಯ೯ಸ್ತಮನಾದಂತೆಯೇ ರೋಟರಿಯಲ್ಲಿಯೂ ಅಧಿಕಾರದ…
ಮಡಿಕೇರಿ ಜು.11 : ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ, ನರಿಯಂದಡ ಗ್ರಾಮ ಪಂಚಾಯ್ತಿ ಹಾಗೂ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಿಯಂದಡ, ಕೋಕೇರಿ, ಚೇಲಾವರ, ಕರಡ, ಅರಪಟ್ಟು, ಪೊದವಾಡ, ಮರಂದೋಡ, ಕಕ್ಕಬೆ ಗ್ರಾಮಸ್ಥರು ಚೆಯ್ಯಂಡಾಣೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಾಪೋಕ್ಲು-ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ಫಸಲುಗಳನ್ನು ಧ್ವಂಸಗೊಳಿಸುತ್ತಿವೆ. ಸುಮಾರು 70ರಿಂದ 80ಕ್ಕೂ ಹೆಚ್ಚು ಕಾಡಾನೆಗಳು ಈ ವ್ಯಾಪ್ತಿಯಲ್ಲಿ ನಿರಂತರ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ ಹಾಗೂ ನಿರಂತರ ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅರಣ್ಯ ಇಲಾಖೆ ಹಾಗು ಚೆಸ್ಕಾಂ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ರಸ್ತೆ ತಡೆ ನಡೆಸಲು ಗ್ರಾಮಸ್ಥರು ಮುಂದಾದ ಸಂದರ್ಭ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್…
ಮಡಿಕೇರಿ ಜು.11 NEWS DESK : ವಿರಾಜಪೇಟೆಯಲ್ಲಿರುವ ‘ಶ್ರೀ ಕಾವೇರಿ ಆಶ್ರಮ’ ಧಾರ್ಮಿಕ ಸಂಸ್ಥೆಯಾಗಿದ್ದು, ಇದರ ವಿರುದ್ಧ ಬರುತ್ತಿರುವ ಆರೋಪಗಳನ್ನು ಅಲ್ಲಗಳೆದಿರುವ ಶ್ರೀ ಕಾವೇರಿ ಆಶ್ರಮ ಟ್ರಸ್ಟ್‍ನ ಪದಾಧಿಕಾರಿಗಳು, ಆಶ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ಸುವ್ಯವಸ್ಥಿತವಾಗಿ ನಡೆಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶ್ರೀಕಾವೇರಿ ಆಶ್ರಮ ಟ್ರಸ್ಟ್‍ನ ಟ್ರಸ್ಟಿಗಳಾದ ಎನ್.ಯು. ಅಯ್ಯಪ್ಪ ಅವರು, ಶ್ರೀ ಅಪ್ಪಯ್ಯ ಸ್ವಾಮಿಗಳಿಂದ 1941 ರಲ್ಲಿ ಉದ್ಘಾಟನೆಗೊಂಡ ಶ್ರೀ ಕಾವೇರಿ ಆಶ್ರಮವು ನಿರಂತರವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಮೂಡಿಸುವ ಕೇಂದ್ರವಾಗಿ ನಡೆದುಕೊಂಡು ಬಂದಿದೆ. ಅಪ್ಪಯ್ಯ ಸ್ವಾಮಿಗಳ ಕಾಲಾನಂತರ ಶ್ರೀ ವಿವೇಕಾನಂದ ಶರಣ ಸ್ವಾಮೀಜಿಗಳು 1983 ರಿಂದ ಆಶ್ರಮದ ಜವಾಬ್ದಾರಿಯನ್ನು ವಹಿಸಿಕೊಂಡುದಲ್ಲದೆ, 1998 ರಿಂದ ಆಶ್ರಮದಲ್ಲಿಯೇ ನೆಲೆಸಿ ಮುತುವರ್ಜಿಯಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದರೆಂದು ಹೇಳಿದರು. ಶ್ರೀಕಾವೇರಿ ಆಶ್ರಮದ ಅಡಿಯಲ್ಲಿ ಕೂಡಿಗೆಯ ಕೃಷ್ಣಾಶ್ರಮ ಮತ್ತು ಮೈಸೂರಿನ ಆಶ್ರಮ ಕಾರ್ಯನಿರ್ವಹಿಸುತ್ತಿರುವುದಲ್ಲದೆ, ಸದ್ಗುರು ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯು ವ್ಯವಸ್ಥಿತವಾಗಿ ನಡೆಯುತ್ತಿದೆ. ಹೀಗಿದ್ದೂ, ಕೆಲವರು ಶ್ರೀಕಾವೇರಿ ಆಶ್ರಮದ ಆಡಳಿತ…
ಮಡಿಕೇರಿ ಜು.11 NEWS DESK : ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಪ್ರಧಾನಮಂತ್ರಿ ಆವಾಜ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಎನ್‍ಆರ್‍ಎಲ್‍ಎಂ, ಸಂಜೀವಿನಿ, ಲೀಡ್ ಬ್ಯಾಂಕ್ ವತಿಯಿಂದ ಹಲವು ಕಾರ್ಯಕ್ರಮಗಳು ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳು ವಿವಿಧ ಇಲಾಖೆಗಳಲ್ಲಿ ಜಾರಿಗೊಂಡಿದ್ದು, ಇವುಗಳನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಕೊಡಗು-ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ನದಿ ಮೂಲ ಸೇರಿದಂತೆ ಮತ್ತಿತರ ಜಲ ಮೂಲಗಳಿಂದ ಕಡ್ಡಾಯವಾಗಿ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು, ಒಂಟಿಯಂಗಡಿ ಮತ್ತಿತರ…
ವಿರಾಜಪೇಟೆ ಜು.11 NEWS DESK : ಕುಶಾಲನಗರ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಮತ್ತು ಡ್ಶಾನ್ಸ್ ಇವೆಂಟ್ ಸ್ಟುಡಿಯೊ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಎಂ.ಶ್ರೀದೇವಿ ಸೋಲೊ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾಳೆ. ವಿರಾಜಪೇಟೆ ತಾಲೂಕಿನ ಕೆ.ಬೋಯಿಕೇರಿ ಗ್ರಾಮದ ಮುರುಗೇಶ್ ಮತ್ತು ತುಳಸಿ ಅವರ ಪುತ್ರಿಯಾಗಿರುವ ಶ್ರೀದೇವಿ, ವಿರಾಜಪೇಟೆಯ ಟೀಮ್ ಇಂಟೋಫೀಸ್ ನೃತ್ಯ ಶಾಲೆಯ ನೃತ್ಯ ಸಂಯೋಜಕ ವಿಷ್ಣು ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಮಡಿಕೇರಿ ಜು.11 NEWS DESK : ಮುಡಾ ಒಂದು ಹಗರಣವೇ ಅಲ್ಲ, ಮುಖ್ಯಮಂತ್ರಿಗಳ ಪತ್ನಿಗೆ ಪರ್ಯಾಯವಾಗಿಯಷ್ಟೆ ನಿವೇಶನ ನೀಡಲಾಗಿದೆ ಎಂದಾದಲ್ಲಿ ಒಟ್ಟು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ‘ಕ್ಲೀನ್ ಚಿಟ್’ ಪಡೆದುಕೊಳ್ಳಲಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ. ದಿಶಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮೈಸೂರು ಸಂಸ್ಥಾನದ ಅವಧಿಯಲ್ಲಿ ಆರಂಭವಾದ ಮುಡಾ, ಬಡವರಿಗೆ ನಿವೇಶನಗಳನ್ನು ಒದಗಿಸುವ ಸಂಸ್ಥೆಯಾಗಿತ್ತು. ಆದರೆ, ಇಂದು ಉಳ್ಳವರ ಪರ ಕಾರ್ಯನಿರ್ವಹಿಸುವ ಇಲಾಖೆಯಾಗಿದೆ ಎಂದು ಟೀಕಿಸಿದರು. ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತಿರುವುದು ಮತ್ತು ಇಂತಹ ಹಗರಣಗಳು ನಡೆಯುತ್ತಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಯದುವೀರ್ ಆರೋಪಿಸಿದರು.
ಮಡಿಕೇರಿ ಜು.11 NEWS DESK : ಕನ್ನಡೇತರ ನಾಮ ಫಲಕಗಳನ್ನು ತೆರವುಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಬಳಿ ಜಮಾಯಿಸಿದ ವೇದಿಕೆಯ ಪ್ರಮುಖರು ಮತ್ತು ಕಾರ್ಯಕರ್ತರು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಒತ್ತು ನೀಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸಂಸ್ಥೆಗಳು ಸೇರಿದಂತೆ ರಾಜ್ಯದಲ್ಲಿರುವ ವಿವಿಧ ವಾಣಿಜ್ಯ ಹಾಗೂ ಇತರೆ ಕಚೇರಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ಭಾಗವನ್ನು ಕನ್ನಡಕ್ಕೆ ಮೀಸಲಿಡಬೇಕು ಈ ಬಗ್ಗೆ ರಾಜ್ಯ ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಸಹ ಬಹುತೇಕ ವಾಣಿಜ್ಯ ಹಾಗೂ ಸರ್ಕಾರಿ ಕಚೇರಿಗಳ ನಾಮಫಲಕಗಳು ಕನ್ನಡ ಭಾಷೆಯನ್ನು ನಿರ್ಲಕ್ಷ ಮಾಡುತ್ತಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ತಕ್ಷಣ ಅಗತ್ಯ ಬದಲಾವಣೆಗೆ ಗಡುವು ನೀಡುವುದಾಗಿ ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮತ್ತು ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಡಿ.ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಮೆರವಣಿಗೆ ಮೂಲಕ ಕುಶಾಲನಗರ ಪುರಸಭೆ ಕಚೇರಿ ಬಳಿ…
ವಿರಾಜಪೇಟೆ ಜು.11 NEWS DESK : ಬಿಳುಗುಂದ ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ರಚನೆಯ ಪ್ರಯುಕ್ತ ಶಾಲೆಯ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಚುನಾವಣೆ ನಡೆಯಿತು. ಈ ಚುನಾವಣೆಯು ನೈಜ ಮತದಾನದ ಎಲ್ಲಾ ಪ್ರಕ್ರಿಯೆಗಳನ್ನು ಒಳಗೊಂಡಂತೆ ಕ್ರಮಬದ್ಧವಾಗಿ ನಡೆಯಿತು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಜಯಶೀಲರಾದ ವಿದ್ಯಾರ್ಥಿಗಳ ಮಂತ್ರಿಮಂಡಲದ ರಚನೆಯ ಬಳಿಕ ವಿದ್ಯಾರ್ಥಿ ಸಂಘದ ಉದ್ಘಾಟನೆ ನಡೆಯಿತು. ಎಸ್‍ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಅರುಣ ಅನ್ಸಿ ಡಿಸೋಜ, ಮತದಾರರ ಸಾಕ್ಷರತಾ ಕ್ಲಬ್‍ನ ಸಂಚಾಲಕರಾದ ವಿ.ಕೆ.ಲೀಲಾವತಿ, ಶಿಕ್ಷಕಿಯರಾದ ಅನಿತ, ಲಿನ್ನಿ, ಸುನಿತ, ಗಂಗಮ್ಮ, ಪಿ.ಎಸ್.ಭವ್ಯ, ಎಸ್.ಡಿ.ಎಂಸಿ ಸದಸ್ಯರು, ಪೋಷಕರು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.






