ಮಡಿಕೇರಿ ಜು.11 NEWS DESK : ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಅಲ್ಪಸಂಖ್ಯಾತರಿಗೆ ನಿಗಮ, ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನೀಡದೆ ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಅಲ್ಪಸಂಖ್ಯಾತರ ಮತಗಳ ಕ್ರೋಢೀಕರಣವೇ ಕಾರಣವಾಗಿದೆ. ಸುಮಾರು 80 ಸಾವಿರ ಮುಸಲ್ಮಾನರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿ ಗೆಲುವು ತಂದು ಕೊಟ್ಟಿದ್ದಾರೆ. ಆದರೆ ಇತ್ತೀಚೆಗೆ ನೇಮಕಗೊಂಡ ಮೂಡ, ಕುಡಾ ಸೇರಿದಂತೆ ವಿವಿಧ ಆಡಳಿತ ಮಂಡಳಿಗಳಲ್ಲಿ ಮುಸಲ್ಮಾನರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲವೆಂದು ಟೀಕಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ನೀಡಬೇಕೆನ್ನುವ ಹಲವು ವರ್ಷಗಳ ಬೇಡಿಕೆ ಇಲ್ಲಿಯವರೆಗೆ ಈಡೇರಿಲ್ಲ. ಮತಬ್ಯಾಂಕ್ ನ ಋಣ ಸಂದಾಯಕ್ಕಾಗಿ ಕೊಡಗಿನ ಅಲ್ಪಸಂಖ್ಯಾತರೊಬ್ಬರಿಗೆ ವಿಧಾನ ಪರಿಷತ್ ಸ್ಥಾನವನ್ನು ನೀಡಬೇಕಾಗಿತ್ತು. ಆದರೆ ಕಾಂಗ್ರೆಸ್ ಅದರ ಬಗ್ಗೆ ಆಸಕ್ತಿಯನ್ನೇ…
ಲೇಖಕ: admin
ಬೇಕಾಗುವ ಸಾಮಾಗ್ರಿಗಳು: 5 ಚೂರು ಮಾಡಿದ ಏಡಿ, ಅರ್ಧ ತೆಂಗಿನ ತುರಿ, ಒಂದು ಲೋಟ ವಿನಿಗರ್, ಆರು ಒಣಮೆಣಸಿನಕಾಯಿ, ಒಂದು ಚಮಚ ಜೀರಿಗೆ, 2 ಬೆಳ್ಳುಳ್ಳಿ ಎಸಳು, 2 ಈರುಳ್ಳಿ, 8 ಲವಂಗ, ತುಪ್ಪ, ಒಂದು ಚಮಚ ಗರಂ ಮಸಾಲಾ, ಮುಕ್ಕಾಲು ಕಟ್ಟು ಕೊತ್ತಂಬರಿ ಸೊಪ್ಪು, 4 ಎಸಳು ಕರಿಬೇವು, ರುಚಿಗೆ ಉಪ್ಪು. ಮಾಡುವ ವಿಧಾನ: ಅರ್ಧ ಲೋಟ ವಿನಿಗರ್‌ನಲ್ಲಿ ಏಡಿಯ ಚೂರುಗಳನ್ನು ಹಾಕಿ ಮುಕ್ಕಾಲು ಗಂಟೆ ನೆನೆಯಲು ಬಿಡಿ. ಈರುಳ್ಳಿ, ಮೆಣಸಿನಕಾಯಿ ಜೀರಿಗೆ, ಬೆಳ್ಳುಳ್ಳಿ, ಲವಂಗ, ಕೊತ್ತಂಬರಿ ಸೊಪ್ಪುಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ದಪ್ಪತಳದ ಅಗಲವಾದ ಪಾತ್ರೆಗೆ ತುಪ್ಪ ಹಾಕಿ ಅದರೊಳಗೆ ವಿನಿಗರ್‌ನಲ್ಲಿರುವ ಏಡಿ ತುಂಡುಗಳನ್ನು ಹಿಂಡಿ ತೆಗೆದು ಹುರಿದುಕೊಳ್ಳಿ. ಅದು ಕೆಂಪಗಾಗುತ್ತಾ ಬಂದಾಗ ಉಪ್ಪು ಮತ್ತು ರುಬ್ಬಿದ ಮಸಾಲೆಯನ್ನು ಹಾಕಿ ಕೆದಕಿ. ಕರಿಬೇವು, ತೆಂಗಿನ ತುರಿ ಹಾಕಿ ಸಣ್ಣ ಉರಿಯಲ್ಲಿ 12 ನಿಮಿಷ ಬೇಯಿಸಿ ಕೆಳಗಿಳಿಸಿದರೆ ರುಚಿಯಾದ ಚಿಲ್ಲಿ ಕ್ರ್ಯಾಬ್ ಸಿದ್ಧ.
ಮಡಿಕೇರಿ ಜು.11 NEWS DESK : ಮಡಿಕೇರಿಯ ಆರೋಗ್ಯ ಇಲಾಖೆಯ ಸರ್ವೇಲೆನ್ಸ್ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ದಿಢೀರ್ ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಪಡೆದು, ಡೆಂಗ್ಯೂ ಪ್ರಕರಣಗಳು ಕಡಿಮೆಯಾಗುವಂತೆ ಜಾಗೃತಿವಹಿಸಬೇಕು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ಆಸ್ಪತ್ರೆ ವ್ಯಾಪ್ತಿಯಲ್ಲೂ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು.
ಮಡಿಕೇರಿ ಜು.11 NEWS DESK : ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಗಳನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ವಹಿಸಿದ್ದರು.
ಮಡಿಕೇರಿ ಜು.11 NEWS DESK : ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿ ಆತಂಕ ಸೃಷ್ಟಿಸಿದ ಕಾಡಾನೆ ಶೆಡ್ ನ್ನು ಧ್ವಂಸಗೊಳಿಸಿದ ಘಟನೆ ಮಡಿಕೇರಿ ತಾಲ್ಲೂಕಿನ ಊರುಬೈಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪಲ್ತಾಡು ದೇವಸ್ಯ ರವಿ ಎಂಬುವವರು ರಬ್ಬರ್ ಟ್ಯಾಪಿಂಗ್ ಕೆಲಸ ಮುಗಿಸಿ ಶೆಡ್ ಗೆ ಹಿಂತಿರುಗುತ್ತಿದ್ದಾಗ ಕಾಡಾನೆ ದಿಢೀರ್ ಪ್ರತ್ಯಕ್ಷವಾಗಿದೆ. ರವಿ ಅವರ ಮೇಲೆ ದಾಳಿ ಮಾಡಲು ಯತ್ನಿಸಿದಾಗ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಪಕ್ಕದಲ್ಲೇ ಇದ್ದ ರಬ್ಬರ್ ಶೆಡ್ ನ ಮೇಲೆ ಕೋಪ ತೀರಿಸಿಕೊಂಡ ಕಾಡಾನೆ ಅದನ್ನು ಧ್ವಂಸಗೊಳಿಸಿ ಅಲ್ಲಿಂದ ಕಾಲ್ಕಿತ್ತಿತು. ಕಳೆದ 15 ದಿನಗಳಿಂದ ಊರುಬೈಲು ಮತ್ತು ಅಕ್ಕಪಕ್ಕದ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಡಾನೆ ಉಪಟಳ ತಡೆಗೆ ಅರಣ್ಯ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಆನೆ ದಾಳಿಯಿಂದ ಉಂಟಾದ ಹಾನಿಗೆ ತಕ್ಷಣ ಪರಿಹಾರ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ…
ವಿರಾಜಪೇಟೆ ಜು.11 NEWS DESK : ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಉದ್ಘಾಟಿಸಿ ಮಾತನಾಡಿ, ಮಕ್ಕಳ ಸೂಪ್ತ ಪ್ರತಿಭೆ ಹೊರಹೊಮ್ಮಲು ಪ್ರತಿಭಾ ದಿನಾಚರಣೆ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಇದನ್ನು ಮುಕ್ತವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದರು. ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ಶಾಲಾ ಹಂತದಲ್ಲಿ ಪ್ರತಿಭಾ ದಿನಾಚರಣೆ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಮತ್ತು ಶಾಲೆಯ ಏಳಿಗೆಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿ, ಕಾರ್ಯಕ್ರಮ ಸ್ವರೂಪವನ್ನು ಶ್ಲ್ಯಾಘಿಸಿದರು. ಪ್ರತಿಭಾ ದಿನಾಚರಣೆ ಪ್ರಯುಕ್ತ ಶಾಲೆಯ ಎಂಟನೇ ತರಗತಿಯ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯಪಾಧ್ಯಾಯರುಗಳಾದ ಸಿಸ್ಟರ್ ರೋಸಿ, ಸಿಸ್ಟರ್…
ಮಡಿಕೇರಿ ಜು.11 NEWS DESK : ಮಾದಾಪುರದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ, ತಕ್ಷಣವೇ ವಿದ್ಯುತ್ ಕಂಬ ದುರಸ್ತಿಗೊಳಿಸುವಂತೆ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಿದರು.
ಮಡಿಕೇರಿ NEWS DESK : ದಕ್ಷಿಣ ಭಾರತದ ಕಾಶ್ಮೀರ ಎಂದೇ ಪ್ರಖ್ಯಾತವಾಗಿರುವ ಕೊಡಗಿನ ಜಲಪಾತಗಳಲ್ಲಿ ಒಂದು. ಕೊಡಗಿನ ಹಲವಾರು ಜಲಪಾತಗಳಲ್ಲಿ ಒಂದಾಗಿರುವ ಈ ಜಲಪಾತ ತುಂಬಾ ರೋಮಾಂಚನಕಾರಿಯಾಗಿದೆ. ನಿಶ್ಯಬ್ದ ಕಾಡಿನಲ್ಲಿ ನೆಲೆಗೊಂಡಿರುವ, ಹರಿಯುವ ನೀರಿನ ಶಬ್ಧವು, ಪಕ್ಷಿ ಮತ್ತು ಪ್ರಕೃತಿಯ ಸಮ್ಮೋಹನಗೊಳನ್ನು ಒಳಗೊಂಡಿದೆ. ಮಡಿಕೇರಿಯಿಂದ ಸುಮಾರು 50.ಕಿಮಿ ದೂರದಲ್ಲಿ ಇರುವ ಈ ಜಲಪಾತ,ನಾಗರಹೊಳೆ ಪ್ರಾಣಿ ರಕ್ಷಣಧಾಮದ ಕಾಡಿನಲ್ಲಿ ಸ್ಥಾಪಿತವಾಗಿದೆ.ಎಲ್ಲಾ ಕಾಲದಲ್ಲೂ ನೀರಿನಿಂದ ತುಂಬಿರುವ ಈ ಜಲಪಾತ ಮಳೆಗಾಲದಲ್ಲಿ ನೋಡಲು ತುಂಬಾ ಸುಂದರವಾಗಿರುತ್ತದೆ.ಈ ಜಲಪಾತವು ಪ್ರಸಿದ್ಧವಾದ ಪ್ರವಾಸಿತಾಣವಾಗಿದೆ.ಬ್ರಹ್ಮಗಿರಿ ಬೆಟ್ಟದಿಂದ ಉಗಮವಾಗುವ ಈ ಜಲಪಾತ ಲಕ್ಷಣತೀರ್ಥ ನದಿಗೆ ಸೇರ್ಪಡೆಯಾಗುತ್ತದೆ. ಪುರಾಣದಲ್ಲಿ ಬರುವ ಹಾಗೆ ರಾಮಾಯಣದ ಯುಗದಲ್ಲಿ ರಾಮನು ತನ್ನ ವನವಾಸದ ಕಾಲದಲ್ಲಿ ಈ ಕಾಡಿನಲ್ಲಿ ತಂಗಿದ್ದನು ಲಕ್ಷಣನು ರಾಮನಿಗೆ ನೀರು ತರಲು ಹೊರಟಾಗ ನೀರು ಎಲ್ಲೂ ಸಿಗದೆ ಬಾಣವನ್ನು ಕಾಡಿಗೆ ಬಿಟ್ಟನು.ಬಾಣ ಮುಟ್ಟಿದ ಜಾಗದಿಂದ ಜಲಪಾತವು ಸೃಷ್ಟಿಯಾಗುತ್ತದೆ.ಈ ಜಲಪಾತವೇ ಈಗಿನ ಇರ್ಪು ಜಲಪಾತ.ಜಲಪಾತವಿರುವ ಬೆಟ್ಟದ ಕೆಳಭಾಗದಲ್ಲಿ ರಾಮೇಶ್ವರ ದೇವಸ್ತಾನವಿದೆ.ಪುರಾಣದ ಪ್ರಕಾರ ಈ ದೇವಸ್ಥಾನದಲ್ಲಿರುವ ಶಿವಲಿಂಗವನ್ನು…
ಮಡಿಕೇರಿ ಜು.11 NEWS DESK : ರಾಜ್ಯದಲ್ಲಿ ಡೆಂಗ್ಯು ಜ್ವರ ವ್ಯಾಪಿಸುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ವರ್ಷಾರಂಭದಿಂದ ಇಲ್ಲಿಯವರೆಗೆ ಒಟ್ಟು 126 ಪ್ರಕರಣಗಳು ದಾಖಲಾಗಿದೆ. ಒಟ್ಟು 13 ಮಂದಿ ಡೆಂಗ್ಯು ಜ್ವರಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಇಲ್ಲಿಯವರೆಗೆ ಒಟ್ಟು 14 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದರೆ, ವಿರಾಜಪೇಟೆ ತಾಲ್ಲೂಕಿನಲ್ಲಿ 19, ಸೋಮವಾರಪೇಟೆ 1, ಕುಶಾಲನಗರದಲ್ಲಿ 32 ಮತ್ತು ಜಿಲ್ಲೆಯಲ್ಲಿಯೇ ಅತೀ ಹೆಚ್ಚು 42 ಪ್ರಕರಣಗಳು ಪೊನ್ನಂಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಂಡು ಬಂದ ಬಹುತೇಕ ‘ಡೆಂಗ್ಯು’ ಪ್ರಕರಣಗಳು ಟ್ರಾವೆಲ್ ಹಿಸ್ಟರಿ ಹೊಂದಿರುವಂತದ್ದು. ಹೊರ ಜಿಲ್ಲೆಗಳ ವ್ಯಕ್ತಿಗಳಿಂದ ಡೆಂಗ್ಯು ಪತ್ತೆಯಾಗಿದೆಯಷ್ಟೆ. ಸ್ಥಳೀಯವಾಗಿ ಡೆಂಗ್ಯು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ, ಇದಕ್ಕೆ ಜಾಗೃತಿ ಕಾರ್ಯಕ್ರಮಗಳು ಕೂಡ ಕಾರಣ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ಅಂಕಿ ಅಂಶಗಳಂತೆ ಕಳೆದ ಮೇ ತಿಂಗಳಿನಲ್ಲಿ ಜಿಲ್ಲೆಯಲ್ಲಿ 25 ಡೆಂಗ್ಯು ಪ್ರಕರಣ ದಾಖಲಾಗಿದ್ದರೆ, ಜೂನ್‍ನಲ್ಲಿ 40 ಮತ್ತು ಜುಲೈನಲ್ಲಿ 13 ಪ್ರಕರಣ ಪತ್ತೆಯಾಗಿದೆ. ಡೆಂಗ್ಯುವಿನಿಂದ ಜೀವಹಾನಿಯ…
ಮಡಿಕೇರಿ ಜು.11 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.10 ಸಾವಿರ ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ, 20 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆಸಕ್ತ ಕ್ರೀಡಾಪಟುಗಳು ಜುಲೈ, 20 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 2024-25ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2023ರ ಏಪ್ರಿಲ್, 01 ರಿಂದ 2024 ರ ಮಾರ್ಚ್, 31…






