ಲೇಖಕ: admin

ಮಡಿಕೇರಿ ಸೆ.10 NEWS DESK : ಪ್ರಯಾಣಿಕರೊಬ್ಬರು ಬಿಟ್ಟು ಹೋದ ಮೊಬೈಲ್‍ನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಆಟೋ ಚಾಲಕ ಪ್ರಮಾಣಿಕತೆ ಮೆರೆದಿದ್ದಾರೆ. ಚಾಲಕ ಅಮಿತ್ ತನ್ನ ಆಟೋದಲ್ಲಿ ಮಡಿಕೇರಿಯ ಹಳೆ ಬಸ್ ನಿಲ್ದಾಣದಿಂದ ಪ್ರಯಾಣಿಕರೊಬ್ಬರನ್ನು ಹತ್ತಿಸಿಕೊಂಡು ಮಹದೇವಪೇಟೆಗೆ ಕರೆದೊಯ್ದಿದ್ದಾರೆ. ಆ ಪ್ರಯಾಣಿಕ ಆಟೋದಲ್ಲೇ ತಮ್ಮ ಮೊಬೈಲ್‍ನ್ನು ಬಿಟ್ಟುಹೋಗಿದ್ದಾರೆ. ಆಟೋ ಚಾಲಕ ಅಮಿತ್ ಅವರು ಮಾದಾಪುರಕ್ಕೆ ಬಾಡಿಗೆಗೆ ಹೋಗಿ ಹಿಂತಿರುಗಿ ಬರುವಾಗ ಆಟೋದಲ್ಲಿ ಮೊಬೈಲ್ ಕಂಡಿದೆ. ಇದೇ ಸಂದರ್ಭ ಮೊಬೈಲ್‍ಗೆ ಕರೆ ಬಂದಿದ್ದು, ಕರೆ ಸ್ವೀಕರಿಸಿ ಸರಿಯಾದ ಮಾಹಿತಿ ಪಡೆದು ಪ್ರಯಾಣಿಕರ ಮನೆಗೆ ತೆರಳಿ ಮೊಬೈಲ್‍ನ್ನು ಮರಳಿಸಿದ್ದಾರೆ. ಚಾಲಕನ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More

ಸುಂಟಿಕೊಪ್ಪ ಸೆ.10 NEWS DESK : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸಭೆಯು ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್, ನೂತನ ಸಮಿತಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಸಭೆಯೊಂದನ್ನು ಏರ್ಪಡಿಸುವ ಮೂಲಕ ಶಾಸಕರ ಹಾಗೂ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲಿ ನೂತನವಾಗಿ ಆಯ್ಕೆ ಮಾಡಲಾಡಲಾದ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಅಲ್ಲದೇ ಪಕ್ಷದ ಸಂಘಟನೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು. ಇದೇ ಸಂದರ್ಭ ಸಮತಿಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಭಾವ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಪ್ಪನ್ ಹಾಗೂ ಸಮಿತಿಗೆ ನೂತನ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಸೆ.10 NEWS DESK : ಪೊನ್ನಂಪೇಟೆ 66/11 ಕೆವಿ ಹಾಗೂ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿರುವ ಹಿನ್ನೆಲೆ ಸೆಪ್ಟೆಂಬರ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ವಿದ್ಯುತ್ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗೋಣಿಕೊಪ್ಪ, ಪೊನ್ನಂಪೇಟೆ, ತಿತಿಮತಿ, ದೇವರಪುರ, ಮಾಯಮುಡಿ, ಕುಂದ, ಕಿರಗೂರು, ಹಾತೂರು, ಕಳತ್ಮಾಡು, ಹೊಸೂರು, ಬಾಳೆಲೆ, ದೇವನೂರು, ಕಾನೂರು, ಹುದಿಕೇರಿ, ಶ್ರೀಮಂಗಲ, ಕುಟ್ಟ, ಬಿರುನಾಣಿ, ಬೀರುಗ, ನಾಲ್ಕೇರಿ, ಟಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ನಾಪೋಕ್ಲು ಸೆ.10 NEWS DESK : ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ 25.04 ಲಕ್ಷ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕಲ್ಯಾಟಂಡ ಎ.ತಮ್ಮಯ್ಯ ತಿಳಿಸಿದರು. ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ 1137 ಜನ ಸದಸ್ಯರಿದ್ದು, 103.36 ಲಕ್ಷ ಪಾಲು ಹಣ ಇರುತ್ತದೆ. ಸಂಘದಲ್ಲಿ ಒಟ್ಟು ದುಡಿಯುವ ಬಂಡವಾಳ ರೂ.17 32.91 ಲಕ್ಷ ಗಳಾರುತ್ತವೆ ಎಂದ ಅವರು ಸಂಘದಿಂದ 339 ಜನ ರೈತರಿಗೆ ಕೆಸಿಸಿ ಸಾಲ 780.54 ಲಕ್ಷ ವಿತರಿಸಲಾಗಿದೆ. ಜಾಮೀನು ಸಾಲ 7450 ಲಕ್ಷ ರೂ,ಗೊಬ್ಬರ ಸಾಲ 35.66 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಟ್ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಗಿದ್ದು ಸಂಘದಲ್ಲಿ ಗ್ರಾಹಕರಿಗೆ ಗೊಬ್ಬರ, ಕೃಷಿ ಉಪಕರಣ ಮುಂತಾದ ಸಾಮಗ್ರಿಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು. ಸಂಘದ ಮಹಾಸಭೆಯು ಸೆ.23 ರಂದು ಸಂಘದ ಸಭಾಂಗಣದಲ್ಲಿ ಜರುಗಲಿದ್ದು, ಸಂಘದ…

Read More

ನಾಪೋಕ್ಲು ಸೆ.10 NEWS DESK : ಭಾಗಮಂಡಲ ಸ. ಹಿ. ಪ್ರಾ. ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ (ಎಇಒS) ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 1 ರಿಂದ 4ನೇ ತರಗತಿಯ ವಿಭಾಗದಲ್ಲಿ ಹಮ್ನ (ಮಣ್ಣಿನ ಮಾದರಿ ತಯಾರಿ ), ಹವ್ಯ (ಕಥೆ ಹೇಳುವುದು ), ಪ್ರಣಾಮ್ಯ (ಚಿತ್ರಕಲೆ ), ತನ್ವಿಕ ( ಛದ್ಮವೇಷ ), ನೆಬೀಲ್ ( ಹಿಂದಿ ಕಂಠಪಾಠ ) ದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ನಿಕ್ಕಿ ನಂಜಪ್ಪ (ಆಶುಭಾಷಣ ), ಮಿಸ್ಬ ( ಧಾರ್ಮಿಕ ಪಠಣ ಅರೇಬಿಕ್ ) ದ್ವಿತೀಯ ಬಹುಮಾನವನ್ನೂ, ಪೊನ್ನಮ್ಮ ( ಅಭಿನಯ ಗೀತೆ ), ದೀಪಾಲಿ ( ಭಕ್ತಿ ಗೀತೆ )ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಹಾಗೆಯೇ 5ರಿಂದ 7ನೇ ತರಗತಿ ವಿಭಾಗದಲ್ಲಿ ರೀತಿಶ್ರೀ ( ಭಾವಗೀತೆ ), ಯುಕ್ತ ( ಮಿಮಿಕ್ರಿ ) ಯಲ್ಲಿ ಪ್ರಥಮ ಬಹುಮಾನವನ್ನನ್ನೂ, ಮೇಘನಾ ( ಚಿತ್ರಕಲೆ…

Read More

ಮಡಿಕೇರಿ ಸೆ.10 NEWS DESK  :  ಪ್ರಸಕ್ತ (2024-25) ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ  ಜಿಮ್ ಫಿಟ್ನೆಸ್, ಬ್ಯೂಟಿಷಿಯನ್, ಚಾಟ್ಸ್ ತಯಾರಿಕೆ ತರಬೇತಿ ಶಿಬಿರಗಳನ್ನು ಇಲಾಖೆ ವತಿಯಿಂದ ಆಯೋಜಿಸಲಾಗಿದೆ. ತರಬೇತಿಯ ವಿವರ ಇಂತಿದೆ. ಸೆಪ್ಟೆಂಬರ್, 19 ರಿಂದ ಅಕ್ಟೋಬರ್, 03 ರವರೆಗೆ ಜಿಮ್/ ಫಿಟ್ನೆಸ್ ತರಬೇತಿ ಶಿಬಿರ(15 ದಿನಗಳು). ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 18 ರಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕಸ್ತೂರಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಪ್ಟೆಂಬರ್, 21 ರಿಂದ ಅಕ್ಟೋಬರ್, 03 ರವರೆಗೆ ಬ್ಯೂಟೀಷಿಯನ್ ತರಬೇತಿ ಶಿಬಿರ(13 ದಿನಗಳು) ನಡೆಯಲಿದ್ದು, ಎಸ್‍ಎಸ್‍ಎಲ್‍ಸಿ(ಪಾಸ್/ಫೇಲ್) ಮಹಿಳೆಯರಿಗೆ ಮಾತ್ರ. ಕನಿಷ್ಠ 18 ವರ್ಷದಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಕ್ಟೋಬರ್, 04 ರಿಂದ 09 ರವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ನಡೆಯಲಿದೆ. ಎಸ್‍ಎಸ್‍ಎಲ್‍ಸಿ(ಪಾಸ್/ಫೇಲ್) ಕನಿಷ್ಠ 18 ರಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕೋರಮಂಗಲ…

Read More

ಮಡಿಕೇರಿ ಸೆ.9 NEWS DESK  :  ಪ್ರಸಕ್ತ (2024-25) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, 2024-25 ನೇ ಸಾಲಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಆಂಗ್ಲ ಭಾಷಾ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುತ್ತದೆ). ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ಶಾಲೆ ಶಾಲಾ ವಿಭಾಗ ಇಲ್ಲಿಗೆ ಆಂಗ್ಲ ಭಾಷೆ ಶಿಕ್ಷಕರು(01 ಹುದ್ದೆ) ಬಿಎ ಮತ್ತು ಬಿ.ಎಡ್ (ಇಂಗ್ಲೀಷ್) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ 08272 225528, 9686138688 ಹಾಗೂ ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ…

Read More

ಕುಶಾಲನಗರ NEWS DESK  ಸೆ.9 : ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯಗಳಾದ ಸರ್ವೋದಯ  ಬಿಎಡ್ ಕಾಲೇಜು ಮತ್ತು ಸಾಯಿ ಶಂಕರ ಬಿಎಡ್ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎಡ್ ಪ್ರಶಿಕ್ಷಣಾರ್ಥಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶವನ್ನು ದಿನಾಂಕ:09.09.2024ರ ಸೋಮವಾರದಂದು  ಪ್ರಕಟಿಸಲಾಗಿದೆ. ಕೊಡಗು ವಿಶ್ವವಿದ್ಯಾಲಯವು ಸ್ನಾತಕ ಪದವಿಗಳ ಫಲಿತಾಂಶವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಕಟಿಸಿದಂತೆಯೇ ಬಿಎಡ್ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಯುಜಿಸಿ ನಿಯಮಾನುಸಾರ ಕೂಡ ಶೀಘ್ರವಾಗಿ ಪ್ರಕಟಿಸುವ ಮೂಲಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ‌. ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಕೊಡಗು ವಿಶ್ವವಿದ್ಯಾಲಯದ ಚೊಚ್ಚಲ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಪ್ರೊ. ಸುರೇಶ್ ಎಂ ಅವರು, ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಸಂಯೋಜಕರಾದ ಪ್ರೊ. ರವಿಶಂಕರ್ ಅವರು, ಯಯುಸಿಎಂಎಸ್ ನೋಡಲ್ ಅಧಿಕಾರಿ ಗಗನ್ ಹೆಚ್.ಎಸ್. ಅವರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಸೆ.9 : ವಲಸೆ ಕಾರ್ಮಿಕರಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕಳ್ಳತನಗಳು ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ತೋಟದಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರ ವಿವರಗಳನ್ನು ಇಲಾಖೆಗೆ ನೀಡಲು ವಿಫಲವಾದರೆ ಮುಂದೆ ತಮ್ಮ ಕಾರ್ಮಿಕರಿಂದ ನಡೆಯಬಹುದಾದ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ. ಆದ್ದರಿಂದ ಕೊಡಗಿನ  ಬೆಳೆಗಾರರು ತಮ್ಮಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರ ವಿವರಗಳನ್ನು ತಮ್ಮ  ಹತ್ತಿರದ ಪೊಲೀಸ್ ಠಾಣೆಗೆ ಸಲ್ಲಿಸಿ ಆ ಮೂಲಕ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್  ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸುತ್ತಿದೆ ಎಂದು ಕೊಡಗು ಪ್ಯಾಂಟರ್ಸ್ ಅಸೋಸಿಯೇಷನ್ ತಿಳಿಸಿದೆ. ನಿಗದಿತ ನಮೂನೆಯಲ್ಲಿ ಪೊಲೀಸ್  ಇಲಾಖೆಗೆ ಸಲ್ಲಿಸಬೇಕಾದ ವಿವರಗಳೆಂದರೆ, ವಲಸೆ ಕಾರ್ಮಿಕರ ಹೆಸರು ಮತ್ತು ವಿಳಾಸ, ಅವರ ವಿಳಾಸದ ಹತ್ತಿರದ ಪೊಲೀಸ್ ಠಾಣೆ, ಅವರ ಕೆಲಸದ ವಿವರಗಳು, ಕುಟುಂಬದ ಸದಸ್ಯರ ವಿವರಗಳು, ಪ್ರಸ್ತುತ…

Read More

ಸೋಮವಾರಪೇಟೆ NEWS DESK ಸೆ.9 : ರಾಷ್ಟ್ರದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗದ ಕೊಡುಗೆ ಅಪಾರವಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಿಸಿದರು. ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಷ್ಟದಲ್ಲಿರುವ ಪತ್ರಕರ್ತರನ್ನು ಕಾಪಾಡಿಕೊಳ್ಳಬೇಕಾದ ಕರ್ತವ್ಯ ಶಾಸಕಾಂಗದಲ್ಲಿ ಕೆಲಸ ಮಾಡುತ್ತಿರುವ ನಮ್ಮಂತವರ ಕರ್ತವ್ಯ ಎಂದು ಹೇಳಿದರು. ಪತ್ರಿಕೆ ಎಂದರೆ ಕೇವಲ ಸುದ್ದಿ ಸಮಾಚಾರಗಳನ್ನು ನೀಡುವ ಮಧ್ಯಮವಲ್ಲ. ತನ್ನದೆ ಆದ ಕರ್ತವ್ಯವನ್ನು ನಿಭಾಯಿಸುತ್ತಿದೆ. ಸಮಾಜದಲ್ಲಿರುವ ಅಂಕುಡೊಂಕನ್ನು ತಿದ್ದುವ ಕೆಲಸವನ್ನು ಮಾಡುತ್ತಿದೆ. ರಾಜಕಾರಣಿಗಳು ತಪ್ಪು ಮಾಡಿದಾಗ ಪತ್ರಿಕೆಗಳಲ್ಲಿ ಬರೆದು, ತಪ್ಪು ಹೆಜ್ಜೆಗಳನ್ನು ಇಡದಂತೆ ಎಚ್ಚರಿಸುವ ಕೆಲಸವನ್ನು ಮಾಡುತ್ತಿರುವುದು ನಮ್ಮ ಕಣ್ಣು ಮುಂದಿದೆ. ಪತ್ರಿಕೆ, ಮಾಧ್ಯಮಗಳ ಸಲಹೆಗಳನ್ನು ಜನಪ್ರತಿನಿಧಿಗಳು ಪಡೆದುಕೊಂಡರೆ ಉತ್ತನ ಜನಪರ ಕೆಲಸಗಳನ್ನು ಮಾಡಬಹುದು ಎಂದು ಹೇಳಿದರು. ಗ್ರಾಮೀಣ ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಿಸಲು ಸರ್ಕಾರದದೊಂದಿಗೆ…

Read More