ಲೇಖಕ: admin

ಮಡಿಕೇರಿ ಜು.10 NEWS DESK : ಕುಶಾಲನಗರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ “ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು” ಆಚರಿಸಲಾಯಿತು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಶ್ರೀರಾಮ ಅಂಗೀರಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಕಾರ್ಯಕಾರಣಿ ಸದಸ್ಯರಾದ ರೋಹಿತ್ ಹಾಗೂ ಸುದೀಪ್, ಅರ್ಜುನ್, ರಾಘವೇಂದ್ರ ಹಾಜರಿದ್ದರು.

Read More

ಮಡಿಕೇರಿ ಜು.10 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಭೂಕುಸಿತ‌ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ‌ ಎನ್.ಡಿ.ಆರ್.ಎಫ್ ತಂಡ ಹಾಗೂ ಜಿಲ್ಲಾ‌ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಭೇಟಿ‌ ನೀಡಿ, ವೀಕ್ಷಿಸಿದರು.  

Read More

ಮಡಿಕೇರಿ ಜು.10 NEWS DESK : ದಕ್ಷಿಣ ಕನ್ನಡದ ಕಡಬ ಶಾಲೆಯ ವಿದ್ಯಾರ್ಥಿನಿ ಸಾನ್ವಿ ದೊಡ್ಡಮನೆ ಸದ್ದಿಲ್ಲದೆ ದೊಡ್ಡ ಯೋಗ ಸಾಧನೆ ಮಾಡಿದ್ದಾರೆ. ಸಾನ್ವಿ ದೊಡ್ಡಮನೆ : 7 ನೇ ತರಗತಿ ಕ್ನನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಡಬ ತಂದೆ : ನಿತ್ಯಾನಂದ ದೊಡ್ಡ ಮನೆ ತಾಯಿ : ಸೀತಾಲಕ್ಷ್ಮಿ ದೊಡ್ಡಮನೆ ::: ಯೋಗ ಸಾಧನೆ ::: 1) ಗೋಮುಖ ಆಸನದಲ್ಲಿ 01 ಗಂಟೆ01 ನಿಮಿಷ 21ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವಿಶ್ವದಾಖಲೆ. 2)ನೊಬೆಲ್ ವಲ್ಡ್ ರೆಕಾರ್ಡ್ – 2022 ( 3 ಆಸನಗಳನ್ನು 120 ಸೆಕುಂಡ್ ಗಳ ಕಾಲಮಾಡಿ ) 3)ಅಬ್ದುಲ್ ಕಲಾಂ ಬ್ಲೈಂಡ್ ಫೋಲ್ಡ್ ವಲ್ಡ್ ರೆಕಾರ್ಡ್ – 2022. 4)ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ -2023. 5)ಯುನಿವರ್ಸಲ್ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ – 2022 6)ಯೋಗ ಬುಕ್ ಆಫ್ ರೆಕಾರ್ಡ್ – 2022(ಗೀಸಾ ವಲ್ಡ್ ರೆಕಾರ್ಡ್ ಆಯೋಜಿಸಿದ 1 ನಿಮಿಷ ದಲ್ಲಿ…

Read More

ನವದೆಹಲಿ ಜು.10 NEWS DESK : ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್‌ ಗಂಭೀರ್ ಅವರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷವಾಗುತ್ತದೆ. ಆಧುನಿಕ- ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟ್ ನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಪಾತ್ರಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಭಾರತೀಯ ಕ್ರಿಕೆಟನ್ನು ಮುನ್ನಡೆಸಲು ಗೌತಮ್ ಆದರ್ಶ ವ್ಯಕ್ತಿ ಎಂದು ನನಗೆ ವಿಶ್ವಾಸವಿದೆ. ಅವರು ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಬಿಸಿಸಿಐ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿದ್ದಾರೆ.

Read More

ಮಂಗಳೂರು ಜು.10 NEWS DESK : ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕ ಯತೀಶ್ ಎನ್, ಅವರು ಬಂಟ್ವಾಳ ನಗರ ಠಾಣೆ, ಪುಂಜಾಲಕಟ್ಟೆ ಠಾಣೆ ಹಾಗೂ ಬಂಟ್ವಾಳ ಉಪವಿಭಾಗಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿ/ಸಿಬ್ಬಂದಿಗಳಿಗೆ  ಬ್ರೀಫಿಂಗ್ ನಡೆಸಿ, ಠಾಣಾ ದಾಖಲಾತಿ/ಕಡತಗಳ ಸೂಕ್ತ ನಿರ್ವಹಣೆ, ಠಾಣಾ ಪರಿಸರದ ಸ್ವಚ್ಚತೆ ಹಾಗೂ ಠಾಣಾ ಕರ್ತವ್ಯಗಳ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಿದರು.

Read More

ಮಡಿಕೇರಿ ಜು.10 NEWS DESK : ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು. ದಾನಿಗಳಾದ ಪ್ರೆಸಿಲ್ಲ ಕುಮಾರಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ, ನಾನು ಇದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು  ಕಿನ್ಯಾ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಮೈಸೂರಿನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಎಂದು ಕೀಳರಿಮೆ ಪಡೆದೆ ಹೆಚ್ಚು ಶಿಕ್ಷಣವನ್ನು ಪಡೆಯುವ ಮೂಲಕ ಉನ್ನತ ಹುದ್ದೆಗೆ ಏರಬೇಕೆಂದು ಕರೆ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯರ ಅಂಬಾಮಣಿ ಮಾತನಾಡಿ, ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ವತಿಯಿಂದ ಸಿಸ್ಟರ್ ಪ್ರೆಸಿಲ್ಲ ಕುಮಾರಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಸಹ ಶಿಕ್ಷಕರಾದ ದಿವ್ಯ ದಿನೇಶ್, ಎಸ್‌ಡಿಎಂಸಿ ಅಧ್ಯಕ್ಷರಾದ ಪೂರ್ಣಿಮ ಹಾಗೂ ಸಹ…

Read More

ನವದೆಹಲಿ ಜು.10 NEWS DESK : ಹಾಲಿನ ಟ್ಯಾಂಕರ್ ಗೆ ಹಿಂಬದಿಯಿಂದ ಡಬ್ಬಲ್ ಡೆಕ್ಕರ್ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ 18 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಲಕ್ನೋ ಆಗ್ರೋ ಎಕ್ಸ್ಪ್ರೆಸ್ ವೇಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮುಂಜಾನೆ 5.15ರ ಸುಮಾರಿಗೆ ಖಾಸಗಿ ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ಆಗಮಿಸುತ್ತಿದ್ದ ವೇಳೆ ಉನ್ನಾವೋ ಸಮೀಪ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಪ್ರಾಣ ಕಳೆದುಕೊಂಡಿದ್ದು, ತೀವ್ರವಾಗಿ ಗಾಯಗೊಂಡಿರುವ 19 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಬಸ್ ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆ ಬಗ್ಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಭೀಕರ ಅಪಘಾತದ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು ಜು.10 NEWS DESK : ವಿಶ್ವದ ಕಾಫಿ ಬೆಳೆಯುವ ಅಗ್ರಗಣ್ಯ ರಾಷ್ಟ್ರಗಳಾದ ಬ್ರೆಜಿಲ್‌ ಮತ್ತು ಕೊಲಂಬಿಯಾದಲ್ಲಿ ಜಾರಿಯಲ್ಲಿರುವ ಮಾದರಿಯನ್ನು ಭಾರತದಲ್ಲಿಯೂ ಅಳವಡಿಸಿಕೊಂಡು ಕಾಫಿ ಬೆಳೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಪಾಲುದಾರರನ್ನು ಒಗ್ಗೂಡಿಸುವ ವಿನೂತನ ಪ್ರಯತ್ನಕ್ಕೆ ಕಾಫಿ ಮಂಡಳಿಯು ಕೈ ಹಾಕಿದೆ. ಕಾಫಿ ಬೆಳೆಗಾರರರು, ಸಂಸ್ಕರಣೆದಾರರು, ಸಂಗ್ರಹಕಾರರು, ಮಾರಾಟಗಾರರು, ರೋಸ್ಟರ್ಸ್, ರಾಫ್ತುದಾರರು, ಕೆಫೆ ಚೈನ್ಗಳ ಮಾಲೀಕರನ್ನು ಒಟ್ಟುಗೂಡಿಸಿ ಹೊರ ದೇಶಗಳ ಮಾದರಿಯಲ್ಲಿ ಸ್ಥಳೀಯವಾಗಿಯೇ ಬ್ರ್ಯಾಂಡ್ ಬಿಲ್ಡಿಂಗ್ ಮಾಡಲು ಕಾಫಿ ಮಂಡಳಿಯು ದಿಟ್ಟ ಹೆಜ್ಜೆ ಇಟ್ಟಿದೆ. ಇದರ ಮೊದಲ ಹಂತವಾಗಿ ದೇಶದ ಎಲ್ಲ ಪಾಲುದಾರರಿಗೆ ತಮ್ಮ ಸಲಹೆಗಳನ್ನು ನೀಡಲು ಮಂಡಳಿಯು ಆಹ್ವಾನ ನೀಡಿದ್ದು ಸ್ಥಳಿಯವಾಗಿ ದೊರೆತಿರುವ ಪ್ರೋತ್ಸಾಹದಿಂದಲೇ ಬ್ರೆಜಿಲ್ನ ಕಾಫಿ ವಿಶ್ವದಲ್ಲಿ ತುಂಬಾ ಜನಪ್ರಿಯತೆ ಗಳಿಸಿದೆ. ವಿಶ್ವದ ಅತ್ಯಂತ ದೊಡ್ಡ ಕಾಫಿ ಉತ್ಪಾದಕ ದೇಶವಾದ ಬ್ರೆಜಿಲ್‌ ನಲ್ಲಿ ಅಲ್ಲಿನ ಸರ್ಕಾರ ಅಲ್ಲಿನ ಜನರಿಗೆ ಕಾಫಿಯ ಮಹತ್ವವನ್ನು ಸಾರುವ ವ್ಯಾಪಕ ಪ್ರಚಾರ ನಡೆಸಿ ಅಲ್ಲಿ ಸೇವನೆಯನ್ನು ಮೊದಲು ಹೆಚ್ಚಿಸಲಾಯಿತು. ನಂತರ ಬ್ರೆಜಿಲ್‌ ಕಾಫಿ ವಿದೇಶದಲ್ಲೂ…

Read More

ಕಡಂಗ ಜು.10 NEWS DESK : ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕಡಂಗ, ಅರಪಟ್ಟು, ಪೊದವಾಡ ಗ್ರಾಮದಲ್ಲಿ ನರಿಯಂದಡ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣ್ಯಯ್ಯ ಅವರ ನೇತೃತ್ವದಲ್ಲಿ ಪಟ್ಟಣದ ರಸ್ತೆ ಬದಿಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭಗ್ರಾ.ಪಂ ಸದಸ್ಯರಾದ ರಾಣಿ ಗಣಪತಿ, ಕವಿತಾ ಪ್ರಕಾಶ್, ಸಿ.ಇ.ಸುಬೀರ್, ಮೊಹಮ್ಮದ್ ಎಡಪಾಲ, ಪಿ.ಡಿ.ಓ.ಅಶಾಕುಮಾರಿ, ಕಾಂಗ್ರೆಸ್ ಮುಖಾ0ಡರಾದ ಶಾಫಿ ಎಡಪಲಾ, ರಹೀಮ್, ಝಕರಿಯ, ರಾಜಿಕ್, ಸಿದ್ದಿಕ್, ಹಂಝ, ರಜಾಕ್, ಕುಂಜಿ ಅಹಮದ್, ಮುನೀರ್, ಆಸಿಫ್, ರೌಫ್ ಇನ್ನಿತರರು ಪಾಲ್ಗೊಂಡಿದ್ದರು. ವರದಿ : ನೌಫಲ್ ಕಡಂಗ   

Read More

ಕುಶಾಲನಗರ ಜು.10 NEWS DESK : ಅಪೇಕ್ಷಿತ ಪ್ರಮಾಣದಲ್ಲಿ ಸಮಾಜ ಸೇವೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಹಿಂದು ಜನಜಾಗೃತಿ ಸಮಿತಿಯ ಪ್ರಮುಖರಾದ ಶ್ರೀನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ದೇವಾಲಯಗಳ ಒಕ್ಕೂಟ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಆಧ್ಯಾತ್ಮಿಕ ಹಾಗೂ ವ್ಯವಹಾರಿಕ ಶಿಕ್ಷಣ ಸಿದ್ದಾಂತಗಳ ಪಾಲನೆ ಮಾಡಬೇಕಾಗಿದೆ, ನಾಮ ಜಪ ಮೂಲಕ ಭಗವಂತನ ಅನುಗ್ರಹ ಸಾಧ್ಯ ಎಂದರು. ಆಧ್ಯಾತ್ಮಿಕ ಸಾಧನೆ ಮೂಲಕ ಆನಂದ ಹಾಗೂ ತೃಪ್ತಿ ದೊರೆಯುತ್ತದೆ ಎಂದು ಹೇಳಿದರು. ಗುರು ಪೂರ್ಣಿಮಾ ಮಹತ್ವದ ಬಗ್ಗೆ ಮಾತನಾಡಿದ ಅವರು ಈ ತಿಂಗಳ 21ರಂದು ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯುವ ಗುರು ಪೂರ್ಣಿಮಾ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ದೇವಾಲಯ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್ ದೇವಾಲಯಗಳ ಒಕ್ಕೂಟದ ಮಹತ್ವದ ಬಗ್ಗೆ ಮಾಹಿತಿ ತಿಳಿಸಿದರು. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ಒಕ್ಕೂಟದ ಮೂಲಕ ಮಾಡಿರುವ ಕಾರ್ಯ ಸಾಧನೆಗಳ ಬಗ್ಗೆ ತಿಳಿಸಿದರು. ಒಕ್ಕೂಟದ ಮೂಲಕ…

Read More