ಲೇಖಕ: admin

ಮಡಿಕೇರಿ ಜು.10 NEWS DESK : ಸಾರ್ವಜನಿಕರ ಕುಂದುಕೊರತೆಯನ್ನು ಶೀಘ್ರ ಪರಿಹರಿಸುವಲ್ಲಿ ಆಯಾಯ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ‘ಜನಸ್ಪಂದನ ಸಭೆ’ ನಡೆಯಲಿದೆ. ಸಾರ್ವಜನಿಕರು ಈ ಅವಕಾಶ ಬಳಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಕೋರಿದ್ದಾರೆ.

Read More

ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಕಾಡಾನೆಗಳ ಉಪಟಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರ‍್ಯಾಪಿಡ್ ರ‍್ಯಾಸ್ಪನ್ಸ್ ತಂಡಕ್ಕೆ ಮತ್ತಷ್ಟು ಬಲ ತುಂಬಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ತಮ್ಮ 50ನೇ ಜನ್ಮ ದಿನದ ಪ್ರಯುಕ್ತ ಇಂದು ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಆ ನಿಟ್ಟಿನಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗುವುದು. ರ‍್ಯಾಪಿಡ್ ರ‍್ಯಾಸ್ಪನ್ಸ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು, ಈ ಸಂಬಂಧ ಅರಣ್ಯ ಸಚಿವರ ಜತೆಗೂ ಚರ್ಚಿಸಲಾಗಿದೆ ಎಂದು ಪೊನ್ನಣ್ಣ ಹೇಳಿದರು. ನಾಡಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಎಲ್ಲರಲ್ಲಿ ಸಂತಸ, ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಮನೆ, ರಸ್ತೆ, ಸೇತುವೆ ಹಾನಿ ಬಗ್ಗೆ ಮುಖ್ಯಮಂತ್ರಿ…

Read More

ಮಡಿಕೇರಿ ಜು.9 NEWS DESK : ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಹಾಡಿಯೊಂದರ ಬಳಿ ನಡೆದಿದೆ. ಹಾಡಿಯ ನಿವಾಸಿ ಜಯ ಎಂಬುವವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಇದರಿಂದ ಹಾಡಿಯ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ವಿಷಯವರಿತ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಆರ್‌ಆರ್‌ಟಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯ ಚಲನವಲನ ಪತ್ತೆ ಮಾಡಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ.

Read More

ಮಡಿಕೇರಿ ಜು.9 NEWS DESK : ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಮಂಗಳವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಎ.ಎಸ್.ಪೊನ್ನಣ್ಣ ಅವರ 50 ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಾಡಿನಲ್ಲಿ ಮತ್ತಷ್ಟು ಮಳೆ ಬೆಳೆಯಾಗಿ ಕೃಷಿಕರು ಸೇರಿದಂತೆ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದೇವಂಗೋಡಿ ಹರ್ಷ ಅವರು ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರು ಕೈಲಾದ ಸಹಾಯ ಹಾಗೂ ಸಹಕಾರ…

Read More

ಕುಶಾಲನಗರ ಜು.9 NEWS DESK : ಯಾವುದೇ ಸಮಸ್ಯೆಗಳನ್ನು ಹೆಚ್ಚಾಗಿ ಪ್ರತಿಬಿಂಬಿಸುವುದಕ್ಕಿಂತ ಅವುಗಳ ಪರಿಹಾರದ ಕಡೆಗೆ ಹೆಚ್ಚು ಆದ್ಯತೆ ಕೊಡುವ ವರದಿಗಳನ್ನು ಮಾಡುವುದು ಹೆಚ್ಚು ಸಮಾಜಮುಖಿಯಾದ ಕೆಲಸವಾಗುತ್ತದೆ ಎಂದು ಕೊಡಗು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಹಾಗೂ ಕೊಡಗು ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ವಿಶ್ವ ವಿದ್ಯಾಲಯದ ಜ್ಞಾನ ಕಾವೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ನಾಲ್ಕು ಆಧಾರಗಳೆನಿಸಿದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವಿಶೇಷವಾಗಿ ಪತ್ರಿಕಾ ರಂಗ ಸಮಾಜದ ಆಗು ಹೋಗುಗಳನ್ನು ವಿಭಿನ್ನತೆಯಿಂದ ನೋಡಿ ಸ್ಪಷ್ಟತೆಯಿಂದ ವರದಿ ಮಾಡಬೇಕೆಂದು ಸಲಹೆ ನೀಡಿದರು. ಕೊಡಗಿನ ಪತ್ರಕರ್ತರು ಪ್ರಮಾಣಿಕತೆ ಅಧ್ಯಯನಶೀಲತೆ ಮತ್ತು ಸ್ಪಷ್ಟತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮುಂಬರುವ ದಿನಗಳಲ್ಲೂ ಈ ಪರಂಪರೆ ಮುಂದುವರೆಯಲಿ ಎಂದು ಆಶಿಸಿ, ಕೊಡಗು ವಿಶ್ವ…

Read More

ಮಡಿಕೇರಿ ಜು.9 NEWS DESK  : ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವರಕಾಡು ಪೈಸಾರಿಯಲ್ಲಿ ನಡೆದಿದೆ. ಗ್ರಾಮದ ಗೌರಿ (65) ಮೃತ ಮಹಿಳೆ. ಸಂಜೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಸ್ಥಳಕ್ಕೆ ತಿತಿಮತಿ ಎಸಿಎಫ್ ಗೋಪಾಲ್, ಆರ್‍ಎಫ್‍ಓ ಗಂಗಾಶಧರ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕಾರ್ಯದರ್ಶಿ ಎ.ಜೆ.ಬಾಬು, ದೇವಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಬಸಂತ್ ಕುಮಾರ್, ತಿತಿಮತಿ ಗ್ರಾ.ಪಂ ಸದಸ್ಯ ಅಪ್ರೋಸ್ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬೀರಾದರ್, ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.   

Read More

ಮಡಿಕೇರಿ ಜು‌‌.9 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ  ಮಾತನಾಡಿದ ಅವರು, ಅದಕ್ಕಾಗಿ ಈಗಾಗಲೇ ಎಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯರು, ತಾಲೂಕು ಅಧ್ಯಕ್ಷರುಗಳು, ಹೋಬಳಿ ಅಧ್ಯಕ್ಷರುಗಳು, ಶ್ರಮ ಪಡುತ್ತಿದ್ದು ಒಂದು ಸಾವಿರಕ್ಕೂ ಹೆಚ್ಚು ಸದಸ್ಯತ್ವ ನೋಂದಾಯಿಸಲಾಗಿದೆ. ಈ ವರ್ಷದ ಕೊನೆಯೊಳಗಾಗಿ 10,000 ಸದಸ್ಯರನ್ನು ಹೊಂದುವ ಗುರಿ ಹೊಂದಿದ್ದು ಎಲ್ಲರೂ ಸಹಕರಿಸಬೇಕು ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಪರಿಷತ್ತಿನ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರುಗಳು ಒಂದಾಗಿ ಎಲ್ಲಾ ಶಾಲೆ ಕಾಲೇಜುಗಳನ್ನು ಭೇಟಿಯಾಗಿ ಸದಸ್ಯತ್ವವನ್ನು ಅಭಿಯಾನದ ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಪರಿಷತ್ತಿನಲ್ಲಿ ಈ ವರ್ಷ 35 ದತ್ತಿನಿಧಿ ಕಾರ್ಯಕ್ರಮಗಳಿದ್ದು ಅವನ್ನು ಶಾಲಾ ಕಾಲೇಜುಗಳಲ್ಲಿ ನಡೆಸುವ ಮೂಲಕ ಕನ್ನಡ ನಾಡು…

Read More

ಮಡಿಕೇರಿ ಜು.9 NEWS DESK : ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಟೀಮ್ ಭಗವತಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಟೀಮ್ ಒನ್ ಟಚ್ ಮತ್ತು ವೈಲ್ಡ್ ಮಾಸ್ಟರ್ಸ್ ತಂಡ ಪಡೆದು ಕೊಂಡಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ತಂಡವು ಟೀಮ್ ಒನ್ ಟಚ್ ವಿರುದ್ಧ ಪೆನಲ್ಟಿಯಲ್ಲಿ 1-0 ಜಯ ಸಾಧಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು. ಟೀಮ್ ಭಗವತಿ ಹಾಗೂ ವೈಲ್ಡ್ ಮಾಸ್ಟರ್ಸ್ ತಂಡದ ನಡುವೆ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟೀಮ್ ಭಗವತಿ ತಂಡವು ಪೆನಲ್ಟಿ ಶೂಟ್ ಔಟ್ ನಲ್ಲಿ 8-7 ರ ಜಯ ಪಡೆದು ಕ್ವಾಲಿಫಯರ್‍ಗೆ ಲಗ್ಗೆ ಇಟ್ಟಿತು.…

Read More

ಮಡಿಕೇರಿ ಜು.9 NEWS DESK : ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.13 ಮತ್ತು 14 ರಂದು 4ನೇ ವರ್ಷದ ‘ಹಿಂದೂ ಕೆಸರುಗದ್ದೆ ಕ್ರೀಡಾಕೂಟ’ ಬಿಳಿಗೇರಿ ಅರ್ವತ್ತೋಕ್ಲು ಗ್ರಾಮದ ತುಂತಜೆ ಕುಟುಂಬಸ್ಥರ ಗದ್ದೆಯಲ್ಲಿ ನಡೆಯಲಿದೆ ಎಂದು ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಕೊಡೆಕಲ್ಲು ಅರವಿಂದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸರುಗದ್ದೆ ಕ್ರೀಡಾಕೂಟದ ಆರಂಭಿಕ ದಿನವಾದ ಜು.13 ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ದ್ವಿತೀಯ ದಿನದಂದು ವಾಲಿಬಾಲ್, ಓಟದ ಸ್ಪರ್ಧೆ, ಹಗ್ಗಜಗ್ಗಾಟ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ (.22 ಮತ್ತು ಟುವೆಲ್ತ್ ಬೋರ್ ವಿಭಾಗಗಳಲ್ಲಿ)ಮೊದಲಾದವು ವಿವಿಧ ವಿಭಾಗಗಳಲ್ಲಿ ನಡೆಯಲಿದೆ ಎಂದರು. ಕಾರ್ಯದರ್ಶಿ ದರ್ಶನ್ ದಂಬೆಕೋಡಿ ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿರುವ ಕ್ರೀಡಾಕೂಟವನ್ನು ಕೃಷಿಕರಾದ ತುಂತಜೆ ಚಂದ್ರಶೇಖರ್, ತುಂತಜೆ ಜನಾರ್ಧನ, ಮಾಜಿ ಕ್ಯಾಪ್ಟನ್ ತುಂತಜೆ ದಯಾನಂದ, ಅರ್ವತ್ತೋಕ್ಲು ಪೆರಾತ ಕ್ಲಬ್ ಅಧ್ಯಕ್ಷ ಬಾಲಾಡಿ ಪ್ರತಾಪ್, ತುಂತಜ್ಜೆ ರಂಜಿತ್, ತುಂತಜ್ಜೆ ತಿಮ್ಮಯ್ಯ, ತುಂತಜ್ಜೆ ಧರ್ಮಾವತಿ ಹಾಗೂ ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್…

Read More

ಮಡಿಕೇರಿ ಜು.9 NEWS DESK : ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಇಂದಿಗೂ ಗ್ರಾಮೀಣ ರಸ್ತೆಗಳಲ್ಲಿ ಭಾರೀ ವಾಹನಗಳಲ್ಲಿ ಮರಗಳ ಸಾಗಾಟ ನಿರಾತಂಕವಾಗಿ ನಡೆಯುತ್ತಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬೆಳೆಗಾರ ಮಂಞ್ಞೀರ ಉಮೇಶ್ ಅಪ್ಪಣ್ಣ ಮಾತನಾಡಿ, ಮುಂಗಾರಿನ ಅವಧಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರು ಕುಂಬಳದಾಳು ಗ್ರಾಮ ವ್ಯಾಪ್ತಿಯ ಬಿಳಿಗೇರಿ ರಸ್ತೆಯಲ್ಲಿ ಟಿಪ್ಪರ್‍ಗಳ ಮೂಲಕ ಭಾರೀ ಪ್ರಮಾಣದ ಕಲ್ಲು, ಮಣ್ಣು, ಮರಳು ಸಾಗಾಟವಾಗುತ್ತಿದೆ. ಮತ್ತೊಂದೆಡೆ ಭಾರೀ ವಾಹನಗಳಲ್ಲಿ ಸಿಲ್ವರ್ ಓಕ್ಸ್ ಮತ್ತು ಇತರೆ ಮರಗಳ ಸಾಗಾಟ ನಡೆಯುತ್ತಿದೆ ಎಂದು ಆರೋಪಿಸಿದರು. ಬಿಳಿಗೇರಿ ಗ್ರಾಮಕ್ಕೆ ತೆರಳಲು ಉತ್ತಮವಾಗಿದ್ದ ರಸ್ತೆ ಭಾರೀ ವಾಹನಗಳ ಸಂಚಾರದಿಂದ ಹದಗೆಡಲಾರಂಭಿಸಿದೆ. ಹಲವೆಡೆ ರಸ್ತೆ ಬದಿ ಹಾಳಾಗಿದ್ದರೆ, ವಿವಿಧೆಡೆ ಗುಂಡಿಗಳು ನಿರ್ಮಾಣವಾಗಿದೆ. ಕಡಿದ ಮರಗಳನ್ನು ಎಳೆಯಲು ಜೆಸಿಬಿ ಮತ್ತು ಕ್ರೈನ್‍ಗಳನ್ನು ಬಳಸಲಾಗುತ್ತಿದೆ ಎಂದು ಅಸಮಾಧಾನ…

Read More