ಲೇಖಕ: admin

ಮಡಿಕೇರಿ NEWS DESK ಸೆ. 28: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಸುತ್ತಿರುವ ಜನಜಾಗೃತಿ ಕಾರ್ಯಕ್ರಮದ ಅಂಗವಾಗಿ ಅ.1ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಸಿದ್ದಾಪುರದಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸಂವಿಧಾನದ 244 ಮತ್ತು 371ನೇ ವಿಧಿಗಳು ಹಾಗೂ 5 ಮತ್ತು 6ನೇ ಶೆಡ್ಯೂಲ್‌ಗಳ ಅಡಿಯಲ್ಲಿ ಸ್ವ-ಆಡಳಿತಕ್ಕೆ ಒತ್ತಾಯಿಸಲಾಗುವುದು. ಕೊಡವ ಜನಾಂಗಕ್ಕೆ ವಿಶೇಷ ಸಂವಿಧಾನಬದ್ಧ ಮಾನ್ಯತೆ, ಪವಿತ್ರ ಗನ್-ತೋಕ್ ಆಚರಣೆಗೆ ಸಂವಿಧಾನಾತ್ಮಕ ರಕ್ಷಣೆ ಹಾಗೂ ಕೊಡವರಿಗೆ ಪ್ರತ್ಯೇಕ ಅಮೂರ್ತ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳನ್ನು ಕಲ್ಪಿಸುವಂತೆ ಆಗ್ರಹಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಬೇಕು, ಐತಿಹಾಸಿಕವಾಗಿ ಕೊಡವರಿಂದ ವಶಪಡಿಸಿಕೊಂಡ ವಂಶಪಾರಂಪರ್ಯ ಆಸ್ತಿಗಳನ್ನು ಮರಳಿ ನೀಡಬೇಕು, 2027ರ ರಾಷ್ಟ್ರೀಯ ಜನಗಣತಿ ಹಾಗೂ ಜಾತಿ ಗಣತಿಯಲ್ಲಿ ಕೊಡವರನ್ನು ಪ್ರತ್ಯೇಕವಾಗಿ ದಾಖಲಿಸಬೇಕು ಮತ್ತು ಕೊಡವರಿಗಾಗಿ ಪ್ರತ್ಯೇಕ ‘ಕೋಡ್’ ಹಾಗೂ ಕಾಲಮ್…

Read More

ಮಡಿಕೇರಿ, NEWS DESK ಸೆ. 28: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವ್ಯವಸ್ಥೆಯು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹದಗೆಡಿಸುತ್ತಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಜ್ಞಾನೇಶ್ ಕುಮಾರ್ ಹಾಗೂ ‘ವಿಶ್ವ ಗುರು’ ಹೆಸರಿನ ಪ್ರತಿಕೃತಿಗಳನ್ನು ದಹಿಸಲು ಮುಂದಾದರು. ‘ವೋಟ್ ಚೋರಿ ನಿಲ್ಲಿಸಿ, ದೇಶ ಉಳಿಸಿ’, ‘ಡೌನ್ ಡೌನ್ ಜ್ಞಾನೇಶ್ ಕುಮಾರ್’, ‘ಸಂವಿಧಾನ ದೊಡ್ಡದು, ಸರ್ವಾಧಿಕಾರ ದೊಡ್ಡದಲ್ಲ’, ‘ಚುನಾವಣಾ ಆಯೋಗವು ಬಿಜೆಪಿ ಕಚೇರಿಯಾಗದಿರಲಿ’, ‘ಚುನಾವಣಾ ಆಯೋಗ ಒನ್ ಮ್ಯಾನ್ ಕಂಪೆನಿಯಲ್ಲ’ ಮೊದಲಾದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಪಡೆದು ಬಂಧಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್…

Read More

ಸುಂಟಿಕೊಪ್ಪ, NEWS DESK ಸೆ. 28: ಮಾತೃವಾತ್ಸಲ್ಯದಿಂದ ಕಟ್ಟಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್‌ನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳು ಇಂದು ಪ್ರತಿ ಮನೆಯಲ್ಲಿ ಸ್ವಸಹಾಯದ ಜೊತೆಗೆ ಭೌದ್ಧಿಕ ವಿಕಾಸಕ್ಕೂ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಹಿಳೆಯರ ಸರ್ವತೋಮುಖ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ಆನಂದ್ ಸುವರ್ಣ ಅಭಿಪ್ರಾಯಪಟ್ಟರು. ಸೋಮವಾರ ಸುಂಟಿಕೊಪ್ಪದ ಗುಂಡುಗುಟ್ಟಿ ಮಂಜನಾಥಯ್ಯ–ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, 1982ರಲ್ಲಿ ಆರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂದು ರಾಜ್ಯಾದ್ಯಂತ 55 ಲಕ್ಷ ಸದಸ್ಯರನ್ನು ಹೊಂದಿದೆ. ಈ ಹಿಂದೆ ಕೊಡಗಿನ ಕಾರ್ಯಕ್ರಮಗಳನ್ನು ಸುಳ್ಯದ ಕಚೇರಿಯಿಂದ ನಿರ್ವಹಿಸಲಾಗುತ್ತಿತ್ತು. ಇದೀಗ ಕೊಡಗಿಗೆ ಪ್ರತ್ಯೇಕ ಯೋಜನಾ ಕಚೇರಿಯನ್ನು ನೀಡಲಾಗಿದೆ ಎಂದರು. ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹೆಚ್ಚಿನ ಒತ್ತು ನೀಡಿದ್ದು, ಇದರೊಂದಿಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶಗಳು ಹಾಗೂ…

Read More

ಮಡಿಕೇರಿ NEWS DESK ಸೆ.28 : ನಗರದ ಐಟಿಐ ಬಳಿ ಇರುವ ಸ್ವಾಭಿಮಾನ ಭವನದಲ್ಲಿ ಕಳೆದ 7 ವರ್ಷಗಳಿಂದ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ವತಿಯಿಂದ ಮಹಿಳೆಯರು ಹಾಗೂ ಪುರುಷರಿಗೆ ಫಿಟ್ನೆಸ್ ತರಬೇತಿ ನೀಡಲಾಗುತ್ತಿದೆ. ಬೆಳಗ್ಗೆ ಹಾಗೂ ಸಂಜೆ ತರಗತಿಗಳು ನಡೆಯುತ್ತಿದ್ದು, ಆಸಕ್ತರಿಗೆ ಆನ್‌ಲೈನ್ ತರಬೇತಿಯ ಸೌಲಭ್ಯವೂ ಲಭ್ಯವಿದೆ. ಸೋಮವಾರದಿಂದ ಶನಿವಾರದವರೆಗೆ ತರಗತಿಗಳು ನಡೆಯುತ್ತವೆ. 7 ವರ್ಷಗಳ ಅನುಭವ ಹೊಂದಿರುವ ಟ್ರೈನರ್ ಪ್ರೀತಾ ಕೃಷ್ಣ ಅವರು ತರಬೇತಿ ನೀಡುತ್ತಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9035946963 ಸಂಖ್ಯೆಗೆ ಕರೆ ಮಾಡಬಹುದು. “Sweat and Get Fit – Happy Soul, Healthy Body” ಎಂಬ ಧ್ಯೇಯದೊಂದಿಗೆ ಫಿಟ್ನೆಸ್ ತರಬೇತಿ ನೀಡಲಾಗುತ್ತಿದೆ. Online ಕೂಡ ಲಭ್ಯ… ಸೋಮವಾರ ದಿಂದ ಶನಿವಾರದವರೆಗೆ ತರಗತಿಗಳು ನಡೆಯುತ್ತವೆ. Trainer :ಪ್ರೀತಾ ಕೃಷ್ಣ 7 ವರ್ಷಗಳ ಅನುಭವ (9035946963…Sweat and get fit Happy soul healthy body….) ತಕ್ಷಣ ಹೆಸರು ನೋಂದಾಯಿಸಿ…

Read More

ವಿರಾಜಪೇಟೆ, NEWS DESK ಸೆ.27: ಮೂಲತಃ ವಿರಾಜಪೇಟೆಯವರಾದ ಪ್ರೊ. ಕಂಬಿರಂಡ ರಾಖಿ ಪೂವಣ್ಣ ಎಂ. ಅವರಿಗೆ 2026ನೇ ಸಾಲಿನ ‘ಅಧ್ಯಾಪಕ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ), ಮಂಗಳೂರು ವಿಭಾಗದ ವತಿಯಿಂದ ಅತ್ಯುತ್ತಮ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲೆಯ ಕಿದಿಯೂರಿನ ಮಾಧವ ಕೃಷ್ಣ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು. ಪ್ರೊ. ರಾಖಿ ಪೂವಣ್ಣ ಅವರು ಸ್ವತಃ ಕ್ರೀಡಾಪಟುವಾಗಿ, ಶಿಕ್ಷಕಿಯಾಗಿ, ತರಬೇತುದಾರರಾಗಿ ಹಾಗೂ ಸಂಶೋಧಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಎರಡು ದಶಕಗಳ ಬೋಧನಾ ಅನುಭವ ಹೊಂದಿದ್ದಾರೆ. ಹಾಕಿ, ಹ್ಯಾಂಡ್‌ಬಾಲ್, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್‌ಬಾಲ್ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ 2026ನೇ ಸಾಲಿನ ಅತ್ಯುತ್ತಮ ದೈಹಿಕ ಶಿಕ್ಷಣ…

Read More

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹಿಂದೂ ಮುಖಂಡ ರಘು ಸಕಲೇಶಪುರ ಹೇಳಿದರು. ವಿರಾಜಪೇಟೆ–ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರಾಂತಿಕಾರಿಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ ನೀಡಿದ್ದರು ಎಂದು ಹೇಳಿದರು. ವಿರಾಜಪೇಟೆ ತಾಲೂಕಿನಲ್ಲಿ ಗಣೇಶೋತ್ಸವ 165 ವರ್ಷಗಳನ್ನು ಪೂರೈಸಿದ್ದು, ಇದೇ ರೀತಿಯ ಒಗ್ಗಟ್ಟು ಮುಂದುವರಿದರೆ ಮುಂದಿನ ಸಾವಿರಾರು ವರ್ಷಗಳವರೆಗೂ ಆಚರಣೆ ಮುಂದುವರಿಯಲಿದೆ ಎಂದರು. ಕೊಡಗಿನ ಭೂಮಿ, ಸಂಸ್ಕೃತಿ ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಕಾಪಾಡುವ ಅಗತ್ಯವಿದೆ. ಹೊರ ರಾಜ್ಯಗಳಿಂದ ಬಂದು ಭೂಮಿ ಖರೀದಿಸುವುದು ಸೇರಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸ್ಥಳೀಯರು ಜಾಗೃತರಾಗಬೇಕು ಎಂದು ಅವರು ಹೇಳಿದರು. ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಅಕ್ರಮವಾಗಿ ನೆಲೆಸಿರುವವರ ಕುರಿತು ಸೂಕ್ತ ಪರಿಶೀಲನೆ ನಡೆಸಬೇಕು ಹಾಗೂ ಸ್ಥಳೀಯ ಕಾರ್ಮಿಕರಿಗೆ ಆದ್ಯತೆ ನೀಡಬೇಕು…

Read More

ನಾಪೋಕ್ಲು,NEWS DESK ಸೆ.27: ಬಾಳಲೆ ವಿಜಯಲಕ್ಷ್ಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಆಟ ಪ್ರದರ್ಶಿಸಿ ರನ್ನರ್ಸ್‌ ಸ್ಥಾನ ಪಡೆದುಕೊಂಡಿದ್ದಾರೆ. ತಂಡದ ಆರು ವಿದ್ಯಾರ್ಥಿಗಳು ಸಂಪಾಜೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ತಂಡದ ವಿದ್ಯಾರ್ಥಿಗಳಾದ ಕುಟ್ಟಂಡ ದೇಚಮ್ಮ ಎಂ., ಚೊಯಮಂಡ ವರ್ಣ ಎಂ., ನೆಲಚಂಡ ಪೊನ್ನಮ್ಮ ಎನ್., ಬೋವ್ವೆರಿಯಂಡ ಹನ್ಸಿಕಾ ಪೊನ್ನಪ್ಪ ಬಿ., ರಾನಿಯ ತಸ್ಲಿನ್, ಅಮ್ಮಕಂಡ ಆಂಚಲ್ ತಂಗಮ್ಮ, ಹೋಲೀಕ ಪಿ., ಬೇರೇರಾ ಶಿಯಾನ ಮುತ್ತಣ್ಣ ಹಾಗೂ ತಾತಂಡ ಗ್ರಂಥ ಕಾವೇರಪ್ಪ ಅವರು ತಂಡದ ಉತ್ತಮ ಪ್ರದರ್ಶನಕ್ಕೆ ಪ್ರಮುಖ ಪಾತ್ರ ವಹಿಸಿದರು. ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಮತ್ತು ಶ್ರೀಮತಿ ಲಾವಣ್ಯ ಅವರ ತರಬೇತಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧೇಶ್ ಬಿ.ಎಸ್., ಕಾರ್ಯದರ್ಶಿ ವಿನೋದ್ ಪಿ.ಎನ್., ಮುಖ್ಯ…

Read More

ನಾಪೋಕ್ಲು, NEWS DESK ಸೆ.27: ಮಹಿಳಾ ಸಹಕಾರ ಸಂಘ ನಿಯಮಿತ, ನಾಪೋಕ್ಲು ಇದರ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಸಮಾಜದಲ್ಲಿ ಒಟ್ಟು 335 ಸದಸ್ಯರಿದ್ದು, ನೂತನ ಸದಸ್ಯರ ಸೇರ್ಪಡೆ ಪ್ರಕ್ರಿಯೆ ಮುಂದುವರಿದಿದೆ. ಸದಸ್ಯರಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಲಹೆ ಮತ್ತು ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸದಸ್ಯರು ಸಹಕರಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಸದಸ್ಯರ ಪ್ರಶ್ನೆ, ಸಲಹೆ ಹಾಗೂ ಸೂಚನೆಗಳಿಗೆ ಅಧ್ಯಕ್ಷರು ಉತ್ತರಿಸಿದರು. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ, ಸದಸ್ಯರ ಒಪ್ಪಿಗೆ ಪಡೆಯಲಾಯಿತು. ಸದಸ್ಯ ಮಹಿಳೆಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಹಿಳೆಯರು ತಯಾರಿಸಿದ ವಿವಿಧ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಹಕಾರ ಮಹಿಳಾ ಸಮಾಜದ ಉಪಾಧ್ಯಕ್ಷೆ ಕ್ಯಾಲೇಟಿರ ಮುತ್ತಮ್ಮ ಬೋಪಯ್ಯ,…

Read More

ನಾಪೋಕ್ಲು, NEWS DESK ಸೆ.27: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಭಾರತೀಯ ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷ ಡಾ. ಕಾವೇರಪ್ಪ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರವು ವಿರಾಜಪೇಟೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದು ಸ್ವಾಗತಾರ್ಹ. ಆದರೆ, ತೀವ್ರ ನೀರಿನ ಅಭಾವ ಎದುರಿಸುತ್ತಿರುವ ಮಡಿಕೇರಿ ಮತ್ತು ಕುಶಾಲನಗರ ತಾಲೂಕುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೆ ಪರಿಸ್ಥಿತಿ ಆತಂಕಕಾರಿಯಾಗಿದೆ. ಕುಡಿಯುವ ನೀರಿನ ಬಾವಿಗಳು ಬತ್ತಿಹೋಗುತ್ತಿದ್ದು, ಭತ್ತದ ಗದ್ದೆಗಳು ಬಿರುಕು ಬಿಟ್ಟು ಒಣಗುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂಬರುವ ಕಾಫಿ, ಕಾಳುಮೆಣಸು,…

Read More

ನಾಪೋಕ್ಲು, NEWS DESK ಸೆ.27: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ನಾಪೋಕ್ಲು ವೃತ್ತದ ಬೇತು ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಪೋಕ್ಲು ವೃತ್ತದ ಮೇಲ್ವಿಚಾರಕಿ ಶೀಲಾ ಅಶೋಕ್, ನಾಪೋಕ್ಲು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಆಶಾ ಕಾರ್ಯಕರ್ತೆ ಆಶಾ ಅಪ್ಪಣ್ಣ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಕ್ಕಳ ತಾಯಂದಿರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಮೇಲ್ವಿಚಾರಕಿ ಶೀಲಾ ಅಶೋಕ್, ಪೋಷಣ್ ಅಭಿಯಾನದ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು. ಪ್ರತಿಯೊಬ್ಬರೂ ತಮ್ಮ ದೈನಂದಿನ ಆಹಾರದಲ್ಲಿ ಸ್ಥಳೀಯವಾಗಿ ದೊರೆಯುವ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಬಳಸುವಂತೆ ಮನವಿ ಮಾಡಿದರು. ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು, ‘ಗೃಹಲಕ್ಷ್ಮಿ’ ಯೋಜನೆಯ…

Read More