ಲೇಖಕ: admin

ಬೆಂಗಳೂರು/ಕಲಬುರಗಿ, ಮಾರ್ಚ್ 9, 2026: ವಿಶ್ವ ಮಹಿಳಾ ದಿನದ ಸಂಭ್ರಮದ ನಡುವೆಯೇ ಕೇಂದ್ರದ ಮೋದಿ ಸರ್ಕಾರವು ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು 60 ರೂ. ಏರಿಕೆ ಮಾಡುವ ಮೂಲಕ ಗೃಹಿಣಿಯರಿಗೆ ಬಿಗ್ ಶಾಕ್ ನೀಡಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದು, ಇದು ಮಹಿಳೆಯರಿಗೆ ನೀಡಿದ ‘ಅಘಾತಕಾರಿ ಕೊಡುಗೆ’ ಎಂದು ಟೀಕಿಸಿದ್ದಾರೆ. ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ಕಲಬುರಗಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯದ ಬಿಜೆಪಿ ಸಂಸದರ ಮೌನವನ್ನು ಪ್ರಶ್ನಿಸಿದರು. “ಸಣ್ಣ ಪುಟ್ಟ ವಿಷಯಗಳಿಗೂ ನಾಟಕೀಯವಾಗಿ ಮಾಧ್ಯಮಗಳ ಮುಂದೆ ಬರುವ ರಾಜ್ಯದ ಬಿಜೆಪಿ ‘ಖಾಲಿ ಟ್ರಂಕ್’ ಸಂಸದರು, ಜನಸಾಮಾನ್ಯರ ಈ ಸಂಕಷ್ಟದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಈ ದರ ಏರಿಕೆ ವಿರುದ್ಧ ನಿಮ್ಮ ಹೋರಾಟ ಎಲ್ಲಿ?” ಎಂದು ನೇರವಾಗಿ ಸವಾಲು ಹಾಕಿದರು. ಕೇಂದ್ರಕ್ಕೆ ಸಹೋದರಿಯರ ಮೇಲೆ ಕಾಳಜಿ ಇದ್ದರೆ ಕೂಡಲೇ ಬೆಲೆ ಏರಿಕೆ ಹಿಂಪಡೆಯಲಿ ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ಸಾಧನೆಗಳ ಪಟ್ಟಿ:…

Read More

ಕುಶಾಲನಗರ, NEWS DESK ಮಾ.09: ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ಘಟಕದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಕುಶಾಲನಗರದ ಸರೋಜಾ ಆರಾಧ್ಯ ಅವರನ್ನು ಕದಳಿ ರಾಜ್ಯ ಸಂಚಾಲಕರಾದ ಸುಶೀಲಾ ಸೋಮಶೇಖರ್ ನೇಮಕ ಗೊಳಿಸಿದ್ದಾರೆ. ಹಾಗೆಯೇ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಯುವ ಘಟಕಗಳನ್ನು ರಚನೆ ಮಾಡಲು ಅವರು ಸೂಚಿಸಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಮಾ.09:-ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ ಸಮರ್ಪಕವಾಗಿ ನಡೆಯಬೇಕಿದ್ದಲ್ಲಿ ತಾಯಿ ಆರೋಗ್ಯ ಪೂರ್ಣವಾಗಿರಬೇಕು. ಇದರಿಂದ ಮಕ್ಕಳು ಹಾಗೂ ಕುಟುಂಬದ ನಿರ್ವಹಣೆ ಸುಗಮವಾಗಿ ಸಾಗಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಆಧುನಿಕ ಶರವೇಗದ ಜಗತ್ತಿನಲ್ಲಿ ಆಹಾರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಕಲುಷಿತತೆಯನ್ನು ಕಾಣಬಹುದಾಗಿದೆ. ಆದ್ದರಿಂದ ಶುದ್ದ ಕುಡಿಯುವ ನೀರು, ಮನೆಯಲ್ಲಿಯೇ ಬೇಯಿಸಿದ ಆಹಾರ ಉಪಯೋಗಿಸುವುದರಿಂದ ಆರೋಗ್ಯದತ್ತ ಗಮನಹರಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು…

Read More

ಮಡಿಕೇರಿ NEWS DESK ಮಾ.9 : ಅಪಾಯದ ಸಂದರ್ಭಗಳಲ್ಲಿ ಅಸಾಮಾನ್ಯ ಧೈರ್ಯ, ಸಾಹಸ ಮತ್ತು ಸಮಯಪ್ರಜ್ಞೆ ತೋರಿಸಿ ಇತರರ ಪ್ರಾಣ ರಕ್ಷಿಸಲು ಮುಂದಾದ ಮಕ್ಕಳನ್ನು ಗೌರವಿಸುವ ಉದ್ದೇಶದಿಂದ ರೋಟರಿ ಮಡಿಕೇರಿ ವತಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2025ರ ಜನವರಿ 1ರಿಂದ 2026ರ ಫೆಬ್ರವರಿ 28ರವರೆಗೆ ಸಂಭವಿಸಿದ ಘಟನೆಗಳಲ್ಲಿ ತಮ್ಮ ಪ್ರಾಣದ ಹಂಗನ್ನು ಲೆಕ್ಕಿಸದೆ ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಿಸಲು ಮುಂದಾದ 06 ರಿಂದ 14 ವರ್ಷದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಅರ್ಹ ಮಕ್ಕಳ ಪರವಾಗಿ ಪೋಷಕರು, ಶಿಕ್ಷಕರು, ಶಾಲೆಗಳು ಅಥವಾ ಸಾರ್ವಜನಿಕರು ನಾಮ ನಿರ್ದೇಶನ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2026 ಎಂದು ರೋಟರಿ ಮಡಿಕೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಆಯ್ಕೆಯಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ ಬಹುಮಾನ ರೂ.5 ಸಾವಿರ, ದ್ವಿತೀಯ ಬಹುಮಾನ ರೂ.3 ಸಾವಿರ ಹಾಗೂ ತೃತೀಯ ಬಹುಮಾನ ರೂ.2 ಸಾವಿರ ನೀಡಲಾಗುವುದು. ನಾಮ ನಿರ್ದೇಶನ…

Read More

ಮಡಿಕೇರಿ NEWS DESK ಮಾ.9 : ವನ್ಯಜೀವಿಗಳ ಚಲನವಲನ ಮತ್ತು ವನ್ಯಜೀವಿಗಳ ದಾಳಿಯಿಂದ ಆಗುತ್ತಿರುವ ಕಷ್ಟನಷ್ಟದ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೊಡಗು ಅರಣ್ಯ ವೃತ್ತದ ಮಡಿಕೇರಿಯಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಇರುವ ಕಂಟ್ರೋಲ್ ಅಂಡ್ ಕಮಾಂಡ್ ರೂಮ್ ನಲ್ಲಿ ಶಾಸಕರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ವನ್ಯಜೀವಿಗಳಿಂದಾಗುತ್ತಿರುವ ಬೆಳೆಹಾನಿಯ ಬಗ್ಗೆ ಆನ್ ಲೈನ್ ನಲ್ಲಿರುವ ಮಾಹಿತಿ ಮತ್ತು ವನ್ಯಜೀವಿಗಳ ಚಲನವಲನದ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡುವ ಕುರಿತು ಇರುವ ಅಪ್ಲಿಕೇಶನ್ ನ ವಿವರವನ್ನು ಅರಣ್ಯ ಅಧಿಕಾರಿಗಳು ಸಮಗ್ರವಾಗಿ ವಿವರಿಸಿದರು.

Read More

ಮಡಿಕೇರಿ NEWS DESK ಮಾ.9 : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲಿ ನಡೆದಿದೆ. ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಜಲಜಾಕ್ಷಿ (53) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಜಲಜಾಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.8 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿತು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ದೇಶಾದ್ಯಂತ ಕೊಡವ ಮಹಿಳೆಯರಿಗೆ ಶೇ.33 ಮೀಸಲಾತಿ ಆಂತರಿಕ ಕೋಟಾದಡಿ ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ‍್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಸಂಸತ್ ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು. ಕೊಡವ ಮಹಿಳೆಯರು ಉತ್ತಮ ಕೃಷಿಕರಾಗಿರುವುದರಿಂದ ವಿಶೇಷ ಕಾಳಜಿಯಾಗಿ…

Read More

ಕುಶಾಲನಗರ ಮಾ.8 NEWS DESK  : ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶನಾಲಯದ ಹೊಸ ಪರಿಕಲ್ಪನೆಯಡಿಯಲ್ಲಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸುವ ಸಂಬಂಧವಾಗಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಸಂಸ್ಥೆಯ ಪ್ರಾಂಶುಪಾಲರೂ ಆದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರಾಮಚಂದ್ರರಾಜೇ ಅರಸ್ ಅವರ ಅಧ್ಯಕ್ಷತೆಯಲ್ಲಿ ಡಯಟ್ ಸಂಸ್ಥೆಯಲ್ಲಿ ಘಟಕದ ಪ್ರಥಮ ಸಭೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ನೀಡುವ ಸಲುವಾಗಿ ಜಿಲ್ಲಾಹಂತದ ಈ ಘಟಕವನ್ನು ಸ್ಥಾಪಿಸಿದ್ದು, ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ಅನುಗುಣವಾಗಿ ವಿವಿಧ ತರಬೇತಿ ನೀಡುವ ಕುರಿತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದ ಘಟಕದ…

Read More

ಮಡಿಕೇರಿ ಮಾ.8 NEWS DESK : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕೇವಲ ಒಂದು ಆಚರಣೆಯಾಗಿ ಉಳಿಯದೆ ಇದನ್ನು ಪ್ರತಿಯೊಬ್ಬ ಮಹಿಳೆಯು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ತಾನು ಸಬಲೇ ಎಂಬುದನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದರು. ಗೋಣಿಕೊಪ್ಪಲು ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ನಿರ್ವಹಣಾ ಘಟಕದವರು ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾದರೂ ಇದರ ಅಳವಡಿಕೆ ದಿನನಿತ್ಯದ ಜೀವನದಲ್ಲಿ ಮಾಡಿಕೊಂಡರೆ ಸಮ ಸಮಾಜದ ನಿರ್ಮಾಣ ಆಗೋದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಶಾಸಕರು ಬಣ್ಣಿಸಿದರು. ಆಧುನಿಕ ಯುಗದಲ್ಲಿ ಮಹಿಳೆಯರ ಪಾತ್ರವೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖವಾಗಿದೆ. ನಮ್ಮ ನಾಡಿನ ಮಹಿಳೆಯರು ಈ ನಿಟ್ಟಿನಲ್ಲಿ ತಮ್ಮನ್ನು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆಯಾಗಿ ಮೂಡಿ ಬರಬೇಕು ಎಂದು ಆಶಯ…

Read More

ಮಡಿಕೇರಿ ಮಾ.8 NEWS DESK : ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವೊಂದೇ ಸಾಲದು, ಅದರೊಂದಿಗೆ ಆರ್ಥಿಕ ಜ್ಞಾನ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ ಎಂದು ಖ್ಯಾತ ಕವಯತ್ರಿ ಸ್ಮಿತಾ ಅಮೃತಾರಾಜ್ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರ ಸಾಧನೆಯನ್ನು ಗುರುತಿಸಿ, ಗೌರವಿಸುವ ದಿನವಾಗಿದ್ದು, ಇದು ಕೇವಲ ಆಚರಣೆಯಲ್ಲ, 20ನೇ ಶತಮಾನದ ಆರಂಭದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ವೇತನ, ಕಡಿಮೆ ಕೆಲಸದ ಅವಧಿ ಮತ್ತು ಮತದಾನದ ಹಕ್ಕಿಗಾಗಿ ನಡೆಸಿದ ಬೃಹತ್ ಹೋರಾಟಗಳ ಫಲವಾಗಿದೆ ಎಂದರು. ಅನಾದಿ ಕಾಲದಿಂದಲೂ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಿ ಕಡೆಗಣಿಸಲಾಗುತ್ತಿದೆ. ಆದರೂ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯದಿಂದ ಸಬಲೀಕರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಭಾರತದಲ್ಲಿ…

Read More