ಮಡಿಕೇರಿ ಜು.19 NEWS DESK : ಕುಶಾಲನಗರದ ಶ್ರೀ ಶಿರಡಿ ಸಾಯಿ ಟ್ರಸ್ಟ್ ವತಿಯಿಂದ ಜು.21 ರಂದು ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ಕಾಕಡ ಆರತಿ, 6.30 ಗಂಟೆಗೆ ಗಣಪತಿ ಹೋಮ, 7 ಗಂಟೆಗೆ ಪಂಚಾಮೃತ ಅಭಿಷೇಕ, 8 ಗಂಟೆಯಿಂದ 11 ಗಂಟೆಯ ವರೆಗೆ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ, 9 ಗಂಟೆಯಿಂದ 12 ಗಂಟೆಯವರೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಶಿರಡಿ ಸಾಯಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9481818183, 9448504827, 9483094830 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಮಡಿಕೇರಿ ಜು.19 NEWS DESK : ಪ್ರಸಕ್ತ (2024-25) ಸಾಲಿಗೆ ಮಡಿಕೇರಿ ತಾಲ್ಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ಮತ್ತು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮಡಿಕೇರಿ ಇಲ್ಲಿಗೆ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯಗಳ ವಿವರ: ಉಚಿತ ದಾಖಲಾತಿ(ಶುಲ್ಕ ರಹಿತ), ಉಚಿತ ಹಾಸ್ಟೇಲ್ ಸೌಲಭ್ಯ, ಮೆನು ಚಾರ್ಟ್ ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, ಪ್ರತಿ ತಿಂಗಳಿಗೆ ಉಚಿತ “ಶುಚಿ ಸಂಭ್ರಮ ಕಿಟ್” (ಸೋಪು, ಪೇಸ್ಟ್, ಬ್ರಷ್, ತೆಂಗಿನಎಣ್ಣೆ), ಉಚಿತ ಆರೋಗ್ಯ ತಪಾಸಣೆ, ಗ್ರಂಥಾಲಯ ಹಾಗೂ ಕಂಪ್ಯೂಟರ್ ಸೌಲಭ್ಯಗಳು ಆಸಕ್ತ ವಿದ್ಯಾರ್ಥಿಗಳು, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ರವರ ಕಚೇರಿ ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ರವರ ಕಚೇರಿಯಿಂದ ಅರ್ಜಿಯನ್ನು…
ಮಡಿಕೇರಿ ಜು.19 NEWS DESK : ಎಡೆಬಿಡದೆ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಕೊಡಗು ತತ್ತರಗೊಂಡಿದೆ. ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬರೆಗಳು ಜರಿಯುತ್ತಿವೆ, ರಸ್ತೆಗಳು ಜಲಾವೃತಗೊಳ್ಳುತ್ತಿವೆ. ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಪಾಯದಂಚಿನ ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಾಂತರ ::: ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬದವರಿಗೆ ಪ್ರವಾಹ ಭೀತಿ ಇರುವುದರಿಂದ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರರಾದ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತರರು ಭೇಟಿ ನೀಡಿ ವೀಕ್ಷಿಸಿದರು. ಕುಂಜಿಲ ಗ್ರಾಮದ ಖದಿಸಮ್ಮ ಎಂಬುವವರ ವಾಸದ ಮನೆ ಹಾನಿಯಾಗಿದ್ದು, ಮನೆಯು ಬೀಳುವ ಸ್ಥಿತಿಯಲ್ಲಿದೆ. ಈ ಹಿನ್ನೆಲೆ ಕುಟುಂಬದವರನ್ನು ಸ್ಥಳಾಂತರಿಸಲಾಗಿದೆ. ಮಡಿಕೇರಿ ಮೂರ್ನಾಡು ಮುಖ್ಯ ರಸ್ತೆಯ ಕಗ್ಗೊಡ್ಲು ಗ್ರಾಮದ ಮುತ್ತಪ್ಪ ಎಂಬುವರ ಅಂಗಡಿ ಮತ್ತು ಮನೆಗೆ ಹೆಚ್ಚಿನ ಮಳೆಯಿಂದಾಗಿ ಹೊಳೆ ತುಂಬಿ ನೀರು…
ಮಡಿಕೇರಿ ಜು.19 NEWS DESK : ಭಾರತದ ಸೈನ್ಯದ ಯುದ್ಧ ಸಾಮರ್ಥ್ಯ ಹೆಚ್ಚಳದೊಂದಿಗೆ ಯುವ ಸಮೂಹಕ್ಕೆ ಉದ್ಯೋಗ ದೊರಕಿಸಿಕೊಡುವ ಕೇಂದ್ರದ ಅಗ್ನಿವೀರ್ ನೇಮಕಾತಿಯ ಕುರಿತು ಅನಗತ್ಯ ಗೊಂದಲ ಸೃಷ್ಟಿ ಸರಿಯಲ್ಲ. ಇದೊಂದು ಅತ್ಯುತ್ತಮವಾದ ಯೋಜನೆ ಎಂದು ಬಿಜೆಪಿ ಪೂರ್ವ ಸೈನಿಕರ ಪ್ರಕೋಷ್ಟದ ರಾಜ್ಯ ಸಂಚಾಲಕÀ ಮೇಜರ್ ಓಡಿಯಂಡ ಎಸ್.ಚಿಂಗಪ್ಪ ಸಮರ್ಥಿಸಿದ್ದಾರೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷವಾದ ಕಾಂಗ್ರೆಸ್ ಅಗ್ನಿವೀರ್ ಸೇರ್ಪಡೆಯ ಕುರಿತು ಸುಳ್ಳು ಆಪಾದನೆಗಳ ಮೂಲಕ ಗೊಂದಲ ಮೂಡಿಸುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಪ್ರಸ್ತುತ ಯುದ್ಧದ ವಿಧಾನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಇದಕ್ಕೆ ಪೂರಕವಾಗಿ ಯುವ ಸಮೂಹವನ್ನು ಸೈನ್ಯಕ್ಕೆ ಸೇರ್ಪಡೆಗೊಳಿಸುವ ಮೂಲಕ ಭಾರತೀಯ ಸೈನ್ಯವನ್ನು ಶಕ್ತಿಯುತವಾಗಿ ಕಟ್ಟುವ ಚಿಂತನೆಗಳು ಅಗ್ನಿವೀರ್ ನೇಮಕಾತಿಯಲ್ಲಿ ಅಡಗಿದೆ. 2022 ರಿಂದ ಯೋಜನೆ ಆರಂಭವಾಗಿದ್ದು, ಅತ್ಯಂತ ಉತ್ಸಾಹದಿಂದ ಯುವ ಸಮೂಹ ಸೇರ್ಪಡೆಗೊಳ್ಳುತ್ತಿದೆ ಎಂದು ತಿಳಿಸಿದರು. ಭಾರತೀಯ ಸೈನ್ಯದ ಸೈನಿಕರ ಸರಾಸರಿ ವಯೋಮಿತಿ 32 ಇದ್ದು, ಇದನ್ನು ಇಳಿಸುವ ಮೂಲಕ ಸೈನ್ಯದಲ್ಲಿ ಮತ್ತಷ್ಟು…
ಮಡಿಕೇರಿ ಜು.18 NEWS DESK : ನೇಪಾಳದ ಪೋಕಾರದಲ್ಲಿ ಇದೇ ಜು.26ರಿಂದ 30 ರವರೆಗೆ ನಡೆಯುವ ಅಂತರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ವಿರಾಜಪೇಟೆಯ ಎಸ್‌ಎಂಎಸ್‌ಪಿ ಕಾಲೇಜ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪಾರೇರ ತ್ರಿಶಾ ಆಯ್ಕೆಯಾಗಿದ್ದಾಳೆ. ಈಕೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದ ಪಾರೇರ ಯತೀಶ್ ಹಾಗೂ ದೇವಕಿ ದಂಪತಿಯ ಪುತ್ರಿ.
ಸೋಮವಾರಪೇಟೆ ಜು.18 NEWS DESK : ಸೋಮವಾರಪೇಟೆ ಶಾಲಾ ರಸ್ತೆಯ ನಿವಾಸಿ ಗುಂಡಿಮನೆ ಮಂಜುನಾಥ್ ಗುರುವಾರ ಸಂಜೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕರ್ಕಳ್ಳಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಡಿಕೇರಿ ಜು.18 NEWS DESK : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಪ್ರವಾಹದಿಂದ ಭೀತಿ ಎದುರಾಗಿದೆ. ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಅಧಿಕ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಹೊಳೆಕೆರೆ ಬದಿಯ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಜು.18 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಿ.ವೈ.ರಾಜೇಶ್ ಅವರನ್ನು ಮೂಡ ಕಚೇರಿಯಲ್ಲಿ ಭೇಟಿಯಾದ ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಜಾನ್ಸನ್ ಪಿಂಟೋ ಅವರು ಅಭಿನಂದನೆ ಸಲ್ಲಿಸಿದರು. ನಂತರ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿ, ಸನ್ಮಾನಿಸಿ ಶುಭ ಹಾರೈಸಿದರು.
ಮಡಿಕೇರಿ ಜು.18 NEWS DESK : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ…
ಮಡಿಕೇರಿ ಜು.18 NEWS DESK : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ…






