ಲೇಖಕ: admin

ಮಡಿಕೇರಿ ಆ.19 NEWS DESK : ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಾಸವಿರುವ ಹಿಂದೂಗಳಿಗೆ ಪ್ರತ್ಯೇಕವಾಗಿ ಸುಸಜ್ಜಿತವಾದ ಸ್ಮಶಾನದ ಜಾಗ ಗುರುತಿಸಿ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ (ಸಿಪಿಐಎಂ) ಗ್ರಾ.ಪಂ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸೂಕ್ತ ಸ್ಮಶಾನವಿಲ್ಲದೆ ಶವಗಳನ್ನು ಕಾವೇರಿ ನದಿಯ ದಡದಲ್ಲಿ ಸಂಸ್ಕಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಪಿಐಎಂ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಒಟ್ಟು ಜನಸಂಖ್ಯೆಯಲ್ಲಿ ಶೇ.45 ರಷ್ಟು ಮಂದಿ ಹಿಂದೂಗಳಿದ್ದು, ಸ್ಮಶಾನದ ಕೊರತೆ ಎದುರಾಗಿದೆ. ಶೇ.5 ರಷ್ಟು ಮಾತ್ರ ಸಣ್ಣ ಹಿಡುವಳಿದಾರರಿದ್ದು, ಮೃತಪಟ್ಟರೆ ಸ್ವಂತ ಜಾಗದಲ್ಲಿ ಶವ ಸಂಸ್ಕಾರ ಮಾಡಲು ಅವರಿಗೆ ಅವಕಾಶವಿದೆ. ಆದರೆ ಉಳಿದಿರುವ ಶೇ.35 ರಷ್ಟು ಹಿಂದೂಗಳು ಬಡವರಾಗಿದ್ದು, ಆದಿವಾಸಿಗಳು, ದಲಿತರು, ಬಿಲ್ಲವರು, ಮೊಗೇರ ಮತ್ತಿತರ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮನೆಯಲ್ಲಿ ಸಾವು ಸಂಭವಿಸಿದಾಗ ಗೌರವಯುತವಾಗಿ ಎಲ್ಲಿ ಸಂಸ್ಕಾರ ಮಾಡಬೇಕು ಎನ್ನುವ ಗೊಂದಲ ಇವರನ್ನು ಕಾಡುತ್ತಿದೆ. ಸ್ವಂತ ಭೂಮಿಯಿಲ್ಲದೆ ಬಾಡಿಗೆ…

Read More

ಮಡಿಕೇರಿ ಆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯು ಆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.19 NEWS DESK : ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಚೋನಕೆರೆ, ಕೊಳಕೇರಿ, ಕುಂಜಿಲ, ಕಕ್ಕಬ್ಬೆ, ನಾಲಡಿ, ಯವಕಪಾಡಿ, ಎಮ್ಮೆಮಾಡು, ಪಡಿಯಾಣಿ, ಕುರ್ಲಿ, ನೆಲಜಿ, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.

Read More

ಮಡಿಕೇರಿ ಆ.19 NEWS DESK : ಕಾಯಕ ಯೋಗಿ ನುಲಿಯ ಚಂದಯ್ಯ ಅವರು ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾಗಿದ್ದು, ನುಲಿಯ ಚಂದಯ್ಯ ಅವರ ಜೀವನ ಚರಿತ್ರೆ ಬಗ್ಗೆ ತಿಳಿದುಕೊಳ್ಳುವಂತಾಗಲು ಚಿಕ್ಕ ಅಳುವಾರದ ವಿಶ್ವವಿದ್ಯಾನಿಲಯದಲ್ಲಿ ನುಲಿಯ ಚಂದಯ್ಯ ಅವರ ಅಧ್ಯಯನ ಪೀಠ ಆರಂಭವಾಗಬೇಕು ಎಂದು ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕುಮಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನುಲಿಯ ಚಂದಯ್ಯ ಅವರು ಕಾಯಕ ಯೋಗಿಯಾಗಿದ್ದು, ಬಿಜಾಪುರ ಜಿಲ್ಲೆಯಲ್ಲಿ ಹುಟ್ಟಿ ಬೆಳೆದಿದ್ದಾರೆ. 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಕೈಜೋಡಿಸಿ ಹಲವು ಕ್ರಾಂತಿಗಳಿಗೆ ಕಾರಣರಾದರು ಎಂದರು. ಪ್ರತಿಯೊಬ್ಬರೂ ವೃತ್ತಿಯನ್ನು ಗೌರವಿಸಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂಬುದನ್ನು ನುಲಿಯ ಚಂದಯ್ಯ ಅವರು ಸಾರಿದ್ದಾರೆ ಎಂದು ಶ್ರೀ ಕುಮಾರ ಅವರು ಹೇಳಿದರು. ಸಕಲ ಜೀವಿಗಳಲ್ಲಿ ಲೇಸನ್ನು ಬಯಸುವುದೇ ಕುಳುವ ಸಮಾಜದ ಧ್ಯೇಯವಾಗಿದೆ. ಆ…

Read More

ಮಡಿಕೇರಿ ಆ.19 NEWS DESK : ಕೊಡಗು ದೇಶ, 12 ಕೊಂಬು 35 ನಾಡು ಎಂಬ ಉಲ್ಲೇಖ ಪಟ್ಟೋಲೆ ಪಳಮೆ ಅದಿಯಾಗಿ ಹಲವಾರು ದಾಖಲೆಗಳಲ್ಲಿ ಕಂಡು ಬರುತ್ತದೆ. ಇಂತಿರುವಾಗ ಈ 12 ಕೊಂಬುಗಳ ವಿಂಗಡಣೆಯೊಂದಿಗೆ 35 ನಾಡುಗಳು ಬೆರೆತುಕೊಂಡಿವೆ. ಇಷ್ಟು ನಾಡುಗಳಲ್ಲಿ ಕೊಡವರು ಹಾಗೂ ಕೊಡವ ಭಾಷಿಕರು ಅನಾದಿಕಾಲದಿಂದಲೂ ವಾಸಿಸುತ್ತಿದ್ದಾರೆ. ಆದರೆ ಯಾವ ಯಾವ ನಾಡುಗಳಲ್ಲಿ ಯಾವ ಯಾವ ಕುಟುಂಬಸ್ಥರು ಇದ್ದರು ಹಾಗೂ ವರ್ತಮಾನದಲ್ಲಿ ವಾಸಿಸುತ್ತಿದ್ದಾರೆ. ಯಾರ್ಯಾರಿಗೆ ಐನ್‍ಮನೆ, ಬಲ್ಯಮನೆ, ಮುಂದ್‍ಮನೆ, ಗುರುಮನೆ, ಕೈಮಡ, ಮೂರ್ತಿಸ್ಥಾನ, ಅಂಬಲಗಳಿವೆ ಎಂಬುವುದು ದಾಖಲಾಗಬೇಕಾಗಿದೆ. ಅಂತೆಯೆ ಪ್ರಸ್ತುತ ಎಲ್ಲೆಲ್ಲಿ ಕೊಡವರು, ಕೊಡವ ಭಾಷಿಕರು ಸ್ವಂತಮನೆ, ಆಸ್ತಿ-ಪಾಸ್ತಿ, ತೋಟ-ಭೂಮಿ ಹೊಂದಿದ್ದಾರೆ ಎಂಬುವುದರ ವಿವರ ಬೇಕಾಗಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಈ ದಿಸೆಯಲ್ಲಿ ಸಮಗ್ರ ಮಾಹಿತಿ ಪುಸ್ತಕವೊಂದನ್ನು ಹೊರತರಲು ಮುಂದಾಗಿದ್ದು, ಅದದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ‘ಕೊಡವ-ಕೊಡಗು: ಸಮಗ್ರ ಚಿತ್ರಣ’ಕ್ಕೆ ಮಾಹಿತಿ ಒದಗಿಸಿಕೊಡಬೇಕಾಗಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಕೋರಿದ್ದಾರೆ.

Read More

ವಿರಾಜಪೇಟೆ ಆ.19 NEWS DESK : ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಆ.22 ರಂದು ಪಾವನ ಪರ್ವ ಶ್ರೀ ರಕ್ಷಾ ಬಂಧನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ನಡೆಯಲಿದೆ. ಅಂದು ಸಂಜೆ 3.30 ಗಂಟೆಗೆ ಆರಂಭಗೊಳ್ಳಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಮಾತ್ಮನ ಶ್ರೀ ರಕ್ಷೆಯನ್ನು ಕಟ್ಟಿಸಿಕೊಂಡು ಪ್ರಸಾದ ಸ್ವೀಕರಿಸುವಂತೆ ಸಂಸ್ಥೆಯ ಮುಖ್ಯಸ್ಥರಾದ ಕೋಮಲ ಅಕ್ಕ ಕೋರಿದ್ದಾರೆ.

Read More

ಮಡಿಕೇರಿ ಆ.19 NEWS DESK : ಸುಂಟಿಕೊಪ್ಪ ಹೋಬಳಿಯ ವಿವಿಧ ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಆತಂಕ ಸೃಷ್ಟಿಸಿರುವ ಕಾಡಾನೆಯೊಂದು ಭಾನುವಾರ ರಾತ್ರಿ ಎಮ್ಮೆಗುಂಡಿ ಮತ್ತಿತರ ಪ್ರದೇಶದಲ್ಲಿ ಕಾಣಿಸಿಕೊಂಡಿತು. ಮುಖ್ಯ ಬೀದಿಯಲ್ಲೇ ರಾಜಾರೋಷವಾಗಿ ಸಂಚರಿಸಿದ ಒಂಟಿ ಸಲಗ ಗ್ರಾಮಸ್ಥರಲ್ಲಿ ಆತಂಕವನ್ನು ಮೂಡಿಸಿತು. ಸುತ್ತಮುತ್ತಲ ತೋಟಗಳಿಗೆ ನುಗ್ಗಿ ಹಾನಿಗೊಳಿಸುತ್ತಿರುವ ಕಾಡಾನೆ ಕೃಷಿ ಫಸಲನ್ನು ತಿಂದು ತೇಗುತ್ತಿದೆ. ಅರಣ್ಯ ಭಾಗದಲ್ಲಿ ಆಹಾರದ ಕೊರತೆ ಉಂಟಾಗಿ ಈ ಒಂಟಿ ಸಲಗ ತೋಟಗಳನ್ನೇ ಅವಲಂಬಿಸಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ. ಹಲವು ಬಾರಿ ಮಾನವರ ಮೇಲೆ ದಾಳಿಗೆ ಮುಂದಾಗಿದ್ದ ಈ ಕಾಡಾನೆಯನ್ನು ಅನಾಹುತ ಸಂಭವಿಸುವ ಮೊದಲು ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಆ.19 NEWS DESK : ಪೊನ್ನಂಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದ ತೋಟವೊಂದರಲ್ಲಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ. ಭಾನುವಾರ ಸಂಜೆ ಆನೆ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಎ.ಸಿ.ಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆಯ ಸಾವಿಗೆ ಕಾರಣ ತಿಳಿದು ಬಂದಿಲ್ಲ.

Read More

ವಿರಾಜಪೇಟೆ ಆ.19 NEWS DESK : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಯಶಸ್ವಿ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅಸಂವಿಧಾನಿಕ ನಡೆಯಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ  ಪಿ.ಎ.ಹನೀಫ್ ದೂರಿದ್ದಾರೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರದ ಭಾಗವಾಗಿದೆ. ರಾಜ್ಯ ಕಂಡ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಹಾಗೂ ದೇಶದ ಶ್ರೇಷ್ಠ ಅಹಿಂದ ನೇತಾರರಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ರಾಜಕಾರಣಿಯಾಗಿ ಕೀಳುಮಟ್ಟಕ್ಕೆ ಇಳಿದಿದ್ದು ನಿಜಕ್ಕೂ ಖಂಡನೀಯ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರದ ದ್ವೇಷ ಸಾಧನೆಗೆ ಮುಂದಾಗಿರುವುದು…

Read More

ಕುಶಾಲನಗರ, ಆ.19 NEWS DESK : ಬೆಂಗಳೂರಿನಲ್ಲಿ ಆರಂಭಗೊಂಡ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರ ಹಾಕಿ ಪಂದ್ಯಾವಳಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಕೊಡಗು ಜಿಲ್ಲಾ ತಂಡವು ಮುನ್ನಡೆ ಸಾಧಿಸಿದೆ. ಬೆಂಗಳೂರಿನ ಶಾಂತಿನಗರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಕೊಡಗು ಮತ್ತು ವಿಜಯಪುರ ನಡುವೆ ನಡೆದ ಹಾಕಿ ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಕೊಡಗು ತಂಡವು 7 ಗೋಲುಗಳನ್ನು ಪಡೆದು 7-0 ಗೋಲುಗಳ ಅಂತರದಲ್ಲಿ ವಿಜಯಪುರ ತಂಡವನ್ನು ಮಣಿಸಿತು. ಕೊಡಗು ಹಾಕಿ ತಂಡದ ಪರವಾಗಿ ಲೋಕೇಶ್ ಆರ್ ಡಿ ಮತ್ತು ಸತೀಶ್ ತಲಾ 2 ಗೋಲುಗಳು ಹಾಗೂ ಜಾಗೃತ್ , ಮೌನ್ ಮೊಣ್ಣಪ್ಪ ಹಾಗೂ ಮಾಚಯ್ಯ ತಲಾ ಒಂದು ಗೋಲು ಬಾರಿಸಿ ಕ್ವಾರ್ಟರ್ ಫೈನಲ್ ನಲ್ಲಿ ಕೊಡಗು ತಂಡವು ಜಯಶಾಲಿಯಾಗಲು ಸಹಕರಿಸಿದರು. ತಂಡದ ವ್ಯವಸ್ಥಾಪಕ ಬಿ.ಟಿ.ಪೂರ್ಣೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಹಾಕಿ ಟೂರ್ನಿಯಲ್ಲಿ ಪೊನ್ನಂಪೇಟೆಯ ಡ್ಯಾನಿ ಈರಪ್ಪ‌ ಕೋಚ್ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಕಿ ಟೂರ್ನಿಯ…

Read More