ಕುಶಾಲನಗರ ಜು.7 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್, ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕದ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ *ವನ ಮಹೋತ್ಸವ ಆಚರಣೆ* 2024 ಯ ಅಂಗವಾಗಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಅರಣ್ಯ ಸಸಿನೆಟ್ಟು ವನ ಸಂಭ್ರಮ* ವನ್ನು ಆಚರಿಸಲಾಯಿತು. ಶಾಲಾವರಣದಲ್ಲಿ ಗಿಡನೆಟ್ಟು ವನ ಮಹೋತ್ಸವ ಆಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ರಾಷ್ಟ್ರೀಯ ಹಸಿರು ಪಡೆಯ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ವನ ಮಹೋತ್ಸವ ಅಥವಾ ಅರಣ್ಯ ಉತ್ಸವವು ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಜುಲೈ ತಿಂಗಳಲ್ಲಿ ಆಚರಿಸಲಾಗುವ ವಾರ್ಷಿಕ ಗಿಡ ನೆಟ್ಟು ಬೆಳೆಸುವ ಹಬ್ಬವಾಗಿದ್ದು, ಇದರಲ್ಲಿ ದೇಶದಾದ್ಯಂತ ಸಾವಿರಾರು ಮರಗಳನ್ನು ನೆಡಲಾಗುತ್ತದೆ. ಅರಣ್ಯ ಸಂರಕ್ಷಣೆಯ ಜಾಗೃತಿ ಮತ್ತು ಪರಿಸರವನ್ನು ಉಳಿಸಲು ಜುಲೈ 1 ರಿಂದ…
ಲೇಖಕ: admin
ಮಡಿಕೇರಿ ಜು.7 NEWS DESK : ಕೊಡವ ರೈಡರ್ಸ್ ಕ್ಲಬ್ 6ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ 5ನೇ ವರ್ಷದ ವನಮಹೋತ್ಸವವನ್ನು ಹೆಬ್ಬಾಲೆ ದೇವರಪುರ ದೇವರ ಕಾಡುವಿನಲ್ಲಿ ಹಮ್ಮಿಕೊಳ್ಳಲಾಯಿತು. ಹೆಬ್ಬಾಲೆ ದೇವರಪುರ ಶ್ರೀ ಭದ್ರಕಾಳಿ ಹಾಗೂ ಅಯ್ಯಪ್ಪ ದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಇಲ್ಲಿನ ದೇವರಕಾಡುವಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇಲ್ಲಿನ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕಮುಖ್ಯಸ್ಥರು ಹಾಗೂ ಗ್ರಾಮಸ್ಥರು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾವು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಜ್ಞಾನವನ್ನು ಪಡೆದುಕೊಂಡರು. ತಿತಿಮತಿ ಅರಣ್ಯ ಇಲಾಖೆ ಹಾಗೂ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದಿಂದ ವಿವಿಧ ಕಾಡು ಜಾತಿಯ ಗಿಡಗಳು ಹಾಗೂ ಹಣ್ಣಿನ ಗಿಡಗಳನ್ನು ತಂದು ನೆಡಲಾಯಿತು. ಸುಮಾರು ಒಂದು ಸಾವಿರಕ್ಕೂ ಅಧಿಕ ಗಿಡಗಳು ಕೆಲವೇ ಗಂಟೆಗಳಲ್ಲಿ ನೆಟ್ಟು ಮುಗಿಸಿದ ವಿಧ್ಯಾರ್ಥಿಗಳು ಇನ್ನು ನೆಡಬೇಕು ಎಂಬ ತವಕದಲ್ಲಿದ್ದದ್ದು ವಿಶೇಷ ಎನ್ನಬಹುದು. ಈ ಬಾರಿ ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಯಿಂದ ಕೂಡ…
ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಸದಾನಂದ ರೈ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಶೆಟ್ಟಿ ಭಗವತಿ ನಗರ, ಮಿಥುನ್ ರೈ ವೀರಾಜಪೇಟೆ ಕಾರ್ಯದರ್ಶಿ ನಿತಿನ್ ರೈ ಬಿಳಿಗೇರಿ, ಸಹ ಕಾರ್ಯದರ್ಶಿ ನಿಖಿಲ್ ಆಳ್ವ, ಖಜಾಂಚಿ ಶಿವಪ್ರಸಾದ್ ರೈ ಹಾಗೂ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುರೇಶ್ ರೈ ಮಡಿಕೇರಿ ಅವರನ್ನು ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.ನಿರ್ಗಮಿತ ಅಧ್ಯಕ್ಷ ವಸಂತ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ಮಹಾಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಜಗದೀಶ್ ರೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ, ಗೌರವಾಧ್ಯಕ್ಷ ಐತ್ತಪ್ಪ ರೈ, ಮಡಿಕೇರಿ ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ರಮೇಶ್ ರೈ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಸೌಮ್ಯ ಶೆಟ್ಟಿ ಹಾಗೂ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.7 NEWS DESK : ಜಿಲ್ಲಾ ಪಂಚಾಯತ್ ಚುನಾವಣೆಗೆ ಮುಹೂರ್ತ ನಿಗಧಿಯಾಗುವ ಮೊದಲೇ ಕೊಡಗು ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಸ್ಪರ್ಧಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗಾಗಿ ಪೈಪೋಟಿ ನಡೆಯುತ್ತಿದ್ದು, ಸುಂಟಿಕೊಪ್ಪ ಕೇತ್ರದಲ್ಲಿ ನಾನು ಪ್ರಬಲ ಆಕಾಂಕ್ಷಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮತ್ತು ಸಕ್ರಿಯ ಕಾರ್ಯಕರ್ತನಾಗಿರುವ ನನಗೆ ಜಿ.ಪಂ ಚುನಾವಣೆಯಲ್ಲಿ ಸುಂಟಿಕೊಪ್ಪ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುತ್ತೇನೆ ಎನ್ನುವ ವಿಶ್ವಾಸವಿದೆ. ಆದ್ದರಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಇಬ್ಬರು ಶಾಸಕರು, ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಮುಖಂಡರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾಂಗ್ರೆಸ್ ನ ಸಾಮಾನ್ಯ ಕಾರ್ಯಕರ್ತನಾಗಿ ಗುರುತಿಸಿಕೊಂಡ ನಾನು ನಂತರದ ದಿನಗಳಲ್ಲಿ ವಿವಿಧ ಘಟಕಗಳ ಪದಾಧಿಕಾರಿಯಾಗಿ, ಡಿಸಿಸಿ ಸದಸ್ಯನಾಗಿ ಕಾರ್ಯನಿರ್ವಹಿಸಿದ್ದೇನೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷನಾಗಿ ಸುಮಾರು 6…
ಮಡಿಕೇರಿ ಜು.7 NEWS DESK : ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ನೆರವಾಗುವ ಪ್ರಮುಖ ಧ್ಯೇಯದೊಂದಿಗೆ ಕೊಡಗು ಪತ್ರಿಕಾ ಭವನ ಟ್ರಸ್ಟ್ ಜಿಲ್ಲಾ ವ್ಯಾಪ್ತಿಯ ಪತ್ರಕರ್ತರ ಮಕ್ಕಳು ಹಾಗೂ ಸಾರ್ವಜನಿಕ ಮನವಿಗಳನ್ನು ಪುರಸ್ಕರಿಸಿ ಒಟ್ಟು 32ಮಕ್ಕಳಿಗೆ ವಿದ್ಯಾನಿಧಿಯನ್ನು ವಿತರಿಸಿತು. ನಗರದ ರೆಡ್ ಬ್ರಕ್ಸ್ನ ಸತ್ಕಾರ ಸಭಾಂಗಣದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ‘ವಿದ್ಯಾನಿಧಿ ವಿತರಣಾ ಕಾರ್ಯಕ್ರಮ’ದಲ್ಲಿ ಪತ್ರಕರ್ತರ 22 ಮಕ್ಕಳು ಹಾಗೂ ನೆರವು ಬಯಸಿದ್ದ ಇತರೆ 10 ಮಕ್ಕಳಿಗೆ ತಲಾ 5 ಸಾವಿರ ರೂ.ಗಳಂತೆ ಒಟ್ಟು 1.60 ಲಕ್ಷ ರೂ. ವಿದ್ಯಾನಿಧಿಯನ್ನು ವಿತರಿಸಲಾಯಿತು. ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಹಾಗೂ ಟ್ರಸ್ಟಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ನೆರವು ಮತ್ತು ಪ್ರೋತ್ಸಾಹ ನೀಡಬೇಕೆನ್ನುವ ಚಿಂತನೆಯಡಿ ವಿದ್ಯಾನಿಧಿಯ ಮೂಲಕ ಟ್ರಸ್ಟ್ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಮತ್ತಷ್ಟು…
ಮಡಿಕೇರಿ ಜು.7 NEWS DESK : ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡುವ ಉದ್ದೇಶದಿಂದ ಪವಿತ್ರ ಕೊಡವ ಲ್ಯಾಂಡ್ ನ್ನು ಬೃಹತ್ ಪ್ರಮಾಣದಲ್ಲಿ ಭೂಪರಿವರ್ತನೆ ಮಾಡುತ್ತಿದ್ದು, ಇದು ಮುಂದೊಂದು ದಿನ ಮೂಲನಿವಾಸಿ ಆದಿಮಸಂಜಾತ ಕೊಡವರ ಅಸ್ತಿತ್ವಕ್ಕೆ ದಕ್ಕೆ ಉಂಟು ಮಾಡಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಚೆಟ್ಟಳ್ಳಿ ಪಟ್ಟಣದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವರು ಅತ್ಯಂತ ಸೂಕ್ಷö್ಮ ಸಮುದಾಯಕ್ಕೆ ಸೇರಿದವರಾಗಿದ್ದು, ಚಿಕ್ಕ ಪ್ರದೇಶದಲ್ಲಿ ಪ್ರಕೃತಿಯ ಆರಾಧನೆಯೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಇಂದು ಈ ಪವಿತ್ರ ಕೊಡವ ಪ್ರದೇಶದ ಮೇಲೆ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು, ಕಪ್ಪು ಹಣ ಹೊಂದಿರುವವರು, ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು, ರೆಸಾರ್ಟ್…
ಮಡಿಕೇರಿ ಜು.6 NEWS DESK : ವಿರಾಜಪೇಟೆ-ಭಾಗಮಂಡಲ-ಮಡಿಕೇರಿ ಮಾರ್ಗದ ಬಸ್ ಸಂಚಾರಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ ಅವರು ಶನಿವಾರ ಚಾಲನೆ ನೀಡಿದರು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನಿಸಿ ವಿರಾಜಪೇಟೆ-ಭಾಗಮಂಡಲ-ಮಡಿಕೇರಿ ಮಾರ್ಗದಲ್ಲಿ ಬಸ್ ಕಲ್ಪಿಸಲಾಗಿದೆ ಎಂದು ಪೊನ್ನಣ್ಣ ಅವರು ಮಾಹಿತಿ ನೀಡಿದರು. ಬೆಂಗಳೂರಿನಿಂದ ಪ್ರತಿನಿತ್ಯ ರಾತ್ರಿ 11.15 ಗಂಟೆಗೆ ಬಸ್ ಹೊರಡಲಿದ್ದು, ವಿರಾಜಪೇಟೆಗೆ ಆಗಮಿಸಿ ಬೆಳಗ್ಗೆ 7.15 ಗಂಟೆಗೆ ಭಾಗಮಂಡಲಕ್ಕೆ ಆಗಮಿಸಲಿದೆ. ಬಳಿಕ ಬೆಳಗ್ಗೆ 7.30 ಗಂಟೆಗೆ ಭಾಗಮಂಡಲದಿಂದ ಹೊರಟು ಬೆಳಗ್ಗೆ 9 ಗಂಟೆಗೆ ಮಡಿಕೇರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮಾಹಿತಿ ನೀಡಿದರು. ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಚ್.ಇ.ವೀರಭದ್ರ ಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಇತರರು ಇದ್ದರು.
ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಶನಿವಾರ ನಗರದ ಗಾಂಧಿ ಮೈದಾನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 10 ಯಂತ್ರಚಾಲಿತ ದ್ವಿಚಕ್ರ ವಾಹನ ರೂ.9.95 ಲಕ್ಷ ವೆಚ್ಚ, 09 ಬ್ಯಾಟರಿಚಾಲಿತ ವೀಲ್ ಚೇರ್ ರೂ.8.64 ಲಕ್ಷ, 03 ಲ್ಯಾಪ್ ಟಾಪ್ ರೂ.2.90 ಲಕ್ಷ, 01 ಬ್ರೈಲ್ ಕಿಟ್ ವಿತರಣೆ ರೂ.0.25 ಲಕ್ಷ, 3 ಮಂದಿಗೆ ವಿವಾಹ ಪ್ರೋತ್ಸಾಹಧನ ರೂ. 1.50 ಲಕ್ಷ, 31 ಶ್ರವಣ ಸಾಧನ ವಿತರಣೆ ರೂ. 4 ಲಕ್ಷ, ವಾಕರ್ 2, ವಾಕಿಂಗ್ ಸ್ಟಿಕ್ 2, ಸಿ.ಪಿ.ಚೇರ್ 2 ಮತ್ತು ವೀಲ್ ಚೇರ್ 2 ಒಟ್ಟು 27.24 ಲಕ್ಷ ರೂ. ವೆಚ್ಚದ ಸಾಧನ ಸಲಕರಣೆ ವಿಶೇಷ ಚೇತನರಿಗೆ ವಿತರಿಸಿದರು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು…
ಮಡಿಕೇರಿ ಜು.6 NEWS DESK : ಭಾರತದ ಮಾಜಿ ಉಪ ಪ್ರಧಾನಿ, ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ 38ನೇ ಪುಣ್ಯ ಸ್ಮರಣೆ ಕಾರ್ಯಕ್ರಮವು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆಯಿತು. ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಎನ್.ಎಸ್.ಭೋಸರಾಜು ಅವರು ರಾಷ್ಟ್ರದ ಅನೇಕ ಮಹನೀಯರಲ್ಲಿ ಬಾಬು ಜಗಜೀವನ್ ರಾಂ ಅವರು ಒಬ್ಬರು ಎಂದರು. ಸ್ವಾತಂತ್ರö್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಾಬು ಜಗಜೀವನ ರಾಮ್ ಅವರು ಸರ್ಕಾರದ ಭಾಗವಾಗಿ ರೈಲ್ವೆ ಸಚಿವರಾಗಿ, ಕೃಷಿ ಸಚಿವರಾಗಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡು ದೇಶದ ಅಭಿವೃದ್ಧಿಗೆ ದುಡಿದಿದ್ದಾರೆ ಎಂದು ಸ್ಮರಿಸಿದರು. ಬಾಬು ಜಗಜೀವನ ರಾಮ್ ಅವರ ಮಗಳು ಮೀರಾ ಕುಮಾರ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಲೋಕಸಭಾ ಅಧ್ಯಕ್ಷರಾಗಿ(ಸ್ಪೀಕರ್) ಕೆಲಸ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಬಾಬು…
ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೊಡವ ಹೆರಿಟೇಜ್, ಮಿನಿ ವಿಧಾನಸೌಧ, ಸುವರ್ಣ ಕರ್ನಾಟಕ ಸಮುಚ್ಚಯ ಭವನ, ಮಂಗಳೂರು ರಸ್ತೆಯ ತಡೆಗೋಡೆ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಕೆಡಿಪಿ ಸಭೆಯಲ್ಲಿಯೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿತ್ತು, ಆದರೂ ಇದುವರೆಗೆ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಹಣವಿದ್ದರೂ ಸಹ ಕಾಮಗಾರಿಗಳನ್ನು ಏಕೆ ಪೂರ್ಣಗೊಳಿಸಿಲ್ಲ ಎಂದು ತರಾಟೆ ತೆಗೆದುಕೊಂಡ ಸಚಿವರು ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಖರ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. ಇದಕ್ಕೆ ಧ್ವನಿಗೂಡಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಶಾಸಕರಾಗಿ ಒಂದು ವರ್ಷ ಕಳೆದಿದ್ದು, ತಡೆಗೋಡೆ ಪೂರ್ಣಗೊಳ್ಳದೆ ಟಾರ್ಪಲ್…






