ಮಡಿಕೇರಿ ಆ.18 NEWS DESK : ಕುಶಾಲನಗರ ಪೊಲೀಸ್ ಮತ್ತು ಕಂದಾಯ ಇಲಾಖೆ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಪ್ 2024 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರ ತಾಲ್ಲೂಕು ಶಿಕ್ಷಣ ಇಲಾಖೆ ತಂಡ ಟ್ರೋಫಿಯನ್ನು ಗೆದ್ದುಕೊಂಡಿದೆ. ದ್ವಿತೀಯ ಟ್ರೋಪಿಯನ್ನು ಕುಶಾಲನಗರ ಡಿವೈಎಸ್‍ಪಿ ನೇತೃತ್ವದ ಪೊಲೀಸ್ ಇಲಾಖೆ ತಂಡ ಗಳಿಸಿದೆ. ಕುಶಾಲನಗರ ಪೊಲೀಸ್, ಶಿಕ್ಷಣ, ಪುರಸಭೆ, ವಕೀಲರ ತಂಡ, ಕಂದಾಯ ಇಲಾಖೆ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಒಟ್ಟು ಆರು ತಂಡಗಳು ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡವು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಸೋಮವಾರಪೇಟೆ ಉಪವಿಭಾಗದ ಉಪ ಪೊಲೀಸ್ ಅಧೀಕ್ಷಕ ಆರ್.ವಿ.ಗಂಗಾಧರಪ್ಪ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾಸ್ಫೂರ್ತಿ ಪ್ರದರ್ಶಿಸಬೇಕು. ಪಂದ್ಯಾಟದಲ್ಲಿ ಸೋಲು ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ ಎಂದು ಹೇಳಿದರು. ಕಂದಾಯ ಇಲಾಖೆಯ ತಂಡದ ನಾಯಕರು ಹಾಗೂ ಕಂದಾಯ ಪರಿವೀಕ್ಷಕ ಹೆಚ್.ಎಸ್.ಸಂತೋಷ್ ಅವರು ಮಾತನಾಡಿ ಕೇವಲ ಎರಡು ದಿನಗಳ ಅಂತರದಲ್ಲಿ ಆರು…
ಲೇಖಕ: admin
ಮಡಿಕೇರಿ ಆ.19 NEWS DESK : ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 7 ಆರೋಪಿಗಳನ್ನು ಶನಿವಾರಸಂತೆ ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ಲೈನ್ ಮನೆಯೊಂದರ ಬಳಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದರು. ಚಿಕ್ಕತೋಳೂರು ಗ್ರಾಮದ ಸಿ.ಎಂ.ಶರೀಫ್(44), ಗುಂಡುರಾವ್ ಬಡಾವಣೆಯ ರೆಹಮಾನ್(40), ಅಸ್ಸಾಂ ರಾಜ್ಯದ ಶಾಹೀದ್ ಇಸ್ಲಾಂ(35), ತ್ಯಾಗರಾಜ ಕಾಲೋನಿಯ ಶಫೀಕ್ ಉಲ್(26), ಹಾಸನ ಕಲರೆ ಗ್ರಾಮದ ಮುಮ್ತಾಜ್(46), ಅಸ್ಸಾಂ ಮೂಲದ ಇರ್ಷಾದ್(35), ಶಹಜಾನ್(46) ಎಂಬುವವರನ್ನು ವಶಕ್ಕೆ ಪಡೆದರು. ಆರೋಪಿಗಳ ಬಳಿಯಿಂದ 17,050 ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ NEWS DESK ಆ.19 : ಕಾಡುಕೋಣವೊಂದು ದಾಳಿ ಮಾಡಿದ ಪರಿಣಾಮ ಹಾಡಿ ನಿವಾಸಿಯೊಬ್ಬರು ಗಾಯಗೊಂಡಿರುವ ಘಟನೆ ತಿತಿಮತಿ ಸಮೀಪದ ಬೊಗ್ಗನ ಹಡ್ಲು ಎಂಬಲ್ಲಿ ನಡೆದಿದೆ. ಜೇನುಕುರುಬರ ತಿಮ್ಮ(45) ಎಂಬುವವರೇ ಕಾಡುಕೋಣದ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ತಿಮ್ಮ ಎಂದಿನ0ತೆ ಮನೆ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕಾಡುಕೋಣ ದಾಳಿ ಮಾಡಿದೆ. ಕೊಂಬಿನಿ0ದ ತಿವಿದ ಪರಿಣಾಮ ತಿಮ್ಮ ಅವರ ಎಡ ಕಾಲಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತಿಮ್ಮ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷಯ ತಿಳಿದ ತಕ್ಷಣ ಸ್ಪಂದಿಸಿದ ರಾಜ್ಯ ವನ್ಯಜೀವಿ ಸಂರಕ್ಷಣಾ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡುಕೋಣ ದಾಳಿ ನಡೆಸಿರುವ ಕುರಿತು ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ಗಮನಕ್ಕೆ ತರಲಾಗಿದೆ. ಗಾಯಾಳುವಿಗೆ ಸೂಕ್ತ…
ನಾಪೋಕ್ಲು ಆ.19 NEWS DESK : ಭಾಗಮಂಡಲ ಗ್ರಾಮ ಪಂಚಾಯಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ಭಾಗಮಂಡಲ ಗ್ರಾ.ಪಂ ಅಧ್ಯಕ್ಷ ಕಾಳನ ರವಿ ಮತ್ತು ಆಡಳಿತ ಮಂಡಳಿ ಸದಸ್ಯರು,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು, ಕೊಡಗು ಜೇನು ಕೃಷಿಕರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ವತಿಯಿಂದ ತಾವೂರು ಗ್ರಾಮದ ಮಕ್ಕಳ ತಜ್ಞ ಹಾಗೂ ಸಾಹಿತಿ ಮೇಜರ್ ಡಾ.ಕುಶ್ವಂತ್ ಕೋಳಿ ಬೈಲು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಸರುಗದ್ದೆ ಹಗ್ಗ ಜಗ್ಗಾಟ ಸ್ಪರ್ಧೆ ನೆರೆದಿದ್ದವರನ್ನು ರಂಜಿಸಿತು. ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೋರಂಗಾಲ ಬಿ ತಂಡ ಪ್ರಥಮ ಸ್ಥಾನ ಗಳಿಸಿತು. ದ್ವಿತೀಯ ಸ್ಥಾನವನ್ನು ಪಯಸ್ವಿನಿ ಸಂಪಾಜೆ ತಂಡ ಗೆದ್ದುಕೊಂಡಿತು. ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೋರಂಗಾಲ ಲೇಡೀಸ್ ಕ್ಲಬ್ ತಂಡ ಪ್ರಥಮ ಸ್ಥಾನವನ್ನು, ಮಹಾದೇವ ಸ್ಪೋರ್ಟ್ಸ್ ಬಲಮುರಿ ತಂಡ…
ಮಡಿಕೇರಿ ಆ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ವಿರಾಜಪೇಟೆ ತಾಲೂಕಿನ ಬೊಳ್ಳರಿಮಾಡು ಗ್ರಾಮದಲ್ಲಿ ಪುಟ್ಟಿಚಂಡ ಮತ್ತು ಪಟ್ರಪಂಡ ಕುಟುಂಬದ ಸದಸ್ಯರಿಗೆ ಸೇರಿದ ಸುಮಾರು 10-15 ವರ್ಷಗಳಿಂದ ಹಲವಾರು ಸಮಸ್ಯೆಗಳಿಂದ ಪರಿತ್ಯಕ್ತವಾಗಿದ್ದ ಭತ್ತದ ಗದ್ದೆಗಳನ್ನು ಮರುನಾಟಿ ಮಾಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ನಡೆಯಿತು. ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್‌ನೊಂದಿಗೆ ರೂಟ್ಸ್ ಆಫ್ ಕೊಡಗು,, ಕೆಜೆವೈಎಂಸಿ ಜಬ್ಬೂಮಿ, ಕೊಡವ ಸಮಾಜ ಯೂತ್ ಕೌನ್ಸಿಲ್ ಬೆಂಗಳೂರು ಕೊಡವ ಸಮಾಜ ಯೂಥ್ ವಿಂಗ್ ಮೈಸೂರು, ವಿರಾಜಪೇಟೆಯ ಪ್ರಗತಿ ಶಾಲಾ ವಿದ್ಯಾರ್ಥಿಗಳು, ಕೊಡವ ವೆಲ್‌ಫೇರ್ ಅಸೋಸಿಯೇಷನ್ ಬೆಂಗಳೂರು, ಪಟ್ರಪಂಡ ಮತ್ತು ಪುಟ್ಟಿಚಂಡ ಕುಟುಂಬದವರು, ಬೊಳ್ಳರಿಮಾಡು ಗ್ರಾಮದ ಗ್ರಾಮಸ್ಥರು, ಕೊಡಗು ಕೃಷಿ ವಿಜ್ಞಾನ ವೇದಿಕೆ(ASFK), ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಕೈಜೋಡಿಸಿದರು. ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಹಾಗೂ ASFK ಅದ್ಯಕ್ಷ ಡಾ.ಚೆಪ್ಪುಡಿರ ಕುಶಾಲಪ್ಪ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ರೈತ, ಮಾಜಿ ಯೋಧ ಸೋಮೇಂಗಡ ಗಣೇಶ್, ಜಿಲ್ಲಾ ಟೂರಿಸಂ…
ಮಡಿಕೇರಿ ಆ.19 NEWS DESK : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮಡಿಕೇರಿ ಗ್ರಾಮ ಆಡಳಿತ ಅಧಿಕಾರಿ ಹರೀಶ್ ಕುಮಾರ್ 50 ಮೀಟರ್ ಹಾಗೂ 100 ಮೀಟರ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿ ಆ.19 NEWS DESK : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಿಂದ ಕೊಡವ ಲ್ಯಾಂಡ್ ಗೆ ಅಪಾಯ ಎದುರಾಗಿದ್ದು, ಕಪ್ಪು ಹಣದಿಂದ ನಿರ್ಮಾಣಗೊಂಡಿರುವ ರೆಸಾರ್ಟ್, ವಿಲ್ಲಾ ಟೌನ್ ಶಿಪ್ ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಸುಂಟಿಕೊಪ್ಪದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳುವುದಕ್ಕಾಗಿ ಸಿಎನ್‍ಸಿ ಸಂಘಟನೆ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣ, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಆದರೆ ಅಧಿಕಾರದಲ್ಲಿರುವವರು ಹೋರಾಟದ ದಿಕ್ಕು ತಪ್ಪಿಸಿ ಜನರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಿದ್ದು, ಹೋಂಸ್ಟೇ ಮತ್ತು ಗೋದಾಮುಗಳ ನಿರ್ಮಾಣಕ್ಕೆ ಅನುಮತಿ ನೀಡದೆ ಸತಾಯಿಸಲು ಆರಂಭಿಸಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ…
ಮಡಿಕೇರಿ ಆ.19 NEWS DESK : ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನಾದೇಶದೊಂದಿಗೆ ಬಹುಮತ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮಂದಿ ಮೊದಲಿನಿಂದಲೂ ಹವಣಿಸುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಅಸಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗ ಎಂದು ಟೀಕಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತರು ರಾಜ್ಯಪಾಲರಿಗೆ ನೀಡಿರುವ ದೂರು ಮತ್ತು ಕೆಲವು ಮಾಜಿ ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣವನ್ನು ರಾಜ್ಯಪಾಲರು ಯಾಕೆ ಇನ್ನೂ ಪರಿಗಣಿಸಿಲ್ಲ ಎಂದು ಪ್ರಶ್ನಿಸಿರುವ ಧರ್ಮಜ ಉತ್ತಪ್ಪ, ಕೇವಲ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಖಾಸಗಿ ವ್ಯಕ್ತಿಗಳು ನೀಡಿದ ದೂರನ್ನು ಶೀಘ್ರ ಪರಿಶೀಲಿಸಿ ವಿಚಾರಣೆಗೆ ಅನುಮತಿ ನೀಡಿರುವುದನ್ನು ಗಮನಿಸಿದರೆ ಇದರಲ್ಲಿ…
ಮಡಿಕೇರಿ ಆ.19 NEWS DESK : ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಬಿ.ಎಂ.ರಮೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಲ್.ಸತೀಶ್ ಆಯ್ಕೆಯಾಗಿದ್ದಾರೆ. 94ನೇ ವರ್ಷದ ಅದ್ದೂರಿಯ ದಸರಾ ಹಾಗೂ ಕರಗ ಮಹೋತ್ಸವದ ಸಿದ್ಧತೆ ಕುರಿತು ದೇವಾಲಯದ ಆವರಣದಲ್ಲಿ ನಡೆಸಿದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಜಿಯಾಗಿ ಮೋಹನ್ ಸಂಪತ್, ಉಪಾಧ್ಯಕ್ಷರುಗಳಾಗಿ ವಿಷ್ಣುಪ್ರಿಯ ನಾಗರಾಜ್, ಸದಾಶಿವ, ಚದ್ದು, ಕಿಶೋರ್ ಬಾಬು, ವಿಜಯ್ ಕರ್ಕೆರ, ನಿರಂಜನ್, ಕಾರ್ಯದರ್ಶಿಗಳಾಗಿ ದಿನು, ಚೇತನ್, ಎ.ಎ.ಹರೀಶ್, ಸಹ ಕಾರ್ಯದರ್ಶಿಗಳಾಗಿ ಕೆ.ಸಂತೋಷ್, ಕಾರ್ತಿಕ್, ಸಹ ಖಜಾಂಚಿಯಾಗಿ ಮಧು ಟಿಂಕರ್, ಅನಿಲ್ ಕೆ.ಎ, ಮಯೂರ್ ನಾಯ್ಡು, ಚಲನವಲನ ಸಮಿತಿಯ ಅಧ್ಯಕ್ಷರಾಗಿ ಎ.ಬಿ.ದಿನೇಶ್ ನಾಯರ್, ಮುಖ್ಯ ಸಲಹೆಗಾರರಾಗಿ ಟಿ.ಎಸ್.ಪ್ರಕಾಶ್, ರಾಜಣ್ಣ, ಎ.ಎ.ಗಣೇಶ್, ಪಾಪಣ್ಣ, ಉಮೇಶ್ ಪೂಜಾರಿ, ಡಿ.ಪಿ.ದಯಾನಂದ, ಟಿ.ಆರ್.ದಯಾನಂದ, ಗೌರವ ಅಧ್ಯಕ್ಷರುಗಳಾಗಿ ಅಂಬೆಕಲ್ ನವೀನ್, ಅಮನ್ ಬೆಂಗಳೂರು ಹಾಗೂ 120 ಕ್ಕೂ ಹೆಚ್ಚು ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು ಎಂದು ಪ್ರಧಾನ ಕಾರ್ಯದರ್ಶಿ ಎಂ.ಎಲ್.ಸತೀಶ್…
ಮಡಿಕೇರಿ ಆ.29 NEWS DESK : ಜನರು ನೀಡಿದ ಬಹುಮತದಿಂದ ಆಯ್ಕೆಯಾದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿತರಗೊಳಿಸಲು ಮೂಡ ಪ್ರಕರಣವನ್ನು ನೆಪ ಮಾಡಿಕೊಂಡು ಬಿಜೆಪಿ ರಾಜಕೀಯ ಷಡ್ಯಂತ್ರ ನಡೆಸಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಕ್ಷ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಖ್ಯಾತಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಡವರ ಪರವಾಗಿರುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜನರಿಗೆ ನೀಡುವ ಮೂಲಕ ಜನಪ್ರಿಯತೆ ಗಳಿಸಿರುವುದನ್ನು ಸಹಿಸದೆ ಮತ್ತು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ತಮಗೆ ಉಳಿಗಾಲವಿಲ್ಲವೆಂದು ಬಿಜೆಪಿ ಹತಾಶೆಗೊಂಡಿದೆ. ಇದೇ ಕಾರಣಕ್ಕೆ ರಾಜ್ಯಪಾಲರನ್ನು ಬಳಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಮೂಡ ಪ್ರಕರಣದಲ್ಲಿ ಎಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಲ್ಲ. ಆದರೂ ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡನೀಯ. ಕೆಲವು ಮಾಜಿ ಮುಖ್ಯಮಂತ್ರಿಗಳ ಹಗರಣದ ಕುರಿತು ತನಿಖೆಗೆ ಅನುಮತಿ…






