ಮಡಿಕೇರಿ ಆ.17 NEWS DESK : ಕೋಲ್ಕೋತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯರ ಹತ್ಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಮಡಿಕೇರಿಯ ಮುಖ್ಯ ರಸ್ತೆಯಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ವೈದ್ಯೆಯ ಹತ್ಯೆಯನ್ನು ಖಂಡಿಸಿದ ಭಾರತೀಯ ವೈದ್ಯಕೀಯ ಸಂಘದ ಕೊಡಗು ಘಟಕವು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ಆರ್‌ಜಿ ಕರ್ ಘಟನೆಯು ಆಸ್ಪತ್ರೆಯಲ್ಲಿನ ಹಿಂಸಾಚಾರದ ಎರಡು ಆಯಾಮಗಳನ್ನು ಮುನ್ನೆಲೆಗೆ ತಂದಿದೆ. ಮಹಿಳೆಯರಿಗೆ ಸುರಕ್ಷಿತ ಸ್ಥಳಗಳ ಕೊರತೆಯಿಂದ ಅನಾಗರಿಕ ರೀತಿಯ ಅಪರಾಧ ಮತ್ತು ಸಂಘಟಿತ ಭದ್ರತಾ ಪ್ರೋಟೋಕಾಲ್ ಕೊರತೆಯಿಂದಾಗಿ ಗೂಂಡಾಗಿರಿ. ಅಪರಾಧ ಮತ್ತು ವಿಧ್ವಂಸಕ ಕೃತ್ಯಗಳು ರಾಷ್ಟ್ರದ ಆತ್ಮಸಾಕ್ಷಿಯನ್ನು ಆಘಾತಗೊಳಿಸಿವೆ. ಈ ಘಟನೆಯಿಂದಾಗಿ ದೇಶದಲ್ಲಿ ವೈದ್ಯಕೀಯ ಭ್ರಾತೃತ್ವ ಮತ್ತು ರಾಷ್ಟ್ರ ಎರಡೂ ಬಲಿಪಶುಗಳಾಗಿವೆ ಎಂದೂ ಸಂಘದ ಪ್ರಮುಖರು ಅಸಮಧಾನ ವ್ಯಕ್ತಪಡಿಸಿದರು. ಬೇಡಿಕೆಗಳು :: ನೀತಿ ಮಟ್ಟದಲ್ಲಿ ವೈದ್ಯರು ಮತ್ತು ಆಸ್ಪತ್ರೆಗಳ ಮೇಲಿನ ಹಿಂಸಾಚಾರವನ್ನು ಒಪ್ಪಿಕೊಳ್ಳಲು ಇಷ್ಟವಿಲ್ಲದಿರುವುದು ಬದಲಾಗಬೇಕು.…
ಲೇಖಕ: admin
ಅಮ್ಮತ್ತಿ ಆ.17 NEWS DESK : ಶಾಫೀ ಮುಸ್ಲಿಂ ಜಮಾಅತ್ ಅಧೀನದ ತಲೀಮುದ್ದೀನ್ ಮದರಸಾದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ದೇಶಕ್ಕಾಗಿ ಪ್ರಾಣತೆತ್ತ ಮಹಾತ್ಮರನ್ನು ನೆನೆದು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸಿ, ಕಾರ್ಯಕ್ರಮವನ್ನು ಮಹಲ್ ಖತೀಬರಾದ ಉಸ್ತಾದ್ ಇಬ್ರಾಹಿಂ ಮದನಿ ಉದ್ಘಾಟಿಸಿದರು. ಸಭೆಯನ್ನುದೇಶಿಸಿ ಮಾತನಾಡಿದ ತಲೀಮುದ್ದೀನ್ ಮದ್ರಸಾ ಪ್ರಾಂಶುಪಾಲ ಉಸ್ತಾದ್ ಸಿದ್ದೀಕ್ ಅಹ್ಸನಿ ದೇಶ ಪ್ರೇಮ ಧಾರ್ಮಿಕ ವಿಶ್ವಾಸದ ಭಾಗವಾಗಿದೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ನೆಲೆಸಿರುವುದು ನಮ್ಮ ಭಾಗ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಮಾಅತ್ ಆಡಳಿತ ಮಂಡಳಿ, ಮದ್ರಸಾ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಎಸ್‍ಎಸ್‍ಎಫ್ ಅಮ್ಮತ್ತಿ ಶಾಖೆಯ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಆ.17 NEWS DESK : ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆ ವತಿಯಿಂದ ಆ.20 ರಂದು ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಮಾಡಿಕೇರಿಯಲ್ಲಿ ಆಯೋಜಿಸಲಾಗಿದೆ ಎಂದು ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ, ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವದಲ್ಲಿ ಮಧ್ಯಾಹ್ನ 2 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವರು ಸಾಧಕರನ್ನು ಸನ್ಮಾನಿಸಲಿದ್ದು, ಮುಖ್ಯ ಭಾಷಣಕಾರರಾಗಿ ಮೈಸೂರಿನ ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್‍ನ ಗೌರವ ಕಾರ್ಯದರ್ಶಿ ಡಾ.ಎಂ.ಜಿ.ಅರಸ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ, ರಾಜ್ಯ ಅಹಿಂದ ಒಕ್ಕೂಟದ ಪ್ರಧಾನ…
ಮಡಿಕೇರಿ ಆ.17 NEWS DESK : ಅಪ್ಪಂಗಳ ಶ್ರೀ ವಿಜಯ ವಿನಾಯಕ ಸೇವಾ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಕೆ.ಎಂ.ಮಣಿಕಂಠ, ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮಸ್ಥರು ಮತ್ತು ಸದಸ್ಯರು ಎಂದಿನಂತೆ ಒಟ್ಟುಗೂಡಿ ಕಾರ್ಯಕ್ರಮವನ್ನು ನಡೆಸುವಂತೆ ಮನವಿ ಮಾಡಿಕೊಂಡರು.
ಮಡಿಕೇರಿ ಆ.17 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜೈ ಭಾರತ್ ಟ್ರೈನಿಂಗ್ ಸೆಂಟರ್ ಅಂಡ್ ಆರ್ಮಿ ಅಕಾಡೆಮಿ ಮುಖ್ಯಸ್ಥ ಲವ ಪೊನ್ನಪ್ಪ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಮಹತ್ವ, ದೇಶಕ್ಕಾಗಿ ಉತ್ತಮ ರೀತಿಯ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕು. ಉತ್ತಮ ಮಾನವೀಯ ಮೌಲ್ಯಗಳನ್ನು ಮತ್ತು ದೇಶ, ಸಮಾಜ, ಕುಟುಂಬಕ್ಕೆ ಉತ್ತಮ ಪ್ರಜೆಯಾಗಬೇಕೆಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನಾಡಿಟ್ ಸಾಲ್ಡಾನ ಮಾತನಾಡಿ, ಸಮಾಜದ ಪ್ರತಿಯೊಂದು ರಂಗದಲ್ಲಿಯೂ ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಇಂದಿನ ಯುವಕರು ಹೆಚ್ಚಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವoತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳು, ಎನ್.ಎಸ್.ಎಸ್., ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು, ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಎಲ್ಲರಿಗೂ ಸಿಹಿ ಹಂಚಲಾಯಿತು.
ಮಡಿಕೇರಿ ಆ.17 NEWS DESK : 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಣಂಜಗೇರಿ ಪಂಚಾಯತಿ ವ್ಯಾಪ್ತಿಯ ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಲ್ಟ್, ಟೈ ಮತ್ತು ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಕೊಣಂಜಗೇರಿ ಗ್ರಾ.ಪಂ ಅಧ್ಯಕ್ಷ ಪಾಡೆಯಂಡ ಕಟ್ಟಿಕುಶಾಲಪ್ಪ ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಬೆಲ್ಟ್, ಟೈ ಮತ್ತು ಗುರುತಿನ ಚೀಟಿ ವಿತರಿಸಿದರು. ನಂತರ ಮಾತನಾಡಿದ ಅವರು, ಈ ದೇಶದ ಮಣ್ಣು, ಪ್ರಕೃತಿ ನಮಗೆ ಎಲ್ಲವನ್ನು ಕೊಟ್ಟಿದೆ. ಇಂತಹ ಸುಂದರ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಪ್ರತಿಯೊಬ್ಬ ಪ್ರಜೆಯೂ ಯೋಧರಂತೆ ದುಡಿಯಬೇಕು. ಮಕ್ಕಳಿಗೆ ಈಗಿನಿಂದಲೇ ರಾಷ್ಟ್ರೀಯತೆಯ ಅರಿವು ಮತ್ತು ಆಸಕ್ತಿ ಮೂಡಿಸಬೇಕು ಎಂದರು. ಶಾಲಾ ಸಹ ಶಿಕ್ಷಕ ಕಿಶೋರ್ ಕುಮಾರ್ ಮಾತನಾಡಿ, ಲಕ್ಷಾಂತರ ತ್ಯಾಗಮಯಿಗಳ ಬಲಿದಾನದ ಫಲವಾಗಿ ನಾವಿಂದು ಸ್ವತಂತ್ರ ಬದುಕನ್ನು ನಡೆಸುತ್ತಿದ್ದೇವೆ. ಹಿರಿಯರ ತ್ಯಾಗ ಬಲಿದಾನ ವ್ಯರ್ಥವಾಗಬಾರದೆಂದರು. ನಾವೆಲ್ಲರೂ ಇಂದಿನಿಂದಲೇ ದೇಶ ಬೆಳೆಸುವ ಕಾರ್ಯದಲ್ಲಿ ತೊಡಗಬೇಕು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಭಿವೃದ್ಧಿ…
ಮಡಿಕೇರಿ ಆ.17 NEWS DESK : ಗಾಳಿಬೀಡು ಮಹಿಳಾ ಸಮಾಜದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕ ಕೋಚನ ಮನು ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವವನ್ನು ವಿವರಿಸಿದರು. ಈ ಸಂದರ್ಭ ಮಹಿಳಾ ಸಮಾಜದ ಅಧ್ಯಕ್ಷ ಅಚ್ಚಪಟ್ಟಿರ ಕವಿತಾ ಹಾಗೂ ಜಿ.ಪಂ ಮಾಜಿ ಸದಸ್ಯ ಯಾಳದಾಲು ಪದ್ಮಾವತಿ, ಗ್ರಾಮಸ್ಥರಾದ ನಿಧಿ ಶೆಟ್ಟಿ, ದಿಶಾಂತ್ ಕೋಚನ , ವಿಶಾಲಾಕ್ಷಿ, ಜಾನಕಿ, ಸುಮಿ ಹಾಜರಿದ್ದರು.
ಚೆಟ್ಟಳ್ಳಿ ಆ.17 NEWS DESK : ಚೆಟ್ಟಳ್ಳಿ ಕಾಫಿಬೋರ್ಡ್ ಸಂಶೋಧನಾ ಕೇಂದ್ರದಲ್ಲಿ ಹಂಗಾಮಿ ದಿನ ಕೂಲಿ ಕಾರ್ಮಿಕರು ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದಾರೆ. ಸಂಶೋಧನಾ ಕೇಂದ್ರದ ಸುಮಾರು 20 ಮಂದಿ ಕೂಲಿ ಕಾರ್ಮಿಕರು ಕಾರ್ಮಿಕರಾದ ಪ್ರೀತಿ ಎಂಬವರ ನೇತೃತ್ವದಲ್ಲಿ ತಮ್ಮ ಒಂದು ದಿನದ ವೇತನವನ್ನು ಸಂಗ್ರಹಿಸಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಜಯನ್ ಮತ್ತು ವಿಪಿನ್ ಅವರ ಮುಖಾಂತರ ವಯನಾಡಿನ ಭೂಕುಸಿತದಲ್ಲಿ ಸಂತ್ರಸ್ತರಾದ ಕುಟುಂಬಕ್ಕೆ ಮುಖ್ಯಮಂತ್ರಿಗಳ ನಿಧಿಗೆ ಹಸ್ತಾಂತರಿಸಿದರು.
ಸುಂಟಿಕೊಪ್ಪ ಆ.17 NEWS DESK : ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ವರ್ಷಕ್ಕೆ ಒಂದು ಬಾರಿ ರಚನಾತ್ಮಕ ಮತ್ತು ಸಮಾಜವನ್ನು ಕಟ್ಟುವ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಶ್ಲಾಘನೀಯ ಕೆಲಸ ಎಂದು ಮಡಿಕೇರಿ ಕ್ಷೇತ್ರ ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಗದ್ದೆಹಳ್ಳದ ಎಸ್‍ಎಸ್ ಇಂಟರ್ ನ್ಯಾಷಲ್ ಸಭಾಂಗಣದಲ್ಲಿ ಆಯೋಜಿಸಲಾದ ಎಸ್‍ವೈಎಸ್ ಕೊಡಗು ಜಿಲ್ಲಾ ಶಾಖಾ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಮಾತನಾಡಿದ ಅವರು, ದೇಶದ ಸಂವಿಧಾನದ ಅಡಿಯಲ್ಲಿ ನಾವೆಲ್ಲಾರೂ ಒಂದೇ ಪ್ರತಿಯಬ್ಬನ ಸಮಸ್ಯೆಯು ನನ್ನ ಸಮಸ್ಯೆ ಎಂದು ತಿಳಿದು ನಾವು ಪರಸ್ಪರ ಪ್ರೀತಿ ಸೌರ್ಹದತೆಯಿಂದ ಬಾಳಬೇಕು. ಸಮಸ್ಯೆಗಳ ರಾಜಕಾರಣಿಗಳ ಜವಬ್ದಾರಿಯಲ್ಲಾ ಸಮಾಜದ ಪ್ರತಿಯೊಬ್ಬರು ಸಮಸ್ಯೆಗಳ ಪರಿಹಾರಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು. ಸಮಾಜದಲ್ಲಿ ಉಳ್ಳವರು ಇಲ್ಲದಿರುವವರ ಬಗ್ಗೆ ಸಹಾಯ ಮಾಡುವ ಮನೋಭಾವವನ್ನು ಹೆಚ್ಚು ಹೆಚ್ಚು ಹೊಂದಬೇಕೆಂದು ಕರೆ ನೀಡಿದ ಅವರು, ಪ್ರತಿಯೊಬ್ಬರು ಉನ್ನತ ಶಿಕ್ಷಣವನ್ನು ಪಡೆದು ಉತ್ತಮ ನಾಗರೀಕರಾಗಿ ದೇಶವನ್ನು ಕಟ್ಟಬೇಕೆಂದು…
ಸುಂಟಿಕೊಪ್ಪ ಆ.17 NEWS DESK : ಸ್ವಾತಂತ್ರ್ಯ ಎಂದರೆ ದೇಶ ಕಟ್ಟುವ ಕಾರ್ಯದ ನಿಮಿತ್ತ ಕೊಟ್ಟಿರುವ ಜವಾಬ್ದಾರಿ ಎಂದು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ದೇಶಭಕ್ತಿಯೇ ನಮ್ಮಗಳ ಶಕ್ತಿಯಾಗಬೇಕೆಂದರು. ಇತಿಹಾಸ ಉಪನ್ಯಾಸಕಿ ಕೆ.ಸಿ.ಕವಿತಾ ಮಾತನಾಡಿ ನಮ್ಮ ದೇಶದ ಭದ್ರತೆಗೆ ಯುವ ಜನಾಂಗ ಕೈಜೋಡಿಸಬೇಕು. ಈ ಹಿಂದಿನ ಹಿರಿಯ ಹೋರಾಟಗಾರರು ಹಾಕಿಕೊಟ್ಟ ಈ ಭದ್ರ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಬೇಕಾದರೆ ಯುವ ಜನಾಂಗ ತಮ್ಮದೇ ಆದ ಕೊಡುಗೆಯನ್ನು ಕೊಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶಾಂತಿ, ಸೌಹಾರ್ದ, ಸಹೋದರತೆ ಮೂಲಕ ಬದುಕಬೇಕು ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಈಶ, ಕವಿತಾ ಭಕ್ತಾ, ಸುನಿತ, ಸುಚಿತ್ರ, ಕನಕ ಇತರರು ಇದ್ದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕøತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.






