ಮಡಿಕೇರಿ ಜು.5 NEWS DESK : ಕೊಡವ ಹಾಕಿ ಹಬ್ಬದ ಮೂಲಕವೇ ವಿಶ್ವ ದಾಖಲೆ ಬರೆದಿರುವ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡೆಂದೇ ಪ್ರಖ್ಯಾತಿ ಪಡೆದಿದೆ. ಆದರೆ ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿರುವ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಕಳಂಕ ತರುವಂತ್ತಿದೆ. ಸುಮಾರು 20 ವರ್ಷಗಳ ಹಿಂದೆ ಯಥಾಸ್ಥಿತಿಯಲ್ಲಿದ್ದ ಮೈದಾನ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿತ್ತು. ಈ ಮೈದಾನದಲ್ಲಿ ಆಟವಾಡಿದ ಜಿಲ್ಲೆಯ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಹಾಕಿ ಪಂದ್ಯಗಳನ್ನು ಆಡಿದ ಮಾಜಿ ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕೂಡ ಇದೇ ಮೈದಾನದಿಂದ ಅರಳಿದ ಕ್ರೀಡಾ ಪ್ರತಿಭೆಯಾಗಿದ್ದಾರೆ. ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ, ಅಂತರರಾಷ್ಟ್ರೀಯ ಹಾಕಿ ಆಟಗಾರರಾದ ಬಾಳೆಯಡ ಸಿ.ಪೂಣಚ್ಚ, ವಿ.ಎಸ್.ವಿನಯ್ ಸೇರಿದಂತೆ ಅನೇಕ ಆಟಗಾರರಿಗೆ ಇದೇ ಮೈದಾನ ಕ್ರೀಡಾಸ್ಫೂರ್ತಿಯನ್ನು ತುಂಬಿತ್ತು. ಜಿಲ್ಲೆಯ ಯುವ ಸಮೂಹಕ್ಕೆ…
ಲೇಖಕ: admin
ಮೂರ್ನಾಡು ಜು.5 NEWS DESK : ಸಾಲಿಗ್ರಾಮದ ಡಿವೈನ್ ಪಾರ್ಕ್ ಸಂಸ್ಥೆಯ ಅಂಗಸಂಸ್ಥೆಯಾದ ಮೂರ್ನಾಡುವಿನ ವಿವೇಕ ಜಾಗ್ರತ ಬಳಗದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಮೂರ್ನಾಡುವಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ರಕ್ತದಾನ ಶಿಬಿರವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಹೆಚ್ಚುವುದಲ್ಲದೆ ಇದರಿಂದ ಇನ್ನೊಬ್ಬರಿಗೆ ಜೀವದಾನ ನೀಡಿದಂತಾಗುತ್ತದೆ ಎಂದರು. ಮೂರುತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ಹಲವಾರು ಮನುಷ್ಯರ ಜೀವಗಳನ್ನು ಉಳಿಸಿಕೊಳ್ಳುವ ಕಾರ್ಯವಾಗುತ್ತದೆ ಎಂದು ಹೇಳಿದರು. ಮೂರ್ನಾಡು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಜಯ ಕುಮಾರ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲೆಡೆ ಡೆಂಗ್ಯೂ ಇರುವ ಕಾರಣ ಪ್ಲೇಟ್ಲೆಟ್ ಆಭಾವವಿರುವುದರಿಂದ ಕಾರಣದಿಂದ ರಕ್ತದಾನ ಶಿಬಿರದ ಅಗತ್ಯವಿದೆ ಎಂದರು. ಆರೋಗ್ಯಕ್ಕೆ ಸಂಬಂಧಿಸಿದ ಶಿಬಿರಗಳ ಆಯೋಜನೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮುಕ್ತ ಅವಕಾಶ ನೀಡುವುದಲ್ಲದೆ, ಎಲ್ಲಾ ರೀತಿಯ ಸಹಾಯ-ಸಹಕಾರವನ್ನು ಮಾಡಿಕೊಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ,…
ಮಡಿಕೇರಿ ಜು.5 NEWS DESK : ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ವಿಶೇಷಚೇತನರು ಮತ್ತು ಅವರ ಪಾಲಕರಿಗೆ ಅಣಬೆ ಕೃಷಿ ಮತ್ತು ಎರೆಗೊಬ್ಬರ ತಯಾರಿಕೆಯ ಸ್ವ-ಉದ್ಯೋಗ ತರಬೇತಿ ಶಿಬಿರ ಮತ್ತು ಪ್ರಾಯೋಗಿಕ ಕಾರ್ಯಾಗಾರ ನಡೆಯಿತು. ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಪ್ರಭಾಕರ್ ಮಾತನಾಡಿ, ನಿಸರ್ಗಕ್ಕೆ ಪೂರಕವಾದ ಕೃಷಿ ಪದ್ಧತಿಗಳು, ಎರೆಗೊಬ್ಬರ ತಯಾರಿಕೆಯಲ್ಲಿ ಸ್ಥಳೀಯವಾಗಿ ದೊರೆಯುವ ಕಚ್ಚಾವಸ್ತುಗಳ ಬಳಕೆ, ಅಣಬೆಗಳ ಪ್ರಭೇದಗಳು ಮತ್ತು ಬೇಸಾಯ ಪದ್ಧತಿಗಳು, ಕಾರ್ಯಸಾಧ್ಯತೆಗಳು ಮತ್ತು ಬೆಳೆಯ ವಹಿವಾಟಿನ ಬಗ್ಗೆ ಅರಿವು ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀಣಾ ಅಶೋಕ್, ಅಣಬೆ ಬೇಸಾಯದ ಪ್ರಾತ್ಯಕ್ಷಿಕೆ ನೀಡಿದರು. ಡಾ. ಮೃಣಾಲ್ ದೀಪಕ್ ಮಕ್ಕಳಲ್ಲಿ ಪೌಷ್ಟಿಕತೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸ್ವಸ್ಥ ಸಂಸ್ಥೆಯ ನಿರ್ದೇಶಕರಾದ ಆರತಿ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಾಟಾ ಸಂಸ್ಥೆಯ ಸುಂಟಿಕೊಪ್ಪ ವ್ಯವಸ್ಥಾಪಕ ಗೌತಮ್ ಮೈನಿ ಭಾಗವಹಿಸಿದ್ದರು. 29 ಫಲಾನುಭವಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.5 NEWS DESK : ರಾಜ್ಯದ ಜೀವನದಿ ಕಾವೇರಿ ನದಿ ನೀರು ಮಲಿನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನಕ್ಕೆ ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿ ರಚಿಸಿ ರಾಜ್ಯ ಸರಕಾರ ಆದೇಶಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನಿರಂಜನ್ ಅಧ್ಯಕ್ಷತೆಯಲ್ಲಿ 9 ಮಂದಿ ಹಿರಿಯ ಅಧಿಕಾರಿಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದೆ. ಕಾವೇರಿ ನದಿಗೆ ಘನತ್ಯಾಜ್ಯ, ಕೈಗಾರಿಕಾ ತ್ಯಾಜ್ಯ ಸೇರ್ಪಡೆಯಿಂದ ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿದೆ. ಅಲ್ಲದೆ, ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದು ಸರಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ, ತುರ್ತು ಮಾರ್ಗೋಪಾಯಗಳನ್ನ ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ.
ನಾಪೋಕ್ಲು ಜು.5 NEWS DESK : ಮೂಲತಃ ನಾಪೋಕ್ಲು ನಿವಾಸಿಯಾದ ರಾಜ್ಯ ಹಾಕಿ ಆಟಗಾರ ಬಾಳೆಯಡ ಕಾಳಯ್ಯ ಸುರೇಶ್ (67) ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿತು. ಬಾಳೆಯಡ ಕಾಳಯ್ಯ ಸುರೇಶ್ ಕರ್ನಾಟಕ ರಾಜ್ಯ ಹಾಕಿ ತಂಡದ ಮಾಜಿ ನಾಯಕ, ಹೆಚ್.ಎ.ಎಲ್ ನ ಉದ್ಯೋಗಿ, ಭಾರತದ ಕಿರಿಯರ ಹಾಕಿ ಆಯ್ಕೆ ಶಿಬಿರದಲ್ಲಿದ್ದು ಉತ್ತಮ ಕ್ರೀಡಾಪಟು.
ನಾಪೋಕ್ಲು ಜು.5 NEWS DESK : ಕೊಡಗು ಸುನ್ನೀ ಜಂಈಯ್ಯತುಲ್ ಮುಹಲ್ಲಿಮೀನ್ ಕೇಂದ್ರ ಸಮಿತಿಯ ವತಿಯಿಂದ ಮನೆ ನಿರ್ಮಾಣಕ್ಕೆ ಎಮ್ಮೆಮಾಡುನಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಸಮಸ್ತ ಶತಮಾನೋತ್ಸವದ ಪ್ರಯುಕ್ತ 100 ಉಸ್ತಾ ದ್ (ಮುಹಲ್ಲಿಂ) ಗಳಿಗೆ ಮನೆ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದ್ದು, ಅದರ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಎರಡು ಫಲಾನುಭವಿಗಳಿದ್ದಾರೆ . ಅದರೊಲೊಬ್ಬರಾದ ಎಮ್ಮೆಮಾಡಿನ ನೌಶಾದ್ ಲತೀಫಿ ರವರ ಮನೆಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಕೂರ್ಗ್ ಜಂಈಯ್ಯತುಲ್ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಹು : ಅಶ್ರಫ್ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಕೊಡಗು ಜಂಈಯ್ಯತುಲ್ ಮುಹಲ್ಲಿಮಿನ್ ಕೋಶಾಧಿಕಾರಿ ಅಬ್ದುಲ್ಲ ಸಖಾಫಿ, ಪರೀಕ್ಷಾ ವಿಭಾಗ ಕಾರ್ಯದರ್ಶಿ ಸಂಶುದ್ದೀನ್ ಅಂಜದಿ ಬಲಮುರಿ, ಜಿಲ್ಲಾ ನೇತಾರರಾದ ನಝೀರ್ ಸಖಾಫಿ ಕುಂಜಿಲ. ಹಂಝ ರಹ್ಮಾನಿ, ಸ್ಥಳೀಯ ಮುದರ್ರಿಸರಾದ ಹಂಝ ಸಖಾಫಿ, ಖತೀಬರಾದ ಮುಹಮ್ಮದ್ ರಾಝಿಖ್ ಫೈಝಿ ಪಟ್ಟಾಂಬಿ ಹಾಗೂ ಸ್ಥಳೀಯ ಮುಸ್ಲಿಂ ಜಮಾಅತ್, ಎಸ್.ವೈ.ಎಸ್.ಎಸ್ ಹಾಗೂ ಎಸ್.ಎಫ್ ಸಂಘ ಕುಟುಂಬದ ನೇತಾರರು ಪಾಲ್ಗೊಂಡಿದ್ದರು. ವರದಿ :…
ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಆಸ್ಪತ್ರೆಗೆ ತೆರಳಿ ತುರ್ತು ಚಿಕಿತ್ಸಾ ವಿಭಾಗ, ರಕ್ತನಿಧಿ ಕೇಂದ್ರ, ಹೊಸದಾಗಿ ಅಳವಡಿಸಿರುವ ಎಂಆರ್‍ಐ ಸ್ಕ್ಯಾನಿಂಗ್ ಕೇಂದ್ರ ಮತ್ತಿತರ ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ವೀಕ್ಷಣೆ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ 300 ಹಾಸಿಗೆ ಆಸ್ಪತ್ರೆಯಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ 55 ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಬಿಡುಗಡೆಗೆ ಪ್ರಯತ್ನಿಸಲಾಗುವುದು. ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಆಸ್ಪತ್ರೆಯ ಸೇವೆ ಒದಗಿಸಲಾಗುತ್ತಿದೆ ಎಂದರು. ಈಗಾಗಲೇ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ…
ಮಡಿಕೇರಿ ಜು.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜುಲೈ, 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ(ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹತ್ತಿರ) ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಜಿ.ಪಂ. ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜು.5 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜು.7 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆಥ್ರ್ರೋಸ್ಕೋಫಿ ಮತ್ತು ಸ್ಪೋಟ್ರ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್‍ಎನ್‍ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್) ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜು.5 NEWS DESK : ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ನಾಡ ಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ವಿರಾಜಪೇಟೆಯ ಜಿ.ಎಂ.ಪಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಾಂಧಿಭವನ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ ನಡೆಯಿತು. ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂ.ಎಂ.ನಿಶಾನ್ ಆಂಗ್ಲಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, 7ನೇ ತರಗತಿ ವಿದ್ಯಾರ್ಥಿ ಅರ್ನವ್ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ತಾಲೂಕು ಮಟ್ಟದಿಂದ ಆಯ್ಕೆಯಾದ ವಿರಾಜಪೇಟೆಯ ಕಾವೇರಿ ಶಾಲೆಯ ವಿಧ್ಯಾರ್ಥಿ ಎಂ.ಎಂ.ನಿಶಾನ್ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರಥಮ ಹಾಗೂ ಅರ್ನವ್ ಚಿತ್ರಕಲೆ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನ ಪಡೆದು ಎಲ್ಲರ ಪ್ರಶಂಸೆಗೆ ಪಾತ್ರರಾದರು. ಇವರಿಗೆ ಸಹಶಿಕ್ಷಕಿ ಬಿ.ಪಿ.ಉಷಾ ಹಾಗೂ ಟಿ.ಜಿ.ಕಲ್ಪ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ…






