ಮಡಿಕೇರಿ NEWS DESK ಜ.19 : ಇಂದು ದಿನಾಂಕ 19-01-2026 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು ಕೊಡಗು ಜಿಲ್ಲಾ ಖಾಝಿ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ್ ರವರು ತಿಳಿಸಿರುತ್ತಾರೆ. *ಮಂಗಳವಾರ ಶಅಬಾನ್: 1* ಇದೇ ಬರುವ ದಿನಾಂಕ 02-02-2026 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಬರಾಅತ್ ರಾತ್ರಿ ಆಗಿರುತ್ತದೆ.
ಲೇಖಕ: admin
ಮಡಿಕೇರಿ NEWS DESK ಜ.19 : ಗುಂಡು ಹೊಡೆದುಕೊಂಡು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡ್ಲುಕೊಪ್ಪ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಟಿ.ಕೆ.ಸುಬ್ಬಯ್ಯ(78) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ಟಿ.ಕೆ.ಸುಬ್ಬಯ್ಯ ಅವರು ಸೋಮವಾರ ಮುಂಜಾನೆ ಮನೆಯ ಬಳಿಯೇ ಒಂಟಿ ನಳಿಕೆ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಕೆಲವು ಸಮಯಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಬಂದೂಕನ್ನು ವಶಕ್ಕೆ ಪಡೆದಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಡಿಕೇರಿ ಜ.19 NEWS DESK : ಪೊನ್ನಂಪೇಟೆಯಲ್ಲಿ ನಾರಾಯಣಗುರುಗಳ ಹೆಸರಿನಲ್ಲಿ ಭವನ ನಿರ್ಮಿಸಲು ಜಾಗ ನಿಗದಿ ಮಾಡಿದ್ದು, ರೂ.1 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲರೂ ಎಲ್ಲಾ ಸಮಾಜಗಳ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು. ವಿವಿಧತೆಯಲ್ಲಿ ಏಕತೆ ಇರಬೇಕು. ಸಮಾಜದಲ್ಲಿ ಒಡಕು ತರುವುದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ. ಎಲ್ಲ ಸಮಾಜದ ಬೆಳವಣಿಗೆಗೆ ನಾವು ಅವಕಾಶ ಮಾಡಿಕೊಡಬೇಕು ಎಂದರು. ನಾನು ಶಾಸಕನಾಗಿ ಆಯ್ಕೆಯಾದ ನಂತರ ಬಿಲ್ಲವ ಸಮಾಜ ಸೇವಾ ಸಂಘದ ಮುಖಂಡರು ಭೇಟಿ ಮಾಡಿ ಜಾಗಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಆದರೆ, ಇದುವರೆಗೂ ಸ್ಪಂದನ ಸಿಕ್ಕಿಲ್ಲ ಎಂದು ಮನವಿ ನೀಡಿದ್ದರು. ಆನಂತರ ಈ ಕುರಿತು ಸರಕಾರದ ಗಮನ ಸೆಳೆದೆ. ಆದರೆ…
ಮಡಿಕೇರಿ ಜ.19 NEWS DESK : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೈಕೋರ್ಟಿನ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಅವರು ಹೇಳಿದರು. ಶನಿವಾರಸಂತೆ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಅನಘ ಪೌಂಡೇಶನ್ ಮತ್ತು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸಿದ್ಧಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣೆ ದಾಸೋಹ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ನಾನು ಮತ್ತು ಪರೀಕ್ಷೆ ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಕೆಯ ಜೊತೆಯಲ್ಲಿ ಕಷ್ಟ ನೋವಿನ ಅರಿವು ಇರಬೇಕು ಕೀಳೆರಿಮೆಯನ್ನು ಬಿಟ್ಟು ಆತ್ಮ ವಿಶ್ವಾಸದ ಮತ್ತು ಆತ್ಮಸ್ಥೈರ್ಯದ ಮನೋಭಾವನೆಯನ್ನು ಬೆಳೆಸಿಕೊಂಡರೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು. ಇಂದಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಎಲ್ಲಾ ರೀತಿಯ ಅನುಕೂಲಗಳಿವೆ ಎಐ ಯಂತಹ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳಿವೆ ಆದರೆ ಇವುಗಳನ್ನು ಸರಿಯಾಗಿ ಸದ್ಬಳಕೆ…
ಮಡಿಕೇರಿ ಜ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನೆಯ ವಿಶೇಷ ನೋಂದಣಿ ಅಭಿಯಾನವನ್ನು ಏರ್ಪಡಿಸುವ ಕುರಿತು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲಾ ಅಸಂಘಟಿತ ವರ್ಗದ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಕಾರ್ಮಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕ್ರಮವಹಿಸಿ ಜಿಲ್ಲೆಗೆ ನಿಗಧಿಪಡಿಸಿರುವ ಗುರಿಯನ್ನು ತಲುಪಲು ಶ್ರಮಿಸಬೇಕೆಂದು ಅವರು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಅವರು,…
ಮಡಿಕೇರಿ ಜ.19 NEWS DESK : ಗೃಹಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘಕ್ಕೆ ಈಗಾಗಲೇ ತಾಲ್ಲೂಕುವಾರು ಆಯ್ಕೆ ಮಾಡಿರುವ ಪಟ್ಟಿಯನ್ನು ಪರಿಷ್ಕರಿಸಲು ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಕುರಿತು ವಿಷಯ ಪ್ರಸ್ತಾಪಿಸಿದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿ ಸದಸ್ಯರ ಗಮನಕ್ಕೆ ಬಾರದೆ ಪಟ್ಟಿಯನ್ನು ಕಳುಹಿಸಿಕೊಡಲಾಗಿದ್ದು, ಈ ಪಟ್ಟಿಯನ್ನು ಪರಿಷ್ಕರಿಸುವಂತಾಗಬೇಕು ಎಂದು ಸಭೆಯ ಗಮನಕ್ಕೆ ತಂದರು. ಈ ಕುರಿತು ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಪಟ್ಟಿಯಲ್ಲಿ ಲೋಪಗಳಿದ್ದಲ್ಲಿ ಪರಿಷ್ಕರಿಸುವಂತಾಗಬೇಕು. ಆದರೆ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರ ಗಮನಕ್ಕೆ ತಂದು ಪಟ್ಟಿಯನ್ನು ತಯಾರಿಸಬೇಕಿತ್ತು ಎಂದು ಅವರು ನುಡಿದರು. ಗ್ಯಾರಂಟಿ…
ಮಡಿಕೇರಿ ಜ.19 NEWS DESK : ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿಯಲ್ಲಿ ಶ್ರೀ ರಾಮ ಲಲ್ಲಾನ ಭವ್ಯ ಮಂದಿರ ನಿರ್ಮಾಣವಾಗಿ ಭಕ್ತ ಜನಕೋಟಿಗೆ ಲೋಕಾರ್ಪಣೆಯಾದ ಪುಣ್ಯ ದಿನದ ಪ್ರಯುಕ್ತ ಮಡಿಕೇರಿಯ ಶ್ರೀ ರಾಮ ಜನ್ಮ ಭೂಮಿ ಸೇವಾ ಸಮಿತಿಯಿಂದ ನಿರಂತರವಾಗಿ ಅನ್ನ ಪ್ರಸಾದ ವಿತರಣೆಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಶ್ರೀ ರಾಮ ಲಲ್ಲಾನ ಪ್ರತಿಷ್ಠಾಪನೆಯ ಜ.22 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಸಾರ್ವಜನಿಕರಿಗೆ 3ನೇ ವರ್ಷದ ಅನ್ನ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಈ ಪುಣ್ಯ ಕಾರ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಆಗಮಿಸುವಂತೆ ಶ್ರೀ ರಾಮ ಜನ್ಮ ಭೂಮಿ ಸೇವಾ ಸಮಿತಿ ಮನವಿ ಮಾಡಿದೆ.
ಮಡಿಕೇರಿ ಜ.19 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜ.20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜನವರಿ, 20 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮನರೇಗಾ ಕುರಿತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.19 NEWS DESK : 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್1 ದೊಡ್ಡಮಳ್ತೆ ಫೀಡರ್‍ನಲ್ಲಿ ಜ.20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಾಗಡಿಕಟ್ಟೆ, ದೊಡ್ಡಮಳ್ತೆ, ಚಿಕ್ಕತೋಳೂರು, ಕೂಗೆಕೋಡಿ, ಹನಕೋಡು, ಹೊನ್ನಮ್ಮನಕೆರೆ, ಹಾರಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕುಶಾಲನಗರ ಜ.19 NEWS DESK : ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ.ಸರ್ದಾರ್ ಜೋಗಾಸಿಂಗ್ 93ನೇ ಜನ್ಮ ದಿನದ ಪ್ರಯುಕ್ತ ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಉನ್ನತ ಶಿಕ್ಷಣ ಮತ್ತು ಕೃಷಿ ದಾರ್ಶನಿಕ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ-2026 ಪ್ರಶಸ್ತಿ ನೀಡಿ ಗೌರವಿಸಿದೆ. ಬೀದರ್‌ನ ಗುರುನಾನಕ ದೇವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ಮತ್ತು ಕೃಷಿಯಲ್ಲಿನ ಸೇವೆ ಹಾಗೂ ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಪ್ರೊ. ಅಶೋಕ ಸಂಗಪ್ಪ ಆಲೂರ ಅವರು, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಗ್ರಾಮೀಣಾಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಸುಮಾರು ಎರಡೂವರೆ ದಶಕಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಪ್ರತಿಷ್ಠಿತ ಕೃಷಿ ಧಾರವಾಡದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನದಲ್ಲಿ ಬಿ.ಎಸ್ಸಿ (B.Sc) ಮತ್ತು ಎಂ.ಎಸ್ಸಿ (M.Sc) ಪದವಿಗಳನ್ನು ಪಡೆದುಕೊಂಡು, ತದನಂತರ…






