ಸುಂಟಿಕೊಪ್ಪ,ಆ.16 NEWS DESK : ಸ್ವಾತಂತ್ರ್ಯ ದಿನಚಾರಣೆಯನ್ನು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸಂತಮೇರಿ ಶಾಲಾ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧಿ, ಜವಹಾರ್‍ಲಾಲ್ ನೆಹರು, ಭಗತ್ ಸಿಂಗ್ ಸೇರಿದಂತೆ ಅನೇಕ ಮಂದಿ ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಭಾರತ ದೇಶವು ವಿಶ್ವದಲ್ಲೇ ಒಂದು ಅಪರೂಪ. ಆದರೆ ಅದ್ಭುತ ಹಬ,್ಬ ಹರಿದಿನಗಳು, ಜಾತ್ರೆಗಳು, ಜಾತಿ ಜನಾಂಗಗಳು ನೆಲೆಸಿರುವ ದೇಶವಾಗಿದ್ದು, ಬ್ರಿಟಿಷರ ದಬ್ಬಳಿಕೆಯಿಂದ ಹೊರ ಬಂದು ಸ್ವಾತಂತ್ರ್ಯ ಸಂಭ್ರಮದಲ್ಲಿದ್ದು, ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕೆಂದು ಕರೆ ನೀಡಿದರು. ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವ್ಯವಸ್ಥಾಪಕ ವಂ.ಫಾ.ವಿಜಯಕುಮಾರ್ ಮಾತನಾಡಿ, ಭಾರತ ದೇಶವು ಸರ್ವಜನಾಂಗದ ಶಾಂತಿಯ ಎಂಬ ಖ್ಯಾತಿಗೆ ಪಾತ್ರವಾಗಿದ್ದು, ಭಾರತ ದೇಶದ ಭವ್ಯ ಪರಂಪರೆ, ಇತಿಹಾಸ, ಪದ್ಧತಿ, ಇಲ್ಲಿಯ ಜನ ಜೀವನದ ಪ್ರತಿಯೊಂದನ್ನು ಪ್ರೀತಿಸಿ,…
ಲೇಖಕ: admin
ನಾಪೋಕ್ಲು ಆ.16 NEWS DESK : ಮೈಸೂರು ಕೊಡಗು ಗೌಡ ಸಮಾಜ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಭವನದ ಆವರಣದಲ್ಲಿ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವವನ್ನು ಮತ್ತು ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿದ ಗುಡ್ಡೆಮನೆಯ ಅಪ್ಪಯ್ಯ ಗೌಡ, ಕೆದಂಬಾಡಿ ರಾಮಯ್ಯ ಗೌಡ ಮತ್ತು ಇತರ ಮಹನೀಯರನ್ನು ಸ್ಮರಿಸಿದರು. ಸಮಾರಂಭದಲ್ಲಿ ಸಮಾಜದ ನಿಕಟ ಪೂರ್ವ ಅಧ್ಯಕ್ಷ ತೋಟಂಬೈಲು ಮನೋಹರ್ ಮಾತನಾಡಿ, ಸ್ವಾತಂತ್ರ್ಯ ದಿನದ ಮಹತ್ವವನ್ನು ವಿವರಿಸಿದರು. ಕೊಡಗು ಮತ್ತು ದಕ್ಷಣ ಕನ್ನಡ ಜಿಲ್ಲಾ ಗೌಡ ಮಹಿಳಾ ಸಮಾಜದ ವತಿಯಿಂದ ದೇಶಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿದರು. ಸಮಾಜದ ಕಾರ್ಯದರ್ಶಿ ಪೊನ್ನೆಟಿ ನಂದ ಸ್ವಾಗತಿಸಿದರು. ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ ವಂದಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಆ.15 NEWS DESK : ಕೊಡಗು ಸೇರಿದಂತೆ ಪಶ್ಚಿಮ ಘಟ್ಟಗಳ ಭೂಕುಸಿತಗಳ ಅಧ್ಯಯನ ಮತ್ತು ತಡೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಮಾಡಿದ ನಿರಂತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿ ರೂ.100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಪಶ್ಚಿಮಘಟ್ಟದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿರುವ ಕುರಿತು ಡಾ.ಮಂತರ್ ಗೌಡ ಅವರು ರಾಜ್ಯ ಸರ್ಕಾರದ ಗಮನ ಸೆಳೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು ಸ್ವಾತಂತ್ರ್ಯೋತ್ಸವದ ದಿನವಾದ ಇಂದು ಪಶ್ಚಿಮಘಟ್ಟದ ಭೂಕುಸಿತದ ಅಧ್ಯಯನ ಹಾಗೂ ತಡೆ ಕಾರ್ಯಕ್ರಮಗಳಿಗೆ 100 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಭೂಕುಸಿತವನ್ನು ತಡೆಯಲು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತಿತರ ಸಂಸ್ಥೆಗಳೊಂದಿಗೆ ಸೇರಿಕೊಂಡು ವೈಜ್ಞಾನಿಕ ಅಧ್ಯಯನ ಮಾಡುವ ಅಗತ್ಯತೆಯನ್ನು ಶಾಸಕ ಡಾ.ಮಂತರ್ ಗೌಡ ಮನವರಿಕೆ ಮಾಡಿಕೊಟ್ಟಿದ್ದರು.
ಮಡಿಕೇರಿ ಆ.15 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 78ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಡಿಕೇರಿ ನಗರದ ಜಿಲ್ಲಾ ಕ್ರೀಡಾಂಗಣ ಸಮೀಪದ ನಾಡ್ ಮಂದ್ ನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಅತ್ಯಂತ ಸಣ್ಣ ಕೊಡವ ಬುಡಕಟ್ಟು ಜನಾಂಗ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಚಾರ. ತ್ಯಾಗ ಮನೋಭಾವದ ದೇಶಭಕ್ತ ಕೊಡವ ವೀರರು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದರು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ನಮ್ಮ ಸಂವಿಧಾನದ ಆರ್ಟಿಕಲ್ 244 R/ w 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಜನಾಂಗೀಯ ಪ್ರಪಂಚದ ಸಾಂಪ್ರದಾಯಿಕ ಮತ್ತು ಅವಿಭಾಜ್ಯ ತಾಯ್ನಾಡನ್ನು ಸ್ವಯಂ ಆಳ್ವಿಕೆಗೆ ಒಳಪಡಿಸಬೇಕು. ಕೊಡವ ಜನಾಂಗೀಯ ಪಂಗಡಕ್ಕೆ ಎಸ್‌ಟಿ ಟ್ಯಾಗ್ ನೀಡಬೇಕು. ನಮ್ಮ ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಸಿಖ್ ಜನಾಂಗದ “ಕಿರ್ಪಾನ್” ಗೆ…
ಭಾಗಮಂಡಲ NEWS DESK ಆ.15 : ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಬಂದೂಕು ಖರೀದಿ ಮಾಡಿದ ವ್ಯಕ್ತಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ (52) ಎಂಬಾತನೇ ಬಂಧಿತ ಆರೋಪಿ. ಈತನ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು, 02 ನಾಡ ಬಂದೂಕು(ಎಸ್.ಬಿ.ಬಿ.ಎಲ್) ಮತ್ತು 01 ನಾಡ ಪಿಸ್ತೂಲ್ ಪತ್ತೆಯಾಗಿದ್ದು, ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್.ಜೆ.ಶಿವರಾಮ (45), ಪಿರಿಯಾಪಟ್ಟಣದ ಮಾಗಳಿ ಗ್ರಾಮದ ಎಸ್.ರವಿ (35) ಹಾಗೂ ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (55) ಅವರನ್ನು ಕೂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರುಗಳ ಬಳಿ ಇದ್ದ ತಲಾ ಒಂದು…
ಮಡಿಕೇರಿ ಆ.15 NEWS DESK : ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ ಇಲಾಖೆಯ ಎಂಜಿನಿಯರ್ ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜುಸ್ಪಷ್ಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಸುರಿದ ಹೆಚ್ಚಿನ ಮಳೆಗೆ ರಸ್ತೆಗಳು ಗುಂಡಿಮಯವಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಎಂಜಿನಿಯರ್ ಗಳಿಗೆ ತಾಕೀತು ಮಾಡಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕ ಡಾ.ಮಂತರ್ ಗೌಡ ಶನಿವಾರಸಂತೆ-ಕೊಡ್ಲಿಪೇಟೆ, ಕೂಡಿಗೆ-ಸೋಮವಾರಪೇಟೆ ಮಾರ್ಗದ ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕೂಡಲೇ ಗುಂಡಿ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಹೆಚ್ಚಿನ…
ಮಡಿಕೇರಿ ಆ.15 NEWS DESK : ಮಡಿಕೇರಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಘಟಕದ ಕಚೇರಿಯಲ್ಲಿ ಘಟಕದ ಅಧ್ಯಕ್ಷ ಅಯ್ಯಣ್ಣ ಧ್ವಜಾರೋಹಣ ನೆರವೇರಸಿ, ಶುಭಹಾರೈಸಿದರು. ನಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಲಾಯಿತು.
ಕೊಡ್ಲಿಪೇಟೆ ಆ.15 NEWSDESK : “ಸ್ವಾತಂತ್ರ್ಯ ಸರ್ವರಿಗೂ ಸಮಾನವಾಗಿರಲಿ ” ಎಂಬ ಧ್ಯೇಯ ವಾಕ್ಯದೊಂದಿಗೆ 78ನೇ ಸ್ವಾತಂತ್ರ್ಯೋತ್ಸವವನ್ನು ಕೊಡ್ಲಿಪೇಟೆ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಸಂಭ್ರಮಂದ ಆಚರಿಸಲಾಯಿತು. ಹ್ಯಾಂಡ್ ಪೋಸ್ಟ್ ನಲ್ಲಿರುವ ಶಾಖಾ ಕಚೇರಿಯ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿ, ದೇಶದ ಸೌಹಾರ್ದತೆಯ ಉಳಿವಿಗಾಗಿ, ಜಾತ್ಯಾತೀತ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಎಲ್ಲರೂ ಕೈ ಜೋಡಿಸೋಣ ಎಂಬ ಸಂದೇಶ ಸಾರಿದರು. ಬೇಡಗೊಟ್ಟ ಗ್ರಾಮ ಪಂಚಾಯತಿ ಸದಸ್ಯರಾದ ಹನೀಫ್ ಮಾತನಾಡಿ ದಿನದ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೈಸ್ ಮಿಲ್ ಮಾಲೀಕ ಸೋಮಣ್ಣ, ಮಸ್ಜಿದುನ್ನೂರ್ ಖತೀಬ ಶಾಫಿ ಫೈಝಿ, ಜುಮಾ ಮಸೀದಿ ಅಧ್ಯಕ್ಷ ಸಿದ್ದೀಕ್ ಹಾಜಿ, ತಜಲ್ಲಿಯಾತ್ ಮದ್ರಸ ಮುಖ್ಯೋಪಾಧ್ಯಾಯ ರಝಾಕ್ ಫೈಝಿ, ಮದ್ರಸದ ಗುರುಗಳಾದ, ಸ್ವಾಲಿಹ್ ರಹ್ಮಾನಿ, ನಾಸರ್ ಸಅದಿ, ಎಸ್.ವೈ.ಎಸ್ ಶಾಖಾಧ್ಯಕ್ಷ ಇಬ್ರಾಹಿಂ ಕೆ.ಎ, ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಬಾಸಿತ್ ಹಾಜಿ, ಆಮಿಲಾ ಉಪಾಧ್ಯಕ್ಷ ಅಬ್ದುಲ್ ರಹಮಾನ್, ಎಸ್.ವೈ.ಎಸ್ ಕಾರ್ಯದರ್ಶಿ ಮುಹಮ್ಮದ್ ಅಲಿ, ಹಿರಿಯರಾದ…
ಮೈಸೂರು ಆ.15 NEWS DESK : ಮೈಸೂರು-ಕೊಡಗು ಲೋಕಸಭೆ ಸದಸ್ಯರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಕೃಷ್ಣ ರಾಜ ಸಾಗರಕ್ಕೆ ಬಾಗಿನ ಅರ್ಪಿಸಿದರು.
ಮಡಿಕೇರಿ ಆ.15 NEWS DESK : ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಣ್ಣನ ಹಾಡಿಗೆ ತೆರಳುವ ಸೇತುವೆ ಕಳೆದ ವರ್ಷ ಸುರಿದ ಭಾರೀ ಮಳೆಗೆ ಹಾನಿಗೀಡಾಗಿತ್ತು. ಈ ವರ್ಷದ ಧಾರಾಕಾರ ಮಳೆಗೆ ಸೇತುವೆಯೇ ಇಲ್ಲದಾಗಿದೆ. ಪ್ರಸ್ತುತ ಹಾಡಿ ನಿವಾಸಿಗಳು ಹೊಳೆ ದಾಟಿ ಮನೆ ಸೇರಲು ವಿದ್ಯುತ್ ಕಂಬಗಳನ್ನು ಅವಲಂಬಿಸಿದ್ದಾರೆ. ಕಳೆದ ವರ್ಷ ಸೇತುವೆ ಮುರಿದಾಗ ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಭರವಸೆ ಭರವಸೆಯಾಗಿಯೇ ಉಳಿದು ಹೋಗಿದೆ. ಈ ವರ್ಷವೂ ಅಧಿಕಾರಿಗಳು ಬಂದು ಹೋಗಿದ್ದಾರೆ, ಆದರೆ ಸೇತುವೆ ಮಾತ್ರ ಮರೀಚಿಕೆಯಾಗಿದೆ. ಹಾಡಿ ನಿವಾಸಿಗಳು ವಿದ್ಯುತ್ ಕಂಬಗಳನ್ನೇ ಕಾಲು ಸೇತುವೆಯನ್ನಾಗಿ ಮಾಡಿಕೊಂಡಿದ್ದಾರೆ. ಇಂದು 78ನೇ ಸ್ವಾತಂತ್ರ್ಯ ದಿನದ ಸಂಭ್ರಮದ ಹಿನ್ನೆಲೆ ಹಾಡಿ ನಿವಾಸಿಗಳು ರಾಷ್ಟ್ರಧ್ವಜದೊಂದಿಗೆ ಸಂಭ್ರಮಿಸಿದರು. “ಸೇತುವೆ ಇಲ್ಲದ ಹಾಡಿ ನೋಡಿ, ನಮ್ಮ ಪಾಡು ನೋಡಿ” ಎಂದು ಕ್ಯಾಮರಾಕ್ಕೆ ಫೋಸ್ ನೀಡಿ ಆಡಳಿತ ವ್ಯವಸ್ಥೆಯನ್ನು ಅಣಕಿಸಿದರು.






