ಮಡಿಕೇರಿ ಆ.15 NEWS DESK : ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣದ ನಂತರ 26 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಯೋಧರಾದ ನಾಪೋಕ್ಲು ನಿವಾಸಿ ಜೆಸಿಒ ಕಂಗಂಡ ರೋಹನ್ ಈರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ನ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಬಾಚಮಂಡ ಪಿ.ಲವ ಚಿಣ್ಣಪ್ಪ, ಉಪಾಧ್ಯಕ್ಷರಾದ ಅರೆಯಡ ಎಂ.ರತ್ನ ಪೆಮ್ಮಯ್ಯ, ಕಾರ್ಯದರ್ಶಿ ಚಿಯಕಪೂವಂಡ ಎಂ.ಅಪ್ಪಚ್ಚು, ಜಂಟಿ ಕಾರ್ಯದರ್ಶಿ ಕೇಟೋಳಿರ ಎಸ್.ಹರೀಶ್ ಪೂವಯ್ಯ, ಖಜಾಂಚಿ ಕರವಂಡ ಪಿ.ಬೆಲ್ಲು ಬೆಳ್ಯಪ್ಪ, ನಾಪೋಕ್ಲು ಕೊಡವ ಸಮಾಜದ ಕಲ್ಚರಲ್ ಆಂಡ್ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಅಪ್ಪಾರಂಡ ಸುಧೀರ್ ಹಾಗೂ ರಿಕ್ರಿಯೇಷನ್ ಅಸೋಸಿಯೇಷನ್ ನ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಲೇಖಕ: admin
ಕುಶಾಲನಗರ, ಆ.15 NEWS DESK : ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಎನ್‌ಎಸ್‌ಎಸ್ ಘಟಕದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಎಸ್.ಡಿ.ಎಂ.ಸಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ಪ್ರತಿಯೊಬ್ಬರೂ ರಾಷ್ಟ್ರದ ಏಳ್ಗೆಗೆ ಪಣತೊಡಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸ್ವಾತಂತ್ರ್ಯ ಗಳಿಸಲು ಶ್ರಮಿಸಿದ ಯೋಧರನ್ನು ನಾವು ಗೌರವಿಸುದರೊಂದಿಗೆ ರಾಷ್ಟ್ರದ ಏಕತೆ, ಸಮಗ್ರತೆಗೆ ಎಲ್ಲರೂ ಶ್ರಮಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಕೂಡ್ಲೂರು ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎನ್.ಪವನ್ ಕುಮಾರ್, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಶಿಕ್ಷಕಿ ಎಸ್.ಎಂ.ಗೀತಾ, ಸ್ವಾತಂತ್ರ್ಯ ಚಳವಳಿಯ ಹೋರಾಟ ಹಾಗೂ ರಾಷ್ಟ್ರ ನಾಯಕರ ಕುರಿತು ತಿಳಿಸಿದರು. ಎಸ್.ಡಿ.ಎಂ.ಸಿ ಸದಸ್ಯರಾದ ಕೆ.ಎಸ್.ರಾಜಾಚಾರಿ,ಶೃತಿ, ಶ್ರೀನಿವಾಸಚಾರಿ, ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎನ್.ಸುಜಾತ,, ಅನ್ಸಿಲಾ ರೇಖಾ, ಎಸ್ ಎಂ ಗೀತಾ, ದೈಹಿಕ ಶಿಕ್ಷಣ ಶಿಕ್ಷಕಿ…
ವಿರಾಜಪೇಟೆ ಆ.15 NEWS DESK : ವಿರಾಜಪೇಟೆಯ ವಿದ್ಯಾನಗರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಮುನೀರ್ ಧ್ವಜಾರೋಹಣ ನೆರವೇರಿಸಿದರು. ವಿರಾಜಪೇಟೆ ಕೆ.ಇ.ಬಿ ಇಲಾಖೆಯ ಲೈನ್ ಮ್ಯಾನ್ ಸಿಬ್ಬಂದಿಗಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಸಿ.ಬಿ.ಅಬ್ರಹಾಂ, ಕಾರ್ಯದರ್ಶಿ ನೌಶಾದ್, ಸದಸ್ಯರಾದ ಸೈಫುದಿನ್, ಮುಕ್ತಾರ್, ಕಬೀರ್, ನವಾಜ್, ಮಣಿ, ಲತೀಫ್ ಹಾಗೂ ಸಾರ್ವಜನಿಕರು ಹಾಜರಿದ್ದರು.
ಮಡಿಕೇರಿ ಆ.15 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಜೈ ಭಾರತ್ ಸೇನ ತರಬೇತಿ ಸಂಸ್ಥೆಯ ಮುಖ್ಯಸ್ಥರು ಹಾಗೂ ನಿವೃತ್ತ ಸೇನಾನಿ ಕೆ.ಬಿ.ಲವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹಲವಾರು ವೀರರು ಮಡಿದಿದ್ದಾರೆ. ಅವರ ತ್ಯಾಗ ಬಲಿದಾನ, ಹೋರಾಟದ ಪ್ರತಿಫಲವನ್ನು ನಾವಿಂದು ಅನುಭವಿಸುತ್ತಿದ್ದೇವೆ. ನಮ್ಮ ಹಿರಿಯರು ಹೋರಾಟದ ಬಲಿದಾನದಿಂದ ನಮ್ಮ ದೇಶವನ್ನು ಪರಕೀಯರ ದಾಸ್ಯದಿಂದ ಮುಕ್ತಗೊಳಿಸಿ ನಮ್ಮ ಕೈಗೆ ನೀಡಿದ್ದಾರೆ. ಈ ದೇಶವನ್ನು ಇನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಜನತೆಯ ಮೇಲಿದೆ. ಆದ್ದರಿಂದ ಯುವ ಜನರು ಡ್ರಗ್ಸ್ ಹಾಗೂ ಮಾದಕ ವಸ್ತುಗಳಿಗೆ ದಾಸರಾಗದೆ ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ಸದಾ ದೇಶ ರಕ್ಷಣೆ, ದೇಶ ಸೇವೆ ನಮ್ಮ ಗುರಿಯಾಗಬೇಕು. ಯುವ ಜನತೆ ಸೇನೆಗೆ ಸೇರಲು ದೇಶ ಸೇವೆ ಮಾಡಲು ಸದಾ ಉತ್ಸುಕರಾಗಿ ಸಿದ್ದರಾಗಿರಬೇಕು ಎಂದರು. ಪದವಿ ಕಾಲೇಜಿ ಪ್ರಾಂಶುಪಾಲ ಬೆನಡಿಕ್ಟ್ ಆರ್.ಸಲ್ದಾನ ಮಾತನಾಡಿ, ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ…
ಮಡಿಕೇರಿ ಆ.15 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ನಗರದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಎದುರು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳ ಶೌರ್ಯ ಪ್ರಶಸ್ತಿ ವಿಜೇತರಾದ ಸಿಆರ್‌ಪಿಎಫ್ ನ ನಿವೃತ್ತ ಡಿಐಜಿಪಿ ಆಮೆ ಸೀತಾರಾಮ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರ ತ್ಯಾಗ ಬಲಿದಾನವನ್ನು ಸರ್ವರೂ ಗೌರವಿಸಬೇಕು ಎಂದು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಹಾಗೂ ನಿವೃತ್ತ ಸೈನಿಕ ಚೆರಿಯಮನೆ ಜಿ.ವಿಜಯ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಇದಕ್ಕೂ ಮೊದಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗಳಿಗೆ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಕೊಡಗು ಗೌಡ ಸಮಾಜ, ಕೊಡಗು ಗೌಡ ವಿದ್ಯಾ ಸಂಘ, ಕೊಡಗು ಗೌಡ ಮಹಿಳಾ ಒಕ್ಕೂಟ, ಕೊಡಗು ಗೌಡ ಯುವ ವೇದಿಕೆ, ಕೊಡಗು…
ಮಡಿಕೇರಿ ಆ.15 NEWS DESK : ಮಡಿಕೇರಿ ಮೂಡ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭ ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಆರ್.ಪಿ.ಚಂದ್ರಶೇರ್, ಮಿನಾಜ್ ಪ್ರವೀಣ್, ಸುದಯ್ ನಾಣಯ್ಯ, ಪ್ರಮುಖರಾದ ಪ್ರಕಾಶ್ ಆಚಾರ್ಯ ಮತ್ತಿತರರು ಹಾಜರಿದ್ದರು.
ಕುಶಾಲನಗರ, ಆ.15 NEWS DESK : ರಾಷ್ಟ್ರ ಪ್ರೇಮದೊಂದಿಗೆ ದೇಶದ ಸಂಸ್ಕೃತಿ, ನಾಡು ನುಡಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಹೇಳಿದರು. ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ವರ್ಷದ ಎಲ್ಲಾ ದಿನಗಳಲ್ಲಿಯೂ ದೇಶಪ್ರೇಮ ಅಗತ್ಯ ಎಂದ ಅವರು, ಒಳಜಗಳ, ಅರಾಜಕತೆಯನ್ನು ಇತರರು ಲಾಭ ಪಡೆಯುವ ಆತಂಕ ಉಂಟಾಗಿದೆ. ಭಾರತೀಯ ಅಸ್ಮಿತೆಯನ್ನು ಜೀವಂತವಾಗಿಸಲು ಪ್ರತಿಯೊಬ್ಬರೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಬ್ರಿಟಿಷರು ಪಾಲಿಸಿದ್ದ ಒಡೆದು ಆಳುವ ನೀತಿ ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಇತಿಹಾಸವನ್ನು ತಿಳಿಯದವರು ಇತಿಹಾಸ ಸೃಷ್ಟಿ ಮಾಡಲು ಅಸಾಧ್ಯ ಎಂದು ಜಮೀರ್ ಅಹ್ಮದ್ ಹೇಳಿದರು. ಸ್ವಾತಂತ್ರ್ಯ ಕೇವಲ ದಿನಾಚರಣೆಗೆ ಸೀಮಿತ ಆಗಬಾರದು. ಪ್ರತಿಕ್ಷಣ ಸ್ವಾತಂತ್ರ್ಯದ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ಹೇಳಿದ ಜಮೀರ್ ಅಹ್ಮದ್ ಒಗ್ಗಟ್ಟು…
ಮೈಸೂರು ಆ.15 NEWS DESK : ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ರಾಜಮಾತೆ ಪ್ರಮೋದಾ ದೇವಿ, ಪತ್ನಿ ತ್ರಿಷಿಕಾ ಕುಮಾರಿ ಹಾಗೂ ಪುತ್ರ ಆದ್ಯವೀರ್ ನೊಂದಿಗೆ ಧ್ವಜಾರೋಹಣ ನೆರವೇರಿಸಿ ಸಂಭ್ರಮಿಸಿದರು.
ಮಡಿಕೇರಿ ಆ.15 NEWS DESK : ಕಾಟಕೇರಿಯ ಕೂರನಬಾಣೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮದೆ ಗ್ರಾ.ಪಂ ಸದಸ್ಯೆ ಪಿ.ಎ.ಚಂದ್ರಾವತಿ ಹಾಗೂ ಬೆಟ್ಟಗೇರಿ ಗ್ರಾ.ಪಂ ಸದಸ್ಯೆ ಜಲಜಾಕ್ಷಿ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಸ್ವಾತಂತ್ರ್ಯೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಪ್ರತಿನಿತ್ಯ ಸ್ಮರಿಸುವಂತಾಗಬೇಕು. ಅವರ ಆದರ್ಶಗಳನ್ನು ಪಾಲಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ ಮದೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿ.ಸಿ.ಗಿರಿಜಾ, ಅಂಗನವಾಡಿ ಕಾರ್ಯಕರ್ತೆ ನಳಿನಿ ಹಾಗೂ ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ಸಂಘ ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು.
ಮಡಿಕೇರಿ ಆ.15 NEWS DESK : ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ನೇಮಕಗೊಂಡ ಸೌಮ್ಯ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು.






