ಲೇಖಕ: admin

ಮಡಿಕೇರಿ ಜು.13 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡು ನುಡಿಯ ಸೇವೆಗೆ ಸಂಬಂಧಿಸಿದಂತೆ (ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ) (ಸಾಹಿತ್ಯ, ನಾಟಕ, ಜಾನಪದ ಕಲಾಪ್ರಕಾರಗಳಲ್ಲಿ, ಸಂಗೀತ, ನೃತ್ಯ, ಚಿತ್ರಕಲೆ, ಲಲಿತ ಕಲೆ, ಹಾಗೂ ಯಕ್ಷಗಾನ) ಕಲೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು ರೂ. 2 ಸಾವಿರ ಮಾಸಾಶನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ವರ್ಷ ಪೂರ್ತಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆ: ಅರ್ಜಿ ಸಲ್ಲಿಸುವ ಫಲಾನುಭವಿಯ ವಯಸ್ಸು 58 ವರ್ಷ ಪೂರ್ಣಗೊಂಡಿರಬೇಕು. ಅರ್ಜಿದಾರರು 25 ವರ್ಷಗಳ ಕಲಾಸೇವೆಗಳ ದಾಖಲಾತಿಗಳನ್ನು ಸಲ್ಲಿಸಬೇಕು. ವಯಸ್ಸಿನ ದೃಢೀಕರಣ ಪತ್ರವನ್ನು ಒಂದನೇ ತರಗತಿಗೆ ಸೇರಿದ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಗೆ ದಾಖಲಾಗಿರುವ ಜನನ ದಿನಾಂಕವನ್ನು ಶಾಲೆಯಿಂದ ಪಡೆದು ಸಲ್ಲಿಸತಕ್ಕದ್ದು ಅಥವಾ ಶಾಲೆಗೆ ಹೋಗದಿದ್ದಲ್ಲಿ ನ್ಯಾಯಾಲಯದ ನ್ಯಾಯಾಧೀಶರಿಂದ ಜನನ ದಿನಾಂಕದ ಬಗ್ಗೆ ದೃಢೀಕರಣ ಪತ್ರವನ್ನು ಪಡೆದು ಸಲ್ಲಿಸುವುದು. ಸರ್ಕಾರದ ವತಿಯಿಂದ ಯಾವುದೇ ಇತರೇ…

Read More

ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಪ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘ(ರಿ) ಇವರ ಸಂಯಕ್ತಾಶ್ರಯದಲ್ಲಿ ಆ.10 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ ದೇವಯ್ಯನವರ ಗದ್ದೆಯಲ್ಲಿ 2024-25 ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ಏರ್ಪಡಿಸಲಾಗಿದೆ. ಎಲ್ಲಾ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಹಕರಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್ ಅಧ್ಯಕ್ಷರು ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ.-9481213920, ಬಾಳಾಡಿ ದಿಲೀಪ್ ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ-8618568173, ಕುಂಜಿಲನ ಎಂ ಮೋಹನ್, ಖಜಾಂಜಿ, ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ-9480646382, ನವೀನ್ ದೇರಳ, ಸದಸ್ಯರು, ತಾಲೂಕು ಯುವ ಒಕ್ಕೂಟ ಮಡಿಕೇರಿ-9449952008 ಹಾಗೂ…

Read More

ಮಡಿಕೇರಿ ಜು.13 NEWS DESK : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನೆ, ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಈ ಕಾರ್ಡ್‍ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ…

Read More

ಮಡಿಕೇರಿ ಜು.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಯು.ಚೇತನ್ ಹಾಗೂ ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಯು.ಚೇತನ್, ಮಾತನಾಡಿ 1987ರ ಜುಲೈ 11 ರಂದು ವಿಶ್ವ ಜನಸಂಖ್ಯೆ 500 ಕೋಟಿ ತಲುಪಿದ ಕಾರಣ ಈ ದಿನ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಮದುವೆಯಾಗಲು ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು. ಮದುವೆಯ ನಂತರ ಕನಿಷ್ಠ 2 ವರ್ಷಗಳವರೆಗೂ ಮೊದಲನೇ ಮಗುವನ್ನು ಪಡೆಯಬಾರದು. ಎರಡು ಮಕ್ಕಳ ನಡುವೆ ಕನಿಷ್ಠ 3 ವರ್ಷಗಳ ಅಂತರವಿರಬೇಕು. 2 ಮಕ್ಕಳನ್ನು ಹೊಂದಿರುವ ದಂಪತಿಗಳು ಶಾಶ್ವತ ಕುಟುಂಬ ಕಲ್ಯಾಣ ವಿಧಾನವನ್ನು ಅಳವಡಿಸಿಕೊಳ್ಳಬೇಕು. ಎಲ್ಲಾ…

Read More

ಮಡಿಕೇರಿ ಜು.13 NEWS DESK : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರು ಮತ್ತು ಸದಸ್ಯರ ವಿವರ ಇಂತಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಅಧ್ಯಕ್ಷರಾಗಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಮಹಮ್ಮದ್ ಸವಾದ್, ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಶೈಕ್ಷಣಿಕ ಮಂಡಳಿ ಸದಸ್ಯರಾದ ಡಾ.ವೈ.ನಾರಾಯಣ, ಮೂಡಬಿದಿರೆಯ ಐಕಳ ಪಾಂಪೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ ಕರಂಗಲ್ಲು, ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಬಿ.ಕೆ.ಸರೋಜಿನಿ, ಕನಕಮಜಲು ಗ್ರಾಮದ ಲಕ್ಷ್ಮಿನಾರಾಯಣ ಕಜೆಗದ್ದೆ, ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಿತ್ರ, ಬಂಟ್ವಾಳ ತಾಲ್ಳೂಕಿನ ಬೆಂಜನ ಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಪಕರಾದ ಡಾ.ದಾಮೋದರ ನಾರಾಲು, ಚೆಂಬು ಗ್ರಾಮದ ಸ್ಮಿತಾ ಅಮೃತರಾಜ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಇವರು ಸದಸ್ಯರಾಗಿರುತ್ತಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ…

Read More

ಮಡಿಕೇರಿ ಜು.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ನೂತನ ಸದಸ್ಯರಾಗಿ ನೇಮಕವಾಗಿರುವ ಪಿ.ಎಂ.ಸಂದೀಪ್ ಮತ್ತು ಲೋಕೇಶ್ ಊರುಬೈಲು ಅವರನ್ನು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅಭಿನಂದಿಸಿದರು. ನಗರದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ನೂತನ ಸದಸ್ಯರನ್ನು ಅಭಿನಂದಿಸಿ, ಚರ್ಚಿಸಿದರು. ನೂತನ ಸದಸ್ಯರಾಗಿ ನೇಮಕವಾಗಿರುವ ಪಿ.ಎಂ.ಸಂದೀಪ್ ಮರಗೋಡು ಗ್ರಾಮದವರಾಗಿದ್ದಾರೆ. ಲೋಕೇಶ್ ಊರುಬೈಲು ಚೆಂಬು ಗ್ರಾಮದವರಾಗಿದ್ದಾರೆ. ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಕಾಡೆಮಿ ಮಾಜಿ ಅಧ್ಯಕ್ಷರಾದ ದಿ.ದೇವಿಪ್ರಸಾದ್ ಅವರ ಧರ್ಮಪತ್ನಿ ಇಂದಿರಾ, ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಲಕ್ಷ್ಮಿನಾರಾಯಣ ಕಜೆಗದ್ದೆ, ಜಯರಾಮ್ ಅವರನ್ನು ಇತ್ತೀಚೆಗೆ ಭೇಟಿಯಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಚಟುವಟಿಕೆಗೆ ಅಗತ್ಯ ಸಹಕಾರಕ್ಕೆ ಕೋರಿದರು.

Read More

ಮಡಿಕೇರಿ ಜು.13 NEWS DESK : ವಿಶೇಷ ಘಟಕ ಯೋಜನೆ/ ಗಿರಿಜನ ಉಪಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಅಭ್ಯರ್ಥಿಗಳಿಗೆ/ ಕೈಗಾರಿಕಾ ಘಟಕಗಳಿಗೆ ಶೇ.60 ರಷ್ಟು ಸಹಾಯಧನ, ಸಾಪ್ಟ್ ಸೀಡ್ ಕ್ಯಾಪಿಟಲ್ ಸವಲತ್ತು, ಬ್ಯಾಂಕುಗಳಿಂದ ಪಡೆದ ಸಾಲದ ಶುಲ್ಕ ಮರುಪಾವತಿಗಳನ್ನು ಮಂಜೂರು ಮಾಡಲಾಗುವುದು. ಶೇ. 60 ರಷ್ಟು ಸಹಾಯಧನ ಪಡೆಯಲು ಘಟಕದ ವೆಚ್ಚ ಗರಿಷ್ಟ 10 ಲಕ್ಷ ರೂ. ಆಗಿರಬೇಕು ಹಾಗೂ ನಿರ್ದಿಷ್ಟ ಚಟುವಟಿಕೆಯ ಘಟಕಗಳಿಗೆ ಮಾತ್ರ ಮಂಜೂರು ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ರವರನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜು.13 NEWS DESK : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್ ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‌ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್ ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್ ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಈ ಕಾರ್ಡ್ ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು.…

Read More

ಸುಂಟಿಕೊಪ್ಪ ಜು.12 NEWS DESK : ಕಾರ್ಮಿಕರ ಮತ್ತು ಚಾಲಕರ ಕೊಡಗು ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಜಿ.ಕುಮಾರ್ ಆಯ್ಕೆಯಾಗಿದ್ದಾರೆ. ಇಲ್ಲಿನ ದ್ವಾರಕ ಸಭಾಂಗಣದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಅಣ್ಣಾ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಹೇಶ್ ಮಾದಪಟ್ಟಣ, ಶಿವಮ್ಮ ಸುಂದರನಗರ,ಸುಲೈಮಾನ್ ನಂಜರಾಯಪಟ್ಟಣ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್( ಲೋಕಿ) ಸುಂಟಿಕೊಪ್ಪ, ಖಜಾಂಚಿಯಾಗಿ ಮಂಜುನಾಥ್ ಚೆನ್ಕಲ್, ಸಹಕಾರ್ಯದರ್ಶಿಗಳಾಗಿ ಕೃಷ್ಣಕುಟ್ಟಿ, ನಂದಿನಿ, ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಸ್.ಸಂದೀಪ್, ಮಂಜುಳ, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಇಬ್ರಾಹಿಂ, ರವಿ, ಸಲಂ,ಕವಿತ, ರತ್ನ, ಸುಮಾ, ಸೂರ್ಯ( ಸೂರಿ), ಆನಂದ, ಅನಿಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದೇ ವೇಳೆ ಕೊಡಗು, ಮೈಸೂರು, ಹಾಸನ ಜಿಲ್ಲೆಯ ಕಾವೇರಿ ಕೃಷಿ ಕಾರ್ಮಿಕರ ಚಾಲಕರ ಸಂಘ ಮತ್ತು ಕಾರ್ಮಿಕರ ಮತ್ತು ಚಾಲಕರ ಸಂಘದ ಅಧ್ಯಕ್ಷರಾಗಿ ಅಣ್ಣಾ ಶರೀಫ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಜು.12 NEWS DESK : ಮಡಿಕೇರಿ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.   ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು 50 ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು. ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ಅವರು ತಿಳಿಸಿದರು. ಮತ್ತೊಬ್ಬ ಮಹಾಲಕ್ಷ್ಮಿ ಅವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು. ಈ ಬಗ್ಗೆ ಪೌರಾಯುಕ್ತರಾದ ವಿಜಯ್ ಅವರು ಹೊಸದಾಗಿ ಖಾತೆ…

Read More