ಲೇಖಕ: admin

ಮಡಿಕೇರಿ ಜು.2 NEWS DESK : ಕಾಂಗ್ರೆಸ್ ನ ತೆನ್ನಿರ ಮೈನಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜು.3ರಂದು ಜಿಲ್ಲಾವ್ಯಾಪಿ ಪೊಲೀಸ್ ಠಾಣೆಗಳೆದುರು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಅವಹೇಳನ ಮಾಡಿದ ಆರೋಪದಡಿ ತೆನ್ನಿರ ಮೈನಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಜು.3 NEWS DESK : ಗಾಳಿ ಮಳೆಗೆ ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಕಾರ್ಮಾಡು ಕುದನೆಕೊಡಿರ ಮಣಿ ಬೆಳ್ಳಿಯಪ್ಪ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಸ್ಥಳಕ್ಕೆ ಬಾಳೆಲೆ ಕಂದಾಯ ಪರಿವೀಕ್ಷಕ ಶರೀಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಷ್ಟವನ್ನು ಅಂದಾಜು ಮಾಡಿ ಪರಿಹಾರಕ್ಕೆ ಶಿಪಾರಾಸು ಮಾಡುವುದಾಗಿ ತಿಳಿಸಿದ್ದಾರೆ. ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ಸದಸ್ಯರಾದ ಪಡಿಞರಂಡ ಕವಿತಾ ಪ್ರಭು, ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಸುರೇಶ್, ಗ್ರಾಮಲೆಕ್ಕಿಗರಾದ ಕಾಸವ್ವ, ಕಂದಾಯ ಇಲಾಖಾ ಸಿಬ್ಬಂದಿ ಗಣೇಶ್, ಪ್ರಮುಖರಾದ ಗಾಣಂಗಡ ಸುದೀಪ್ ಹಾಜರಿದ್ದರು.

Read More

ನಾಪೋಕ್ಲು ಜು.2 NEWS DESK : ಹಲವಾರು ಸಮಾಜಮುಖಿ ಕೆಲಸ ಮಾಡುತ್ತಿರುವ ಪುನಶ್ಚೇತನ ಸಂಸ್ಥೆಯ ಕಾರ್ಯ ಸಮಾಜಕ್ಕೆ ಮಾದರಿ ಎಂದು ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಬೇಬ ಹೇಳಿದರು. ಪುನಶ್ಚೇತನ ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆ ವತಿಯಿಂದ ಹೆಣ್ಣು ಮಕ್ಕಳಿಗೆ ಆಯೋಜಿಸಲಾಗಿದ್ದ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ, ಮಹಿಳೆಯರ ಅಭಿವೃದ್ಧಿಗಾಗಿ ಸಂಸ್ಥೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಪದಾಧಿಕಾರಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಗ್ರಾ.ಪಂ ಸದಸ್ಯ ಬಿ.ಎಂ.ಪ್ರತೀಪ ಮಾತನಾಡಿ, ವಿಶೇಷ ಮಕ್ಕಳನ್ನ ಮುಖ್ಯವಾಹಿನಿಗೆ ತರುವುದರ ಜೊತೆಗೆ ಬಡಹೆಣ್ಣು ಮಕ್ಕಳಿಗೆ ಸ್ವಾವಲಂಬನೆ ಜೀವನ ನಡೆಸಲು ಟೈಲರಿಂಗ್ ತರಬೇತಿ ಕೊಡುವುತ್ತಿರುವುದು ಒಳ್ಳೆಯ ಉತ್ತಮ ವಿಚಾರ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಬೊಪ್ಪಂಡ ಸೂರಜ್ ಗಣಪತಿ ಮತ್ತು ಬಾಳೆಯಡ ದಿವ್ಯ ಮಂದಪ್ಪ, ತರಬೇತಿ ಶಿಕ್ಷಕಿ ಅಶ್ವಿನಿ, ಸಂಸ್ಥೆಯ ಶಿಕ್ಷಕಿ ಅಸ್ಮ , ವಿಶೇಷ ಮಕ್ಕಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಜು.2 NEWS DESK : ಪ್ರವಾಸೋದ್ಯಮವನ್ನು ಅಭಿವೃದ್ಧಿ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿ ತಾಣಗಳ ಐತಿಹಾಸಿಕ, ಧಾರ್ಮಿಕ, ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಕಲಾವೈವಿಧ್ಯತೆಗಳನ್ನು ಒಳಗೊಂಡ ಸೃಜನಶೀಲತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದೇಶ/ ವಿದೇಶಿ ಪ್ರವಾಸಿಗರಿಗೆ ನೀಡಲು ಅಂದರೆ ‘ಒಂದು ರಾಜ್ಯ-ಹಲವು ವಿಸ್ಮಯಗಳು’ ಎಂಬುದನ್ನು ಪರಿಚಯಿಸವುದರ ಮೂಲಕ ನಾಡಿನ ಸಮಗ್ರತೆಯ ಬಗ್ಗೆ ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ನಾಡಿಗೆ ಸೆಳೆಯಲು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳು ಅವಶ್ಯವಾಗಿ ಬೇಕಾಗಿರುವುದರಿಂದ ಜಿಲ್ಲಾ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಹಾಗೂ ರಾಜ್ಯ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯ ಪ್ರತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿಯ ಪ್ರತಿ, ಪದವಿ ಅಂಕಪಟ್ಟಿಯ ಪ್ರತಿ, ಜಾತಿ ಪ್ರಮಾಣ…

Read More

ಮಡಿಕೇರಿ ಜು.2 NEWS DESK : ಸೋಮವಾರಪೇಟೆ ರೇoಜರ್ಸ್ ಬ್ಲಾಕ್ ನಿವಾಸಿ ಸ್ಟೇಟ್ ಬ್ಯಾಂಕ್ ನಿವೃತ್ತ ನೌಕರ ಹೆಚ್.ಶಿವಣ್ಣ (86) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಹಿರಿಯ ಪತ್ರಕರ್ತ ಎಸ್.ಮಹೇಶ್ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜು.3 ರಂದು 10ಗಂಟೆಗೆ ಕರ್ಕಳ್ಳಿ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ.

Read More

ಕಡಂಗ ಜು.2 NEWS DESK : ಕೊಡಗು ಜಿಲ್ಲಾ ಎಸ್.ಎಸ್.ಎಫ್ ನಾಯಕರು ಹಮ್ಮಿಕೊಂಡ ಜಿಲ್ಲಾ ನಾಯಕರ ಯೂನಿಟ್ ಭೇಟಿ ವೊಯೇಜ್ ಕಾರ್ಯಕ್ರಮ ಕಡಂಗ ಬದ್ರಿಯಾ ಮದರಸ ಸಭಾಂಗಣದಲ್ಲಿ ನಡೆಯಿತು. ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ಝುಬೈರ್ ಸಹದಿ ಮಾಲ್ದಾರೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ ಉದ್ಘಾಟಿಸಿ ಸಂಘಟನೆ ನಡೆದು ಬಂದ ಹಾದಿಗಳನ್ನು ವಿವರಿಸಿದರು. ಎಸ್.ಎಸ್.ಎಫ್ ಜಿಲ್ಲಾ ನಾಯಕರು ಹಮ್ಮಿಕೊಂಡ ಕೊಡಗಿನಲ್ಲಿರುವ ಎಸ್.ಎಸ್.ಎಫ್ ನ 100 ಯುನಿಟ್ ಗಳಿಗೆ ಭೇಟಿ ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು. ಎಸ್.ವೈ.ಎಸ್ ಜಿಲ್ಲಾ ನಾಯಕ ಖಮರುದ್ದಿನ್ ಅನ್ವಾರಿ ಮಾತನಾಡಿ, ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದು,ಮಾದಕ ವಸ್ತು ಮಾರಾಟ ಹಾಗೂ ಅದಕ್ಕೆ ಪ್ರೇರೆಪಿಸುವವರಿಗೆ ಕಠಿಣ ಶಿಕ್ಷೆಯಾಗಬೇಕು. ಸಂಘಟನೆಯಿಂದ ವಿದ್ಯಾರ್ಥಿಗಳಿಗೆ ಶಿಸ್ತು, ಸಮಾಜ ಸೇವೆ ಮುಂತಾದ ವಿಷಯಗಳಲ್ಲಿ ಹೆಚ್ಚಿನ ಮಹತ್ವ ದೊರೆಯಲಿದ್ದು, ವಿದ್ಯಾರ್ಥಿಗಳು ಸಂಘಟನೆಯಲ್ಲಿ ಹೆಚ್ಚಾಗಿ ಗುರುತಿಸಿ ಸಮಾಜಮುಖ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಕರೆ ನೀಡಿದರು.…

Read More

ಪುತ್ತೂರು ಜು.2 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 25ನೇ ಅಂತರ್ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ಚಾಂಪಿಯನ್‍ಶಿಪ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‍ಶಿಪ್‍ನಲ್ಲಿ ರನ್ನರ್ ಅಪ್ ಟ್ರೋಫಿಯೊಂದಿಗೆ ಸತತ ಮೂರನೇ ಬಾರಿ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 200ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ ಕ್ರೀಡಾಪಟುಗಳು ಭಾಗವಹಿಸಿದ್ದರು. ಜಿದ್ದಾಜಿದ್ದಿನ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳು ಇತರ ತಂಡಗಳನ್ನು ಮಣಿಸಿ ಹ್ಯಾಟ್ರಿಕ್ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ :: ಫುರುಷರ ವಿಭಾಗದಲ್ಲಿ ::  ಪ್ರಥಮ ವರ್ಷದ ಡಾಟಾ ಸೈನ್ಸ್ ವಿಭಾಗದ ಭುವನ್ ಕುಮಾರ್ ಲಾಂಗ್‍ಜಂಪ್‍ನಲ್ಲಿ ಚಿನ್ನ ಹಾಗೂ 4×100ಮೀ ರಿಲೇಯಲ್ಲಿ ಬೆಳ್ಳಿ, ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್…

Read More

ವಿರಾಜಪೇಟೆ ಜು.2 NEWS DESK : ಪಟ್ಟಣದ ಮಗ್ಗುಲ ದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ಪ್ರತಿಮಾ ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗಿಡಗಳನ್ನು ನೆಟ್ಟು ಬೆಳೆಸುದರಿಂದ ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡಿದಂತಾಗುತ್ತದೆ ಎಂದರು. ಶಿಕ್ಷಕಿ ಕೀರ್ತನ ಸ್ವಾಮಿ ವನಮಹೋತ್ಸವ ಆಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಕುರಿತು ಸಂಸ್ಥೆಯ ವತಿಯಿಂದ ಪ್ರತಿಜ್ಞೆ ಮಾಡಲಾಯಿತು. ಶಾಲಾ ವಿದ್ಯಾರ್ಥಿನಿ ಮರದ ವೇಷ ಭೂಷಣದಲ್ಲಿ ಎಲ್ಲರ ಗಮನ ಸೆಳೆದಳು. ಶಾಲಾ ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ, ಶಿಕ್ಷಕರು, ಸಿಬ್ಬಂದಿಗಳು, ಮಕ್ಕಳು ಹಾಜರಿದ್ದರು.

Read More

ಮಡಿಕೇರಿ ಜು.2 NEWS DESK : ವೀರ ಯೋಧರ ತವರೂರಾದ ಕೊಡಗಿನಲ್ಲಿ ಹಾಕಿಯನ್ನು ಬೆಳೆಸುತ್ತಾ ಬಂದ ಯೋಧರು ಹಾಗೂ ಪ್ರತಿಭಾವಂತ ಹಾಕಿ ಆಟಗಾರರಲ್ಲಿ ಚೋಳಂಡ ಮುದ್ದಯ್ಯ(ಡಾಲು) ಕೂಡ ಒಬ್ಬರು. ಚೋಳಂಡ ಅಚ್ಚಪ್ಪ ಹಾಗು ಬೆಳ್ಳಿಯವ್ವ( ಕಾವೇರಿ, ತಾಮನೆ ಐಚಂಡ) ದಂಪತಿಯರ ಪುತ್ರನಾಗಿ ಮುದ್ದಯ್ಯನವರು 9 ಮೇ 1947ರಂದು ಕಡಂಗ ಮುರೂರಿನಲ್ಲಿ ಜನಿಸಿದರು. ತಮ್ಮ ಶಿಕ್ಷಣವನ್ನು ಕಾಕೋಟುಪರಂಬು ಹಾಗೂ ವಿರಾಜಪೇಟೆಯಲ್ಲಿ ಮುಗಿಸಿದರು. ಇ.ಒ.ಇ ಗೆ ಸೇರ್ಪಡೆ ::  1969ರಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮೆಕಾನಿಕಲ್ ಇಂಜಿನಿಯರ್ಸ್(ಇ.ಒ.ಇ) ಗೆ ಸೇರ್ಪಡೆಗೊಂಡು 1988 ರಲ್ಲಿ ಅದರಿಂದ ನಿವೃತ್ತಿ ಪಡೆದರು. ಸರ್ವಿಸಸ್ ತಂಡಕ್ಕೆ 1981-84 ವರೆಗೆ 4 ವರ್ಷಗಳ ಕಾಲ ಅತ್ಯುತ್ತಮ ಫುಲ್ ಬ್ಯಾಕ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಶ್ಚಿಮ ಕಮಾಂಡ್ ::  ಇ.ಒ.ಇ ಗೆ ಆಡುವಾಗ ಇವರ ಅದ್ಭುತ ಆಟ ಹಾಗು ಚುರುಕುತನದಿಂದ ಪಶ್ಚಿಮ ಕಮಾಂಡ್ ಗೆ 5 ಬಾರಿ ಆಯ್ಕೆಯಾದರು. 1982 ಮೀರತ್ ನ್ಯಾಷನಲ್ಸ್ ::  ಮೀರತ್ ನಲ್ಲಿ ನಡೆದ 52ನೇ ರಂಗಸ್ವಾಮಿ ಕಪ್ ನ್ಯಾಷನಲ್ಸ್…

Read More

ಮಡಿಕೇರಿ ಜು.2 NEWS DESK : ಮನೆಯ ಸಮೀಪ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬವರು ಎಂದಿನಂತೆ ಆಟೋ ರಿಕ್ಷಾ ನಿಲ್ಲಿಸಿ ಮನೆಗೆ ತೆರಳಿದ್ದರು. ರಾತ್ರಿಯ ವೇಳೆ ಕಾಡಾನೆ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿದ್ದು, ಪರಿಣಾಮ ವಾಹನಕ್ಕೆ ಹಾನಿಯಾಗಿದೆ.

Read More