ಲೇಖಕ: admin

ಸುಂಟಿಕೊಪ್ಪ ಜು.2 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿಶೇಷ ಬಲಿಪೂಜೆ, ಆರಾಧನೆ ನಡೆಯಿತು. ರೇ.ಫಾ. ಸಂಜಯ್ ಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ವಿಶೇಷ ಪ್ರಭೋದನೆ ಮತ್ತು ಬಲಿಪೂಜೆಯನ್ನು ಸಮರ್ಪಿಸಿದರು. 3 ದಿನಗಳು ವಿವಿಧ ಧರ್ಮಕೇಂದ್ರಗಳ ಧರ್ಮಗುರುಗಳು ಆಗಮಿಸಿ ಬಲಿಪೂಜೆ ಆರಾಧನೆಯನ್ನು ಸಲ್ಲಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನದ ವೇಳೆಯಲ್ಲಿ ಸಂತ ಸಬಾಸ್ಟೀನ್ ಅವರ ಅಂಬು ಕಾಣಿಕೆ ಹರಕೆಯನ್ನು ಭಕ್ತಾಧಿಗಳು ಸಲ್ಲಿಸಿದರು. ಸಂತ ಅಂತೋಣಿಯವರ ದೇವಾಲಯದಲ್ಲಿ ಹಬ್ಬದ ಅಡಂಬರ ಗಾಯನ ಬಲಿಪೂಜೆ ಮತ್ತು ಪರಮಪ್ರಸಾದ ಆರಾಧನೆಯನ್ನು ಹೆಚ್.ಡಿ.ಕೋಟೆಯ ಸೈಂಟ್ ಮೇರಿಸ್ ಚರ್ಚ್‍ನ ಬರ್ನಾಡ್ ಪ್ರಕಾಶ್ ಬಾರ್ನಿಸ್ ಜಿಲ್ಲೆಯ ವಿವಿಧ ಧರ್ಮಕೇಂದ್ರಗಳ ಧರ್ಮಗುರುಗಳು ಒಗ್ಗೂಡಿ ನೇರವೇರಿಸಿದರು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ಒಳಾಂಗಣವನ್ನು ಬಣ್ಣ ಹೂಗಳು, ಬಂಟಿಗ್ಸ್ ಹಾಗೂ ಹೊರಾಂಗಣವನ್ನು ವಿದ್ಯುತ್ ದೀಪಾಗಳಿಂದ ಅಲಂಕಾರಿಸಲಾಗಿತ್ತು. ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಂ.ಪಾ.ಮದಲೈಮುತ್ತು, ಅನ್ನಮ್ಮ…

Read More

ಮಡಿಕೇರಿ ಜು.1 NEWS DESK : ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಆರ್ದ್ರಾ ಮಳೆ ಕೊಡಗಿನಲ್ಲಿ ಮತ್ತೆ ಬಿರುಸುಗೊಂಡಿದೆ. ವಿರಾಜಪೇಟೆ ಮತ್ತು ಭಾಗಮಂಡಲ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ಅಧಿಕ ಮಳೆಯಾಗಿದೆ. ಹಗಲಿನ ವೇಳೆ ಕೊಂಚ ಬಿಡುವು ನೀಡುವ ಮಳೆ ರಾತ್ರಿ ಬಿರುಸುಗೊಳ್ಳುತ್ತಿದೆ. ವಿರಾಜಪೇಟೆಯಲ್ಲಿ 5 ಇಂಚು ಮತ್ತು ಭಾಗಮಂಡಲದಲ್ಲಿ 4 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ತಾಲ್ಲೂಕು ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಮಡಿಕೇರಿ ನಗರದಲ್ಲಿ ಮಂಜು ಮತ್ತು ಚಳಿಯ ವಾತಾವರಣ ಮುಂದುವರೆದಿದೆ. ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಮಾಡು ಗ್ರಾಮದ ಕುದನೆಕೊಡಿರ ಮಣಿ ಬೆಳ್ಳಿಯಪ್ಪ ಎಂಬುವವರ ಮನೆಯ ಗೋಡೆ ಭಾರೀ ಮಳೆಯ ಪರಿಣಾಮ ಕುಸಿದು ಬಿದ್ದಿದೆ. ನಿಟ್ಟೂರು ಗ್ರಾ.ಪಂ ಕಾರ್ಮಾಡು ವಾರ್ಡ್ ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು ಹಾಗೂ ಕಾಟಿಮಾಡ ಶರೀನ್ ಮುತ್ತಣ್ಣ ಅವರು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಗೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸುರಿದ ಮಳೆಗೆ ವಿರಾಜಪೇಟೆ ನಗರದಲ್ಲಿ ಬರೆ ಕುಸಿದಿದೆ.…

Read More

ಮಡಿಕೇರಿ ಜು.1 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ಈಗಾಗಲೇ ಮುಸುಕಿನ ಜೋಳ ಬಿತ್ತನೆ ಕಾರ್ಯವು 77 ಹೆಕ್ಟೇರ್ ಪ್ರದೇಶದಲ್ಲಿ ಪೂರ್ಣಗೊಂಡಿದೆ. ಹಾಗೆಯೇ ಭತ್ತ ಸಸಿಮಡಿ ಕಾರ್ಯ ಆರಂಭವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ 138 ಮಿ.ಮೀ.ವಾಡಿಕೆ ಮಳೆಗೆ 280 ಮಿ.ಮೀ. ಮಳೆಯಾಗಿದ್ದು, ಶೇ.102 ರಷ್ಟು ಮಳೆಯಾಗಿತ್ತು. ಜೂನ್ ತಿಂಗಳಲ್ಲಿ 534 ಮಿ.ಮೀ. ವಾಡಿಕೆ ಮಳೆಗೆ 435 ಮಿ.ಮೀ. ಮಳೆಯಾಗಿದ್ದು, ಶೇ.18 ರಷ್ಟು ಮಳೆ ಕಡಿಮೆಯಾಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ವಾಡಿಕೆ ಮಳೆ 786 ಮಿ.ಮೀ. ಆಗಿದ್ದು, ಈ ಬಾರಿ 775 ಮಿ.ಮೀ. ಮಳೆಯಾಗಿದ್ದು, ಶೇ.4 ರಷ್ಟು ಮಾತ್ರ ಮಳೆ ಕಡಿಮೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಗತಿಯಲ್ಲಿರುತ್ತದೆ,…

Read More

ಮಡಿಕೇರಿ ಜು.1 NEWS DESK : ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ವಾಣಿಜ್ಯ ದುರುದ್ದೇಶಕ್ಕಾಗಿ ಆದಿಮಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಕಪ್ಪು ಹಣ ಚಲಾವಣೆಯಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್‍ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ವಿಶ್ವದಾದ್ಯಂತ ಇರುವ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡಲು ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ರೆಸಾರ್ಟ್ ವ್ಯವಹಾರ ದೊಡ್ಡ ಮಟ್ಟದಲ್ಲಿ ನಡೆಯದಿದ್ದರೂ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಾಡಲಾಗುತ್ತಿದೆ. ನಷ್ಟ ತೋರಿಸುವುದಕ್ಕಾಗಿ ರೆಸಾರ್ಟ್‍ಗಳನ್ನು ನಿರ್ಮಿಸುತ್ತಿದ್ದು, ಕಪ್ಪು ಹಣವನ್ನು ಚಲಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.…

Read More

ಮಡಿಕೇರಿ ಜು.1 NEWS DESK : ರಾಜ್ಯದಲ್ಲಿ ಕನ್ನಡಿಗರಿಗೆ ಎಲ್ಲಾ ಮಾದರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಟಿ.ಎ.ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಕರವೇ ಜಿಲ್ಲಾಧ್ಯಕ್ಷ ಕೆ.ಎಸ್.ದೀಪಕ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಪ್ರದೀಪ್ ಕರ್ಕೇರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳ ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಹೊರರಾಜ್ಯದಿಂದ ಬಂದು ನೆಲೆಸಿರುವವರಿಗೆ ಸಿಗುವ ಉದ್ಯೋಗ ಮಾನ್ಯತೆ ಕನ್ನಡಿಗರಿಗೆ ಇಲ್ಲದಂತಾಗಿದೆ.ಇದರಿಂದ ನಾಡಿನ ಜನತೆ ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿದೆ ಎಂದರು. ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರಿಗೆ ಸಲ್ಲಿಸಿದರು.

Read More

ಮಡಿಕೇರಿ ಜು.1 NEWS DESK : ಪ್ರಸ್ತುತ ದಿನಮಾನಗಳಲ್ಲಿ ಸಮಾಜಕ್ಕೆ ಹಿತವಿಲ್ಲದ ವಿಚಾರಗಳ ಸುತ್ತಲೆ ಮಾಧ್ಯಮಗಳು ಸುತ್ತುತ್ತಿದ್ದು, ಇವುಗಳನ್ನು ಮೀರಿ ಜನ ಹಿತದ ವಿಚಾರಗಳು ಆದ್ಯತೆಯಾಗಿರಲೆಂದು ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ಕೆಲ ಸಮಯಗಳಿಂದ ದೃಶ್ಯ ವಾಹಿನಿಗಳು ಒಂದು ಸಾವಿಗೆ ಸಂಬಂಧಿಸಿದ ಸಣ್ಣ ಸಣ್ಣ ವಿಚಾರಗಳಿಗೆ ಗಂಟೆಗಟ್ಟಲೆ ಸಮಯವನ್ನು ವಿನಿಯೋಗಿಸುತ್ತಿವೆ. ಇವುಗಳನ್ನು ಮೀರಿ ನಮ್ಮ ಸುತ್ತಮುತ್ತಲ ಜನ ಸಾಮಾನ್ಯರ ದುಃಖ ದುಮ್ಮಾನಗಳಿಗೆ ಸ್ಪಂದಿಸುವ, ನಮ್ಮಲ್ಲಿನ ಕೃಷಿ ಚಟುವಟಿಕೆ, ಹಸಿವಿನ ವಿಚಾರಗಳಿಗೆ ನಾವೇಕೆ ಆದ್ಯತೆಯನ್ನು ನೀಡುತ್ತಿಲ್ಲವೆಂದು ಅವರು ಪ್ರಶ್ನಿಸಿದರು. ಪತ್ರಿಕಾ ಕ್ಷೇತ ‘ದೀಪ’ದ ಕೆಲಸ ಮಾಡಲಿ- ಸಮಾಜ ಸರಿಯಾದ ಪಥದಲ್ಲಿ ಸಾಗುವುದಕ್ಕೆ ಪೂರಕವಾಗಿ ಪತ್ರಿಕಾ ಕ್ಷೇತ್ರವು ದಾರಿ…

Read More

ಮಡಿಕೇರಿ ಜು.1 NEWS DESK : ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕೊಡಗು ಟ್ರೆಡಿಷನಲ್ ಶೊಟೊಕಾನ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು 3 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಸಂಸ್ಥೆಯ ಶರನ್ನಿ ಎ.ಶೆಟ್ಟಿ ಚಿನ್ನ ಹಾಗೂ ಬೆಳ್ಳಿ ಪದಕ, ಸಮನ್ವಿ, ಲಿವಿನ್ ಚಿನ್ನದ ಪದಕ ಹಾಗೂ ಚಿಂತನ್, ಲಿವಿನ್, ಜಸ್ವಿನ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ. 

Read More

ಮಡಿಕೇರಿ ಜು.1 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳ ಒಕ್ಕೂಟ “ಅವಿನ್ಯಂ” ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ “ಕೆರಿಯರ್ ಕ್ರಾಫ್ಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಶುಪಾಲರಾದ ಡಾ. ಎಂ.ಬಸವರಾಜ್, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಗಳಲ್ಲಿ ಭಾಗವಹಿಸುವಾಗ ಆತ್ಮವಿಶ್ವಾಸವು ಹೆಚ್ಚುತ್ತದೆ ಎಂದರು. ಈ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ತಮ್ಮ ಕೌಶಲ್ಯಾಭಿವೃದ್ಧಿಗಾಗಿ ಬಳಸುವಂತೆ ಸಲಹೆ ನೀಡಿದರು. ಮೈಸೂರಿನ ಜೆ.ಕೆ.ಟಯರ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಕಲ್ಪ ಪೂಣಚ್ಚ ವಿದ್ಯಾರ್ಥಿಗಳಿಗೆ ಅಣುಕು ಸಂದರ್ಶನಗಳನ್ನು ಮಾಡುವುದರ ಮೂಲಕ ಹೇಗೆ ಸಂದರ್ಶನಗಳಲ್ಲಿ ಭಾಗವಹಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಎಐ ಎಂಡ್ ಎಂಎಲ್ ವಿಭಾಗ ಮುಖ್ಯಸ್ಥರಾದ ಡಾ. ಬಿ.ಬಿ.ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಕಾರ್ಯಾಗಾರವನ್ನು ಸಂಪೂರ್ಣವಾಗಿ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಬಳಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗೀಯ ಮುಖ್ಯಸ್ಥರುಗಳು, ಪ್ರಾದ್ಯಾಪಕ ವೃಂದದವರು ಹಾಜರಿದ್ದರು. ವಿಭಾಗದ ಸಹಾಯಕ ಪ್ರಾಧ್ಯಾಪಕ…

Read More

ಮಡಿಕೇರಿ ಜು.1 NEWS DESK : ಮಹಾಮೈತ್ರಿ ಬುದ್ಧ ವಿಹಾರ ಸ್ಥಾಪಿಸಲು ಮಾನವ ಬಂಧುತ್ವ ವೇದಿಕೆ, ದಲಿತ ಸಂಘಟನೆಗಳು ಹಾಗೂ ಗೌತಮ ಬುದ್ಧನ ಅನುಯಾಯಿಗಳು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಮಾದ್ರೆ ದಂಡಳ್ಳಿ ಗ್ರಾಮದಲ್ಲಿ ಜಾಗ ಗುರುತಿಸಿದ್ದಾರೆ. ಸಂಘಟನೆಗಳ ಪ್ರಮುಖರು ಹಾಗೂ ಸದಸ್ಯರು ಉದ್ದೇಶಿತ ಜಾಗದಲ್ಲಿ ಶ್ರಮದಾನ ನಡೆಸಿ ಸ್ವಚ್ಛತಾ ಕಾರ್ಯ ಕೈಗೊಂಡರು. ನಂತರ “ಮಹಾಮೈತ್ರಿ ಬುದ್ಧ ವಿಹಾರ” ಫಲಕವನ್ನು ಅಳವಡಿಸಿದರು. ಈ ಸಂದರ್ಭ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್, ಬಹುನಿರೀಕ್ಷಿತ ಯೋಜನೆ ಹಲವು ವರ್ಷಗಳ ನಂತರ ಕೈಗೂಡುತ್ತಿದ್ದು, ಬುದ್ಧನ ಅನುಯಾಯಿಗಳಿಗೆ ಹರ್ಷ ತಂದಿದೆ. ಜಿಲ್ಲಾಧಿಕಾರಿಗಳು ಜಾಗವನ್ನು ಬುದ್ಧ ವಿಹಾರಕ್ಕೆ ಹಸ್ತಾಂತರಿಸಿದ ನಂತರ ಸುವ್ಯವಸ್ಥಿತ ವಿಹಾರಧಾಮ ನಿರ್ಮಾಣ ಮಾಡಲಾಗುವುದು ಮತ್ತು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಜಿಲ್ಲಾ ದಲಿತ ಸಂಘಟನೆಗಳ ಚಾಲನಾ ಸಮಿತಿಯ ಸಂಚಾಲಕ ಜೆ.ಆರ್.ಪಾಲಾಕ್ಷ ಮಾತನಾಡಿ ಈಗ ಗುರುತಿಸಿರುವ ಜಾಗದಲ್ಲಿ ಮಾನವ ಬಂಧುತ್ವ ವೇದಿಕೆ, ದಲಿತ ಸಂಘಟನೆಗಳು ಹಾಗೂ ಗೌತಮ ಬುದ್ಧನ ಅನುಯಾಯಿಗಳು…

Read More

ಮಡಿಕೇರಿ ಜು.1 NEWS DESK (ಲೇಖನ: ಟಿ.ಜಿ.ಪ್ರೇಮಕುಮಾರ್) : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನಾವೆಲ್ಲರೂ ಜತೆಗೂಡಿ ನಮ್ಮ ಸುತ್ತಲಿನ ಪ್ರದೇಶದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಅವುಗಳನ್ನು ಪೋಷಿಸುವ ಮೂಲಕ ನಮ್ಮ ಕರ್ತವ್ಯ ಪಾಲನೆ ಮಾಡಬೇಕಿದೆ. ವನ ಮಹೋತ್ಸವ ಸಪ್ತಾಹ : ಪ್ರತಿ ವರ್ಷ ಜುಲೈ 1 ರಂದು ವನ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಜುಲೈ 1 ರಿಂದ ಒಂದು ವಾರ ಕಾಲ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯವನ್ನು ವನ ಮಹೋತ್ಸವ ಸಪ್ತಾಹ ಎಂದು ಆಚರಿಸಲಾಗುತ್ತದೆ. ವನ ಮಹೋತ್ಸವದ ಮಹತ್ವವು ಮುಖ್ಯವಾಗಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಸಂಸ್ಕೃತಿಯನ್ನು ಉತ್ತೇಜಿಸುವ ಹಬ್ಬವಾಗಿದೆ. ನಾವು ಮತ್ತು ನಮ್ಮ ಅಭಿವೃದ್ಧಿ ಹೊಂದಬೇಕಾದರೆ, ಕಾಡುಗಳಲ್ಲಿನ ಸಸ್ಯ ಮತ್ತು ಪ್ರಾಣಿಗಳು ಉಳಿಸಲು ಪಣ ತೊಡಬೇಕು. ನಾವು 3R ನಿಯಮವನ್ನು ಅಭ್ಯಾಸ ಮಾಡಬಹುದು. (R: Reduce,R: Re use & R: Recycle: ಕಡಿಮೆ ಮಾಡುವುದು, ಮರು ಬಳಕೆ, ಪುನರ್ ಬಳಕೆ ಮಾಡುವುದು ). 3R ನಿಯಮವನ್ನು…

Read More