ಲೇಖಕ: admin

ಮಡಿಕೇರಿ ಜೂ.28 NEWS DESK : ಕೊಡಗು ಸೈನಿಕ ಶಾಲೆಗೆ ನವದೆಹಲಿ ರಕ್ಷಣಾ ಸಚಿವಾಲಯ (ಸೇನಾ ವಿಭಾಗ)ದ ಕೇಂದ್ರ ಕಚೇರಿಯ ನೇಮಕಾತಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ನವನೀತ್ ಸಿಂಗ್ ಸರ್ನಾ (ಎ.ವಿ.ಎಸ್.ಎಂ, ಎಸ್.ಎಂ.ವಿ.ಎಸ್.ಎಂ) ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಪ್ರೇರಣಾತ್ಮಕ ಸಂವಾದ ನಡೆಸಿದರು. ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಶಸ್ತ್ರ ಪಡೆಗಳಲ್ಲಿ ವೃತ್ತಿಜೀವನವದ ಆಯ್ಕೆ ಮಾಡಿಕೊಳ್ಳುವ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಸಮಗ್ರವಾದ ಮಾಹಿತಿಯನ್ನು ನೀಡುವುದರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಗಳನ್ನು ತಲುಪುವವರೆಗೂ ಉತ್ಸಾಹದಿಂದ, ಅವಿರತವಾಗಿ ಕಾರ್ಯನಿರತರಾಗಿರಬೇಕೆಂದು ಕರೆ ನೀಡಿದರು. ಯು.ಪಿ.ಎಸ್.ಸಿ, ಎನ್.ಡಿ.ಎ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳ ಸೇರ್ಪಡೆಗೆ ಅತ್ಯವಶ್ಯಕವಾಗಿ ನಡೆಸಬೇಕಾದ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು. ಭಾರತೀಯ ರಕ್ಷಣಾ ಪಡೆಗಳ ವಿವಿಧ ವಿಭಾಗಗಳು, ಶ್ರೇಣಿಯ ರಚನೆ ಮತ್ತು ಭಾರತೀಯ ಸಶಸ್ತ್ರ ಪಡೆಗಳು ನೀಡುತ್ತಿರುವ ಸಾಹಸ ಚಟುವಟಿಕೆಗಳ ಹಾಗೂ ಕಾರ್ಯವಿಧಾನಗಳ ತಂತ್ರಗಳ ಸರಣಿಯ ಕುರಿತು ಮಾರ್ಗದರ್ಶನ ನೀಡಿದರು. ರಕ್ಷಣಾ ಪಡೆಗಳಲ್ಲಿ…

Read More

ಮಡಿಕೇರಿ ಜೂ.28 NEWS DESK : ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ನೇರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್‍ಟಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಟಿ ಮೋರ್ಚಾದ ಪ್ರಮುಖರು, ಮಾಜಿ ಶಾಸಕರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ವಿಳಂಬ ಮಾಡುತ್ತಿದೆ. ಆರೋಪ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಅಧಿಕಾರಿಗಳನ್ನು ಹೊಣೆ ಮಾಡಿ ತನಿಖೆ ನಡೆಸಲಾಗುತ್ತಿದೆ. ಇದು ಹಗರಣವನ್ನು ಮುಚ್ಚಿ ಹಾಕುವ ಹುನ್ನಾರವಾಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ…

Read More

ವಿರಾಜಪೇಟೆ ಜೂ.28 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ಕೆದಮುಳ್ಳೂರು ವಲಯ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದಲ್ಲಿ ಈಶ್ವರ ಮತ್ತು ಚಾಮುಂಡಿ ದೇವರ ದೇವಾಲಯದಲ್ಲಿ ವಲಯ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಶಾಸಕರ ಧೀರ್ಘಾಯುಷ್ಯ ಮತ್ತು ಅಭಿವೃದ್ದಿ ಕಾರ್ಯಗಳು ಉತ್ತಮವಾಗಿ ನಡೆಯಲಿದೆ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಕೆದಮುಳ್ಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ನಡಿಕೇರಿಯಂಡ ಮಹೇಶ್ ಮಾತನಾಡಿ, ಪ್ರತಿಭಟನೆ ಸಂದರ್ಭ ಶಾಸಕರ ಪ್ರತಿಕೃತಿ ದಹನ ಮಾಡಿರುವುದು ಖಂಡನೀಯ. ಪ್ರತಿಭಟನೆಯನ್ನು ಮುಂದಿಟ್ಟುಕೊಂಡು ಇಂತಹ ಕಾರ್ಯಕ್ಕೆ ಯಾವುದೇ ರಾಜಕೀಯ ಪಕ್ಷಗಳು ಮುಂದಾಗಬಾರದು. ಶಾಸಕರಾಗಿ ಆಯ್ಕೆಗೊಂಡು ಒಂದು ವರ್ಷದ ಅವಧಿಯಲ್ಲಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು ಸೇರಿದಂತೆ ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ ಎಂದರು. ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷ ಮಾಳೆಟೀರ ಜೇಫ್ರಿ ಉತ್ತಪ್ಪ, ಸದಸ್ಯರಾದ ಮಾಳೆಟೀರ ಪ್ರಶಾಂತ್ ಉತ್ತಪ್ಪ, ಡಿ.ಸಿ.ಸಿ ಸದಸ್ಯರಾದ ಬೆಲ್ಲು ಬೋಪಯ್ಯ,…

Read More

ಮಡಿಕೇರಿ ಜೂ.28 NEWS DESK : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನಲ್ಲಿ (ದಿನಾಂಕ:01.01.2022 ರಿಂದ 31.12.2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ:01.01.2023 ರಿಂದ 31.12.2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತು ಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ದಿನಾಂಕ:20-07-2024ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. 

Read More

ಮಡಿಕೇರಿ ಜೂ.28 NEWS DESK : ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ರಾಜಾಸೀಟು ಪ್ರವೇಶ ದ್ವಾರದ ಟಿಕೆಟ್ ಕೌಂಟರ್ ಬಳಿ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸೆಲ್ಟರ್ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡದರು. ರಾಜಾಸೀಟನ್ನು ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರೇಟರ್ ರಾಜಾಸೀಟು ಅಭಿವೃದ್ಧಿ ಸಂಬಂಧ ಬಾಕಿ ಇರುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಬೇಕು. ಅಗತ್ಯ ಇರುವ ಕಡೆ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ನಗರಸಭೆಯಿಂದ ನೀರು ಸಂಪರ್ಕ ಪಡೆಯುವುದು ಸೇರಿದಂತೆ ಅಗತ್ಯ ಕ್ರಮವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೀಶ್ ಮಾತನಾಡಿ, ರಾಜಾಸೀಟು, ಕೂರ್ಗ್ ವಿಲೇಜ್ ಅಭಿವೃದ್ಧಿ ಜೊತೆಗೆ ಗದ್ದುಗೆ ಉದ್ಯಾನವನ ಹಾಗೂ ನೆಹರು…

Read More

ಮಡಿಕೇರಿ ಜೂ.28 NEWS DESK : ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಕಳೆದ ಬಾರಿಗಿಂತ ಈ ಬಾರಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರಿಗೂ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟೈ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೋರಿದರು. ಮನೆಯಲ್ಲಿನ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರಲ್, ಫಾಟ್, ತೆಂಗಿನ ಚಿಪ್ಪು ಸೇರಿದಂತೆ ಇತರೆ ಕಡೆಗಳಲ್ಲಿ ನೀರು ಶೇಖರಣೆಯಾಗದಂತೆ ಗಮನಹರಿಸಬೇಕು. ತೊಟ್ಟಿ, ಡ್ರಮ್, ಬಕೆಟ್‍ಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆಯ ಮೊಟ್ಟೆಗಳು ನೀರಿಲ್ಲದಿದ್ದರೂ ಒಂದು ವರ್ಷದವರೆಗೆ ಬದುಕಲಿವೆ. ಆದ್ದರಿಂದ ವಾರಕ್ಕೊಮ್ಮೆಯಾದರೂ ಸ್ವಚ್ಚಗೊಳಿಸಬೇಕು ಎಂದು ಸತೀಶ್ ಕುಮಾರ್ ಕರೆ ನೀಡಿದರು. ಡೆಂಗ್ಯೂ ಜ್ವರವು ಹಗಲು ಹೊತ್ತಿನಲ್ಲಿ ಈಡಿಸ್ ಈಜಿಪ್ಟೈ…

Read More

ಮಡಿಕೇರಿ ಜೂ.28 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜು.7 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆಥ್ರ್ರೋಸ್ಕೋಫಿ ಮತ್ತು ಸ್ಪೋಟ್ರ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್‍ಎನ್‍ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್) ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.

Read More

ಸುಂಟಿಕೊಪ್ಪ ಜೂ.28 NEWS DESK : ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಚೇರಳ-ಶ್ರೀಮಂಗಲದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಫಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಗ್ರಾಮದ ನಿವಾಸಿ ಹೊಸಮನೆ ಪೂವಯ್ಯ ಅವರ ತೋಟಕ್ಕೆ ನುಗ್ಗಿರುವ 4 ಕಾಡಾನೆಗಳ ಹಿಂಡು ಅಡಿಕೆ, ಕಾಫಿಗಿಡಗಳನ್ನು ಧ್ವಂಸಗೊಳಿಸಿದೆ. ಪ್ರತೀ ವರ್ಷ ಆನೆದಾಳಿಯಿಂದ ರೈತರು ಕಂಗಾಲಾಗಿದ್ದು, ಕಾಫಿ ತೋಟಗಳಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳು ಭಯಪಡುವಂತಾಗಿದೆ. ಅರಣ್ಯ ಅಧಿಕಾರಿಗಳು ಆನೆಗಳನ್ನು ಕಾಡಿಗಟ್ಟಬೇಕು ಮತ್ತು ಆನೆ ಕಂದಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದ ಗ್ರಾಮಸ್ಥರು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. 

Read More

ಸುಂಟಿಕೊಪ್ಪ ಜೂ.28 NEWS DESK : 7ನೇ ಹೊಸಕೋಟೆ ಯುವಕನೋರ್ವ ಸೈಕಲ್ ಮೂಲಕ 31 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರತಿ ಜಿಲ್ಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು. 7ನೇ ಹೊಸಕೋಟೆಯ ನಿವಾಸಿ ಪ್ರಶಾಂತ್ ಬೈಸಿಕಲ್ ಮೂಲಕ ಸಂಚರಿಸಿ ರಾಜ್ಯದ 31 ಜಿಲ್ಲೆಗಳಿಗೆ 26 ದಿನಗಳಲ್ಲಿ ತೆರಳಿ ಪ್ರತೀ ಜಿಲ್ಲೆಯಲ್ಲಿ ಒಂದೊಂದು ಗಿಡವನ್ನು ನೆಡುವ ಮೂಲಕ ನೆಲ-ಜಲ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಪ್ರಶಾಂತ್ 7ನೇ ಹೊಸಕೋಟೆ ಗ್ರಾಮದ ಸುರೇಶ ಹಾಗೂ ಉಷಾ ದಂಪತಿಗಳ ಪುತ್ರ. 

Read More

ಮಡಿಕೇರಿ ಜೂ.28 NEWS DESK : ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯು ದಾನಿಗಳಾದ ಬಸವನಕೊಪ್ಪ ಮಹೇಂದ್ರ ಕುಮಾರ್  ಸಹಕಾರದೊಂದಿಗೆ ವಿತರಿಸಿದರು. ಈ ಸಂದರ್ಭ ಶಾಲೆಯ ಶಿಕ್ಷಕರು, ದಾನಿಗಳು ಹಾಜರಿದ್ದರು.

Read More