ಮಡಿಕೇರಿ ಜು.9 NEWS DESK : ದೃಶ್ಯ ಹಾಗೂ ಛಾಯಾ ಚಿತ್ರೀಕರಣದಲ್ಲಿ ಪರಿಣಿತರಾಗಿರುವ ಪಾಲಿಬೆಟ್ಟದ ಆರ್.ಜಾನ್ ಅವರು ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ ಪೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದ ಮೈಕಲ್ ಸ್ಟುಡಿಯೋ ಮಾಲೀಕ ಆರ್.ಜಾನ್ ಅವರಿಗೆ ಕರ್ನಾಟಕ ಛಾಯಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗಣ್ಯರು ಗೌರವಿಸಿದ್ದಾರೆ. ದಕ್ಷಿಣ ಕೊಡಗಿನಿಂದ ರಾಜ್ಯ ಮಟ್ಟದ ಛಾಯಾ ರತ್ನ ಪ್ರಶಸ್ತಿ ಗೆ ಭಾಜನರಾದ ಜಾನ್ ಅವರನ್ನ ದಕ್ಷಿಣ ಕೊಡಗು ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಅಭಿನಂದಿಸಿದ್ದಾರೆ. ಸಮಾರಂಭದಲ್ಲಿ ಉಪಾಧ್ಯಕ್ಷ ಶರತ್, ಕಾರ್ಯದರ್ಶಿ ರಾಮದಾಸ್, ಗೌರವ ಅಧ್ಯಕ್ಷ ದಾಡು ಜೋಸೆಫ್, ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ಪಾಲಿಬೆಟ್ಟ ಮೈಕಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಸೇಂಟ್ ಆನ್ಸ್ ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಡಿಡಿಎ ಅಧ್ಯಕ್ಷ ಜೋಸೆಫ್ ಸ್ಯಾಮ್ ಪಾಲ್ಗೊಂಡು ಸರ್ಕಾರ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಿವುಡರ ಸಂಘಕ್ಕೆ ಅಪಾರ ಸೇವೆಸಲ್ಲಿಸಿದ ಹಿರಿಯ ಸದಸ್ಯ ಪ್ರಕಾಶ್, ರಾಜಮಣಿ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಜೆ.ವಿ.ಮಹೇಶ್ ವರ್ಮ, ಡಿ.ಡಿ.ಡಬ್ಲ್ಯೂ ಅಧಿಕಾರಿ ಸಿ.ಪ್ರದಾನ್, ಜಿಲ್ಲಾ ಕಾರ್ಯದರ್ಶಿ ರಂಜಿತ್, ಉಪಾಧ್ಯಕ್ಷ ಶಂಕರ ನಾರಾಯಣ, ಖಜಾಂಚಿ ಸುರೇಶ್ ಸೇರಿದಂತೆ ಮತ್ತಿತರ ಸದಸ್ಯರು ಹಾಜರಿದ್ದರು. ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿ ರಂಜಿತ್ ವಾರ್ಷಿಕ ವರದಿಯನ್ನು ಓದಿದರು. ಸುರೇಶ್ ವರ್ಮಾ ನಿರೂಪಿಸಿ, ವಂದಿಸಿದರು.
ಬೆಂಗಳೂರು ಜು.9 NEWS DESK : ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ 320 ಕಿ.ಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ, ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ…
ಮಡಿಕೇರಿ ಜು.9 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 50ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮೇಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಹಾಕತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಮೇಕೇರಿ ಗ್ರಾ.ಪಂ ಹಾಲಿ ಸದಸ್ಯ ಎಂ.ಯು.ಹನೀಫ್ ಮಾತನಾಡಿ ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನವನ್ನು ಅರ್ಥಪೂರ್ಣಗೊಳಿಸುವ ಉದ್ದೇಶದಿಂದ ಸ್ವಚ್ಛತಾ ಶ್ರಮದಾನದ ಮೂಲಕ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು. ಇದೇ ಸಂದರ್ಭ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಜನ್ಮದಿನದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಪಂಚಾಯಿತಿ ಸದಸ್ಯ ಕೀರ್ತನ್ ಕಾಂಗೀರ, ಕಾಂಗ್ರೆಸ್ ವಲಯ ಕಾರ್ಯದರ್ಶಿ ಎಂ.ಯು.ರಫೀಕ್ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.9 NEWS DESK : ಕರ್ನಾಟಕದ ಪ್ರಸಿದ್ಧ ಆಟೋಮೊಬೈಲ್ ಡೀಲರ್ ಗಳಲ್ಲಿ ಒಂದಾಗಿರುವಂತ ಬೆಂಗಳೂರಿನ ಟ್ರೈಡೆಂಟ್ ಟ್ರಕಿಂಗ್( ಭಾರತ್ ಬೆಂಜ್) ವತಿಯಿಂದ ಭಾಗಮಂಡಲದ ಕೆವಿಜಿ ಐಟಿಐನಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಿತು. ಕಂಪನಿಯ ಹೆಚ್.ಆರ್. ಕಮಲಾಕರ್ ಕಂಪನಿಯ ಕುರಿತು ಮತ್ತು ಉದ್ಯೋಗಿಗಳಿಗಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಭಾರತ್ ಬೆಂಜ್ ಮೈಸೂರು ಶಾಖೆಯ ವರ್ಕ್ಸ್ ಮ್ಯಾನೇಜರ್ ನವನೀತ್ ಮತ್ತು ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಶಿವಕುಮಾರ್ ಉದ್ಯೋಗಿಗಳಿಗೆ ಸಂಸ್ಥೆಯಲ್ಲಿ ಇರುವಂತಹ ಅವಕಾಶಗಳ ಬಗ್ಗೆ ವಿವರಿಸಿದರು. ಈ ಸಂದರ್ಭಭಾರತ ಬೆಂಜಿನ ಉದ್ಯೋಗಿಗಳಾಗಿರುವ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಚಂದ್ರಶೇಖರ್, ಪ್ರಸನ್ನ ಮತ್ತು ಪ್ಲೇಸ್ಮೆಂಟ್ ಆಫೀಸರ್ ಕೆ.ಸಿ. ಉದಯಕುಮಾರ್ ಹಾಜರಿದ್ದರು. ಎಂಎಂವಿ ವೃತ್ತಿ ವಿಭಾಗದ ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದರು.
ಮಡಿಕೇರಿ ಜು.9 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ 50ನೇ ಜನ್ಮದಿನಾಚರಣೆ ಪ್ರಯುಕ್ತ ಅಯ್ಯಂಗೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಚ್ಚತಾ ಅಭಿಯಾನ ನಡೆಯಿತು. ಅಯ್ಯಂಗೇರಿ ಗ್ರಾ.ಪಂ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಆಚೀರ ಕಾವೇರಮ್ಮ ಹಾಗೂ ಅಯ್ಯಂಗೇರಿ ಗ್ರಾಮದ ಕಾಂಗ್ರೇಸ್ ವಲಯ ಅಧ್ಯಕ್ಷ ಎಂ.ಎಂ.ಮೊಹಮ್ಮದ್ ಭಾಗವಹಿಸಿದ್ದರು.
ಸೋಮವಾರಪೇಟೆ ಜು.8 NEWS DESK : ನೇರುಗಳಲೆ ಸರ್ಕಾರಿ ಶಾಲೆಯಲ್ಲಿ ಆರಂಭಗೊಂಡಿರುವ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕೆ ನೂತನ ಶಾಲಾ ಬಸ್ ಸೇವೆಗೆ ಸಮಿತಿಯ ವತಿಯಿಂದ ಚಾಲನೆ ನೀಡಲಾಯಿತು. ಶಾಲೆಗೆ ಸುತ್ತಮುತ್ತಲ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಸಮಸ್ಯೆಯಾಗಿತ್ತು. ಇದನ್ನು ಮನಗಂಡ ಶಾಲಾ ಸಮಿತಿಯವರು ರೂ. 4ಲಕ್ಷ ವೆಚ್ಚದಲ್ಲಿ ಮಿನಿ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಶಾಲಾ ಆವರಣದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭ ಸಮಿತಿ ಅಧ್ಯಕ್ಷ ಬೋಜೇಗೌಡ, ಗೌರವ ಸಲಹೆಗಾರ ಎಸ್.ಎಂ.ಡಿಸಿಲ್ವಾ, ವಿ.ಎಂ.ವಿಜಯ, ವಿ.ಎಂ.ಶಿವದಾಸ್, ವಿನೋದ್‍ಕುಮಾರ್, ನಿರ್ದೇಶಕರುಗಳಾದ ಗಿರೀಶ್ ಮಲ್ಲಪ್ಪ, ಕೆ.ಆರ್.ಕಿರಣ್, ಎ.ಜಿ.ಅಜಿತ್, ಕಾರ್ಯದರ್ಶಿ ಸಂಭ್ರಮ್, ಖಜಾಂಚಿ ಎ.ಹೆಚ್.ತಿಮ್ಮಯ್ಯ, ಉಪಾಧ್ಯಕ್ಷರುಗಳಾದ ಪುಷ್ಪಾವತಿ, ಶೈಲಾ, ಪಿಡಿಓ ಗಣೇಶ್ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರು ಇದ್ದರು.
ಮಡಿಕೇರಿ ಜು.8 NEWS DESK : ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಮಡಿಕೇರಿ ನಗರದಲ್ಲಿರುವ ಭಿಕ್ಷುಕರಿಗೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ವೆಟರ್ ವಿತರಿಸಲಾಯಿತು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೊಡಗು ಜಿಲ್ಲಾ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಮಹಿಳಾ ಜಿಲ್ಲಾ ಸಂಚಾಲಕಿ ಪ್ರೇಮ, ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಎಲ್.ಕುಮಾರ್ ಹಾಗೂ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ನಿರ್ಗತಿಕರಿಗೆ ಸ್ವೇಟರ್ ವಿತರಿಸಿ, ಶಾಸಕ ಪೊನ್ನಣ್ಣ ಅವರ ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲೆಂದು ಶುಭಹಾರೈಸಿದರು.
ಕುಶಾಲನಗರ ಜು.9 NEWS DESK : ಕುಶಾಲನಗರದ ಖ್ಯಾತ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 60ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ ಗಣಪತಿ ( ಕೊಡಗರಮ್ಮ ) ಅವರನ್ನು ಕಾಯಕ ರತ್ನ ಪ್ರಶಸ್ತಿ – 2024 ಕ್ಕೆ ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ.ಹುಲಿಕಲ್ ನಟರಾಜ್ ತಿಳಿಸಿದ್ದಾರೆ. ಈ ತಿಂಗಳ 13 ರಂದು ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯದ ಒಟ್ಟು 35 ಮಂದಿ ಸಾಧಕರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲೆ ಅಧ್ಯಕ್ಷೆ ವನಿತಾ ಚಂದ್ರಮೋಹನ್…
ನಾಪೋಕ್ಲು ಜು.9 NEWS DESK : ನಾಪೋಕ್ಲು – ಭಾಗಮಂಡಲ ಮುಖ್ಯರಸ್ತೆಯ ಚೋನಕೆರೆ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಮುರಿದುಬಿದ್ದ ಪರಿಣಾಮ ಸಂಚಾರಕ್ಕೆ ಅಡ್ಡಿ ಉಂಟಾಯಿತು. ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಹನಗಳು ಕುರುಳಿ -ಎಮ್ಮೆ ಮಾಡು ಮುಖಾಂತರ ಬಳಸು ರಸ್ತೆಯಲ್ಲಿ ಸಾಗಿದವು. ಬಲ್ಲಮಾವಟಿ ಗ್ರಾ.ಪಂ ಮಾಜಿ ಅಧ್ಯಕ್ಷ ಮಣವಟ್ಟಿರ ಕುಶಾಲಪ್ಪ , ನಾಪೋಕ್ಲು ಗ್ರಾ.ಪಂ ಸದಸ್ಯ ಮಾಚೇಟಿರ ಕುಶು ಕುಶಾಲಪ್ಪ, ಅರಣ್ಯ ಇಲಾಖೆಯ ಸಿಬ್ಬಂದಿ ಕಾಳೇಗೌಡ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡು ರಸ್ತೆ ಗಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಸಂಜೆಯ ವೇಳೆಗೆ ಮರವನ್ನು ತೆರವುಗೊಳಿಸಲಾಯಿತು. ವರದಿ : ದುಗ್ಗಳ ಸದಾನಂದ






