ಲೇಖಕ: admin

ಮಡಿಕೇರಿ ಜು.8 NEWS DESK : ಮಡಿಕೇರಿ ನಗರ ವ್ಯಾಪ್ತಿಯ ದುಸ್ಥಿತಿಯಲ್ಲಿರುವ ಬಸ್ ತಂಗುದಾಣಗಳನ್ನು ಆಧುನೀಕರಣಗೊಳಿಸಲು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರಸಭೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಜನರಲ್ ತಿಮ್ಮಯ್ಯ ವೃತ್ತ, ಜಿಲ್ಲಾ ಆಸ್ಪತ್ರೆ, ಚೈನ್ ಗೇಟ್, ಮೂರ್ನಾಡು ರಸ್ತೆ, ಮಂಗಳೂರು ರಸ್ತೆಯ ಬಸ್ ತಂಗುದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ತ್ವರಿತಗತಿಯಲ್ಲಿ ಹೈ ಟೆಕ್ ತಂಗುದಾಣಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚೈನ್ ಗೇಟ್ ಬಳಿ ಇದ್ದ ತಂಗುದಾಣ ಕೆಡವಿದ ಸ್ಥಳದಿಂದ ಸ್ವಲ್ಪ ಮುಂದಕ್ಕೆ ಸುರಕ್ಷಿತ ಮತ್ತು ಸುಸಜ್ಜಿತ ಬಸ್ ತಂಗುದಾಣ ನಿರ್ಮಾಣಕ್ಕೆ ಸೂಚನೆ ನೀಡಿದರು. ಮೂರ್ನಾಡು ರಸ್ತೆಯಲ್ಲಿನ ಶೌಚಾಲಯ ವೀಕ್ಷಣೆ ಮಾಡಿದ ಶಾಸಕರು 20 ಲಕ್ಷ ರೂ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನಕಾಶೆ ಮತ್ತು ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು. ಈ ಸಂಧರ್ಭ ಮಡಿಕೇರಿ ನಗರಸಭೆ ಪೌರಾಯುಕ್ತ ವಿಜಯ್,…

Read More

  ಸುಂಟಿಕೊಪ್ಪ ಜು.8 NEWS DESK : ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಪ್ರಸ್ತುತ ಸನ್ನಿವೇಶದಲ್ಲಿ ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿ, ಪರಿಸರ ಸಂರಕ್ಷಣೆಯು ನಮ್ಮೆಲ್ಲಾರ ಆದ್ಯ ಕರ್ತವ್ಯವಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದರು. ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ -2024 ರ ಘೋಷವಾಕ್ಯವಾದ “ಭುಮಿಯ ಪುನರತ್ತಾನ ಹಾಗೂ ಮರುಭುಮಿ ತಡೆಗಟುವಿಕೆ” ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಅರಣ್ಯನಾಶದಿಂದಾಗಿ ಭೂಮಿ ಮರುಭೂಮಿಯಾಗುತ್ತಿರುವ ಬಗ್ಗೆ ಗಂಭೀರ ಸಮಸ್ಯೆಯ ಕುರಿತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿದರು. ನದಿಮೂಲ ಜಲಮೂಲಗಳು ಬರಿದಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ನಾಶದಿಂದಾಗಿ ಪ್ರಸ್ತುತವಾಗಿ ತಾಪಮಾನವು…

Read More

ಸೋಮವಾರಪೇಟೆ ಜು.8 NEWS DESK : ವಿದ್ಯಾರ್ಥಿಗಳ ಕಲಿಕೆ ನಿರಂತರವಾಗಿರಬೇಕು. ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಅಭಿಪ್ರಾಯಿಸಿದರು. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ಅವರಿಗೆ ಬೀಳ್ಕೊಡುಗೆ ನೀಡಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅರಳುವ ಹೂಗಳು ವಿದ್ಯಾರ್ಥಿಗಳಾಗಬೇಕು. ಇಂದಿನಿಂದಲೇ ಮೊಬೈಲ್ ಗೀಳಿನಿಂದ ಹೊರಬಂದರೆ ಸಾಧನೆಯ ಮೆಟ್ಟಿಲು ಏರಬಹುದು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಅತಿಥಿ ಶಿಕ್ಷಕರ ಕೊಡುಗೆ ತುಂಬ ಇದೆ. ಕಡಿಮೆ ಸಂಬಳಕ್ಕೆ ಹೆಚ್ಚಿನ ಸಮಯ ದುಡಿಯುತ್ತಿದ್ದಾರೆ. ಅವರ ವೇತನ ಕೂಡ ಹೆಚ್ಚಾಗಬೇಕು ಎಂದು ಹೇಳಿದರು. ಮುಂದೆ ದ್ವಿತೀಯ ಪಿಯುಸಿಯಲ್ಲಿ ಉನ್ನತ ದರ್ಜೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೆ ವೈಯುಕ್ತಿವಾಗಿ ಐದು ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುವುದಾಗಿ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಪುಟ್ಟರಾಜು ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸನ್ಮಾನ…

Read More

ಮಡಿಕೇರಿ ಜು.7 NEWS DESK  : ಇದೇ ಜುಲೈ 10ರಿಂದ ಆಂದ್ರಪ್ರದೇಶ ಕಡಪದಲ್ಲಿ ನಡೆಯಲಿರುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್  ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ ಕೆದಮುಳ್ಳೂರು ಮೂಲದ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆಯಾಗಿದ್ದಾರೆ.  ಈ ಹಿಂದೆ ಹಲವಾರು ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಅನುಭವ ಇರುವ ಮಾಳೇಟೀರ ದಿಶಾ ಪೊನ್ನಮ್ಮ ಕರ್ನಾಟಕ ಜೂನಿಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಮೂಲತಃ ಕೆದಮುಳ್ಳೂರುವಿನ ನಿವಾಸಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮಾಳೇಟೀರ ಪ್ರಶಾಂತ್ ಉತ್ತಪ್ಪ ಹಾಗೂ ಮೂರ್ನಾಡು ಜೂನಿಯರ್ ಕಾಲೇಜುವಿನ ಪ್ರಾಧ್ಯಾಪಕಿ ಮಾಳೇಟೀರ ರಶ್ಮಿ ಉತ್ತಪ್ಪ ದಂಪತಿಯ ಪುತ್ರಿ.

Read More

ಶ್ರೀನಗರ NEWS DESK ಜು.7 : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಅವಳಿ ಎನ್‌ಕೌಂಟರ್‌ನಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್‌ಆರ್ ಸ್ವೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಅವಳಿ ಎನ್‌ಕೌಂಟರ್‌ಗಳಲ್ಲಿ ಆರು ಉಗ್ರರು ಹತರಾಗಿದ್ದರೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್‌ಗಳಲ್ಲಿ ಆರು ಉಗ್ರರನ್ನು ಹತ್ಯೆ ಮಾಡಿರುವುದು ಭದ್ರತಾ ಪಡೆಗಳಿಗೆ ಒಂದು ಮೈಲಿಗಲ್ಲು ಎಂದು ಡಿಜಿಪಿ ತಿಳಿಸಿದ್ದಾರೆ.

Read More

ಬೆಂಗಳೂರು ಜು.7 NEWS DESK : ಬೆಂಗಳೂರು ನಗರದ ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರಿಗೆ’ ಭಾನುವಾರ ನಡೆದ ಚುನಾವಣೆಯಲ್ಲಿ ಹಿರಿಯ ಪತ್ರಕರ್ತ ಆರ್.ಶ್ರೀಧರ್ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮೋಹನ್ ಕುಮಾರ್  ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿ ತಟ್ಟೆ ಆಯ್ಕೆಯಾದರು. ಪ್ರೆಸ್ ಕ್ಲಬ್ ನ ಅಧ್ಯಕ್ಷ ಸ್ಥಾನಕ್ಕಾಗಿ ಆರ್. ಶ್ರೀಧರ್, ಧ್ಯಾನ್ ಪೂಣಚ್ಚ ಹಾಗೂ ಸುಭಾಷ್ ಹೂಗಾರ್ ನಡುವೆ ತೀವ್ರ ಪೈಪೋಟಿ ನಡೆಯಿತು. ಆದರೆ ಅಂತಿಮವಾಗಿ ಆರ್.ಶ್ರೀಧರ್ ಹೆಚ್ಚಿನ ಮತ ಗಳಿಸುವುದರೊಂದಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದರು.

Read More

ಕುಶಾಲನಗರ ಜು.7 NEWS DESK : ರಾಷ್ಟ್ರೀಯ ಸೇವಾ ಯೋಜನೆ ( NSS ) ಯು ವಿದ್ಯಾರ್ಥಿಗಳು ಹಾಗೂ ಯುವ ಜನಾಂಗದಲ್ಲಿ ಪರಿಶ್ರಮದ ಜೀವನದ ಮಹತ್ವ ತಿಳಿಯಪಡಿಸುವುದರೊಂದಿಗೆ ಹೊಸ ಹೊಸ ಅರಿವನ್ನು ಪಡೆಯುತ್ತಾ, ಸೇವಾ ಮನೋಭಾವ ಬೆಳೆಸುತ್ತಾ, ಜಾತಿ ಮತ ಭೇಧವಿಲ್ಲದೆ ಒಂದೇ ಕುಟುಂಬದ ಸದಸ್ಯರಂತೆ ಬಾಳಿ ಬದುಕಲು ಕಲಿಸುವ NSS ಚಟುವಟಿಕೆಗಳು ಜೀವನದ ನೈಜ ಪಾಠ ಕಲಿಸುತ್ತವೆ ಎಂದು ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ  ಹಾಗೂ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿಗಳಿಗೆ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎನ್ನೆಸ್ಸೆಸ್ ಕಾರ್ಯಚಟುವಟಿಕೆಗಳು ಹಾಗೂ ಜೀವನ ಕೌಶಲ್ಯಗಳು ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಸಮುದಾಯದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು…

Read More

ಕುಶಾಲನಗರ ಜು.7 NEWS DESK :  ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ  ಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್,‌ ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕದ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ *ವನ ಮಹೋತ್ಸವ ಆಚರಣೆ* 2024 ಯ ಅಂಗವಾಗಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಅರಣ್ಯ ಸಸಿನೆಟ್ಟು ವನ ಸಂಭ್ರಮ* ವನ್ನು ಆಚರಿಸಲಾಯಿತು. ಶಾಲಾವರಣದಲ್ಲಿ ಗಿಡನೆಟ್ಟು ವನ ಮಹೋತ್ಸವ ಆಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ರಾಷ್ಟ್ರೀಯ ಹಸಿರು ಪಡೆಯ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್,  ವನ ಮಹೋತ್ಸವ ಅಥವಾ ಅರಣ್ಯ ಉತ್ಸವವು ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಜುಲೈ ತಿಂಗಳಲ್ಲಿ ಆಚರಿಸಲಾಗುವ ವಾರ್ಷಿಕ ಗಿಡ ನೆಟ್ಟು ಬೆಳೆಸುವ ಹಬ್ಬವಾಗಿದ್ದು, ಇದರಲ್ಲಿ ದೇಶದಾದ್ಯಂತ ಸಾವಿರಾರು ಮರಗಳನ್ನು ನೆಡಲಾಗುತ್ತದೆ. ಅರಣ್ಯ ಸಂರಕ್ಷಣೆಯ ಜಾಗೃತಿ ಮತ್ತು ಪರಿಸರವನ್ನು ಉಳಿಸಲು ಜುಲೈ 1 ರಿಂದ…

Read More

ಮಡಿಕೇರಿ ಜು.7 NEWS DESK : ಕೊಡವ ರೈಡರ್ಸ್ ಕ್ಲಬ್ 6ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ 5ನೇ ವರ್ಷದ ವನಮಹೋತ್ಸವವನ್ನು ಹೆಬ್ಬಾಲೆ ದೇವರಪುರ ದೇವರ ಕಾಡುವಿನಲ್ಲಿ ಹಮ್ಮಿಕೊಳ್ಳಲಾಯಿತು.  ಹೆಬ್ಬಾಲೆ ದೇವರಪುರ ಶ್ರೀ ಭದ್ರಕಾಳಿ ಹಾಗೂ ಅಯ್ಯಪ್ಪ ದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಇಲ್ಲಿನ ದೇವರಕಾಡುವಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇಲ್ಲಿನ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕಮುಖ್ಯಸ್ಥರು ಹಾಗೂ ಗ್ರಾಮಸ್ಥರು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ  ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾವು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಜ್ಞಾನವನ್ನು ಪಡೆದುಕೊಂಡರು. ತಿತಿಮತಿ ಅರಣ್ಯ ಇಲಾಖೆ ಹಾಗೂ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದಿಂದ ವಿವಿಧ ಕಾಡು ಜಾತಿಯ ಗಿಡಗಳು ಹಾಗೂ ಹಣ್ಣಿನ ಗಿಡಗಳನ್ನು ತಂದು ನೆಡಲಾಯಿತು. ಸುಮಾರು ಒಂದು ಸಾವಿರಕ್ಕೂ ಅಧಿಕ ಗಿಡಗಳು ಕೆಲವೇ ಗಂಟೆಗಳಲ್ಲಿ ನೆಟ್ಟು ಮುಗಿಸಿದ ವಿಧ್ಯಾರ್ಥಿಗಳು ಇನ್ನು ನೆಡಬೇಕು ಎಂಬ ತವಕದಲ್ಲಿದ್ದದ್ದು ವಿಶೇಷ ಎನ್ನಬಹುದು. ಈ ಬಾರಿ ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಯಿಂದ ಕೂಡ…

Read More

ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಸದಾನಂದ ರೈ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಶೆಟ್ಟಿ ಭಗವತಿ ನಗರ, ಮಿಥುನ್ ರೈ ವೀರಾಜಪೇಟೆ ಕಾರ್ಯದರ್ಶಿ ನಿತಿನ್ ರೈ ಬಿಳಿಗೇರಿ, ಸಹ ಕಾರ್ಯದರ್ಶಿ ನಿಖಿಲ್ ಆಳ್ವ, ಖಜಾಂಚಿ ಶಿವಪ್ರಸಾದ್ ರೈ ಹಾಗೂ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುರೇಶ್ ರೈ ಮಡಿಕೇರಿ ಅವರನ್ನು ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.ನಿರ್ಗಮಿತ ಅಧ್ಯಕ್ಷ ವಸಂತ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ಮಹಾಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಜಗದೀಶ್ ರೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ, ಗೌರವಾಧ್ಯಕ್ಷ ಐತ್ತಪ್ಪ ರೈ, ಮಡಿಕೇರಿ ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ರಮೇಶ್ ರೈ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಸೌಮ್ಯ ಶೆಟ್ಟಿ ಹಾಗೂ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಪಾಲ್ಗೊಂಡಿದ್ದರು.

Read More