ಮಡಿಕೇರಿ ಜು.7 NEWS DESK : ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡುವ ಉದ್ದೇಶದಿಂದ ಪವಿತ್ರ ಕೊಡವ ಲ್ಯಾಂಡ್ ನ್ನು ಬೃಹತ್ ಪ್ರಮಾಣದಲ್ಲಿ ಭೂಪರಿವರ್ತನೆ ಮಾಡುತ್ತಿದ್ದು, ಇದು ಮುಂದೊಂದು ದಿನ ಮೂಲನಿವಾಸಿ ಆದಿಮಸಂಜಾತ ಕೊಡವರ ಅಸ್ತಿತ್ವಕ್ಕೆ ದಕ್ಕೆ ಉಂಟು ಮಾಡಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಚೆಟ್ಟಳ್ಳಿ ಪಟ್ಟಣದಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವರು ಅತ್ಯಂತ ಸೂಕ್ಷö್ಮ ಸಮುದಾಯಕ್ಕೆ ಸೇರಿದವರಾಗಿದ್ದು, ಚಿಕ್ಕ ಪ್ರದೇಶದಲ್ಲಿ ಪ್ರಕೃತಿಯ ಆರಾಧನೆಯೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಇಂದು ಈ ಪವಿತ್ರ ಕೊಡವ ಪ್ರದೇಶದ ಮೇಲೆ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು, ಕಪ್ಪು ಹಣ ಹೊಂದಿರುವವರು, ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು, ರೆಸಾರ್ಟ್…
ಲೇಖಕ: admin
ಮಡಿಕೇರಿ ಜು.6 NEWS DESK : ವಿರಾಜಪೇಟೆ-ಭಾಗಮಂಡಲ-ಮಡಿಕೇರಿ ಮಾರ್ಗದ ಬಸ್ ಸಂಚಾರಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ ಅವರು ಶನಿವಾರ ಚಾಲನೆ ನೀಡಿದರು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನಿಸಿ ವಿರಾಜಪೇಟೆ-ಭಾಗಮಂಡಲ-ಮಡಿಕೇರಿ ಮಾರ್ಗದಲ್ಲಿ ಬಸ್ ಕಲ್ಪಿಸಲಾಗಿದೆ ಎಂದು ಪೊನ್ನಣ್ಣ ಅವರು ಮಾಹಿತಿ ನೀಡಿದರು. ಬೆಂಗಳೂರಿನಿಂದ ಪ್ರತಿನಿತ್ಯ ರಾತ್ರಿ 11.15 ಗಂಟೆಗೆ ಬಸ್ ಹೊರಡಲಿದ್ದು, ವಿರಾಜಪೇಟೆಗೆ ಆಗಮಿಸಿ ಬೆಳಗ್ಗೆ 7.15 ಗಂಟೆಗೆ ಭಾಗಮಂಡಲಕ್ಕೆ ಆಗಮಿಸಲಿದೆ. ಬಳಿಕ ಬೆಳಗ್ಗೆ 7.30 ಗಂಟೆಗೆ ಭಾಗಮಂಡಲದಿಂದ ಹೊರಟು ಬೆಳಗ್ಗೆ 9 ಗಂಟೆಗೆ ಮಡಿಕೇರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮಾಹಿತಿ ನೀಡಿದರು. ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಚ್.ಇ.ವೀರಭದ್ರ ಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಇತರರು ಇದ್ದರು.
ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಶನಿವಾರ ನಗರದ ಗಾಂಧಿ ಮೈದಾನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 10 ಯಂತ್ರಚಾಲಿತ ದ್ವಿಚಕ್ರ ವಾಹನ ರೂ.9.95 ಲಕ್ಷ ವೆಚ್ಚ, 09 ಬ್ಯಾಟರಿಚಾಲಿತ ವೀಲ್ ಚೇರ್ ರೂ.8.64 ಲಕ್ಷ, 03 ಲ್ಯಾಪ್ ಟಾಪ್ ರೂ.2.90 ಲಕ್ಷ, 01 ಬ್ರೈಲ್ ಕಿಟ್ ವಿತರಣೆ ರೂ.0.25 ಲಕ್ಷ, 3 ಮಂದಿಗೆ ವಿವಾಹ ಪ್ರೋತ್ಸಾಹಧನ ರೂ. 1.50 ಲಕ್ಷ, 31 ಶ್ರವಣ ಸಾಧನ ವಿತರಣೆ ರೂ. 4 ಲಕ್ಷ, ವಾಕರ್ 2, ವಾಕಿಂಗ್ ಸ್ಟಿಕ್ 2, ಸಿ.ಪಿ.ಚೇರ್ 2 ಮತ್ತು ವೀಲ್ ಚೇರ್ 2 ಒಟ್ಟು 27.24 ಲಕ್ಷ ರೂ. ವೆಚ್ಚದ ಸಾಧನ ಸಲಕರಣೆ ವಿಶೇಷ ಚೇತನರಿಗೆ ವಿತರಿಸಿದರು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು…
ಮಡಿಕೇರಿ ಜು.6 NEWS DESK : ಭಾರತದ ಮಾಜಿ ಉಪ ಪ್ರಧಾನಿ, ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ 38ನೇ ಪುಣ್ಯ ಸ್ಮರಣೆ ಕಾರ್ಯಕ್ರಮವು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆಯಿತು. ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಎನ್.ಎಸ್.ಭೋಸರಾಜು ಅವರು ರಾಷ್ಟ್ರದ ಅನೇಕ ಮಹನೀಯರಲ್ಲಿ ಬಾಬು ಜಗಜೀವನ್ ರಾಂ ಅವರು ಒಬ್ಬರು ಎಂದರು. ಸ್ವಾತಂತ್ರö್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಾಬು ಜಗಜೀವನ ರಾಮ್ ಅವರು ಸರ್ಕಾರದ ಭಾಗವಾಗಿ ರೈಲ್ವೆ ಸಚಿವರಾಗಿ, ಕೃಷಿ ಸಚಿವರಾಗಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡು ದೇಶದ ಅಭಿವೃದ್ಧಿಗೆ ದುಡಿದಿದ್ದಾರೆ ಎಂದು ಸ್ಮರಿಸಿದರು. ಬಾಬು ಜಗಜೀವನ ರಾಮ್ ಅವರ ಮಗಳು ಮೀರಾ ಕುಮಾರ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಲೋಕಸಭಾ ಅಧ್ಯಕ್ಷರಾಗಿ(ಸ್ಪೀಕರ್) ಕೆಲಸ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಬಾಬು…
ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೊಡವ ಹೆರಿಟೇಜ್, ಮಿನಿ ವಿಧಾನಸೌಧ, ಸುವರ್ಣ ಕರ್ನಾಟಕ ಸಮುಚ್ಚಯ ಭವನ, ಮಂಗಳೂರು ರಸ್ತೆಯ ತಡೆಗೋಡೆ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಕೆಡಿಪಿ ಸಭೆಯಲ್ಲಿಯೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿತ್ತು, ಆದರೂ ಇದುವರೆಗೆ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಹಣವಿದ್ದರೂ ಸಹ ಕಾಮಗಾರಿಗಳನ್ನು ಏಕೆ ಪೂರ್ಣಗೊಳಿಸಿಲ್ಲ ಎಂದು ತರಾಟೆ ತೆಗೆದುಕೊಂಡ ಸಚಿವರು ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಖರ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. ಇದಕ್ಕೆ ಧ್ವನಿಗೂಡಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಶಾಸಕರಾಗಿ ಒಂದು ವರ್ಷ ಕಳೆದಿದ್ದು, ತಡೆಗೋಡೆ ಪೂರ್ಣಗೊಳ್ಳದೆ ಟಾರ್ಪಲ್…
ಮಡಿಕೇರಿ ಜು.6 NEWS DESK : 2023-24ನೇ ಸಾಲಿನಲ್ಲಿ ಕಡಗದಾಳು ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ.100 ರಷ್ಟು ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಸಮಾಜ ಸೇವಕರು ಹಾಗೂ ದಾನಿಗಳಾದ ಟಿ.ಆರ್.ವಾಸುದೇವ್, ಪ್ರಸ್ತುತ ದಿನಗಳಲ್ಲಿ ಶಿಕ್ಷಕರಲ್ಲಿ ದೇವರನ್ನು ಕಾಣುತ್ತಿದ್ದೇವೆ. ಶಿಕ್ಷಕರನ್ನು ಗೌರವಿಸಿದರೆ ಎಲ್ಲ ಕೆಲಸ ಕಾರ್ಯಗಳು ನೆರವೇರುತ್ತದೆ ಎಂದರು. ವಿದ್ಯಾರ್ಥಿಗಳು ಮೊಬೈಲ್‍ನಿಂದ ದೂರವಿದ್ದು, ಉತ್ತಮವಾಗಿ ಓದಿ ಶಾಲೆಗೆ ಒಳ್ಳೆಯ ಹೆಸರು ತರಬೇಕು ಮತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು. ಸಂಘಟನೆಯ ಜಿಲ್ಲಾ ಸಂಚಾಲ ಹೆಚ್.ಎಲ್.ದಿವಾಕರ್ ಪ್ರಾಸ್ತವಿಕ ಮಾತನಾಡಿ, ಕೊಡಗಿನ ಎಲ್ಲಾ ಸರಕಾರಿ ಶಾಲಾ, ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬರಬೇಕು ಎಂಬ ಕಾರಣಕ್ಕಾಗಿ ಸಂಘಟನೆಯ ವತಿಯಿಂದ ಸುಮಾರು 10 ವರ್ಷಗಳಿಂದ ಉತ್ತಮ ಫಲಿತಾಂಶ ಬಂದ ಸರಕಾರಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಭೇಟಿ…
ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸದೆ ಇರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಿ ನೇಮಕಾತಿಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವೆಂದು ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ತಿಳಿಸಿದ್ದಾರೆ. ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಹಳ ವರ್ಷಗಳ ಹಿಂದೆಯೇ ಪ್ರವಾಸಿ ಮಾರ್ಗದರ್ಶಕರ ನೇಮಕವಾಗಿದೆ. ಆದರೆ ಕರ್ನಾಟಕದ ಪ್ರಮುಖ ಪ್ರವಾಸಿತಾಣವಾದ ಕೊಡಗಿನಲ್ಲಿ ಪ್ರವಾಸಿ ಮಾರ್ಗದರ್ಶಕರ ನೇಮಕವಾಗದೆ ನಿರ್ಲಕ್ಷಿಸಲ್ಪಟ್ಟಿತ್ತು. ಕೊಡಗು ಜಿಲ್ಲೆಯ ವಿಶಿಷ್ಟವಾದ ಸಂಸ್ಕೃತಿ ಮತ್ತು ಪ್ರವಾಸಿತಾಣಗಳನ್ನು ಪರಿಚಯಿಸಲು ಪ್ರವಾಸಿ ಮಾರ್ಗದರ್ಶಕರ ಅಗತ್ಯವಿತ್ತು. ಇದನ್ನು ಮನಗಂಡ ಶಾಸಕ ಮಂತರ್ ಗೌಡ ಅವರು ತಕ್ಷಣ ಸ್ಪಂದಿಸಿ ನೇಮಕಾತಿಗಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 32 ಪ್ರವಾಸಿ ಮಾರ್ಗದರ್ಶಕರು ಲೈಸನ್ಸ್ ಪಡೆದಿದ್ದು, ಇವರಲ್ಲಿ ಕೊಡಗಿನ ಯಾರೊಬ್ಬರು ಇಲ್ಲದೆ ಇರುವುದು ವಿಪರ್ಯಾಸ. ಇದೀಗ ಶಾಸಕರ ಕಾಳಜಿಯಿಂದ ಪ್ರವಾಸಿ ಮಾರ್ಗದರ್ಶಕರ ನೇಮಕಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಈ…
ಸಿದ್ದಾಪುರ ಜು.6 NEWS DESK : ಪತ್ರಿಕಾ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮ್ಮತ್ತಿ ಪ್ರೌಢಶಾಲಾ ವಿದ್ಯರ‍್ಥಿಗಳಿಗೆ ಪ್ರಬಂಧ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಕರ್ನಲ್ ಕೆ.ಸಿ ಸುಬ್ಬಯ್ಯ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ಸ್ಪರ್ಧೆ ನಡೆಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಆಟ-ಪಾಟದೊಂದಿಗೆ ಉತ್ತಮ ನಾಗರೀಕರಾಗಬೇಕು ಎಂದು ಕರೆ ನೀಡಿದರು. ಪ್ರಸ್ತಾವಿಕವಾಗಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಸರ್ಕಾರಿ ಸಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳು, ಖಾಸಗಿ ಶಾಲಾ ಮಕ್ಕಳೊಂದಿಗೆ ಸ್ಪರ್ಧೆ ಮಾಡುವಂತಾಗಿದೆ. ಸರ್ಕಾರಿ ಸಾಲಾ ಮಕ್ಕಳಿಗೂ ಹೆಚ್ಚು ಪ್ರೋತ್ಸಾಹದ ಅಗತ್ಯವಿದೆ. ಸಂಘವು ಸಮಾಜಮುಖಿ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದರು. ಶಾಲಾ ಮುಖ್ಯೋಪಾಧ್ಯಾಯರಾದ ದೊಡತಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಹೆಚ್ಚು ಓದಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು,…
ಮಡಿಕೇರಿ ಜು.6 NEWS DESK : ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೊಡಗಿನ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಭೇಟಿಯಾದರು. ಯುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು, ಪ್ರಮುಖರಾದ ಶಿವದಾಸ್, ಶರತ್ ಮತ್ತಿತರರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಕೊಡಗು ಜಿಲ್ಲೆಗೆ ಭೇಟಿ ಮಾಡುವಂತೆ ಮನವಿ ಮಾಡಿದರು. ಸಧ್ಯದಲ್ಲೇ ಜಿಲ್ಲೆಗೆ ಭೇಟಿ ನೀಡಿ, ಕಾರ್ಯಕರ್ತರ ಸಭೆ ನಡೆಸಿ ಪಕ್ಷ ಸಂಘಟಿಸುವ ಕುರಿತು ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಅಲ್ಲದೆ ನಿಷ್ಠಾವಂತ ಕಾರ್ಯಕರ್ತರಿಗೆ ಮುಂದಿನ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ ಎಂದು ವಿಶ್ವ ಹಾಗೂ ಜಾಶಿರ್ ಹೇಳಿದರು.
ಬೆಂಗಳೂರು ಜು.6 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿದರು. ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಡಿಜಿ-ಐಜಿ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾದ ತಂತ್ರಾಂಶಗಳು ಮತ್ತು ಕೈಪಿಡಿಗಳು ಹೀಗಿವೆ: *ಸೀನ್ ಆಫ್ ಕ್ರೈಂ ಕೈಪಿಡಿ *ಸಂಚಯ: ಹೊಸ ಕ್ರಿಮಿನಲ್ ಕಾನೂನುಗಳ ಡಿಜಿಟಲ್ ತಂತ್ರಾಂಶ, ಆ್ಯಪ್ ಬಿಡುಗಡೆ *ರಿಯಲ್ ಟೈಂ ಟ್ರಾಕಿಂಗ್ ಆಫ್ ಹೊಯ್ಸಳ ತಂತ್ರಾಂಶ *ಬೆಂಗಳೂರು ಸಿಟಿ ಪೊಲೀಸ್- ಸೇಫ್ ಕನೆಕ್ಟ್ (ಕಮಾಂಡ್ ಸೆಂಡರ್ ಜೊತೆಗೆ ನೊಂದವರು ಆಡಿಯೊ, ವಿಡಿಯೊ ಕಾಲ್ ಮೂಲಕ ಸಂಪರ್ಕ ಸಾಧಿಸುವ ಸಾಧನ) *ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ (ಸೈಬರ್ ಕ್ರೈಂ ಕೈಪಿಡಿ)






