ಲೇಖಕ: admin

ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಸುಂಟಿಕೊಪ್ಪದ ಎಸ್.ಎಸ್.ಇಂಟರ್‍ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಸಮ್ಮೇಳನದ ವಿವರಗಳನ್ನು ನೀಡುತ್ತಾ, ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಅಬ್ದುಲ್ ರಶೀದ್ ಅವರ ಘನ ಉಪಸ್ಥಿತಿಯಲ್ಲಿ ಎರಡು ದಿನಗಳ ಕಾಲ ಕನ್ನಡ ನುಡಿ ಹಬ್ಬ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆಯೆಂದು ತಿಳಿಸಿದರು. :: ವಿವಿಧ 19 ದ್ವಾರಗಳ ಉದ್ಘಾಟನೆ :: ಆರಂಭಿಕ ದಿನವಾದ ಮೇ 29 ರಂದು ಬೆಳಗ್ಗೆ ರಾಷ್ಟ್ರಧ್ವಜ, ನಾಡಧ್ವಜ ಮತ್ತು ಪರಿಷತ್ತಿನ ಧ್ವಜದ ಆರೋಹಣದೊಂದಿಗೆ ಸಮ್ಮೇಳನ ಪ್ರಾರಂಭವಾಗಲಿದೆ. ಇದೇ ಸಂದರ್ಭ ಸುಂಟಿಕೊಪ್ಪ ವ್ಯಾಪ್ತಿಯ 19 ಮಂದಿ ಹಿರಿಯ ಚೇತನಗಳನ್ನು ಸ್ಮರಿಸುವ ದ್ವಾರಗಳನ್ನು ಗಣ್ಯರು ಉದ್ಘಾಟಿಸಲಿದ್ದಾರೆಂದರು. :: ಮೆರವಣಿಗೆ :: ಅಂದು…

Read More

ಮಡಿಕೇರಿ ಮೇ 26 NEWS DESK : ಕಳೆದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ಜನಸಾಮಾನ್ಯರನ್ನು ವಂಚಿಸಿರುವುದಾಗಿ ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಟಿ.ಪಿ.ರಮೇಶ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ನಗರಸಭಾ ಕಚೇರಿಯವರೆಗೆ ಕಾಂಗ್ರೆಸ್ ಪ್ರಮುಖರು ಮತ್ತು ಸದಸ್ಯರು ಷೆÉೂೀಷಣೆಗಳ ಸಹಿತ ಪ್ರತಿಭಟನೆ ನಡೆಸಿ, ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆಯ ಮುಂಭಾಗ ಕೆಲ ಕಾಲ ಪ್ರತಿಭಟನೆ ನಡೆದ ಬಳಿಕ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಆಡಳಿತ ಪಕ್ಷದೊಳಗಿನ ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.ಉತ್ತಮ ಆಡಳಿತದ ನಿರೀಕ್ಷೆಯಲ್ಲಿ ಬಹುಮತ ನೀಡಿದ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು  ಆರೋಪಿಸಿದರು. ಮಡಿಕೇರಿ ಕ್ಷೇತ್ರದ ಶಾಸಕರು ಒದಗಿಸಿರುವ ವಿಶೇಷ ಅನುದಾನದಿಂದಷ್ಟೆ…

Read More

ಮಡಿಕೇರಿ ಮೇ 26 NEWS DESK  : ಕುಶಾಲನಗರ ತಾಲೂಕಿನಲ್ಲಿ ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. `ನಮ್ಮೂರ ಶಾಲೆ ನಮ್ಮದು ನಮ್ಮೂರಲ್ಲೆ ಉಳಿಯಲಿ’ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಎಐಡಿಎಸ್‍ಓ ನೇತೃತ್ವದಲ್ಲಿ ಚಿಕ್ಕತ್ತೂರು, ಮದಲಾಪುರ ಶಾಲೆಗಳ ಮುಂದೆ ಬ್ಯಾನರ್ ಕಟ್ಟಿ ಶಾಲೆ ಮುಚ್ಚುವ ಕ್ರಮಕ್ಕೆ ಪ್ರತಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕಿ ಸ್ವಾತಿ ಮಾತನಾಡಿ, ಸ್ವಾತಂತ್ರ್ಯ ಬಂದು 78  ವರ್ಷ ಕಳೆದರೂ ಸರ್ಕಾರಿ ಶಾಲೆ ಉಳಿಸಿ ಎಂದು ಹೋರಾಟ ಮಾಡುವ ದುಸ್ಥಿತಿ ಬಂದಿದೆ. ಕರ್ನಾಟಕ ಯಾವುದೇ ಪಕ್ಷದ ಶಾಸಕರು ಸರ್ಕಾರಿ ಶಾಲೆ ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿಲ್ಲ. ಸದನದಲ್ಲಿ ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಮಗು ಇರುವ ಶಾಲೆಗಳ ಪಟ್ಟಿಯನ್ನು ಸರ್ಕಾರ ನೀಡಲಿ. ತಾಲೂಕಿನ ಕೆಲ ಗ್ರಾಮಗಳಲ್ಲಿ ಮೋಸದಿಂದ ಸರ್ಕಾರಿ ಶಾಲೆಗಳನ್ನು…

Read More

ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯಲ್ಲಿರುವ ಸುಮಾರು 60 ಸಾವಿರಕ್ಕೂ ಅಧಿಕ ನಿವೇಶನ ರಹಿತ ಬಡವರಿಗೆ ತಲಾ 5 ಸೆಂಟ್ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವರು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮತ್ತು ನವ ಕರ್ನಾಟಕ ನಿರ್ಮಾಣ ಆಂದೋಲನ ಸಮಿತಿ ವತಿಯಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆಗಳನ್ನು ಮಂಡಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಂಯೋಜಕ ಗೋಪಿನಾಥ್, ಖಜಾಂಚಿ ಆರ್.ಮುನಿಯಪ್ಪ, ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಹೆಚ್.ಡಿ.ಬಸವರಾಜು,…

Read More

ಮಡಿಕೇರಿ NEWS DESK ಮೇ 26 : ದೇವಟ್ ಪರಂಬ್ ನಲ್ಲಿ ವಂಚನೆಯಿoದ ಹತ್ಯೆಗೊಳಗಾದ ಕೊಡವ ಯೋಧರಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ಅರ್ಪಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ಭೇಟಿ ನೀಡಿದ ಪ್ರಮುಖರು ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಇತಿಹಾಸದ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ದೇವಟ್ ಪರಂಬು ಹತ್ಯಾಕಾಂಡವು ಕೊಡವರ ಇತಿಹಾಸದಲ್ಲಿ ಒಂದು ಮರೆಯಲಾಗದ ಮತ್ತು ಕ್ಷಮಿಸಲಾಗದ ದುರಂತವಾಗಿದೆ. ಘಟನೆಗೆ ಸಾಂತ್ವನವಾಗಿ ದೇವಟ್‌ಪರಂಬ್ ನಲ್ಲಿ ಅಂತರಾಷ್ಟ್ರೀಯ ಹೋಲೋಕಾಸ್ಟ್ ಸ್ಮಾರಕವನ್ನು ನಿರ್ಮಿಸಬೇಕು ಮತ್ತು ಕೊಡವ ಜನಾಂಗೀಯ ಹತ್ಯೆಯನ್ನು ಯುಎನ್‌ಒ ಅಂತರರಾಷ್ಟಿçÃಯ ಹೋಲೋಕಾಸ್ಟ್ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು. ಈ ಮಹಾನ್ ಮಾನವ ಹಾನಿಗಳನ್ನು ಸರಿದೂಗಿಸಲು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಗಳು) ಸೂಕ್ತ ಶಾಸಕಾಂಗ ವ್ಯವಸ್ಥೆಯ ಮೂಲಕ ಸಾಂವಿಧಾನಿಕ ಪರಿಹಾರವನ್ನು ಆರಂಭಿಸಬೇಕು. ವಿಶ್ವಪ್ರಸಿದ್ಧ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿರುವಂತೆ “ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ”ಯಾಗಿ…

Read More

ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರನ್ನು ಸನ್ಮಾನಿಸಲಾಯಿತು. ಸಂಘದ  ಬೆಳ್ಳಿ ಹಬ್ಬದ ಪ್ರಯುಕ್ತ ಸುಂಟಿಕೊಪ್ಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.

Read More

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆಯು  ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಖಾಸಗಿ ಸಭಾಂಗಣದಲ್ಲಿ, ಸಂಘದ ಅಧ್ಯಕ್ಷರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ  ಸಭೆ ನಡೆಯಿತು. ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘವು ಪುನಃಶ್ಚತನಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಫಿ ಮತ್ತು ಇತರೆ ಪ್ಲಾಂಟೇಷನ್ ಬೆಳೆ ಉತ್ಪನ್ನಗಳ ಮೌಲ್ಯವೃದ್ಧೀಕರಣದಲ್ಲಿ ಸಂಘದ ಪಾತ್ರ ಮತ್ತು ಚಟುವಟಿಕೆಗಳನ್ನು ನಿರ್ಧರಿಸುವ ಬಗ್ಗೆ ವಿಚಾರ ಸಂಕೀರ್ಣ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡು, ಇಂದಿನ ದಿನಗಳಲ್ಲಿ ಸಂಘವು ಮತ್ತಷ್ಟು ಲಾಭ ಹಾಗೂ ಯಶಸ್ಸಿನೊಂದಿಗೆ ಮುಂದುವರೆಯಲು ಕಾರ್ಯತಂತ್ರ ಹಾಗೂ ಯೋಜನೆಗಳನ್ನು ರೂಪಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ, ಉಪಾಧ್ಯಕ್ಷರು ಪ್ರಭುದೇವ, ಸದಸ್ಯರು, ನಿರ್ದೇಶಕರು, ವಿಚಾರ ಸಂಕೀರ್ಣದ ವೇದಿಕೆ ಅಧ್ಯಕ್ಷರು ಶ್ರೀ ಎನ್. ಬೋಸ್ ಮಂದಣ್ಣ, ಪ್ರಮುಖರು ಚಂದ್ರಕಲಾ, ಯಾಕೂಬ್, ಕಾಫಿ…

Read More

ಮಡಿಕೇರಿ ಮೇ 25 NEWS DESK : ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮೇ, 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

Read More

ಮಡಿಕೇರಿ ಮೇ 26 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಮೇ, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಕುಶಾಲನಗರ ಮೇ 26 NEWS DESK : ಜೂನ್ ತಿಂಗಳ ತಾ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಸಮ್ಮೇಳನಾಧ್ಯಕ್ಷರಾದ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅರಮೇರಿ ಮಠದ ಆವರಣದಲ್ಲಿ ಬಿಡುಗಡೆ ಮಾಡಿದರು. ಶರಣ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಸರ್ವಜನರ ಸಮ್ಮೇಳನ ವಾಗಿ ರೂಪುಗೊಳ್ಳಬೇಕಿದೆ. ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಗಮಿಸುತ್ತಿರುವ ಕಾರಣ ಸಮ್ಮೇಳನಕ್ಕೆ ಹೆಚ್ಚು ಭಕ್ತರು ಆಗಮಿಸುವ ಮೂಲಕ ಇಡೀ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಬೇಕಿದೆ. ಈ ನಿಟ್ಟಿನಲ್ಲಿ ಸಮ್ಮೇಳನ ಸಮಿತಿ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು. ಈ ಸಂದರ್ಭ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ‌.ಎಸ್.ಮೂರ್ತಿ ಮಾತನಾಡಿ, ಶರಣ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಎಲ್ಲಾ ಜನಸಮುದಾಯದ ಸಮ್ಮೇಳನವಾಗಲಿದೆ. ಈ ದಿಸೆಯಲ್ಲಿ ಎಲ್ಲಾ ಸಮುದಾಯ ಸಂಘಟನೆಗಳ ಸಹಭಾಗಿತ್ವ ಕೋರಲಾಗುತ್ತಿದೆ ಎಂದರು. ಪ್ರಧಾನ ಕಾರ್ಯದರ್ಶಿ…

Read More