ಸೋಮವಾರಪೇಟೆ ಜು.6 NEWS DESK : ಡೆಂಗ್ಯೂ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಡೆಂಗ್ಯೂವನ್ನು ಹರಡುವ ಸೊಳ್ಳೆಗಳ ಉತ್ಪತ್ತಿ ಸ್ಥಾನವನ್ನು ನಾಶಗೊಳಿಸುವ ಬಗ್ಗೆ ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಅರಿವು ಮೂಡಿಸಲಾಯಿತು. ಸೊಳ್ಳೆಗಳ ಉಗಮವನ್ನು ತಡೆಗಟ್ಟುವುದು ಹಾಗೂ ಸುತ್ತಮುತ್ತಲ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯಾಧಿಕಾರಿ ಜಾಸೀಂ ಖಾನ್, ಆಸ್ಪತ್ರೆಯ ಆರೋಗ್ಯ ನಿರೀಕ್ಷಕ ಮಹೇಶ್, ಪ್ರವೀಣ್, ಅನಿತಾ ಸೇರಿದಂತೆ ಇತರರು ಹಾಜರಿದ್ದರು.
ಲೇಖಕ: admin
ಕೊಳ್ಳೇಗಾಲ ಜು.6 NEWS DESK : ಕಾಮಗೆರೆ ಸೆಂಟ್ ಫ್ರಾನ್ಸಿಸ್ ಕ್ಷೇವಿಯರ್ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಶಾಲಾ ಮಕ್ಕಳು ಚುನಾವಣೆಯ ಮೂಲಕ ವಿವಿಧ ನಾಯಕರನ್ನು ಆಯ್ಕೆ ಮಾಡಿದರು. ಶಾಲಾ ಮಂತ್ರಿ ಮಂಡಲದ ವಿದ್ಯಾರ್ಥಿ ಅಧ್ಯಕ್ಷನಾಗಿ ಶೈನ ಜೆರುಷ, ಉಪಾಧ್ಯಕ್ಷರಾಗಿ ಮೋಕ್ಷಿತ್ ಗೌಡ, ಕಾರ್ಯದರ್ಶಿಯಾಗಿ ರಿತುನಿಶಿ, ಶಿಸ್ತುಪಾಲನೆ ಮಂತ್ರಿಯಾಗಿ ಗಾನವಿ ಗೌಡ, ಸಹಾಯಕ ಮಂತ್ರಿಯಾಗಿ ಆಕಾಶ್, ಆರೋಗ್ಯ ಮಂತ್ರಿಯಾಗಿ ಮೋಹಿತ್ ಗೌಡ, ಉಪ ಆರೋಗ್ಯ ಮಂತ್ರಿಯಾಗಿ ಇಂಚರ, ಸಾಂಸ್ಕೃತಿಕ ಮಂತ್ರಿಯಾಗಿ ಅನ್ವಿತಾ ಅರುಳ್, ಉಪ ಸಾಂಸ್ಕೃತಿಕ ಮಂತ್ರಿಯಾಗಿ ಮೊಹಮದ್ ಸಾದ್ ಸರೀಫ್, ಕ್ರೀಡಾ ಮಂತ್ರಿಯಾಗಿ ಪುನೀತ್ ಕುಮಾರ್, ಉಪ ಕ್ರೀಡಾ ಮಂತ್ರಿಯಾಗಿ ಶ್ರೇಯಸ್ ಕುಮಾರ್,ವಾದ್ಯ ದ ನಾಯಕನಾಗಿ ಸೋಹನ್ ಆಯ್ಕೆಗೊಂಡರು. ಶಾಲಾ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭದಲ್ಲಿ ಶಾಲಾ ವ್ಯವಸ್ಥಾಪಕರು ಮತ್ತು ಧರ್ಮಗುರುಗಳಾದ ರೆ. ಫಾ. ಐಸಾಕ್ ರತ್ನಾಕರ್, ನೂತನ ವಿದ್ಯಾರ್ಥಿ ಮುಖಂಡರಿಗೆ ಪ್ರಮಾಣವಚನ ಭೋದಿಸಿದರು ಮತ್ತು ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…
ಬೆಂಗಳೂರು ಜು.6 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿವೆ. ಅದನ್ನು ಉತ್ಕೃಷ್ಟ ಮಟ್ಟಕ್ಕೇರಿಸಲು ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್ ಸಹ ನೀಡುತ್ತಿದ್ದೇವೆ. ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ಆಹಾರದ ಗುಣಮಟ್ಟದ ಪರೀಕ್ಷೆಗಾಗಿ ಊಟ ಮಾಡಿದೆ, ಊಟ ತುಂಬಾ ಚೆನ್ನಾಗಿತ್ತು.
(NEWS DESK) 12 ಏಪ್ರಿಲ್ 1895 ರಲ್ಲಿ ಸ್ಥಾಪನೆಯಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ 103,144 ಕ್ಕೂ ಹೆಚ್ಚು ಉದ್ಯೋಗಿಗಳ ಬಲವಿದ್ದು. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಡಿಸೆಂಬರ್ 2023 ರ ಅಂತ್ಯದ ವೇಳೆಗೆ ದೇಶಾದ್ಯಂತ ಒಟ್ಟು 52,331 ಶಾಖೆಯ ವಿತರಣಾ ಜಾಲಗಳನ್ನು ಹೊಂದಿದ್ದು. 10,108ಕ್ಕೂ ಮಿಕ್ಕಿ ದೇಶೀಯ ಶಾಖೆಗಳು, 2 ಅಂತಾರಾಷ್ಟ್ರೀಯ ಶಾಖೆಗಳು, 12,455 ಎಟಿಎಮ್‍ಗಳು ಹಾಗೂ 29,768 ವ್ಯಾಪಾರ ಕರೊಸ್ಪಾಂಡೆಂಟ್ ಗಳನ್ನು ಹೊಂದಿವೆ. ಬ್ಯಾಂಕಿನ ಸುದೀರ್ಘ ಇತಿಹಾಸದಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್‍ನೊಂದಿಗೆ 9 ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದೆ. 22,90,742 ಕೋಟಿ ರೂ.ಗಿಂತ ಹೆಚ್ಚಿನ ಒಟ್ಟು ವ್ಯವಹಾರದೊಂದಿಗೆ ಅಗ್ರಗಣ್ಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದೆ. ಭವಿಷ್ಯದ ಬ್ಯಾಂಕ್ ಉದ್ಯೋಗಿಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಹಲವು ಬ್ಯಾಂಕ್‍ಗಳು ಅಪ್ರೆಂಟಿಸ್ ಶಿಪ್ ತರಬೇತಿ ನೀಡುತ್ತಿವೆ. ತರಬೇತಿ ಎನ್ನುವುದು ಕಾಯಂ ಹುದ್ದೆ ಅಲ್ಲದಿದ್ದರೂ, ಕೌಶಲ್ಯ ಕಲಿಕೆಗೆ ಮತ್ತು ಭವಿಷ್ಯದಲ್ಲಿ ಬ್ಯಾಂಕ್ ಉದ್ಯೋಗಿಯಾಗಲು ಪೂರಕವಾಗುವ ನಿಟ್ಟಿನಲ್ಲಿ ಅಭ್ಯರ್ಥಿಗಳು ಸಿದ್ದರಾಗಲು ಇದು ನೆರವಾಗುತ್ತದೆ. ಇದೇ ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಅಪ್ರೆಂಟಿಸ್‍ಷಿಪ್ ನೀಡಲು…
ಮಡಿಕೇರಿ ಜು.6 NEWS DESK : ವಿವಿಧ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡೆಂಘಿ ಜ್ವರದ ಕುರಿತು ಜಾಗೃತಿ ಮೂಡಿಸಲು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಇ.ಒ.ಕೆ.ಸಿ ಅಪ್ಪಣ್ಣ ಕರೆ ನೀಡಿದ್ದಾರೆ. ರಾಷ್ಟ್ರೀಯ ಡೆಂಗ್ಯೂ ದಿನದ ಪ್ರಯುಕ್ತ ವಿರಾಜಪೇಟೆ ತಾ.ಪಂ.ಸಾಮರ್ಥ್ಯ ಸೌಧದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ತಾಲ್ಲೂಕು ಮಟ್ಟದ ಆಡ್ವೊಕೆಸಿ ಕಾರ್ಯಾಗಾರ ಕುರಿತು ಮಾತನಾಡಿದರು. ಪ್ರತಿ ವರ್ಷವು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತದೆ. ಆದರೆ ಕಳೆದ 3 ವರ್ಷಗಳಿಗಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚು ಕಂಡುಬಂದಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ತಡೆಯಲು ಸಹಕರಿಸಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಯತೀರಾಜ್ ರವರು ಕಾರ್ಯಗಾರದ ಕುರಿತು ಮಾತನಾಡಿ ಡೆಂಗ್ಯೂ ಜ್ವರ ಕಂಡುಬರುವುದು ನಿಂತ ನೀರಿನಿಂದ ಸೊಳ್ಳೆಗಳು ಉತ್ಪತಿಯಾಗಿ, ಹಗಲು ವೇಳೆಯಲ್ಲಿ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರವು ಬರುತ್ತಿದ್ದು, ಆದಷ್ಟು ಮನೆಯ ಸುತ್ತಮುತ್ತ ಸ್ವಚ್ಚ ಪರಿಸರವನ್ನು ಕಾಪಾಡಿಕೊಳ್ಳಬೇಕು…
ಮಡಿಕೇರಿ ಜು.5 NEWS DESK : ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೆಳೆಗಾರರೊಬ್ಬರು ಪಾರಾಗಿ ಜೀವ ಉಳಿಸಿಕೊಂಡ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಎಂಬುವವರೇ ಪ್ರಾಣ ಉಳಿಸಿಕೊಂಡ ವ್ಯಕ್ತಿ. ಶುಕ್ರವಾರ ಬೆಳಿಗ್ಗೆ ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ದಿಢೀರ್ ಆಗಿ ಗೀಳಿಡುತ್ತಾ ಪ್ರತ್ಯಕ್ಷವಾದ ಒಂಟಿಸಲಗ ಏಕಾಏಕಿ ಸುಭಾಷ್ ಅವರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಸುಭಾಷ್ ಅವರು ಕಿರುಚುತ್ತಾ ಓಡಿ ಹೋಗಿ ಗೇಟ್ ಮೂಲಕ ಮನೆಯ ಆವರಣ ಸೇರಿಕೊಂಡಿದ್ದಾರೆ. ಗ್ರಾಮಸ್ಥರು ಹಾಗೂ ನಾಯಿಗಳು ಜೋರಾಗಿ ಕಿರುಚಿಕೊಂಡ ಪರಿಣಾಮ ಕಾಡಾನೆ ಸುಭಾಷ್ ಅವರ ಮನೆಯ ಗೇಟ್ ಬಳಿಯಿಂದ ರಸ್ತೆ ದಾಟಿ ತೋಟವೊಂದರೊಳಗೆ ನುಸುಳಿತು. ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದ್ದು, ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಉಪ್ಪು ತೋಡು, ಕಂಬಿಬಾಣೆ, 7ನೇ ಹೊಸಕೋಟೆ, ಮತ್ತಿಕಾಡು, ಭೂತನಕಾಡು, ಕೆದಕಲ್, ಹೊರೂರು ಮತ್ತಿತರ…
ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಾವದಾನದಿಂದ ಸಂವಾದ ನಡೆಸಿದರು. ಆರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾತನಾಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತುಂಬಾ ದೂರವಿದ್ದು, ಬಸ್ ಸೌಲಭ್ಯ ಸಮರ್ಪಕವಾಗಿಲ್ಲದೆ ಕಠಿಣ ಪರಿಸ್ಥಿತಿಯನ್ನು ಪ್ರತಿನಿತ್ಯ ಎದುರಿಸುತ್ತಿದ್ದು, ಈ ಸಂಬಂಧ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಅಂತರ್ಜಾಲ ಸಂಪರ್ಕವಿಲ್ಲದೆ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ತುಂಬಾ ತೊಂದರೆಯಾಗಿದೆ. ಈಗಿರುವ ವೈಫೈ ಸೇವೆ ಒಂದು ಅಥವಾ ಎರಡು ಕೊಠಡಿಗೆ ಸಾಲುವುದಿಲ್ಲ. ಆದ್ದರಿಂದ ಟವರ್ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಆರ್.ಶರಣಪ್ರಕಾಶ ಪಾಟೀಲ ಅವರು ಸದ್ಯ ವೈಪೈ ಸೇವೆಯನ್ನು ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಸೌಲಭ್ಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಗುಡ್ಡಗಾಡು ಪ್ರದೇಶವಾಗಿರುವುದರಿಂದ…
ಮಡಿಕೇರಿ ಜು.5 NEWS DESK : ದೇಶದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೊಡ್ಡ ಹಗರಣವೇ ನಡೆದಿದ್ದು, ಇದು ಎಷ್ಟು ವರ್ಷಗಳಿಂದ ನಡೆಯುತ್ತಿದೆ ಎನ್ನುವ ಬಗ್ಗೆ ಈಗ ಸಂಶಯ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ, ನೀಟ್ ಅವ್ಯವಹಾರ ಹೊರ ಬೀಳುತ್ತಿದ್ದಂತೆ ಜನ ಆಕ್ರೋಶ ಹೊರ ಹಾಕಿ ಒತ್ತಾಯಿಸಿದ ನಂತರ ಕೇಂದ್ರ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಆದರೆ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬಗ್ಗೆ ಕೇಂದ್ರ ಯೋಚಿಸುತ್ತಿಲ್ಲ, ಸರ್ಕಾರ ತಪ್ಪಿತಸ್ಥರ ರಕ್ಷಣೆಗೆ ನಿಂತಿದೆ ಎಂದು ಟೀಕಿಸಿದರು. ವಿದ್ಯಾವಂತ ಯುವಕ, ಯುವತಿಯರ ಭಾವನೆಯನ್ನು ಸರ್ಕಾರ ಅರ್ಥ ಮಾಡಿಕೊಳ್ಳುತ್ತಿಲ್ಲ. ಕೇಂದ್ರದ ವೈಫಲ್ಯದಿಂದಲೇ ನೀಟ್ ಹಗರಣ ನಡೆದಿದೆ. ಸಿಇಟಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ಮೂಲಕ ಕರ್ನಾಟಕ ರಾಜ್ಯ ಮಾದರಿಯಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ರಾಜ್ಯಗಳನ್ನು ವಿಶ್ವಾಸಕ್ಕೆ…
ಬೆಂಗಳೂರು, ಜು.5 NEWS DESK : ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಕಂದಕ ಸೃಷ್ಟಿಸುವಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಹಾಗೂ ತಿರುಚಿದ ಹೇಳಿಕೆಗಳನ್ನು ಹರಿಬಿಡುತ್ತಿರುವರ ವಿರುದ್ಧ ಕ್ರಮ ಜರುಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ವಿಧಾನಸೌಧದಲ್ಲಿ ಸೈಬರ್ ನೀತಿಗಳನ್ನು ರೂಪಿಸುವ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ, ಪ್ರಣವ್ ಮೊಹಂತಿ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಗುಪ್ತದಳ ವಿಭಾಗದ ಎಡಿಜಿಪಿ ಶರತ್ ಚಂದ್ರ, ರವಿ ಕುಮಾರ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಮುಂತಾದವರು ಉಪಸ್ಥಿತರಿದ್ದರು.
ಮಡಿಕೇರಿ ಜು.5 NEWS DESK : ಕೊಡವ ಹಾಕಿ ಹಬ್ಬದ ಮೂಲಕವೇ ವಿಶ್ವ ದಾಖಲೆ ಬರೆದಿರುವ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡೆಂದೇ ಪ್ರಖ್ಯಾತಿ ಪಡೆದಿದೆ. ಆದರೆ ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿರುವ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಕಳಂಕ ತರುವಂತ್ತಿದೆ. ಸುಮಾರು 20 ವರ್ಷಗಳ ಹಿಂದೆ ಯಥಾಸ್ಥಿತಿಯಲ್ಲಿದ್ದ ಮೈದಾನ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿತ್ತು. ಈ ಮೈದಾನದಲ್ಲಿ ಆಟವಾಡಿದ ಜಿಲ್ಲೆಯ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಹಾಕಿ ಪಂದ್ಯಗಳನ್ನು ಆಡಿದ ಮಾಜಿ ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕೂಡ ಇದೇ ಮೈದಾನದಿಂದ ಅರಳಿದ ಕ್ರೀಡಾ ಪ್ರತಿಭೆಯಾಗಿದ್ದಾರೆ. ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ, ಅಂತರರಾಷ್ಟ್ರೀಯ ಹಾಕಿ ಆಟಗಾರರಾದ ಬಾಳೆಯಡ ಸಿ.ಪೂಣಚ್ಚ, ವಿ.ಎಸ್.ವಿನಯ್ ಸೇರಿದಂತೆ ಅನೇಕ ಆಟಗಾರರಿಗೆ ಇದೇ ಮೈದಾನ ಕ್ರೀಡಾಸ್ಫೂರ್ತಿಯನ್ನು ತುಂಬಿತ್ತು. ಜಿಲ್ಲೆಯ ಯುವ ಸಮೂಹಕ್ಕೆ…






