ಮಡಿಕೇರಿ ಜು.5 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 15 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಕರಿಕೆ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ. ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ ಮತ್ತು ಹಾನಗಲ್ಲು, ವಿರಾಜಪೇಟೆ ತಾಲ್ಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ ಮತ್ತು ಹೊಸೂರು. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in ಈ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಜುಲೈ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9148712473, ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.5 NEWS DESK : ಕರ್ನಾಟಕ ಲೋಕಾಯುಕ್ತದ ಮಡಿಕೇರಿ ಲೋಕಾಯುಕ್ತ ಅಧಿಕಾರಿಗಳು ಜು.10 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ಜು.12 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ವಿರಾಜಪೇಟೆ ಜು.5 NEWS DESK : ಕೊಡವ ಬಾಷೆಯ ಉಳಿವಿಗಾಗಿ ಶ್ರಮಿಸುತ್ತಿರುವ ಪೊಂಬೊಳ್ಚ ಕೂಟದ ವತಿಯಿಂದ “ಕಕ್ಕಡತ್ತೋರ್ ಚೋದ್” ಎಂಬ ಹೆಸರಿನಲ್ಲಿ ಹಾಸ್ಯ ಬರಹವನ್ನು ಆಹ್ವಾನಿಸಲಾಗಿದೆ. ಕೊಡವ ಜನಾಂಗದವರಿಗೆ ಭಾಗವಹಿಸಲು ಅವಕಾಶ ಇರುತ್ತದೆ. ಯಾವುದೇ ವಿಷಯಕ್ಕೆ ಸಮ್ಮಂದ ಪಟ್ಟಂತೆ ಹಾಸ್ಯ ಲೇಖನವನ್ನು ಜು.27 ರೊಳಗೆ 7259473716 ಮೊಬೈಲ್ ಸಂಖ್ಯೆಗೆ ಕಳುಹಿಸಿ ಕೊಡಬೇಕಾಗಿ ಪೊಂಬೊಳ್ಚ ಕೂಟದ ಸಂಚಾಲಕ ಚೇನಂಡ ತೇಜ ಬೋಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೊಂಬೊಳ್ಚ ಕೂಟದ ವತಿಯಿಂದ ಕೊಡವ ಭಾಷೆಯಲ್ಲಿ ಇದುವರೆಗೆ ಹಲವಾರು ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು, ಅದರಲ್ಲಿ ಪೈಪೋಟಿ ಎಂಬ ಹೆಸರಿನಲ್ಲಿ, ಎಲೆ ಮರೆಯಲ್ಲಿರುವ ಕೊಡವ ಜನಾಂಗದ ಬರಹಗಾರರಿಗೆ ವೇದಿಕೆ ಕಲ್ಪಿಸಲು ಇದುವರೆಗೆ ನಲವತ್ತೈದಕ್ಕೂ ಮಿಗಿಲಾಗಿ ಕಥೆ, ಕವನ, ಪ್ರಬಂಧ, ಹಾಡು ಚಿತ್ರಕಲೆ ಹೀಗೆ ಹಲವಾರು ಕಾರ್ಯಕ್ರಮವನ್ನು ನಡೆಸುತ್ತ ಬರಲಾಗುತ್ತಿದೆ. ಅದೇ ರೀತಿಯಲ್ಲಿ ಈ ತಿಂಗಳು “ಕಕ್ಕಡತ್ತೋರ್ ಚೋದ್” ಎಂಬ ಹೆಸರಿನಲ್ಲಿ ಹಾಸ್ಯ ಬರಹವನ್ನು ಆಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.
ಮಡಿಕೇರಿ ಜು.5 NEWS DESK : ಸಂಪಾಜೆ ಹೋಬಳಿ ಯು ಚೆಂಬು ಗ್ರಾಮದ ಏಣಿಯಾರು ಸೀತಮ್ಮ ಎಂಬವರು ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ವಾಸವಿದ್ದ ಮನೆಯು ಭಾರಿ ಮಳೆಯಿಂದ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ದಿನಬಳಕೆಯ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಪ್ರಸ್ತುತ ಅವರು ಹೊಸದಾಗಿ ನಿರ್ಮಾಣ ಮಾಡಿರುವ ಮನೆಗೆ ಸ್ಥಳಾಂತರಗೊಂಡಿದ್ದಾರೆ.
ಮಡಿಕೇರಿ ಜು.5 NEWS DESK : ಕೊಡವ ಹಾಕಿ ಹಬ್ಬದ ಮೂಲಕವೇ ವಿಶ್ವ ದಾಖಲೆ ಬರೆದಿರುವ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡೆಂದೇ ಪ್ರಖ್ಯಾತಿ ಪಡೆದಿದೆ. ಆದರೆ ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿರುವ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಕಳಂಕ ತರುವಂತ್ತಿದೆ. ಸುಮಾರು 20 ವರ್ಷಗಳ ಹಿಂದೆ ಯಥಾಸ್ಥಿತಿಯಲ್ಲಿದ್ದ ಮೈದಾನ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿತ್ತು. ಈ ಮೈದಾನದಲ್ಲಿ ಆಟವಾಡಿದ ಜಿಲ್ಲೆಯ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಹಾಕಿ ಪಂದ್ಯಗಳನ್ನು ಆಡಿದ ಮಾಜಿ ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕೂಡ ಇದೇ ಮೈದಾನದಿಂದ ಅರಳಿದ ಕ್ರೀಡಾ ಪ್ರತಿಭೆಯಾಗಿದ್ದಾರೆ. ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ, ಅಂತರರಾಷ್ಟ್ರೀಯ ಹಾಕಿ ಆಟಗಾರರಾದ ಬಾಳೆಯಡ ಸಿ.ಪೂಣಚ್ಚ, ವಿ.ಎಸ್.ವಿನಯ್ ಸೇರಿದಂತೆ ಅನೇಕ ಆಟಗಾರರಿಗೆ ಇದೇ ಮೈದಾನ ಕ್ರೀಡಾಸ್ಫೂರ್ತಿಯನ್ನು ತುಂಬಿತ್ತು. ಜಿಲ್ಲೆಯ ಯುವ ಸಮೂಹಕ್ಕೆ…
ಮೂರ್ನಾಡು ಜು.5 NEWS DESK : ಸಾಲಿಗ್ರಾಮದ ಡಿವೈನ್ ಪಾರ್ಕ್ ಸಂಸ್ಥೆಯ ಅಂಗಸಂಸ್ಥೆಯಾದ ಮೂರ್ನಾಡುವಿನ ವಿವೇಕ ಜಾಗ್ರತ ಬಳಗದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಮೂರ್ನಾಡುವಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ರಕ್ತದಾನ ಶಿಬಿರವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಹೆಚ್ಚುವುದಲ್ಲದೆ ಇದರಿಂದ ಇನ್ನೊಬ್ಬರಿಗೆ ಜೀವದಾನ ನೀಡಿದಂತಾಗುತ್ತದೆ ಎಂದರು. ಮೂರುತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ಹಲವಾರು ಮನುಷ್ಯರ ಜೀವಗಳನ್ನು ಉಳಿಸಿಕೊಳ್ಳುವ ಕಾರ್ಯವಾಗುತ್ತದೆ ಎಂದು ಹೇಳಿದರು. ಮೂರ್ನಾಡು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಜಯ ಕುಮಾರ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲೆಡೆ ಡೆಂಗ್ಯೂ ಇರುವ ಕಾರಣ ಪ್ಲೇಟ್ಲೆಟ್ ಆಭಾವವಿರುವುದರಿಂದ ಕಾರಣದಿಂದ ರಕ್ತದಾನ ಶಿಬಿರದ ಅಗತ್ಯವಿದೆ ಎಂದರು. ಆರೋಗ್ಯಕ್ಕೆ ಸಂಬಂಧಿಸಿದ ಶಿಬಿರಗಳ ಆಯೋಜನೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮುಕ್ತ ಅವಕಾಶ ನೀಡುವುದಲ್ಲದೆ, ಎಲ್ಲಾ ರೀತಿಯ ಸಹಾಯ-ಸಹಕಾರವನ್ನು ಮಾಡಿಕೊಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ,…
ಮಡಿಕೇರಿ ಜು.5 NEWS DESK : ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ವಿಶೇಷಚೇತನರು ಮತ್ತು ಅವರ ಪಾಲಕರಿಗೆ ಅಣಬೆ ಕೃಷಿ ಮತ್ತು ಎರೆಗೊಬ್ಬರ ತಯಾರಿಕೆಯ ಸ್ವ-ಉದ್ಯೋಗ ತರಬೇತಿ ಶಿಬಿರ ಮತ್ತು ಪ್ರಾಯೋಗಿಕ ಕಾರ್ಯಾಗಾರ ನಡೆಯಿತು. ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಪ್ರಭಾಕರ್ ಮಾತನಾಡಿ, ನಿಸರ್ಗಕ್ಕೆ ಪೂರಕವಾದ ಕೃಷಿ ಪದ್ಧತಿಗಳು, ಎರೆಗೊಬ್ಬರ ತಯಾರಿಕೆಯಲ್ಲಿ ಸ್ಥಳೀಯವಾಗಿ ದೊರೆಯುವ ಕಚ್ಚಾವಸ್ತುಗಳ ಬಳಕೆ, ಅಣಬೆಗಳ ಪ್ರಭೇದಗಳು ಮತ್ತು ಬೇಸಾಯ ಪದ್ಧತಿಗಳು, ಕಾರ್ಯಸಾಧ್ಯತೆಗಳು ಮತ್ತು ಬೆಳೆಯ ವಹಿವಾಟಿನ ಬಗ್ಗೆ ಅರಿವು ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀಣಾ ಅಶೋಕ್, ಅಣಬೆ ಬೇಸಾಯದ ಪ್ರಾತ್ಯಕ್ಷಿಕೆ ನೀಡಿದರು. ಡಾ. ಮೃಣಾಲ್ ದೀಪಕ್ ಮಕ್ಕಳಲ್ಲಿ ಪೌಷ್ಟಿಕತೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸ್ವಸ್ಥ ಸಂಸ್ಥೆಯ ನಿರ್ದೇಶಕರಾದ ಆರತಿ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಾಟಾ ಸಂಸ್ಥೆಯ ಸುಂಟಿಕೊಪ್ಪ ವ್ಯವಸ್ಥಾಪಕ ಗೌತಮ್ ಮೈನಿ ಭಾಗವಹಿಸಿದ್ದರು. 29 ಫಲಾನುಭವಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.5 NEWS DESK : ರಾಜ್ಯದ ಜೀವನದಿ ಕಾವೇರಿ ನದಿ ನೀರು ಮಲಿನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನಕ್ಕೆ ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿ ರಚಿಸಿ ರಾಜ್ಯ ಸರಕಾರ ಆದೇಶಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನಿರಂಜನ್ ಅಧ್ಯಕ್ಷತೆಯಲ್ಲಿ 9 ಮಂದಿ ಹಿರಿಯ ಅಧಿಕಾರಿಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದೆ. ಕಾವೇರಿ ನದಿಗೆ ಘನತ್ಯಾಜ್ಯ, ಕೈಗಾರಿಕಾ ತ್ಯಾಜ್ಯ ಸೇರ್ಪಡೆಯಿಂದ ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿದೆ. ಅಲ್ಲದೆ, ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದು ಸರಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ, ತುರ್ತು ಮಾರ್ಗೋಪಾಯಗಳನ್ನ ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ.
ನಾಪೋಕ್ಲು ಜು.5 NEWS DESK : ಮೂಲತಃ ನಾಪೋಕ್ಲು ನಿವಾಸಿಯಾದ ರಾಜ್ಯ ಹಾಕಿ ಆಟಗಾರ ಬಾಳೆಯಡ ಕಾಳಯ್ಯ ಸುರೇಶ್ (67) ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿತು. ಬಾಳೆಯಡ ಕಾಳಯ್ಯ ಸುರೇಶ್ ಕರ್ನಾಟಕ ರಾಜ್ಯ ಹಾಕಿ ತಂಡದ ಮಾಜಿ ನಾಯಕ, ಹೆಚ್.ಎ.ಎಲ್ ನ ಉದ್ಯೋಗಿ, ಭಾರತದ ಕಿರಿಯರ ಹಾಕಿ ಆಯ್ಕೆ ಶಿಬಿರದಲ್ಲಿದ್ದು ಉತ್ತಮ ಕ್ರೀಡಾಪಟು.
ನಾಪೋಕ್ಲು ಜು.5 NEWS DESK : ಕೊಡಗು ಸುನ್ನೀ ಜಂಈಯ್ಯತುಲ್ ಮುಹಲ್ಲಿಮೀನ್ ಕೇಂದ್ರ ಸಮಿತಿಯ ವತಿಯಿಂದ ಮನೆ ನಿರ್ಮಾಣಕ್ಕೆ ಎಮ್ಮೆಮಾಡುನಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಸಮಸ್ತ ಶತಮಾನೋತ್ಸವದ ಪ್ರಯುಕ್ತ 100 ಉಸ್ತಾ ದ್ (ಮುಹಲ್ಲಿಂ) ಗಳಿಗೆ ಮನೆ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದ್ದು, ಅದರ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಎರಡು ಫಲಾನುಭವಿಗಳಿದ್ದಾರೆ . ಅದರೊಲೊಬ್ಬರಾದ ಎಮ್ಮೆಮಾಡಿನ ನೌಶಾದ್ ಲತೀಫಿ ರವರ ಮನೆಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಕೂರ್ಗ್ ಜಂಈಯ್ಯತುಲ್ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಹು : ಅಶ್ರಫ್ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಕೊಡಗು ಜಂಈಯ್ಯತುಲ್ ಮುಹಲ್ಲಿಮಿನ್ ಕೋಶಾಧಿಕಾರಿ ಅಬ್ದುಲ್ಲ ಸಖಾಫಿ, ಪರೀಕ್ಷಾ ವಿಭಾಗ ಕಾರ್ಯದರ್ಶಿ ಸಂಶುದ್ದೀನ್ ಅಂಜದಿ ಬಲಮುರಿ, ಜಿಲ್ಲಾ ನೇತಾರರಾದ ನಝೀರ್ ಸಖಾಫಿ ಕುಂಜಿಲ. ಹಂಝ ರಹ್ಮಾನಿ, ಸ್ಥಳೀಯ ಮುದರ್ರಿಸರಾದ ಹಂಝ ಸಖಾಫಿ, ಖತೀಬರಾದ ಮುಹಮ್ಮದ್ ರಾಝಿಖ್ ಫೈಝಿ ಪಟ್ಟಾಂಬಿ ಹಾಗೂ ಸ್ಥಳೀಯ ಮುಸ್ಲಿಂ ಜಮಾಅತ್, ಎಸ್.ವೈ.ಎಸ್.ಎಸ್ ಹಾಗೂ ಎಸ್.ಎಫ್ ಸಂಘ ಕುಟುಂಬದ ನೇತಾರರು ಪಾಲ್ಗೊಂಡಿದ್ದರು. ವರದಿ :…






