ವಿರಾಜಪೇಟೆ NEWS DESK ಆ.9 : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಡಗು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ತರಗತಿಗಳು ಆಗಸ್ಟ್ 12 ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಂಶುಪಾಲರಾದ ಡಾ ದಯಾನಂದ. ಕೆ.ಸಿ ತಿಳಿಸಿದ್ದಾರೆ.
ಲೇಖಕ: admin
ಸಂಟಿಕೊಪ್ಪ ಆ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು. ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಕಾನ್‍ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳಾದ ಸಪ್ತಪದಿ, ಪ್ರಗತಿ, ಭದ್ರಕಾಳಿ ಹಾಗೂ ಈಶ್ವರಿ ಸ್ವಸಹಾಯ ಸಂಘದ ಸದಸ್ಯರುಗಳು ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಕಡಿದು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು. ಸ್ವಚ್ಛತಾ ಶ್ರಮದಾನಕ್ಕೆ ದೇವಾಲಯದ ಸಮಿತಿಯ ಅಧ್ಯಕ್ಷ ಡಿ.ಎನ್.ಧರ್ಮಪ್ಪ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯ, ಸೇವಾ ಪ್ರತಿನಿಧಿ ಯಶೋಧ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ…
ಮಡಿಕೇರಿ ಆ.9 NEWS DESK : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ತಿಳಿಸಲಾಗಿದೆ. ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ…
ಪೊನ್ನಂಪೇಟೆ NEWS DESK ಆ.8 : ಕೊಡವ ಸಾಂಪ್ರದಾಯಿಕ ಉಡುಗೆ ತೊಡುಗೆ, ಆಭರಣಗಳು ಸೇರಿದಂತೆ ಕೊಡವ ಸಂಸ್ಕೃತಿಯನ್ನು ಕಂಡ ಕಂಡವರು ದುರ್ಬಳಕೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ವ್ಯವಸ್ಥೆಗಳು ನಡೆದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅಖಿಲ ಕೊಡವ ಸಮಾಜ ತಿಳಿಸಿದೆ. ವಿವಿಧ ಕೊಡವ ಸಮಾಜ ಹಾಗೂ ವಿವಿಧ ಕೊಡವ ಸಂಘಟನೆಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ನಡೆದ ಅಖಿಲ ಕೊಡವ ಸಮಾಜದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಕೊಡವ ಜನಾಂಗದ ಹಿರಿಯಣ್ಣನಂತಿರುವ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಕೊಡವ ಸಮಾಜಗಳು ಸೇರಿದಂತೆ ವಿವಿಧ ಕೊಡವ ಸಂಘಟನೆಗಳ ಪ್ರಮುಖರು ಭಾಗಿಯಾಗಿ ಈ ಮಹತ್ವದ ನಿರ್ಣಯದೊಂದಿಗೆ ಇತರ ವಿಷಯ ಚರ್ಚಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಕೊಡವ ಸಾಂಪ್ರದಾಯಿಕ ಉಡುಗೆ ತೊಡುಗೆ ಹಾಗೂ ಸಾಂಪ್ರದಾಯಿಕ ಆಭರಣಗಳು ಸೇರಿದಂತೆ ಕೊಡವ ಸಂಸ್ಕೃತಿಯ ದುರ್ಬಳಕೆಯಾಗುತ್ತಿದ್ದು ಕೊಡವೇತರರು ಕೂಡ ಇದರ ದುರ್ಬಳಕೆ ಮಾಡುತ್ತಿರುವ ಬಗ್ಗೆ ಸಭೆಯಲ್ಲಿ ಸುದೀರ್ಘ…
ಪೊನ್ನಂಪೇಟೆ NEWS DESK ಆ.8 : ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ಗ್ರಾಮದಲ್ಲಿರುವ ಶ್ರೀ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿರುವ ನಾಗಬನದಲ್ಲಿ ಆಗಸ್ಟ್ -9ರಂದು ಶುಕ್ರವಾರ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 1-00 ಗಂಟೆಯವರೆಗೆ ವಿಶೇಷ ಪೂಜೆ ನಡೆಯಲಿದ್ದು, ಸಾಮೂಹಿಕ ಆಶ್ಲೇಷಾ ಬಲಿ ಪೂಜೆ ಹಾಗೂ ಪಂಚಾಮೃತಾಭಿಷೇಕ ಪೂಜೆ ಹಮ್ಮಿಕೊಳ್ಳಲಾಗಿದೆ. ಹಾಗೂ ಮಧ್ಯಾಹ್ನ ಅನ್ನದಾನ ವ್ಯವಸ್ಥೆಯನ್ನು ಮಾಡಲಾಗಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ತೀರ್ಥ ಪ್ರಸಾದ ಸ್ವೀಕರಿಸಬೇಕು ಎಂದು ಅವರು ಕೇಳಿಕೊಂಡದ್ದಾರೆ. ಆಶ್ಲೇಷಾ ಬಲಿ ಪೂಜೆಗೆ-250/ ಪಂಚಾಮೃತಾಭಿಷೇಕ ಪೂಜೆ-100/ ನಿಗದಿ ಮಾಡಿದ್ದು ಪಂಚಾಮೃತಾಭಿಷೇಕ ಮಾಡುವವರು ಶುದ್ಧ ಹಸುವಿನ ಹಾಲು ತರಕ್ಕದ್ದು. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ. ಚಮ್ಮಟೀರ ಪ್ರವೀಣ್ ಉತ್ತಪ್ಪ, ಅಧ್ಯಕ್ಷರು-9880967573, ಮೂಕಳೇರ…
ಮಡಿಕೇರಿ NEWS DESK ಆ.8: ಹಾಸನದ ಖಾಸಗಿ ಸುದ್ಧಿವಾಹಿನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೋರ್ವನ ಮೃತದೇಹ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹರದೂರು ಹೊಳೆಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ. ಹಾಸನದ ಕದಲಿ ಗ್ರಾಮದ ನಿವಾಸಿ ಹೇಮಂತ್ (27) ಮೃತ ವ್ಯಕ್ತಿ. ಹೇಮಂತ್ ಬುಧವಾರ ನಾಪತ್ತೆಯಾಗಿರುವ ಬಗ್ಗೆ ಅವರ ತಂದೆ ಪದ್ಮರಾಜ್ ಅವರು ಹಾಸನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಇಂದು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಹೊಳೆಯ ಬದಿಯಲ್ಲಿ ಹೇಮಂತ್ ಅವರಿಗೆ ಸೇರಿದ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆೆ ಹುಡುಕಾಟ ನಡೆಸಿದಾಗ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ NEWS DESK ಆ.8 : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪಪ್ರಚಾರ ಮಾಡುವ ಮೂಲಕ ರಾಜಕೀಯ ಪಿತೂರಿ ನಡೆಸುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ಜಿಲ್ಲಾ ಕುರುಬ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದವು. ಸಂಘಟನೆಗಳ ಪ್ರಮುಖರು ಹಾಗೂ ನೂರಾರು ಕಾರ್ಯಕರ್ತರು ಪ್ರವಾಸಿ ಮಂದಿರದ ಬಳಿಯಿಂದ ಫೀ.ಮಾ.ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದÀರು. ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ರಾಜ್ಯದ ಬಡವರು ಹಾಗೂ ಅವಕಾಶ ವಂಚಿತ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ.…
ಮಡಿಕೇರಿ ಆ.8 NEWS DESK : ಪ್ರಾಕೃತಿಕ ವಿಕೋಪದಿಂದ ಸಂಭವಿಸುವ ಸಾವಿಗಿಂತ, ಸ್ವಯಂಕೃತ ತಪ್ಪುಗಳಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚಿದೆ. ಕಳೆದ 4 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳಿಗೆ ತುತ್ತಾಗಿ ಸುಮಾರು 144 ಮಂದಿ ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಕಾರದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರಾಕೃತಿಕ ವಿಕೋಪದ ಬಗ್ಗೆ ಮುನ್ನೆಚ್ಚರ ವಹಿಸಿದರೂ ಸಹ ಅಲ್ಲಲ್ಲಿ ವಿಕೋಪಗಳು ಸಂಭವಿಸಿ ಸಾವು ನೋವುಗಳು ಉಂಟಾಗುತ್ತದೆ. ಆದರೆ ಸ್ವಯಂಕೃತದಿಂದ ಪ್ರತಿನಿತ್ಯ ಒಂದಲ್ಲ…
ವಿರಾಜಪೇಟೆ ಆ.8 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ವತಿಯಿಂದ ಕೆದಮುಳ್ಳೂರು ವ್ಯಾಪ್ತಿಯ ತೋರ ಗ್ರಾಮದ ಕಾಳಜಿ ಕೇಂದ್ರದಲ್ಲಿರುವ ಮೂವತ್ತು ಮಂದಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ದಿನೇಶ್, ಒಕ್ಕೂಟದ ಅಧ್ಯಕ್ಷ ಅರುಣ್ ಕುಮಾರ್, ಪ್ರಭುಕುಮಾರ್ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಆ.8 NEWS DESK : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆ.9 ರಂದು ಕುಶಾಲನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಮತ್ತು ದೇಶ ಭಕ್ತಿಗೀತೆ ಹಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಇರುವ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಖಾಸಗಿ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಕಾರ್ಯದರ್ಶಿ ಎಸ್.ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






