ಲೇಖಕ: admin

ಸುಂಟಿಕೊಪ್ಪ ಆ.8 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಆಟೋ ಮತ್ತು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.   ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಮಾತನಾಡಿ, ಆಟೋ ಚಾಲಕರು ಮತ್ತು ವಾಹನ ಚಾಲಕರುಗಳು ರಸ್ತೆ ಸುರಕ್ಷತೆಯ ದಿಸೆಯಲ್ಲಿ ವಾಹನಗಳಲ್ಲಿ ಮಿತಿಗಿಂತ ಅಧಿಕ ಜನರನ್ನು ಕರೆದೋಯ್ಯವ ಸಂದರ್ಭದಲ್ಲಿ ಅವಘಡಗಳು ಸಂಭವಿಸಿದರೆ ಅಪರಾಧವಾಗುತ್ತದೆ. ಅಲ್ಲದೆ ವಿಮೆಪಡೆದುಕೊಳ್ಳಲು ಕಷ್ಟಸಾಧ್ಯವಾಗುತ್ತದೆ. ವಾಹನಗಳನ್ನು ಚಲಾಯಿಸುವಾಗ ರಸ್ತೆಯ ನಿಯಮಗಳನ್ನು ಚಾಲಕರು ಕಟ್ಟುನಿಟ್ಟಾಗಿ ಪಾಲಿಸಬೇಕು, ಅತೀಯಾದ ವೇಗದ ಚಾಲನೆಗೆ ಕಡಿವಾಣ ಹಾಕಬೇಕು ಮತ್ತು ಅಪಘಾತಗಳನ್ನು ತಡೆಯಬಹುದಾಗಿದೆ. ವಾಹನಗಳನ್ನು ಚಲಾಯಿಸುವ ಸಂದರ್ಭ ಪ್ರತಿಯೊಬ್ಬ ಚಾಲಕರು ಚಾಲಕರಿಗೆ ನೀಡಲಾಗಿರುವ ಪರವನಾಗಿ, ವಿಮೆ, ವಾಹನದ ದಾಖಲಾತಿಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇರಿಕೊಳ್ಳುವುದು, ಕಾಲಕ್ಕೆ ಅದನ್ನು ನವೀಕರಿಸಿಕೊಬೇಕು ಎಂದರು.  ಆಟೋ ಮತ್ತು ವಾಹನಗಳಲ್ಲಿ ಶಾಲಾ ಮಕ್ಕಳನ್ನು ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೋಯ್ಯಬಾರದು. ಪ್ರಯಾಣಿಕರಿಂದ ದುಪ್ಪಟ್ಟು ಬಾಡಿಗೆ ವಸೂಲಾತಿ ಮಾಡುವುದು, ಸಮವಸ್ತ್ರ ಧರಿಸದೆ ಮತ್ತು ವಾಹನ ನಿಲುಗಡೆ…

Read More

ಸೋಮವಾರಪೇಟೆ ಆ.8 NEWS DESK : ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ನವೀನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಮತ್ತು ವಿವಿಧ ಇಲಾಖಾಧಿಕಾರಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಗಳಿಗೆ ಬಹುತೇಕ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸದೆ ತಮ್ಮ ಇಲಾಖೆಯ ಸಿಬ್ಬಂದಿಗಳನ್ನು ಕಳುಹಿಸುತ್ತಿರುವ ಕುರಿತು ಅಸಮಾಧಾನ ವ್ಯಕ್ತವಾಯಿತು. ಪೊಲೀಸ್ ಇಲಾಖೆಯವರು ಪಥಸಂಚಲನದ ನೇತೃತ್ವವನ್ನು ವಹಿಸುವಂತೆ ತೀರ್ಮಾನಿಸಲಾಯಿತು. ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ತಲಾ ಈರ್ವರು ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಾಗು ಸರ್ಕಾರಿ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗು ಅಗ್ನಿಶಾಮಕ ದಳದ ವತಿಯಿಂದ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ತಹಶೀಲ್ದಾರ್ ತಿಳಿಸಿದರು.   ಸಭೆಯಲ್ಲಿ ಗ್ರೇಡ್ 2…

Read More

ಮಡಿಕೇರಿ NEWS DESK ಆ.7 : ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕೆಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ಬಳಿಯಿಂದ 3.2 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 2 ಕಾರುಗಳು ಮತ್ತು 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಶಾಮೀಲಾದ ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ::: ಪ್ರಕರಣದ ಹಿನ್ನೆಲೆ ::: ಸೋಮವಾರಪೇಟೆಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಅನುಷಾ…

Read More

ಮಡಿಕೇರಿ NEWS DESK ಆ.7 : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರ ಯೋಧರ ಸ್ಮರಣೆ ಹಾಗೂ ಕಳೆದು ಹೋದ ಭಾರತದ ಭೂಭಾಗಗಳನ್ನು ಮತ್ತೆ ಪಡೆಯುವ ಸಂಕಲ್ಪದೊಂದಿಗೆ ವಿರಾಜಪೇಟೆಯಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಮತ್ತು ವಾಹನ ಜಾಥಾ ನಡೆಯಿತು. ಸಾವಿರಾರು ಹಿಂದೂಪರ ಕಾರ್ಯಕರ್ತರು ಕೇಸರಿ ಧ್ವಜ, ಪಂಜು ಹಿಡಿದು ದೇಶಭಕ್ತಿಯ ಘೋಷಣೆಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಘೋಷಣೆಗಳನ್ನು ಕೂಗಿ ಅಖಂಡ ಭಾರತದ ಸಂಕಲ್ಪ ಮಾಡಿದರು. ಸಭಾ ಕಾರ್ಯಕ್ರಮ :: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಕರ್ನಲ್ ಕೆ.ಸಿ. ಸುಬ್ಬಯ್ಯ ಭಾರತದ ಅಖಂಡತೆಗೆ ಧಕ್ಕೆ ಬಂದ ನೈಜ ಇತಿಹಾಸವನ್ನು ಭಾರತೀಯರು ತಿಳಿದುಕೊಳ್ಳಬೇಕೆಂದು ಕರೆ ನೀಡಿದರು. ಸಾಮಾಜಿಕ ಕಾರ್ಯಕರ್ತ ಚಿ.ನಾ. ಸೋಮೇಶ್ ಮಾತನಾಡಿ ಅಖಂಡ ಭಾರತ ಸಂಕಲ್ಪ ದಿನದ ಮಹತ್ವ ಹಾಗೂ ಸಮಾಜದಲ್ಲಿ ಇಂದಿನ ಯುವ ಫೀಳಿಗೆ ವಹಿಸಬೇಕಾದ ಪಾತ್ರದ ಬಗ್ಗೆ ವಿವರಿಸಿದರು. ವೇದಿಕೆಯ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್ ಮಾತನಾಡಿ ಭಾರತ…

Read More

ಮಡಿಕೇರಿ NEWS DESK ಆ.7 : ರೆಂಟಲ್ ಬೈಕ್ ಹೆಸರಿನಲ್ಲಿ ಕೆಲವರು ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ರಕ್ಷಣಾ ವೇದಿಕೆಯ ಮಡಿಕೇರಿ ನಗರ ಆಟೋ ಚಾಲಕರ ಸಂಘ, ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಇಲಾಖೆಯನ್ನು ಒತ್ತಾಯಿಸಿದ್ದಾರೆ. ರೆಂಟಲ್ ಬೈಕ್ ಸಂಸ್ಥೆಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ದೂರು ನೀಡಿದ ಸಂಘದ ಪ್ರಮುಖರು, ಮಡಿಕೇರಿ ನಗರದಲ್ಲಿ ಕಳೆದ ಹಲವು ದಶಕಗಳಿಂದ ಸಾವಿರಕ್ಕೂ ಅಧಿಕ ಆಟೋ ಚಾಲಕರು ಹಗಲು ರಾತ್ರಿ ಎನ್ನದೆ ಗಾಳಿ ಮಳೆ ಬಿಸಿಲಿನಲ್ಲಿ ಆಟೋ ಓಡಿಸಿ ಅಲ್ಪ ಪ್ರಮಾಣದ ಆದಾಯದಲ್ಲಿ ಕುಟುಂಬಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮಡಿಕೇರಿ ನಗರದಲ್ಲಿ ರೆಂಟಲ್ ಬೈಕ್ ಗಳ ಹಾವಳಿ ಹೆಚ್ಚಾಗಿದ್ದು, ಆಟೋ ಚಾಲಕರು ಆದಾಯ ಕುಸಿತದಿಂದ ಸಂಕಷ್ಟ ಎದುರಿಸುವಂತ್ತಾಗಿದೆ ಎಂದು ಗಮನ ಸೆಳೆದರು. ಕೆಲವು ರೆಂಟಲ್ ಬೈಕ್ ಗಳ ಬಲಾಡ್ಯ ಸಂಸ್ಥೆಗಳು ಸಾರಿಗೆ ಇಲಾಖೆಯಿಂದ ಅನುಮತಿ ಪಡೆದ ನಿಯಮಗಳನ್ನು ಉಲ್ಲಂಘಿಸಿ ಮೂರು ಪಟ್ಟು ಹೆಚ್ಚು…

Read More

ಮಡಿಕೇರಿ ಆ.7 NEWS DESK : ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನವನ್ನು ಆಗಸ್ಟ್ ತಿಂಗಳಲ್ಲಿ ‘ವ್ಯಸನಮುಕ್ತ ದಿನಾಚರಣೆ’ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 1, 1930 ರಲ್ಲಿ ಜನಿಸಿದ ಡಾ.ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು. ಕಾಶಿಯಲ್ಲಿ ಸಂಸ್ಕøತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದ ಮಹಾಂತ ಶಿವಯೋಗಿಗಳು, ಕರ್ನಾಟಕದ ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಬಂದ ಕಾರಣ ಕಾಶಿಯಿಂದ ಆಗಮಿಸಿ, ನೂರಾರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಿ ದಾಸೋಹದ ಜೊತೆಗೆ ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು. 1970 ರಲ್ಲಿ ಚಿತ್ತರಗಿಯ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಯಾಗಿ ನಂತರ 2018 ರ ವರೆಗೆ ಅಖಂಡ…

Read More

ಮಡಿಕೇರಿ ಆ.7 NEWS DESK : ಭೂಹೀನ ಬಡ ಕೃಷಿ ಕೂಲಿ ಕಾರ್ಮಿಕರ ಸಂವಿಧಾನ ಬದ್ಧ ಹಕ್ಕಾದ ಗೌರವ ಪೂರ್ಣ ಅಂತಿಮ ಸಂಸ್ಕಾರಕ್ಕೆ ಪೂರಕವಾಗಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯುತ್ ಇಲ್ಲವೆ ಅನಿಲ ಚಿತಾಗಾರ ನಿರ್ಮಿಸುವಂತೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನಗರದಲ್ಲಿ “ಮಾನವ ಸರಪಳಿ” ಸಹಿತ ಪ್ರತಿಭಟನೆ ನಡೆಸಿತು. ಬಿಎಸ್‍ಪಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಎ.ಎ ಹಾಗೂ ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮ ಪುತ್ರಿ ರೇವತಿ ರಾಜ್ ಅವರ ನೇತೃತ್ವದಲ್ಲಿ ಬುಧವಾರ ‘ಅಣಕು ಶವಯಾತ್ರೆ’ಯೊಂದಿಗೆ  ಪಕ್ಷದ ಕಛೇರಿಯಿಂದ ನಗರದ ಮುಖ್ಯ ಬೀದಿಗಳಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು. ಬಿಎಸ್‍ಪಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ, ಆಡಳಿತಕ್ಕೆ ಬಂದ ಯಾವುದೇ ಪಕ್ಷದ ರಾಜಕಾರಣಿಗಳು ಇಲ್ಲಿಯವರೆಗು ಜಿಲ್ಲೆಯ ಬಡಜನರ ಸಂಕಷ್ಟಗಳಿಗೆ ಸ್ಪಂದಿಸಿ, ಅವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿಲ್ಲ.  ಬದಲಾಗಿ ಬಡ ವರ್ಗದ ಮೇಲೆಯೆ…

Read More

ಸಿದ್ದಾಪುರ ಆ.7 NEWS DESK : ಮಾನಸಿಕ ಒತ್ತಡಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಸೇವನೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆ ವೈದ್ಯರಾದ ಡಾ.ಚಂದ್ರು ಕರೆ ನೀಡಿದರು . ಮಾಲ್ದಾರೆ ವಿಎಸ್ಎಸ್ಎನ್ ಸಭಾಂಗಣದಲ್ಲಿ  ಆರ್ಗನೈಸೇಷನ್ ಫಾರ್ ದ ಡೆವಲಪ್ಮೆಂಟ್ ಆಫ್ ಪೀಪಲ್ (ಓ.ಡಿ.ಪಿ) ಸಂಘಟನೆಯ ನೇತೃತ್ವದಲ್ಲಿ ಅಮ್ಮತ್ತಿ ಆರ್ ಐ ಹೆಚ್ ಪಿ ಆಸ್ಪತ್ರೆ ಹಾಗೂ ಮಾಲ್ದಾರೆ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನ ಆರೋಗ್ಯಕ್ಕೆ ವ್ಯಾಯಾಮ, ಕ್ರೀಡಾ ಚಟುವಟಿಕೆ ಸೇರಿದಂತೆ ಗ್ರಾಮಗಳಲ್ಲಿ ಬೆಳೆಯುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡುವುದರ ಮೂಲಕ ಮಾನಸಿಕ ಒತ್ತಡಗಳಿಂದ ದೂರವಿದ್ದು, ಆರೋಗ್ಯ ಕಾಪಾಡಿಕೊಳ್ಳಬೇಕೆಂದರು. ಇದೇ ಸಂದರ್ಭ ಮಾಲ್ದಾರೆ ಸುತ್ತಮುತ್ತಲ ನೂರಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು. ಓಡಿಪಿ ಜಿಲ್ಲಾ ಸಂಯೋಜಕಿ ಜಾಯ್ ಮೆನೇಜಸ್, ವೈದ್ಯರುಗಳಾದ ಡಾ.ಕೃಷ್ಣ ಪ್ರಸಾದ್, ಡಾ.ಶರತ್, ಡಾ.ನಿಶ್ಚಲ, ಗ್ರಾಮ ಪಂಚಾಯಿತಿ…

Read More

ವಿರಾಜಪೇಟೆ ಆ.7 NEWS DESK : ವಿರಾಜಪೇಟೆಯ ಟೆಕ್ವಾಂಡೋ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಕರ್ನಾಟಕ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಬಸವೇಶ್ವರ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.   ಕೂರ್ಗ್ ಪಬ್ಲಿಕ್ ಸ್ಕೂಲ್ ನ ಆರನೇ ತರಗತಿ ವಿದ್ಯಾರ್ಥಿನಿ ಪಟ್ಟಡ ಕಾಂಚನ ಎರಡು ಚಿನ್ನ, ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿಗಳಾದ ಅಖಿಲೇಶ್,  ಎಸ್.ಪಿ.ಸಂಜಯ್ ಹಾಗೂ ದಿಲನ್, ಕಾಲ್ಸ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಎಸ್.ವಿಹಾನ್, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳಾದ ರುಹಾನ್, ದನ್ಯತಾ, ನಿಯೋನ್ ಜೋಸೆಫ್ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಇವರು ತರಬೇತಿ ಕೇಂದ್ರದ ಮಾಸ್ಟರ್ ಅರುಣ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Read More

ಮೈಸೂರು ಆ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.   ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.  ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

Read More