ಲೇಖಕ: admin

ಮಡಿಕೇರಿ ಆ.7 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆ.10 ರಂದು ಉತ್ತರ ಕೊಡಗಿನ ಮಾದಾಪುರದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. ಕೊಡಗಿನಲ್ಲಿ ನಿರಂತರವಾಗಿ ಹೊರ ಪ್ರದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ವಲಯಕ್ಕೆ, ಬಹುರಾಷ್ಟ್ರೀಯ ಕಂಪೆನಿಗಳಿಗೆ, ಅನಿವಾಸಿ ಭಾರತೀಯರಿಗೆ, ರೆಸಾರ್ಟ್ ಮಾಫಿಯಾಗಳಿಗೆ, ದೊಡ್ಡ ಉದ್ಯಮಿಪತಿಗಳಿಗೆ ಭೂಮಿಯನ್ನು ಮಿತಿ ಮೀರಿ ನೀಡಿದರೆ ಭವಿಷ್ಯತ್ತಿಗೆ ತೊಂದರೆಯಾಗಲಿದೆ. ಈ ಹಿಂದೆ 2018 ರಲ್ಲಿ ಸೂರ್ಲಬ್ಬಿ ನಾಡ್, ಮುತ್ತುನಾಡ್, ಪೊರಮಲೆನಾಡ್, ಬದಿಗೇರಿನಾಡ್ ಮತ್ತು ಗಡಿನಾಡ್‍ನಲ್ಲಿ ಭೀಕರ ಜಲಕಂಟಕದಿಂದ…

Read More

ಮಡಿಕೇರಿ ಆ.7 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಕಾಲೇಜಿನ ಆವರಣದಲ್ಲಿ ನಡೆಯತು. ಸಂಘದ ಅಧ್ಯಕ್ಷರಾದ ಡಾ. ಪಾರ್ವತಿ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಹಲವು ಸಮಸ್ಯೆ, ಸಂಘವನ್ನು ಬಲಪಡಿಸುವ ಕುರಿತು ಹಾಗೂ ಇತರ ಅಭಿವೃದ್ಧಿ ಕಾರ್ಯ ಕುರಿತು ಚರ್ಚಿಸಲಾಯಿತು. ಅಲ್ಲದೇ ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದ ವೈ.ಆರ್.ಶಶಿಕಿರಣ್ (PG Diploma in Yogic science), ಬಿ.ಎನ್.ಹೇಮಾವತಿ (ಕೊಡವಎಂ.ಎ), ಸೂಕ್ಷ್ಮಾಣುಜೀವ ವಿಜ್ಞಾನ (Microbilology) ವಿಷಯದಲ್ಲಿ ವಿಶ್ವವಿದ್ಯಾನಿಲಯಕ್ಕೆ ಹೆಚ್ಚು ಅಂಕಗಳಿಸಿದ ಹಿಬಾತುಲ್, ಸೆಸ್ಟೋಬಾಲ್ ಕ್ರೀಡೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗಳಿಸಿದ ಮೊಹಮ್ಮದ್ ಕೆ.ಯು.ಶಾಹಿಲ್ ಹಾಗೂ ಹಾಕಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಗದೇಲ ಗಾಯತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಿರ್ದೇಶಕರಾದ ವಿಜು ನಂಜಪ್ಪ ಸ್ವಾಗತಿಸಿದರು. ನಂತರ 2023-24ನೇ ಸಾಲಿನ…

Read More

ಮಡಿಕೇರಿ ಆ.7 NEWS DESK : ಜಬ್ಭೂಮಿ ಚಾರಿಟೇಬಲ್ ಟ್ರಸ್ಟ್, ರೂಟ್ಸ್ ಆಫ್ ಕೊಡಗು ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.10 ರಂದು ಬಿಟ್ಟಂಗಾಲದಲ್ಲಿ “ಬೇಲ್ ಪಣಿ-2024” ಕಾರ್ಯಕ್ರಮ ನಡೆಯಲಿದೆ ಎಂದು ಜಬ್ಭೂಮಿ ಸಂಘಟನೆಯ ಸಂಚಾಲಕ ಚೊಟ್ಟೇಕ್‍ಮಾಡ ರಾಜೀವ್ ಬೋಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು, ಕೊಡವರು ಹಾಗೂ ಕೃಷಿ ಭೂಮಿಗೆ ಅವಿನಾಭಾವ ಸಂಬಂಧವಿದೆ. ಭತ್ತದ ಕೃಷಿ ಇಲ್ಲಿನ ಮೂಲಭೂತ ಸಂಪ್ರದಾಯವಾಗಿದ್ದು, ಇದನ್ನು ಉತ್ತೇಜಿಸುವ ಹಾಗೂ ಮಕ್ಕಳಿಗೆ ಭತ್ತದ ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶಿಷ್ಟವಾದ “ಬೇಲ್ ಪಣಿ-2024” ನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಕೊಡಗು ಜಾವ ರೈಡರ್ರ್ಸ್, ಕನೆಕ್ಟಿಂಗ್ ಕೊಡವಾಸ್, ಮೈಸೂರು-ಬೆಂಗಳೂರು ಕೊಡವ ಸ್ಟೂಡೆಂಟ್ ಅಸೋಸಿಯೇಷನ್, ಕೊಡವಾಮೆರ ಕೊಂಡಾಟ, ತಿಂಗಕೋರ್‍ಮೊಟ್ಟ್ ಕಾವೇರಿಕ್, ಬೆಂಗಳೂರಿನ ಕೊಡವ ಸಮಾಜ ಯೂತ್ ಕೌನ್ಸಿಲ್‍ನ ಸಹಯೋಗದಲ್ಲಿ ಬಿಟ್ಟಂಗಾಲದ ನಾಯಡ ಕುಟುಂಬದ ಮುರುವಂಡ ಮಿಥುನ್ ಅಣ್ಣಯ್ಯ ಹಾಗೂ ಪೊನ್ನಕಚ್ಚಿರ ಪುನೀತ್ ಅವರ ಮೇಲುಸ್ತುವಾರಿಯ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ.…

Read More

ಕುಶಾಲನಗರ ಆ.7 NEWS DESK : ಶಾಲಾ ಮಕ್ಕಳ ಮನದಲ್ಲಿ ಸಾಮರಸ್ಯದ ಮೊಹರು ಬೆಳೆಸಲು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಾವು ಮನುಜರು ವಿನೂತನ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್.ಡಿ.ಎಂ.ಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್) ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾವು ಮನುಜರು ಕಾರ್ಯಕ್ರಮದ ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೌಢ್ಯಗಳ ನಿವಾರಣೆ ಬಗ್ಗೆ ಜಾಗೃತಿ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸಲು ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಮೂಲಕ ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ “ನಾವು ಮನುಜರು” ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ಸಹಬಾಳ್ವೆ, ಸಾಂವಿಧಾನಿಕ ಮೌಲ್ಯ ಬೆಳೆಸಲು ಸಾಧ್ಯ ಎಂದರು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೂಢನಂಬಿಕೆಗಳ ನಿರ್ಮೂಲನೆ ಮತ್ತು ಮೂಢನಂಬಿಕೆಗಳ ಸಮನ್ವಯತೆ ಮತ್ತು ವಿಜ್ಞಾನದ ಬಗ್ಗೆ ಜಾಗೃತಿ…

Read More

ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಲ್ಲಿನ ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದೆ ದಿನ ನಿತ್ಯದ ಜೀವನ ನಡೆಸಲು ತೊಂದರೆ ಉಂಟಾಗಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಹಣಕಾಸು ಸಂಸ್ಥೆಗಳು/ ಗಿರವಿದಾರರು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಕೃಷಿಯೇತರ ಸಾಲಗಳನ್ನು ಪಡೆದಿರುತ್ತಾರೆ ಈ ಬಾಬು ಸದರಿ ಸಾಲ ನೀಡಿದ ಹಣಕಾಸು ಸಂಸ್ಥೆಗಳು ಪ್ರತೀ ವಾರ/ಮಾಹೆ ಕಂತುಗಳಲ್ಲಿ ಸಾಲ ವಸೂಲಿ ಮಾಡುತ್ತಿರುವುದು ಸರಿಯಷ್ಟೇ. ಈ ಸಂಸ್ಥೆಗಳಿಂದ ಸಾಲವನ್ನು ಪಡೆಯುವ ಸಾರ್ವಜನಿಕರು ಬಹುತೇಕ ಕೂಲಿ ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರಾಗಿರುತ್ತಾರೆ. ಆದರೆ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಕೂಲಿ ಕಾರ್ಮಿಕರು, ಕೃಷಿಕರು ಹಾಗೂ ಶ್ರಮೀಕ ವರ್ಗದ ಜನರಿಗೆ ಕೆಲಸವಿಲ್ಲದೆ ಅವರ ಆದಾಯದಲ್ಲಿ ವ್ಯತ್ಯಾಯ ಉಂಟಾಗಿರುತ್ತದೆ. ಇದರಿಂದ ಸದರಿಯವರಿಗೆ ಕಂತುಗಳನ್ನು ಪಾವತಿಸಲು ಕಷ್ಟಸಾಧ್ಯವಾಗಿದೆ ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಹಣಕಾಸು ಸಂಸ್ಥೆಗಳು/ಗಿರವಿದಾರರು ಹಾಗೂ ಮೈಕ್ರೋ ಫೈನಾನ್ಸ್ ಸಾಲ ಸೌಲಭ್ಯ ನೀಡುವ ಸಂಸ್ಥೆಗಳು…

Read More

ಮಡಿಕೇರಿ NEWS DESK ಆ.7 : ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್‌ಕುಮಾರ್ ನೇತೃತ್ವದಲ್ಲಿ ನಗರದ ಎಲ್‌ಐಸಿ ಕಚೇರಿ ಬಳಿ ಇರುವ ಬಹುಜನ ಸಮಾಜ ಪಾರ್ಟಿಯ ಮುಂಭಾಗ ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಅಣಕು ಶವಯಾತ್ರೆಯೊಂದಿಗೆ ಕಾಲ್ನಡಿಗೆ ಮೂಲಕ ತೆರಳಿ ಮಾನವ ಸರಪಳಿ ರಚನೆ ಮಾಡಿ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಆಟ್ರಂಗಡ ದಿವಿಲ್‌ಕುಮಾರ್ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಳ್ಳೀರ ಹರೀಶ್, ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಇನ್ನೂ ಕೂಡ ಕೊಡಗು ಜಿಲ್ಲೆಯ ಮೂಲ ನಿವಾಸಿಗಳು, ಬಡವರ್ಗದವರಿಗೆ ಮೂಲಭೂತ ಸೌಕರ್ಯಗಳು ಲಭಿಸಿಲ್ಲ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮೂರರಿಂದ ನಾಲ್ಕು ತಿಂಗಳ ಕಾಲ ಮಳೆಗಾಲ ಇರುತ್ತದೆ. ಈ ಸಂದರ್ಭದಲ್ಲಿ ಸಾವನ್ನಪ್ಪುವವರ ಶವ ಸಂಸ್ಕಾರಕ್ಕೆ ಅಗತ್ಯವಾಗಿ ಬೇಕಾಗುವ ಕಟ್ಟಿಗೆಗಳು ಸಿಗುವುದಿಲ್ಲ.…

Read More

ಮಡಿಕೇರಿ ಆ.7 NEWS DESK : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 2023-24 ಮತ್ತು 2024-25ನೇ ಸಾಲಿನಿಂದ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್, ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ. ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್‍ಬುಕ್  (face book: com/karnatakasangeeta1978) ಮೂಲಕ ಪಡೆದು ವೆಬ್‍ಸೈಟ್ sangeetanrityaacademy.karnataka.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ ವಿಡಿಯೋ ಚಿತ್ರೀಕರಿಸಿ, ಪೆನ್‍ಡ್ರೈವ್‍ನಲ್ಲಿ ಅಳವಡಿಸಿ, ಪೆನ್‍ಡ್ರೈವ್‍ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾಯ ಕಲಾ…

Read More

ನಾಪೋಕ್ಲು ಆ.7 NEWS DESK : ಪ್ರತಿಯೊಂದು ಸಮುದಾಯಗಳು ತಮ್ಮ ಸಂಸ್ಕೃತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ನಡೆಸುವಾಗ ಯುವಪೀಳಿಗೆಗೆ ಕೆಲವು ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಅವರಲ್ಲಿ ಸಂಸ್ಕೃತಿಯ ಬಗ್ಗೆ ಜ್ಞಾನ ಮತ್ತು ಜಾಗೃತಿಯನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ಮೈಸೂರು ಗೌಡ ಸಮಾಜದ ನಿಕಟ ಪೂರ್ವ ಅಧ್ಯಕ್ಷ ತೋಟಂಬೈಲು ಮನೋಹರ್ ಅಭಿಪ್ರಾಯಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜ ಹಾಗೂ ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಮೈಸೂರು ಕೊಡವ ಸಮಾಜದಲ್ಲಿ ನಡೆದ “ಆಟಿ ಗೌಜಿ “ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮಗಳಲ್ಲಿ ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಕಾಯ್ದುಕೊಂಡು ಯುವಜನರನ್ನು ಆಕರ್ಷಿಸಬೇಕು ಎಂದರು. ರಂಗಾಯಣ ಕಲಾವಿದೆ ಹಾಗೂ ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಸಮಾಜದ ನಿಕಟ ಪೂರ್ವ ಅಧ್ಯಕ್ಷೆ ಗೀತಾ ಮೋಂಟಡ್ಕ ಮಾತನಾಡಿ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯಗಳ ಸಂಸ್ಕೃತಿಯಲ್ಲಿ ಅನ್ಯೋನ್ಯತೆ ಇದ್ದರೂ ಆಯಾ ಪರಿಸರಕ್ಕೆ ಸಂಬಂಧಪಟ್ಟಂತೆ ಕೆಲವು ಬದಲಾವಣೆಗಳಿವೆ. ಆದರೆ ಪ್ರತಿಯೊಂದು…

Read More

ಮಡಿಕೇರಿ ಆ.7 NEWS DESK : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ…

Read More

ಮಡಿಕೇರಿ ಆ.7 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ‘ಸಹಕಾರ’ ವಿಷಯ ಅಳವಡಿಕೆ’ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲ್ಯಾಡ್ಯಗೊಳ್ಳಬಲ್ಲದು’ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆ ನಡೆಯಿತು. ಕೊಡಗು ಜಿಲ್ಲಾ ಸಹಕಾರಯೂನಿಯನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ನಂತರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ. ರವಿ ಬಸಪ್ಪ ವಹಿಸಿದ್ದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಯೂನಿಯನ್ ನಿರ್ದೇಶಕ ಕೆ.ಎಂ.ತಮ್ಮಯ್ಯ, ಕೆ.ಐ.ಸಿ.ಎಂ.ನ ಪ್ರಾಂಶುಪಾಲರಾದ ಡಾ. ಆರ್,ಎಸ್, ರೇಣುಕಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ. ಶ್ಯಾಮಲಾ…

Read More