ಲೇಖಕ: admin

ಸುಂಟಿಕೊಪ್ಪ ಆ.7 NEWS DESK : ಕಾನ್‍ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಾಕೂರು ಶಿರಂಗಾಲ ಗ್ರಾ.ಪಂ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್ ಸೂಟ್ ವಿತರಿಸಲಾಯಿತು. ಗ್ರಾ.ಪಂ ಸದಸ್ಯ ಕೊಳಂಬೆ ಸುಭಾಶ್ ಮಾತನಾಡಿ ಹಿಂದಿನ ಕಾಲದಲ್ಲಿ ನಾವು ಶಾಲೆಯಲ್ಲಿ ವ್ಯಾಸಾಂಗ ಮಾಡುವ ಸಂದರ್ಭ ಇಂತಹ ಸೌಲಭ್ಯ ಇರಲಿಲ್ಲ. ಇಂದಿನ ಕಾಲದಲ್ಲಿ ಸರಕಾರಿ ಶಾಲೆಗಳಲ್ಲಿ ಸಮವಸ್ತ್ರ, ಊಟ, ಕ್ಷೀರ ಭಾಗ್ಯ, ಆರೋಗ್ಯ ತಪಾಸಣೆ, ದಾನಿಗಳಿಂದ ಉಚಿತ ನೋಟ್ ಪುಸ್ತಕ, ಕ್ರೀಡಾ ಸಾಮಗ್ರಿ ಎಲ್ಲಾವನ್ನು ನೀಡುತ್ತಿದೆ. ಆದರೆ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಇಳಿಮುಖಗೊಳ್ಳುತ್ತಿರುವುದು ವಿಷಾದನೀಯ ಎಂದ ಅವರು, ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಹೆಚ್ಚಿನ ಆಸಕ್ತಿ ತೋರಬೇಕೆಂದು ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಮಾತನಾಡಿ, ಪೋಷಕರು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶಾಲೆಗಳಿಗೆ ಕಳುಹಿಸಲಾಗುತ್ತಿದ್ದು, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ದೇಶದ ಉತ್ತಮ ಪ್ರಜೆಗಳಾಗಿ ಮೂಡಬೇಕೆಂದು ಕರೆ ನೀಡಿದರು.ಈ ಸಂದರ್ಭ ಮುಖ್ಯ ಶಿಕ್ಷಕರಾದ ಮೂರ್ತಿ…

Read More

ಪ್ಯಾರಿಸ್‌ NEWS DESK ಆ.6 : ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಭಾರತದ ವಿನೀಶ್‌ ಫೋಗಾಟ್‌ (Vinesh Phogat)ಅವರು ಫೈನಲ್‌ ಪ್ರವೇಶಿಸಿದ್ದಾರೆ. ಇಂದು ನಡೆದ ಸೆಮಿ ಫೈನಲ್‌ ಪಂದ್ಯದಲ್ಲಿ ಅವರು ಕ್ಯೂಬಾದ ಗುಸ್ಮನ್‌ ಲೋಪೆಜ್‌ ಅವರನ್ನು 5-0 ಅಂತರದಿಂದ ಸೋಲಿಸಿದರು. ಈ ಸಾಧನೆಯಿಂದ ವಿನೀಶ್‌ ಫೋಗಾಟ್‌ ಒಲಿಂಪಿಕ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

Read More

ಸೋಮವಾರಪೇಟೆ NEWS DESK ಆ.6 : ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ದೊರಕುವಂತಾಗಬೇಕು ಎಂದು ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ  ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮ ಅರಕಲಗೂಡು ಡಿಪೋದಿಂದ ಮಾಗಲು,ಅಂಕನಹಳ್ಳಿ ಮೂಲಕ ಮನೆಹಳ್ಳಿ ಮಠಕ್ಕೆ ಬರುವ ಕೆ.ಎಸ್ ಆರ್.ಟಿ.ಸಿ. ನೂತನ ಬಸ್ಸ್ ಮಾರ್ಗಕ್ಕೆ ಮಠದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಈ ಭಾಗಕ್ಕೆ ಸರ್ಕಾರಿ ಬಸ್ಸ್ ನ ಬೇಡಿಕೆ ಇತ್ತು, ಇಲ್ಲಿನ ವಿದ್ಯಾರ್ಥಿಗಳು,ಗ್ರಾಮಸ್ಥರು ನಗರ ಪ್ರದೇಶಗಳಿಗೆ ತೆರಳಲು ಪರದಾಡುತ್ತಿದ್ದರು ಈ ಬಗ್ಗೆ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಸಚಿವರು ಇಂದಿನಿಂದ ಬಸ್ಸ್ ಸೌಲಭ್ಯ ಕಲ್ಪಿಸಿದ್ದಾರೆ ಎಂದರು. ಬೆಳಿಗ್ಗೆ 8.30ಕೆ ಅರಕಲಗೂಡಿನಿಂದ ಹೊರಟು ಮಾಗಲು, ಅಂಕನಹಳ್ಳಿ ಮೂಲಕ ಶನಿವಾರಸಂತೆ ನಂತರ ಅರಕಲಗೂಡಿಗೆ ತೆರಳಲಿದೆ. ಸಂಜೆ 4 ಗಂಟೆಗೆ ಮತ್ತೊಂದು  ಬಸ್ ಇದೆ ಮಾರ್ಗವಾಗಿ ಸಂಚರಿಸಲಿದೆ ಎಂದರು. ಹಿಂದುಳಿದಿರುವ ಅಂಕನಳ್ಳಿ, ಮನೇಹಳ್ಳಿಯಂತ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಲಭ್ಯ ಮರೀಚಿಕೆಯಾಗಿ ತ್ತು …

Read More

ಮಡಿಕೇರಿ NEWS DESK ಆ.6 : ಕೇರಳದ ವಯನಾಡಿನಲ್ಲಿ ನಡೆದ ದುರಂತ ಮತ್ತು 2018, 2019 ರಲ್ಲಿ ಕೊಡಗಿನಲ್ಲಿ ನಡೆದಿರುವ ಮಳೆ ಅನಾಹುತದ ಆತಂಕ ಹಸಿರಾಗಿರುವ ಬೆನ್ನಲ್ಲೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಭೂ ಗರ್ಭ ಶಾಸ್ತ್ರಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಲು ಮುಂದಾಗಿದೆ. ಮುಂದಿನ ವಾರ ಈ ವಿಜ್ಞಾನಿಗಳ ತಂಡ ಜಿಲ್ಲೆಗೆ ಆಗಮಿಸುವ ನಿರೀಕ್ಷೆಗಳಿದ್ದು, ಭೂ ಕುಸಿತದ ಪ್ರದೇಶಗಳನ್ನು ಅಧ್ಯಯನ ನಡೆಸಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಭೂಕುಸಿತ ಘಟನೆ ವರದಿಯಾದ ಎಲ್ಲಾ ಗ್ರಾಮಗಳಿಗೂ ತೆರಳಿ ವಾಸ್ತವ ಸ್ಥಿತಿ, ಭೌಗೋಳಿಕ ಲಕ್ಷಣಗಳು, ಭೂಪದರಗಳ ರಚನೆ, ಕಲ್ಲಿನ ವಿಧಗಳು ಮತ್ತು ಭೂಕುಸಿತಕ್ಕೆ ಕಾರಣವಾದ ಅಂಶಗಳ ಕುರಿತು ಅಧ್ಯಯನ ನಡೆಸಲಿದೆ. ತಮ್ಮ ಪರಿಶೀಲನೆಯ ವರದಿಯನ್ನು ಜಿಲ್ಲಾಡಳಿತಕ್ಕೆ ನೀಡಲಿದ್ದಾರೆ ಎಂದು ಹೇಳಿದರು. ಜಿಎಸ್‌ಐ ವಿಜ್ಞಾನಿಗಳು 2018ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಪ್ರಾಕೃತಿಕ ವಿಕೋಪ ಸಂದರ್ಭ ಜಿಲ್ಲೆಗೆ ಆಗಮಿಸಿ ವಿವಿಧ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ವಿಜ್ಞಾನಿಗಳಾದ ಸುನಂದನ್…

Read More

ಸುಂಟಿಕೊಪ್ಪ NEWS DESK ಆ.6: ಚೆಟ್ಟಳ್ಳಿ ಚೇರಳ ಶ್ರೀಮಂಗಲ ಗ್ರಾಮದ ಹೊಸಮನೆ ಹೆಚ್.ಟಿ.ಪೂವಯ್ಯ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು ನಿರಂತರ ದಾಳಿ ಮಾಡುತ್ತಿದ್ದು ಕೃಷಿ ಫಸಲನ್ನು ನಾಶ ಪಡಿಸಿ ಸುಮಾರು 1.50 ಲಕ್ಷ ಅಧಿಕ ನಷ್ಟ ಸಂಭವಿಸಿದೆ ಎಂದು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಕಾಡಾನೆಗಳು ಈ ಭಾಗದಲ್ಲಿ ನಿರಂತರ ದಾಳಿ ಮಾಡುತ್ತಿದ್ದು ಹಗಲಿನಲ್ಲಿ ಬೇರೆಡೆ ವಾಸ್ಥವ್ಯ ಹೂಡುತ್ತಿದೆ. ರಾತ್ರಿ ವೇಳೆ ಆಗಮಿಸಿದ ಕಾಡಾನೆಗಳು ಅಡಿಕೆ, ಕಾಫಿ, ಕರಿಮೆಣಸು ಎಲ್ಲವನ್ನು ನಾಶಪಡಿಗಾಗಿದ್ದು ರೂ 1.50 ಲಕ್ಷದಷ್ಟು ಅಧಿಕ ನಷ್ಟ ಉಂಟಾಗಿದೆ ಆಳಲನ್ನು ತೋಡಿಕೊಂಡರು. ಪರಿಹಾರಕ್ಕೆ ಹಲವಾರು ಬಾರಿ ಮನವಿಸಲ್ಲಿಸಿದರೂ ಪರಿಹಾರ ಗಗನ ಕುಸುಮವಾಗಿದೆ. ಇದರಿಂದ ಕೃಷಿಯನ್ನು ನಂಬಿ ಜೀವನ ನಡೆಸುವವರಿಗೆ ಆನೆಕಾಟದಿಂದ ಮುಕ್ತಿಯಿಲ್ಲದಂತಾಗಿದೆ. ಇಲಾಖೆಯ ಅಧಿಕಾರಿಗಳು ಉಡಾಫೆ ಉತ್ತರವನ್ನು ನೀಡುತ್ತಾರೆ. ಪೊನ್ನತ್‌ಮೊಟ್ಟೆಯಿಂದ ಮೊದೂರು ಭಾಗದಲ್ಲಿ ಅಡೆತಡೆಯಿಲ್ಲದೆ ಆನೆಗಳು ಆರಾಮವಾಗಿ ಕಾಡಿನಿಂದ ನಾಡಿಗೆ ಲಗ್ಗೆಯಿಡುತ್ತಿದೆ. ಈ ಭಾಗದಲ್ಲಿ ಟ್ರಂಚ್, ಸೋಲಾರ್ ಬೇಲಿ,ದುರಸ್ಥಿಗೊಂಡು ಆನೆಗಳಿಗೆ ಈ ಭಾಗದಲ್ಲಿ ಆನೆಗಳ ಹಾವಳಿ…

Read More

ಕುಶಾಲನಗರ NEWS DESK ಆ.6 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೋಮವಾರಪೇಟೆ ತಾಲ್ಲೂಕಿನ ಆಶ್ರಯದಲ್ಲಿ ಕುಶಾಲನಗರ ಸಮೀಪ ಮಾದಾಪಟ್ಟಣ ಗ್ರಾಮದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯಗಳ ಬಳಕೆ ಮಾಹಿತಿ ಕಾರ್ಯಾಗಾರ ನಡೆಯಿತು. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಪತ್ರಕರ್ತೆ ಹಾಗೂ ನಾಟಿ ವೈದ್ಯರಾದ ವನಿತಾ ಚಂದ್ರಮೋಹನ್ ಮಾತನಾಡಿ ಪೌಷ್ಟಿಕ ಆಹಾರ ಪದ್ಧತಿ, ಪ್ರಕೃತಿದತ್ತ ಗಿಡಮೂಲಿಕೆಗಳ ಬಗ್ಗೆ  ಹಾಗೂ ಅದರಿಂದ ಉಂಟಾಗುವ ಪ್ರಯೋಜನಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಯೋಜನೆಯ ಕಾರ್ಯಕರ್ತರು ಸ್ವತಹ ತಯಾರಿಸಿ ತಂದ ಆಹಾರ ವಸ್ತುಗಳ ಪೌಷ್ಟಿಕತೆ ಮತ್ತಿತರ ಆರೋಗ್ಯ ವಿಷಯಗಳ ಪ್ರಾಮುಖ್ಯತೆ, ಔಷಧಿಯ ಗುಣಗಳ ಬಗ್ಗೆ  ಮಹಿಳೆಯರಿಗೆ ಅರಿವು ಮೂಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕ್ಷೇತ್ರ ಯೋಜನಾಧಿಕಾರಿ ಹೆಚ್ ರೋಹಿತ್ ಮಾತನಾಡಿದರು. ಸಂಘದ ಸದಸ್ಯರು ತಾವು ತಯಾರಿಸಿದ ಪೌಷ್ಠಿಕ ಆಹಾರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಆರೋಗ್ಯ…

Read More

ವಿರಾಜಪೇಟೆ NEWS DESK ಆ.6 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸ್ಪರ್ಧೆಯ ಸಂಚಾಲಕ ಎಂ.ಎ ಕೃಷ್ಣ ತಿಳಿಸಿದ್ದಾರೆ. ವಿರಾಜಪೇಟೆ ಭೌಗೋಳಿಕ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ನವ ಭಾರತ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದು ಶಾಲೆಯಿಂದ ಒಂದು ವಿದ್ಯಾರ್ಥಿ ಮತ್ತು ಒಂದು ವಿಧ್ಯಾರ್ಥಿನಿಗೆ ಮಾತ್ರ ಅವಕಾಶವಿರುತ್ತದೆ. ಕನ್ನಡ ಭಾಷೆಯಲ್ಲಿ ಮಾತ್ರ ಭಾಷಣ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ವ್ಯಾಸಾಂಗ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆಗೆ ಗರಿಷ್ಠ 3 ನಿಮಿಷ ಮಾತ್ರ ಅವಕಾಶವಿರುತ್ತದೆ. ಸಿದ್ದಾಪುರದ ವಿರಾಜಪೇಟೆ ರಸ್ತೆಯ ಸೆಂಟನರಿ ಚರ್ಚ್ ಹಾಲ್ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದ್ದು, ಆ.12 ರ ಒಳಗಾಗಿ ವಿದ್ಯಾರ್ಥಿಗಳ ಹೆಸರನ್ನು ನೊಂದಾಯಿಸಬೇಕು. ಆ.14 ರಂದು ಮದ್ಯಾಹ್ನ ವಿದ್ಯಾರ್ಥಿಗಳಿಗೆ ಭೋಜನದ…

Read More

ಮಡಿಕೇರಿ NEWS DESK ಆ.6 : ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆಗಸ್ಟ್ 31 ರವರೆಗೆ ರಕ್ಷಣಾ ಕಾರ್ಯಚರಣೆಯನ್ನು ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಕ್ಕಳ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ, ಅವರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ, ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವುದು ಹಾಗೂ ಕೆಲಸಕ್ಕೆ ನಿಯೋಜಿಸಿಕೊಂಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಈ ಕಾರ್ಯಾಚರಣೆಯ ಉದ್ದೇಶವಾಗಿರುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದ್ದಾರೆ. ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಆಗಸ್ಟ್ 31 ರ ವರೆಗೆ ಮಕ್ಕಳ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ತಪಾಸಣೆ ಮತ್ತು ಹಠಾತ್ ದಾಳಿ ನಡೆಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮಡಿಕೇರಿ ನಗರದ ಹಳೇ ಖಾಸಗಿ ಬಸ್ಸ್…

Read More

ಐಗೂರು NEWS DESK ಆ.6 : ಲೀಡ್ ಬ್ಯಾಂಕ್ ಕೊಡಗು ಮತ್ತು ನಬಾರ್ಡ್ ನ ಸಂಯುಕ್ತಾಶ್ರಯದಲ್ಲಿ ಐಗೂರಿನ ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷ ಯೋಜನೆ ಕಾರ್ಯಕ್ರಮ ನಡೆಯಿತು. ಪ್ರಧಾನ‌ಮಂತ್ರಿ ಜನ್ ಧನ ಯೋಜನೆ ಮತ್ತು ಪ್ರಧಾನಮಂತ್ರಿ ಬೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಯ ಬಗ್ಗೆ ಆರ್ಥಿಕ ಸಾಕ್ಷರತಾ ಸಮಾಲೋಚಕರಾದ ದಿವ್ಯಾ ಬಿ.ಸಿ ಹಾಗೂ ಹರೀಶ್ ಸಿ.ಜಿ ಅವರು ಗ್ರಾಹಕರಿಗೆ ವಿವರಿಸಿದರು. ಸಾಮಾನ್ಯ ಜನರಿಗೂ ಬ್ಯಾಂಕ್ ನ ಎಲ್ಲಾ ಯೋಜನೆಗಳ ಸೌಲಭ್ಯಗಳು ದೊರಕಬೇಕು ಎಂದರು. ಸೈಬರ್  ಕ್ರೈಮ್  ಬಗ್ಗೆ  ತಿಳಿಸಲಾಯಿತು. ಐಗೂರಿನ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ವ್ಯವಸ್ಥಾಪಕ ಪಯಾಪಲ್ಲಿ ಆನಂದ್ ಬಾಬು ಹಾಗೂ ಬ್ಯಾಂಕ್ ನ ಸಿಬ್ಬಂದಿಗಳು ಹಾಗೂ ಗ್ರಾಹಕರು ಭಾಗವಹಿಸಿದ್ದರು.

Read More

ಮಡಿಕೇರಿ NEWS DESK ಆ.6 : ಗರ್ಭಿಣಿ ಹಾಗೂ ಬಾಣಂತಿಯರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಶಿಶು ಮತ್ತು ತಾಯಿ ಮರಣ ಆಗದಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು. ಆಸ್ಪತ್ರೆಗೆ ಬರುವ ರೋಗಿಗಳನ್ನು ತಕ್ಷಣವೇ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಹೊರರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಲ್ಲಿ, ಹೆಚ್ಚಿನ ಕೌಂಟರ್‌ಗಳನ್ನು ತೆರೆಯಬೇಕು. ಸೂಕ್ತ ಸ್ಪಂದನೆ ಅತೀ ಮುಖ್ಯ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಪಡೆಯುವಂತಾಗಲು ಮಾಹಿತಿ ಶಿಕ್ಷಣದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಎಲ್ಲರಿಗೂ ಆರೋಗ್ಯ ಸೌಲಭ್ಯಗಳು ತಲುಪಬೇಕು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್…

Read More