ಲೇಖಕ: admin

ಮಡಿಕೇರಿ ಆ.5 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ 2ನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಿ, ಶುಭಕೋರಿದರು. ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ, ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ ಬಿ.ಸಿ.ಹರೀಶ್ ರೈ, ಬಂಟರ ಮಹಿಳಾ ಘಟಕದ ಉಪಾಧ್ಯಕ್ಷೆ ಬೇಬಿ ಜಯ ರಾಮ್ ರೈ, ಪ್ರಧಾನ ಕಾರ್ಯದರ್ಶಿ ಸುಜಾತ ಗಣೇಶ್ ರೈ, ಯುವ ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಸುಜಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತಿನ್ ರೈ, ಖಜಾಂಚಿ ಶಿವಪ್ರಸಾದ್ ರೈ, ನಿವೃತ್ತ ಪಿಎಸ್‍ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು…

Read More

ಮಡಿಕೇರಿ ಆ.5 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ…

Read More

ಗೋಣಿಕೊಪ್ಪ ಆ.5 NEWS DESK : ಕವಯತ್ರಿ ಹಾಗೂ ಲೇಖಕಿ ಸ್ಮಿತಾ ಅಮೃತರಾಜ್‍ಗೆ ರಾಜ್ಯ ಮಟ್ಟದ ಅಪ್ಪ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಅವರ ‘ನೆಲದಾಯ ಪರಿಮಳ’ ಲಲಿತ ಪ್ರಬಂಧ ಸಂಕಲನಕ್ಕೆ ರಾಜ್ಯ ಮಟ್ಟದ ‘ಅಪ್ಪ ಪ್ರಶಸ್ತಿ’ ದೊರೆತಿದೆ. ತುಮಕೂರಿನ ಕನ್ನಡ ಭವನದಲ್ಲಿ ನಡೆದ ‘ಮುಂಗಾರು ಕವಿಗೋಷ್ಠಿ’ಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಬಹುಮುಖಿ ಗೆಳೆಯರ ಬಳಗ, ಸುದ್ದಿ ಸಂಗಾತಿ ಧ್ವನಿ ಯೂಟ್ಯೂಬ್ ಚಾನಲ್ ಹಾಗೂ ಅಪೂರ್ವ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಚೊಚ್ಚಲ ವರ್ಷದ ಈ ‘ಅಪ್ಪ ಪ್ರಶಸ್ತಿ’ಯನ್ನು ಖ್ಯಾತ ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ, ಸಾಹಿತಿ ಮತ್ತು ಸಂಘಟಕ ಟಿ.ಸತೀಶ್ ಜವರೇಗೌಡ, ಲೇಖಕಿ ಬಾ.ಹ.ರಮಾಕುಮಾರಿ, ಹಡವನಹಳ್ಳಿ ವೀರಣ್ಣಗೌಡ ಉಪಸ್ಥಿತಿಯಲ್ಲಿ ಸ್ಮಿತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಐದು ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಪತ್ರ ಒಳಗೊಂಡಿದೆ. ಸ್ಮಿತಾ ಅಮೃತರಾಜ್ ಅವರು ಈ ವರೆಗೆ ಒಟ್ಟು ಏಳು ಪುಸ್ತಕಗಳನ್ನು ರಚಿಸಿದ್ದಾರೆ. ಕಾಲ ಕಾಯುವುದಿಲ್ಲ, ತುಟಿಯಂಚಿನಲ್ಲಿ…

Read More

ಮಡಿಕೇರಿ ಆ.5 NEWS DESK : ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಸರ್ಕಾರ ನಿವೇಶನ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಮುದ್ದ ಕಳಲ ಯುವಕ ಸಂಘದ ಜಿಲ್ಲಾಧ್ಯಕ್ಷ ಜ್ಯೋತಿ ಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ವತಂತ್ರ ಪೂರ್ವದಿಂದಲೇ ಸ್ವಂತ ಮನೆ ಇಲ್ಲದೆ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ವಿವಿಧ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಗಮನ ಸೆಳೆಯಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ್ಲ ಎಂದು ಆರೋಪಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನೆಲೆ ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಮನೆ ನಿರ್ಮಿಸಿಕೊಡುವ ಭರವಸೆ ನೀಡಿರುವುದು ಸ್ವಾಗತಾರ್ಹ. ಆದರೆ ನಮ್ಮ ರಾಜ್ಯದಲ್ಲೇ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ಸ್ವಂತ ಸೂರು ಮತ್ತು ವಿವಿಧ ಮೂಲಭೂತ ಸೌಲಭ್ಯಗಳಿಂದ…

Read More

ಮಡಿಕೇರಿ ಆ.5 NEWS DESK : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿರುವ ಹಿನ್ನೆಲೆ ಆ.7 ರಂದು ಬೆಂಗಳೂರಿನಲ್ಲಿ ನಡೆಯುವ “50 ವರ್ಷಗಳ ಸಂಭ್ರಮೋತ್ಸವ”ದಲ್ಲಿ ಕೊಡಗು ಜಿಲ್ಲೆಯ ದಲಿತ ಬಂಧುಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಮಿತಿಯ ಕೊಡಗು ಜಿಲ್ಲಾ ಘಟಕದ ಸಂಚಾಲಕಿ ಗಾಯತ್ರಿ ನರಸಿಂಹ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ ಬೆಂಗಳೂರಿನ ವಸಂತನಗರದ ಡಾ.ಅಂಬೇಡ್ಕರ್ ಭವನದಲ್ಲಿ ಸಂಭ್ರಮೋತ್ಸವದ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಪ್ರಗತಿಪರ ಚಿಂತಕ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಇಲಾಖಾ ಸಚಿವರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಕೊಡಗಿನ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ತುಳಿತಕ್ಕೊಳಗಾಗಿದ್ದ…

Read More

ಮಡಿಕೇರಿ ಆ.4 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಗಾಳಿ ಸಹಿತ ಮಹಾಮಳೆ ಅಪಾರ ನಷ್ಟಕ್ಕೆ ಕಾರಣವಾಗಿದೆ. ಒಂದು ತಿಂಗಳು ಸುರಿದ ಭಾರೀ ಮಳೆ ಬತ್ತಿ ಹೋಗಿದ್ದ ಕೆರೆ, ನದಿ, ಜಲಾಶಯಗಳನ್ನು ಭರ್ತಿ ಮಾಡಿ ಸಂತಸ ಮೂಡಿಸಿದ್ದರೆ, ಮತ್ತೊಂದೆಡೆ ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿ ಕ್ಷೇತ್ರಕ್ಕೆ ಹಾನಿಯಾಗಿದೆ. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ಸೇರಿದಂತೆ ಇಡೀ ಜಿಲ್ಲೆಯೆ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿತ್ತು. ಕಾವೇರಿ ಮತ್ತು ಲಕ್ಷ್ಮಣತೀರ್ಥ ನದಿ ಪಾತ್ರಗಳಲ್ಲಿ ಬರುವ 16 ಗ್ರಾಮಗಳು ನೆರೆ ಹಾವಳಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಲ್ಲದೆ, 269 ಮಂದಿ ತೊಂದರೆಗೆ ಒಳಗಾದರು. ಜಿಲ್ಲಾ ವ್ಯಾಪ್ತಿಯ 13 ಕಡೆಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸಿದ್ದರೆ, 20 ಕಡೆಗಳಲ್ಲಿ ಬರೆ ಕುಸಿತದ ಘಟನೆ ನಡೆದಿದೆ. ಇದರಿಂದ ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಇನ್ನಷ್ಟೆ ದುರಸ್ತಿ ಕಾಮಗಾರಿ ನಡೆಯಬೇಕಾಗಿದೆ. ::: ಮನೆಗಳಿಗೆ ಹಾನಿ ::: ಭಾರೀ ಪ್ರಮಾಣದ ಗಾಳಿ ಮಳೆಯಿಂದ ಜಿಲ್ಲಾ…

Read More

ಸೋಮವಾರಪೇಟೆ ಆ.5 NEWS DESK : ತೋಳೂರುಶೆಟ್ಟಳ್ಳಿ ಸುತ್ತಮುತ್ತಲ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಂತ್ರಸ್ತರಿಗೆ ಧೈರ್ಯ ಹೇಳಿದ ಅವರು ತೀವ್ರ ಸಂಕಷ್ಟದಲ್ಲಿರುವ ಕೆಲವು ಕುಟುಂಬಕ್ಕೆ ಪಡಿತರ ಸಾಮಾಗ್ರಿ ವಿತರಿಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು.

Read More

ನಾಪೋಕ್ಲು ಆ.5 NEWS DESK : ಮೊಬೈಲ್, ಟಿವಿಯಂತಹ ಮಾಧ್ಯಮಗಳಿಂದ ಮಕ್ಕಳು,ಯುವ ಜನಾಂಗದವರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ವಿದ್ಯೆಯಿಂದಷ್ಟೇ ಮುಂದೆ ಬರಲು ಸಾಧ್ಯ ಎಂದು ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ ಹೇಳಿದರು. ಬಿಲ್ಲವ ಸಮಾಜದ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಬೇಕಾದರೆ ವಿದ್ಯೆ ಮುಖ್ಯ.ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ನೀಡಬೇಕು. ಮೊಬೈಲ್ ನಿಂದ ಸಾಧ್ಯವಾದಷ್ಟು ದೂರವಿದ್ದು ಬಡ ಜನರಿಗೆ ಸಹಾಯ ಮಾಡಿ ಹೆಚ್ಚಿನ ವಿದ್ಯೆಯನ್ನುಗಳಿಸಲು ಪ್ರೋತ್ಸಾಹಿಸಬೇಕು ಎಂದರು. ಮಡಿಕೇರಿ ಬಿಲ್ಲವ ಸಮಾಜದ ಮಾಜಿ ಅಧ್ಯಕ್ಷ ಎಲಿಯಣ್ಣ ಪೂಜಾರಿ ಮಾತನಾಡಿ, ಸಂಘಟನೆಯಿಂದ ಯಶಸ್ಸು ಸಾಧ್ಯ ಎಂದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್ ಮಾತನಾಡಿ ಸಮಾಜದಲ್ಲಿ ವ್ಯಕ್ತಿ ಬೆಳೆಯುತ್ತಾ ಸಮಾಜ, ಸಂಸ್ಕೃತಿ, ಪದ್ಧತಿಗಳ ಬಗ್ಗೆ ಅರಿತುಕೊಳ್ಳಬೇಕು. ತಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಂಘದ ಅವಶ್ಯಕತೆ ಇದೆ ಎಂದರು. ಬಂಟ್ವಾಳದ ವಾಗ್ಮಿ ಶ್ರೀನಿಧಿ ಮಾತನಾಡಿ, ತುಳು…

Read More

ಬೆಳಗಾವಿ NEWS DESK ಆ.5 : ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು. ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ,…

Read More

ಮಡಿಕೇರಿ NEWS DESK ಆ.5 : ನಗರದ ಕೊಡಗು ವಿದ್ಯಾಲಯದ  ಎನ್.ಸಿ.ಸಿ ಕೆಡೆಟ್ ಗಳಾದ ಜ್ಯೋತಿರಾದಿತ್ಯ ಬಿ ವೈ., ಕೃತಾರ್ಥ್ ಸಿ. ಪಿ. ಮತ್ತು ಇರ್ಶಾನ್ ವಿ  ಐ.   ಇವರು ಕೊಡಗು, ಮಂಗಳೂರು, ಉಡುಪಿ, ಕುಂದಾಪುರ, ಶಿವಮೊಗ್ಗ ಒಳಗೊಂಡ   ಮಂಗಳೂರು ವಿಭಾಗ ಮಟ್ಟದ ಶೂಟಿಂಗ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ  6 ಜೂನಿಯರ್ ಕೆಡೆಟ್ ಗಳ ಪೈಕಿ ಈ 3 ಕೆಡೆಟ್ ಗಳು ಮಡಿಕೇರಿಯ ಕೊಡಗು ವಿದ್ಯಾಲಯದವರಾಗಿದ್ದು.  ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ಮಟ್ಟದ  ಶೂಟಿಂಗ್ ಸ್ಪರ್ಧೆಗೆ ಮಂಗಳೂರು ವಿಭಾಗ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಇವರು 14 ಕರ್ನಾಟಕ ಬೆಟಾಲಿಯನ್ ಎನ್.ಸಿ. ಸಿ.ಕೆಡೆಟ್ ಗಳಾಗಿದ್ದು. ಮೈಸೂರಿನಲ್ಲಿ ಆಗಸ್ಟ್ 1 ರಿಂದ 10 ರವರೆಗೆ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ವಿದ್ಯಾಲಯದ  ಪ್ರಕಟಣೆ ತಿಳಿಸಿದೆ.

Read More