ಮಡಿಕೇರಿ ಜು.1 NEWS DESK : ಕಡಂಗ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಬೈಚನ ವೈ.ಎ.ತಂಗಮ್ಮ ಮತ್ತು ಅವರ ಪತಿ ಬೈಚನ ಸೋಮಣ್ಣ ಶಾಲೆಯ ಮುಖ್ಯ ಶಿಕ್ಷಕರಾದ ಪಿ.ಎಂ.ಶಾಂತಿಕುಮಾರಿ ಅವರಿಗೆ 100 ಟೈ ಮತ್ತು ಬೆಲ್ಟ್ ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಲೇಖಕ: admin
ನಾಪೋಕ್ಲು ಜು.1 NEWS DESK : ಕೊಡಗು ಜಿಲ್ಲಾ ಪೊಲೀಸ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಹಾಗೂ ಎನ್.ಸಿ.ಸಿ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪದವಿ ಪೂರ್ವ ಕಾಲೇಜಿನಿಂದ ಮೂರ್ನಾಡು ಪಟ್ಟಣದಲ್ಲಿ ಜಾಥಾ ನಡೆಸಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಮೂರ್ನಾಡು ಪಟ್ಟಣದಲ್ಲಿ ವಿದ್ಯಾರ್ಥಿಗಳು ಕಲಾವೇದಿಕೆ, ಕುಶಾಲನಗರ ತಂಡ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗೆ ಮೂರ್ನಾಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಪ್ರತಿಜ್ಞಾವಿಧಿ ಬೋಧಿಸಿದರು. ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ, ಎನ್ ಸಿಸಿ ಅಧಿಕಾರಿ ಕಾವೇರಪ್ಪ, ಪ್ರಾಂಶುಪಾಲರಾದ ದೇವಕಿ, ಉಪನ್ಯಾಸಕಿ ರೋಹಿಣಿ, ಶಿಕ್ಷಕಿ ಉಷಾ, ರಶ್ಮಿ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜು.1 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಮಡಿಕೇರಿ ಜು.1 NEWS DESK : ಭಾಗಮಂಡಲ, ಚೇರಂಗಾಲ ಗ್ರಾಮದ ಕೋಳಿಕಾಡು ಪೈಸಾರಿಯ ನಿವಾಸಿ ಕೆ.ಪಿ.ಸುಂದರ (32) ಜೂ.24 ರಂದು ಕಾಣೆಯಾಗಿರುತ್ತಾರೆ. ಯಾರಾದರು ಕಂಡಲ್ಲಿ ದೂರವಾಣಿ ಸಂಖ್ಯೆ (81050 22032) ಯನ್ನು ಸಂಪರ್ಕಿಸುವಂತೆ ಸಹೋದರ ರವೀಂದ್ರ (ಬಾಲಾಜಿ) ಕೋರಿದ್ದಾರೆ.
ಮಡಿಕೇರಿ ಜು.1 NEWS DESK : ಪ್ರಸಕ್ತ(2024-24) ಸಾಲಿನ ಜೂನ್-2024ರ ಅಂತ್ಯದ ವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜು.6 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಜು.1 NEWS DESK : ಪ್ರಸಕ್ತ (2024-25) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿ.ಯು.ಸಿ. ಮತ್ತು ಪಿಯುಸಿ. ಸಮನಾಂತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://shp.karnataka.gov.in/bcwd ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಕೆಳಕಂಡಂತಿದೆ.…
ಮಡಿಕೇರಿ ಜು.1 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಾಲ್ಲೂಕು ಆಡಳಿತಾಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್ ಸೂಚನೆ ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಮಾಹಿತಿ ಪಡೆದು ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆಯಲ್ಲಿ 35 ಪ್ರಕಣಗಳು ಕಂಡು ಬಂದಿದೆ. ಡೆಂಗ್ಯೂ ವ್ಯಾಪಿಸದಂತೆ ತಡೆಕಟ್ಟಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ನಿಂತ ನೀರಿನಿಂದ ಬರುತ್ತದೆ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕು. ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ಧಿ ಸಾಧಿಸುವಂತೆ ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ಪಶುಪಾಲನ ಇಲಾಖೆಯಿಂದ ಈಗಾಗಲೇ ಹಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆಯನ್ನು ಶೇ.93ರಷ್ಟು…
ಮಡಿಕೇರಿ ಜು.1 NEWS DESK : ಸುಂಟಿಕೊಪ್ಪ ಮತ್ತು ಕುಶಾಲನಗರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರದ ನಂದಿಮೊಟ್ಟೆಯಲ್ಲಿ ನೆಲೆಸಿರುವ ಅಸ್ಸಾಂ ಮೂಲದ ತೋಮಿಜುದ್ದೀನ್ ಅನ್ವರ್ ಹುಸೈನ್ (23) ಎಂಬಾತನನ್ನು ಬಂಧಿಸಿ ಸುಮಾರು 750 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಸುಂಟಿಕೊಪ್ಪದ ತೋಟವೊಂದರ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್‍ಪಿ ಸುಂದರರಾಜ್ ಅವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಡಿವೈಎಸ್‍ಪಿ ಗಂಗಾಧರಪ್ಪ, ಕುಶಾಲನಗರ ಸಿಪಿಐ ರಾಜೇಶ್ ಕೋಟ್ಯಾನ್ ಸೂಚನೆ ಮೇರೆಗೆ ಠಾಣಾಧಿಕಾರಿ ರಮೇಶ್ ಪೆಡ್ಡಣನವರ್, ಅಪರಾಧ ವಿಭಾಗದ ಪಿಎಸ್‍ಐ ಸ್ವಾಮಿ, ಎಎಸ್‍ಐ ವೆಂಕಟೇಶ್, ಸಿಬ್ಬಂದಿಗಳಾದ ಸತೀಶ್, ಪ್ರಕಾಶ್, ಜೀವನ್, ಪ್ರವೀಣ್, ರಂಜೀತ್, ವೆಂಕಟೇಶ್, ರಮೇಶ್, ಜಗದೀಶ್, ಸೌಮ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.1 NEWS DESK : ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ. ಮೈಸೂರು ಮೂಲದ ಶಶಿ (30) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪ್ರವಾಸಿತಾಣಗಳನ್ನು ವೀಕ್ಷಿಸಲೆಂದು ಮೈಸೂರಿನಿಂದ ಸುಮಾರು 15 ಮಂದಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹದ ಶೋಧ ಕಾರ್ಯ ನಡೆದಿದೆ.
ಮಡಿಕೇರಿ ಜೂ.29 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಬಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲಾಗಿದೆ. ಸ್ಥಳೀಯರು ವಾಹನ ಸವಾರರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜು.1 ರಿಂದ ಜು.30 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ…






