ನವದೆಹಲಿ NEWS DESK ಆ.4 : (ಕೋವರ್ ಕೊಲ್ಲಿ ಇಂದ್ರೇಶ್) ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತದ ನಂತರ ಕೇಂದ್ರ ಸರ್ಕಾರ ಜುಲೈ 31 ರಂದು ವಿವರವಾದ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು , ಇದು ಸುಮಾರು ಶೇ.36 ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಪ್ರಸ್ತಾಪಿಸಿದೆ. ಈ ಪ್ರದೇಶವು ವಯನಾಡಿನ 13 ಹಳ್ಳಿಗಳನ್ನು ಮತ್ತು ಕೇರಳ ರಾಜ್ಯದಲ್ಲಿ ಸುಮಾರು 10,000 ಚದರ ಕಿ.ಮೀ. ಪ್ರದೇಶವನ್ನು ಸೂಕ್ಷ್ಮ ವ್ಯಾಪ್ತಿಗೆ ತರಲಾಗುತ್ತಿದೆ. ಆ ಪ್ರಕಾರ ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು ನಿರ್ಧರಿಸಿದೆ. ಈ ಕುರಿತು ಕೇಂದ್ರಕ್ಕೆ ತಮ್ಮ ಅಭಿಪ್ರಾಯಗಳನ್ನು ನೀಡಲು ನಾಗರಿಕರಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ, ನಂತರ ಅಂತಿಮ ಅಧಿಸೂಚನೆಯನ್ನು ರಾಜ್ಯವಾರು ಅಥವಾ ಸಂಯೋಜಿತ ಆದೇಶವನ್ನು ಪ್ರಕಟಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಮತ್ತು ಗುಜರಾತ್ -…
ಲೇಖಕ: admin
ಸೋಮವಾರಪೇಟೆ NEWS DESK ಆ.3 : ಸೋಮವಾರಪೇಟೆ ಸಮೀಪದ ನಗರೂರು ಗ್ರಾಮ ನಿವಾಸಿ ದಿ. ಅಪ್ಪಯ್ಯ ಅವರ ಪುತ್ರಿ ಪಾರ್ವತಿ (55) ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರ, ಈರ್ವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರೂರು ತೋಟದಲ್ಲಿ ನಡೆಯಲಿದೆ.
ಸೋಮವಾರಪೇಟೆ NEWS DESK ಆ.3 : ಸಮೀಪದ ಗಾಂಧಿನಗರದಲ್ಲಿರುವ ಶ್ರೀ ದೊಡ್ಡಮಾರಿಯಮ್ಮ ದೇವಾಲಯದಲ್ಲಿ ಆಷಾಡ ಮಾಸದ ವಿಶೇಷ ಪೂಜೋತ್ಸವ ಹಲವು ಪೂಜಾ ವಿಧಿ ವಿಧಾನಗಳೊಂದಿಗೆ ಶುಕ್ರವಾರ ನೆರವೇರಿತು. ದೇವಾಲಯದ ಪ್ರಧಾನ ಅರ್ಚಕ ಬಸವಕುಮಾರ್ ಶಾಸ್ತ್ರಿ ಅವರ ಪೌರೋಹಿತ್ಯದಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರದಂದು ದೇವಿಗೆ ವಿಶೇಷ ಅಲಂಕಾರಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆಷಾಡ ಮಾಸದ ಕೊನೆಯ ಶುಕ್ರವಾರದಂದು ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ಸೇವೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷ ಗಂಗಾಧರ್ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಭಾಗವಹಿಸಿದ್ದರು.
ಸೋಮವಾರಪೇಟೆ NEWS DESK ಅ.3 : ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಟಿ 18 ರ ಅಂಗವಾಗಿ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮಧುಭಾನ ಸೊಪ್ಪಿನ ಪಾಯಸವನ್ನು ಶನಿವಾರ ವಿತರಿಸಲಾಯಿತು. ಕೊಡಗಿನಲ್ಲಿ ಆಟಿ 18 ರ ಸಂದರ್ಭ ಔಷಧೀಯ ಗುಣಗಳುಳ್ಳ ಸೊಪ್ಪಿನ ಮಹತ್ವದ ಕುರಿತು ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಧುಭಾನ ಸೊಪ್ಪಿನಿಂದ ಮಾಡಿದ ಖಾದ್ಯಗಳಲ್ಲಿ ಔಷಧಿ ಗುಣವಿರುತ್ತದೆ ಎಂಬ ನಂಬಿಕೆ ಜನರಲ್ಲಿದೆ. ವರ್ಷಕ್ಕೊಮ್ಮೆ ಈ ಸೊಪ್ಪಿನಿಂದ ತಯಾರಿಸಿದ ಖಾದ್ಯವನ್ನು ಸೇವಿಸುವುದು ವಾಡಿಕೆ. ವಿಶೇಷ ಪರಿಮಳಯುಕ್ತವಾಗಿರುವ ಈ ಗಿಡಕ್ಕೆ ಆರೋಗ್ಯ ಪೂರಕ ಹಾಗು ಹಲವು ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ ಎನ್ನಲಾಗುತ್ತದೆ ಎಂದು ಹೇಳಿದರು. ಸಹಶಿಕ್ಷಕರುಗಳಾದ ಎಸ್.ಎಸ್.ರಂಜಿತ, ಕೃಷ್ಣಪ್ಪ, ರೇಖಾ, ಮಂಜುನಾಥ್, ಗುಲಾಬಿ ಮತ್ತು ಅಕ್ಷರ ದಾಸೋಅ ಸಿಬ್ಬಂದಿಗಳು ಇದ್ದರು.
ಮಡಿಕೇರಿ NEWS DESK ಆ.3 : ವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ಜೀವನದಿ ಕಾವೇರಿಗೆ ಆರತಿ ಬೆಳಗುವ ಕುರಿತು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸ್ವಾಗತಿಸಿರುವ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚ0ದ್ರಮೋಹನ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕಾವೇರಿ ಆರತಿ ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯಲ್ಲೇ ಆಗಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.
ಕೇರಳ NEWS DESK ಆ.3 : ವಯನಾಡಿನ ಚೂರಲ್ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಪಾರಾದವರು ಈಗ ಸಂತ್ರಸ್ತರ ಶಿಬಿರದಲ್ಲಿದ್ದಾರೆ. ತಮ್ಮ ಒಡಹುಟ್ಟಿದವರು, ಕುಟುಂಬದ ಸದಸ್ಯರನ್ನು ಕಳೆದುಕೊಂಡು ಇವರು ಕಣ್ಣೀರು ಹಾಕುತ್ತಿದ್ದಾರೆ. ಭೂಕುಸಿತ ಸಂಭವಿಸಿದ ಆ ರಾತ್ರಿ ಪ್ರಾಣಾಪಾಯದಿಂದ ಪಾರಾದವರಿದ್ದಾರೆ. ಹಾಗೆ ಪಾರಾದ ಸುಜಾತಾ ಮತ್ತು ಅವರ ಕುಟುಂಬಕ್ಕೆ ಕಾಡಾನೆಯೊಂದು ಬೆಟ್ಟದಲ್ಲಿ ಕಾವಲಾಗಿ ನಿಂತಿತ್ತು. ” ಅದು ಸೋಮವಾರ ರಾತ್ರಿ 4 ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1.15 ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು . ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ…
ಮಡಿಕೇರಿ NEWS DESK ಆ.3 : ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲೇ ಜಿಲ್ಲಾ ಸಮಿತಿ ಮುಂದುವರಿಯಲಿದೆ. ಮನು ಸೋಮಯ್ಯ ಸೇರಿದಂತೆ ಕೆಲವರನ್ನು ಪದಚ್ಯುತಗೊಳಿಸಿರುವ ರಾಜ್ಯ ಪದಾಧಿಕಾರಿಗಳ ಕ್ರಮ ಖಂಡನೀಯವೆಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ 5 ತಾಲ್ಲೂಕು ರೈತ ಸಂಘಟನೆಗಳು ಮನು ಸೋಮಯ್ಯ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲಾ ರೈತ ಸಂಘದ ಹೆಸರಿನಲ್ಲಿ ಮುನ್ನಡೆಯಲು ನಿರ್ಣಯ ಕೈಗೊಂಡಿವೆ ಎಂದರು. ಮನು ಸೋಮಯ್ಯ ಅವರ ಬೆಳವಣಿಗೆ ಮತ್ತು ಹೋರಾಟವನ್ನು ಸಹಿಸದೆ ರೈತ ಸಂಘದ ಕೆಲವು ರಾಜ್ಯ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರ ಸಹಿತ ಕೆಲವು ಪದಾಧಿಕಾರಿಗಳನ್ನು ಪದಚ್ಯುತಿಗೊಳಿಸಿದ್ದಾರೆ. ರೈತ ಸಂಘದ ರಾಜ್ಯ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಅಧಿಕಾರದಲ್ಲಿ ಮುಂದುವರೆಯುವ ಮೂಲಕ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜು.23ರಂದು ಕೊಡಗು ಜಿಲ್ಲೆಯ ಸಮಿತಿಗಳ ಸಭೆ ನಡೆಸಿ ರಾಜ್ಯ ಸಮಿತಿಯ ನಿರ್ಧಾರವನ್ನು ಖಂಡಿಸಲಾಗಿದೆ. ಅಲ್ಲದೆ ಮನು ಸೋಮಯ್ಯ…
ಮಡಿಕೇರಿ ಆ.3 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಡಿಕೇರಿ ಆ.3 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಲೇಖಕರು ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಅಜ್ಜಿ ಕಥೆ, ಜಾನಪದ, ವಿಚಾರ ಸಾಹಿತ್ಯ, ಲಲಿತ ಪ್ರಬಂಧ, ಸಂಶೋಧನ ಕೃತಿಗಳು ಮತ್ತಿತರವನ್ನು ಅರೆಭಾಷೆಯಲ್ಲಿ ಬರಹದಲ್ಲಿ ಬರೆದು ಹಸ್ತಪ್ರತಿಯನ್ನು ಅಕಾಡೆಮಿಗೆ ಸಲ್ಲಿಸುವಂತೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮತ್ತು ರಿಜಿಸ್ಟ್ರಾರ್ ಚಿನ್ನಸ್ವಾಮಿ ಅವರು ಕೋರಿದ್ದಾರೆ. ತಮ್ಮ ಹಸ್ತಪ್ರತಿಗಳನ್ನು ಸಲ್ಲಿಸಲು 2024 ಆಗಸ್ಟ್ 31 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ ನಂ 6362522677 ಸಂಪರ್ಕಿಸಬಹುದು. arebaseacademy@gmail.com ವಿಶೇಷ ಸೂಚನೆ ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದಾಗಿದೆ. ಹಾಗೂ ಬರಹ ಕನಿಷ್ಟ 70 ರಿಂದ 80 ಪುಟಗಳಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಆ.3 NEWS DESK : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ. ಯೋಜನೆಗಳ ವಿವರ: ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವುಜಲಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆಯ (ಹೊಸದಾಗಿ), ಅರಿವು ಶೈಕ್ಷಣಿಕ ಸಾಲ ಯೋಜನೆಯ(ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ನವೀಕರಣ) ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆಯ, ಸ್ವಾವಲಂಬಿ ಸಾರಥಿಯೋಜನೆ, ಸ್ವಾತಂತ್ರ್ಯಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆ. ಅರ್ಜಿ ಸಲ್ಲಿಸಲು ಕರ್ನಾಟಕ ಮರಾಠ ಸಮುದಾಯಗಳ…






