ಮಡಿಕೇರಿ ಆ.3 NEWS DESK : ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆರ್.ಐಶ್ವರ್ಯ ಕೆಎಎಸ್ ಹಿರಿಯ ಶ್ರೇಣಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ವಿಶೇಷ ಜಿಲ್ಲಾಧಿಕಾರಿಯಗಿ ಕಾರ್ಯನಿರ್ವಹಿಸಿದ್ದಾರೆ.
ಲೇಖಕ: admin
ಬೆಂಗಳೂರು ಆ.3 NEWS DESK : ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.
ವಿರಾಜಪೇಟೆ ಆ.2 NEWS DESK : ಪ್ರತಿಯೊಬ್ಬರ ಬದುಕಿನಲ್ಲೂ ಗುರುವಾಗಿ ಯಾರಾದರೊಬ್ಬರು ಜೀವನಕ್ಕೆ ಸರಿಯಾದ ಮಾರ್ಗದರ್ಶನವನ್ನು ತೋರಿಸುತ್ತಾರೆ. ಅಂತಹ ವ್ಯಕ್ತಿಗಳಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಆಷಾಢ ತಿಂಗಳ ಹುಣ್ಣಿಮೆಯಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನ ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ ಎಂದು ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಸಂಸ್ಥಾಪಕರು, ವಿದುಷಿ ಹೇಮಾವತಿ ಹೇಳಿದರು. ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳಿಂದ ರೋಟರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ನಟರಾಜನಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳು ನೃತ್ಯ ಸಂಸ್ಥೆಯ ಸಂಸ್ಥಾಪಕರು ಹಾಗೂ ಗುರುಗಳಾದ ಹೇಮಾವತಿ ಮತ್ತು ಅವರ ಪತಿ ಕಾಂತರಾಜ್ ಅವರಿಗೆ ಗುರು ಪೂಜೆ ಸಲ್ಲಿಸಿ ಸನ್ಮಾನಿಸಿದರು. ಪೂಜೆಯ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಹೇಮಾವತಿ ಅವರು ಬದುಕಿನ ಮೌಲ್ಯಗಳನ್ನು ತಿಳಿಸುವ ಗುರುವಿಗೆ ಪ್ರತಿಯೊಬ್ಬರ ಜೀವನದಲ್ಲೂ ಅತ್ಯಂತ ಉನ್ನತ ಮತ್ತು ಗೌರವದ ಸ್ಥಾನಮಾನವಿದೆ. ಜೀವನ ಮತ್ತು ಆಧ್ಯಾತ್ಮಿಕ ಶಕ್ತಿಯ ಮೌಲ್ಯವನ್ನು ತಿಳಿಸುವ ಗುರುವಿಗೆ ಗೌರವ ಸಲ್ಲಿಸಲು ಗುರುಪೂರ್ಣಿಮೆಯನ್ನು ಪ್ರತಿ ವರ್ಷ…
ಮಡಿಕೇರಿ ಆ.3 NEWS DESK : ಪ್ರವಾಸಿಗರನ್ನು ಆಕರ್ಷಿಸುವ ಕೊಡಗಿನ ತಾಣಗಳಲ್ಲಿ ಒಂದಾಗಿರುವ ಇರ್ಪು ಜಲಪಾತ ಮಳೆಯಿಂದ ಧುಮ್ಮಿಕ್ಕಿ ಹರಿಯುತ್ತಿದ್ದು, ಅದರ ನಯನ ಮನೋಹರ ದೃಶ್ಯ.
ಮಡಿಕೇರಿ ಆ.3 NEWS DESK : ಕೊಡಗು ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಮಳೆಹಾನಿ ಪ್ರದೇಶ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ ಸಂದರ್ಭ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಯೂನಿಯನ್‍ನ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಜಿಲ್ಲೆಯಲ್ಲಿ ಸುಮಾರು ಆರೂವರೆ ಲಕ್ಷ ಜನಸಂಖ್ಯೆಯಿದ್ದು, ಕಾಫಿ, ಮೆಣಸು, ಅಡಿಕೆ, ರಬ್ಬರ್, ಚಹಾ ಇನ್ನಿತರೆ ವಾಣಿಜ್ಯ ಬೆಳೆಗಳನ್ನು ಯಥೇಚ್ಛವಾಗಿ ಬೆಳೆಯುವ ಪ್ರದೇಶವಾಗಿದೆ. ಭಾರತ ಕಾಫಿ ಉತ್ಪಾದನೆಯಲ್ಲಿ ಕೊಡಗು ಉತ್ತಮ ಸ್ಥಾನದಲ್ಲಿದೆ. ಆದರೆ ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು, ಸಂಘಟಿತ ಮತ್ತು ಅಸಂಘಟಿತ…
ಮಡಿಕೇರಿ ಆ.3 NEWS DESK : ತೋಟದ ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ಲೂರು ತೋಟದಲ್ಲಿ ನಡೆದಿದೆ. ನಲ್ಲೂರು ತೋಟದಲ್ಲಿ ಎಂದಿನಂತೆ ಕಾರ್ಮಿಕರು ತೋಟದ ಕೆಲಸಕ್ಕೆಂದು ತಯಾರಾಗುತ್ತಿದ್ದಾಗ ಮಹಿಳೆ ಮಹದೇವಮ್ಮ ಎಂಬುವವರ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ಮಹದೇವಮ್ಮ ಕಾಫಿ ಗಿಡದ ಮೇಲೆ ಬಿದ್ದ ಪರಿಣಾಮ ತೊಡೆಭಾಗಕ್ಕೆ ಗಂಭೀರ ಗಾಯವಾಗಿದೆ. ಕಾರ್ಮಿಕರು ಬೊಬ್ಬೆ ಹಾಕಿದ ಸಂದರ್ಭ ಆನೆ ಸ್ಥಳದಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ಮಹದೇವಮ್ಮ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿದ್ದಾಪುರ ಆ.3 NEWS DESK : ನೆಲ್ಲಿಹುದಿಕೇರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ 24 ಗಂಟೆಯೂ ಖಾತೆದಾರರ ಸೇವೆಗೆ ಸಿಗುವಂತೆ ಮಾಡಬೇಕು ಮತ್ತು ಸಿಬ್ಬಂದಿಗಳ ಕೊರತೆಯನ್ನು ತುಂಬಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥ ಪಿ.ಆರ್.ಭರತ್ ಮಾತನಾಡಿ, ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಗ್ರಾಮದಲ್ಲಿ ಕೇವಲ ಒಂದು ಬ್ಯಾಂಕ್ ಇದ್ದು, ಇದರ ಎಟಿಎಂ ಯಂತ್ರ ಬ್ಯಾಂಕ್ ನ ಒಳ ಭಾಗದಲ್ಲಿದೆ. ಇದರಿಂದ ಗ್ರಾಹಕರಿಗೆ ಎಟಿಎಂ ಸೇವೆ ಸರಿಯಾಗಿ ದೊರೆಯುತ್ತಿಲ್ಲ. ತಕ್ಷಣ ಎಟಿಎಂ ಯಂತ್ರವನ್ನು ಬ್ಯಾಂಕ್ ನ ಹೊರ ಭಾಗದಲ್ಲಿ ಸ್ಥಾಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸ್ಥಳೀಯರಾದ ಅಜೀಜ್ ಮಾತನಾಡಿ, ಬ್ಯಾಂಕಿನಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಗ್ರಾಹಕರಿಗೆ ಸೂಕ್ತ ಸೇವೆ ದೊರೆಯುತ್ತಿಲ್ಲ. ಎಂಟರಿಂದ ಹತ್ತು ಜನ ಸಿಬ್ಬಂದಿಗಳು ಕೆಲಸ ಮಾಡಬೇಕಿರುವ ಬ್ಯಾಂಕ್ ನಲ್ಲಿ ಕೇವಲ ಮೂರರಿಂದ ನಾಲ್ಕು ಮಂದಿ ಇದ್ದಾರೆ. ಕಾರ್ಮಿಕರೇ ಹೆಚ್ಚಿರುವ ಈ ಪ್ರದೇಶದಲ್ಲಿ ಬ್ಯಾಂಕ್ ನ ಕೆಲವು ಅವ್ಯವಸ್ಥೆಯಿಂದಾಗಿ…
ಮಡಿಕೇರಿ ಆ.3 NEWS DESK : ಆಟಿ ಪ್ರಯುಕ್ತ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಸಹಯೋಗದಲ್ಲಿ ಆ.4 ರಂದು ಎರಡನೇ ವರ್ಷದ ಆಟಿಡೊಂಜಿ ದಿನ ಬಂಟೆರೆನ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಸದಾನಂದ ರೈ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಐತ್ತಪ್ಪ ರೈ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸದಾಶಿವ ರೈ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ನಿವೃತ್ತ ಪಿಎಸ್‌ಐ ಬಾಲಕೃಷ್ಣ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಹಾಗೂ ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಮತ್ತು ಮಡಿಕೇರಿ ನಗರ ಬಂಟರ ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸಂಜೆ 4.30 ಗಂಟೆಗೆ ನಡೆಯಲಿರುವ ಸಮಾರೋಪ…
ನಾಪೋಕ್ಲು ಆ.2 NEWS DESK : ಸ್ಥಳೀಯ ಕೆಪಿಎಸ್ ಶಾಲೆ ಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪಿ.ಎ. ಚಂದ್ರಕಲಾ ಹಾಗೂ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ.ಎಲಿಜಬೆತ್ ನಿವೃತ್ತಿ ಹೊಂದಿದ್ದು, ಇವರಿಗೆ ಶಾಲೆಯ ವತಿಯಿಂದ ಬೀಳ್ಕೊಡಲಾಗಿಯಿತು. ಇವರಿಗೆ ನಾಪೋಕ್ಲು ಕ್ಲಸ್ಟರ್ ನ ನಿಯೋಜಿತ ಸಿ ಆರ್ ಪಿ ಹಾಗೂ ಮಡಿಕೇರಿ ತಾಲೂಕಿನ ಬಿ ಆರ್ ಪಿ ಮಂಜುಳಾ ಚಿತ್ರಾಪುರ ಅವರು ಮಡಿಕೇರಿ ಬಿ.ಆರ್.ಸಿ ಕೇಂದ್ರದಲ್ಲಿ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು, ಶಿಕ್ಷಣ ಸಂಯೋಜಕರು, ಮೇಕೇರಿ ಸಿಆರ್ಪಿ ಹಾಗೂ ನಿವೃತ್ತ ಶಿಕ್ಷಕರ ಕುಟುಂಬ ವರ್ಗದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.3 NEWS DESK : ಕೊಡಗಿನಲ್ಲಿ ಕಕ್ಕಡ ತಿಂಗಳ 18ನೇ ದಿನದಂದು ವಿಶೇಷ ಹಬ್ಬದ ದಿನ. ಈ ಹಬ್ಬವು ಕೊಡಗಿನಲ್ಲಿ ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಕ್ಕಡ-18 ಹಾಗೂ ತುಳು ಭಾಷಿಕರ ಆಟಿ ಆಚರಣೆಯನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಗುತ್ತದೆ. ಕನ್ನಡದಲ್ಲಿ ಬಳಕೆಯಲ್ಲಿರುವ ಆಷಾಡ ಎಂಬ ಪದವೇ ಕೊಡವರ ಕಕ್ಕಡ ಹಾಗೂ ತುಳು ಭಾಷಿಕರ ಆಟಿ ಆಚರಣೆಯಾಗಿದೆ. ಈ ತಿಂಗಳಲ್ಲಿ ಮದ್ದು ಸೊಪ್ಪುವಿನಿಂದ ತಯಾರಿಸಿದ ತಿನಿಸುಗಳಿಗೆ ವಿಶೇಷ ಬೇಡಿಕೆ. ಈ ತಿಂಗಳಲ್ಲಿ ಮದ್ದು ಸೊಪ್ಪು ಎನ್ನುವ ಸಸ್ಯದಲ್ಲಿ-18 ತರಹದ ಔಷಧಿಯು ತುಂಬಿರುತ್ತದೆ ಎಂಬ ನಂಬಿಕೆ. ಅದರಂತೆ ಕಾಡಿನಲ್ಲಿ ಬರೆ ಕರೆಗಳಲ್ಲಿ ಬೆಳೆಯುವ ಈ ಔಷಧ ಗಿಡ 18ನೇ ದಿನದಂದು ಸುವಾಸನೆಯನ್ನು ಬೀರುತ್ತದೆ. ಆಟಿ (ಕಕ್ಕಡ) 18 ರಂದು ಉಪಯೋಗಿಸುವ ಮದ್ದು ಸೊಪ್ಪು ಮಾತ್ರ ತನ್ನದೆ ಆದ ಔಷಧಿಯ ಗುಣವನ್ನು ಹೊಂದಿದೆ ಎಂಬ ನಂಬಿಕೆ ಜನರಲ್ಲಿದೆ. ಇದು ಗ್ರಾಮೀಣ ಪ್ರದೇಶದ ಜನರು ಬಳಸುವ ಬಲು ಪ್ರಮುಖ ಜೌಷಧಿಯ ಸಸ್ಯ ಎಂದೇ ಪ್ರಚಲಿತ. ಈ ಸೊಪ್ಪನ್ನು…






