ಮಡಿಕೇರಿ ಆ.3 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು ಆ.9 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಬಿ.ಪ್ರವೀಣ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಆ.3 NEWS DESK : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಸ್ 2024 ರ ಮಾಹೆಯಲ್ಲಿ ಆಗಸ್ಟ್, 31 ರವರೆಗೆ ಶೇ.50 ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹಾಗೂ ಆನ್‍ಲೈನ್ ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಓದುಗರು www.kuvempubhashabharathi.karnataka.gov.in ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ರಿಜಿಸ್ಟ್ರಾರ್, ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು ಇವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಲು ಹಾಗೂ ಪುಸ್ತಕವನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನವದೆಹಲಿ ಆ.3 NEWS DESK : ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ತ್ರೈವಾರ್ಷಿಕ ಆಯೋಜಿಸಿದ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು ಪ್ರಧಾನಿ ಮೋದಿ ಇಂದು ದೆಹಲಿಯ ಪುಸಾ ಇನ್‌ಸ್ಟಿಟ್ಯೂಟ್‌ನಲ್ಲಿ ಉದ್ಘಾಟಿಸಿದರು.
ಮಡಿಕೇರಿ NEWS DESK ಆ.3 : ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ಎಚ್ಚರಿಕೆಯ ಗಂಟೆಯಾಗಿವೆ. ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ. ಈ…
ಸುಂಟಿಕೊಪ್ಪ,ಆ.3 NEWS DESK : ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಿನ ತೋಟದಲ್ಲಿ ಕಡು ಬಡತನದಲ್ಲಿರುವ ವೃದ್ಧ ದಂಪತಿಗಳಿಗೆ ಬಿಜೆಪಿ ಕಾರ್ಯಕರ್ತರು ನೆರವು ನೀಡಿದರು. ಗ್ರಾಮದ ಮಾಹಿಲ ಮತ್ತು ಗಿರಿಜ ದಂಪತಿಗಳ ಮನೆಗೆ ಭೇಟಿದ ನೀಡಿದ ಜಿಲ್ಲಾ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಬಿ.ಬಿ.ಭಾರತೀಶ್, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಸೋಮವಾರಪೇಟೆ ಮಂಡಲ ಓಬಿಸಿ ಅಧ್ಯಕ್ಷ ಪಿಆರ್ ಸುನಿಲ್ ಕುಮಾರ್ ದಂಪತಿಗಳಿಗೆ ಆಹಾರ ಕಿಟ್ ವಿತರಿಸಿದರಲ್ಲದೆ, ಮಳೆಯಿಂದ ಶಿಥಿಲಾವಸ್ಥೆಯಿಂದ ಸೋರುತ್ತಿದ್ದನ್ನು ಮನಗಂಡು ಮನೆಯ ಮೇಲ್ಛಾವಣಿಗೆ ಪ್ಲಾಸ್ಟಿಕ್ ಹೊದಿಕೆಯನ್ನು ನೀಡಿದರು. ಮನೆಯ ನಿರ್ಮಾಣಕ್ಕೆ ಪಂಚಾಯಿತಿ ವತಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಹಕರಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಈ ಸಂದರ್ಭ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪದ್ಮನಾಭ, ಗ್ರಾ.ಪಂ ಮಾಜಿ ಅಧ್ಯಕ್ಷ ಪದ್ಮನಾಭ, ಲಿಖಿತ್ ದಾಮೋದರ ಹೊಸತೋಟ, ಭೂತ್ ಅಧ್ಯಕ್ಷ ಚಿದಾನಂದ ಉಲ್ಲಾಸ್, ಸುಂಟಿಕೊಪ್ಪ ಶಕ್ತಿ ಕೇಂದ್ರ ಅಧ್ಯಕ್ಷ ಧನು ಕಾವೇರಪ್ಪ, ಕೆದಕಲ್ ಕನೀಸ್ ಸೇರಿದಂತೆ ಮತ್ತಿತರರು ಇದ್ದರು.
ಮಡಿಕೇರಿ NEWS DESK ಆ.3 : ಒಂಟಿ ಸಲಗವೊಂದು ದಾಳಿ ಮಾಡಿದ ಸಂದರ್ಭ ಸಮಯ ಪ್ರಜ್ಞೆಯಿಂದ ವಾಟರ್ ಮ್ಯಾನ್ ವೊಬ್ಬರು ಜೀವ ಉಳಿಸಿಕೊಂಡ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ 7ನೇ ಹೊಸಕೋಟೆ ಅಂದಗೋವೆ ಗ್ರಾಮದಲ್ಲಿ ನಡೆದಿದೆ. ಕೊಡಗರಹಳ್ಳಿ ಗ್ರಾಮಸ್ಥರನ್ನು ನಿತ್ಯ ಕಾಡುತ್ತಿರುವ ಕಾಡಾನೆಯೊಂದು ಇಂದು ಕೂಡ ಬೆಳ್ಳಂಬೆಳಗ್ಗೆ ಅಂದಗೋವೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿದೆ. ಕೊಡಗರಹಳ್ಳಿ ಗ್ರಾ.ಪಂ ಯ ವಾಟರ್ ಮ್ಯಾನ್ ಹುಸೇನ್ ಎಂಬುವವರು ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ಆನೆ ದಿಢೀರ್ ದಾಳಿ ಮಾಡಿದೆ. ಸೊಂಡಿಲಿನಿಂದ ತಳ್ಳಿದ ಪರಿಣಾಮ ಮೋರಿಯ ಪೈಪ್ ವೊಂದರ ಬಳಿ ಹುಸೇನ್ ಬಿದ್ದಿದ್ದಾರೆ. ಆನೆ ಮತ್ತೆ ದಾಳಿ ಮಾಡಲು ಧಾವಿಸಿದಾಗ ಸಮಯ ಪ್ರಜ್ಞೆ ಮೆರೆದ ಹುಸೇನ್ ಅವರು ಮೋರಿಯ ಪೈಪ್ ನೊಳಗೆ ನುಸುಳಿಕೊಂಡಿದ್ದಾರೆ. ಆದರೂ ಬಿಡದ ಕಾಡಾನೆ ಪೈನ್ ಮೇಲೆ ದಾಳಿ ಮಾಡಿ ಹಾನಿ ಮಾಡಿದೆ. ಅದೃಷ್ಟವಶಾತ್ ಹುಸೇನ್ ಅವರು ಜೀವ ಉಳಿಸಿಕೊಂಡಿದ್ದಾರೆ. ಕಾಡಾನೆ ತೆರಳಿದ ನಂತರ ಗ್ರಾಮಸ್ಥರು ಗಾಯಾಳು ಹುಸೇನ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸುಂಟಿಕೊಪ್ಪ, ಕೊಡಗರಹಳ್ಳಿ, 7ನೇ…
ಮಡಿಕೇರಿ NEWS DESK ಆ.3 : ಚಿಕ್ಕಮಗಳೂರಿನಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕೊಡ್ಲಿಪೇಟೆಯಿಂದ ಕಾಗನೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಇಂದು ಬೆಳಿಗ್ಗೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಕೊಡ್ಲಿಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೊಡ್ಲಿಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಆ.2 : ಕೊಡಗು ಜಿಲ್ಲೆಯಲ್ಲಿ 2018-19 ನೇ ಸಾಲಿನಲ್ಲಿ ನಡೆದ ಪ್ರಾಕೃತಿಕ ವಿಕೋಪ ಸೇರಿದಂತೆ ಕೊರೋನ ಸಂಕಷ್ಟಗಳ ನಡುವೆಯೂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿರುವ ಜಿಲ್ಲೆಯ ಗುತ್ತಿಗೆದಾರರಿಗೆ ವಿವಿಧ ಇಲಾಖೆಗಳಿಂದ ಒಟ್ಟು 165.84 ಕೋಟಿ ಗುತ್ತಿಗೆ ಹಣ ಪಾವತಿಗೆ ಬಾಕಿ ಇದೆ ಎಂದು ಮಡಿಕೇರಿ ತಾಲ್ಲೂಕು PWD ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ ಲೋಚನ ಬಿ.ಪಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಬಾರಿ ಸರ್ಕಾರ, ಸಂಬಂಧಪಟ್ಟ ಶಾಸಕರು, ಸಂಸದರಿಗೆ, ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದರು ಬಾಕಿ ಮೊತ್ತ ಪಾವತಿಗೆ ಸಂಬಂಧಿಸಿದಂತೆ ಸೂಕ್ತ ಸ್ಪಂದನ ದೊರಕಿಲ್ಲ. ಇದರಿಂದ ಜಿಲ್ಲಾ ವ್ಯಾಪ್ತಿಯ ನೂರಕ್ಕೂ ಹೆಚ್ಚಿನ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ಆ.15ರ ಒಳಗಾಗಿ ಬಾಕಿ ಮೊತ್ತದ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ‘ಅಹೋ ರಾತ್ರಿ ಪ್ರತಿಭಟನೆ’ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸಂಕಷ್ಟದ ಸಂದರ್ಭಗಳಲ್ಲಿ ಜಿಲ್ಲೆಗೆ ಗುತ್ತಿಗೆದಾರರು ಅಗತ್ಯ ಕಾಮಗಾರಿಗಳನ್ನು ಸಾಲಮಾಡಿ ನಿರ್ವಹಿಸಿದ್ದಾರೆ.…
ಮಡಿಕೇರಿ ಆ.2 NEWS DESK : 2024-25ನೇ ಸಾಲಿನ 32ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.10 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾದ ಮಡಿಕೇರಿ ಘಟಕ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಅಂದು ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿದೆಯೆಂದು ಹೇಳಿದರು. ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (7 ಸದಸ್ಯರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (7 ಸದಸ್ಯರ ಜನರ ತಂಡ), ಸಾರ್ವಜನಿಕ ಮಹಿಳೆಯರು ಸೇರಿದಂತೆ ಪ್ರೌಢ…
ಸೋಮವಾರಪೇಟೆ NEWS DESK ಆ.2 : ಕಾರಿಗೆ ಜಾಗ ಬಿಡುವ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡು ಶಾಲಾ ವಾಹನವೊಂದು ರಸ್ತೆ ಬದಿ ಪಲ್ಟಿಯಾದ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಇಂದು ಸಂಜೆ ಮಕ್ಕಳನ್ನು ಮನೆಗೆ ಕರೆ ತರುವ ಸಂದರ್ಭ ಜೇನಿಗರ ಕೊಪ್ಪದಲ್ಲಿ ವಾಹನ ಪಲ್ಟಿಯಾಗಿದೆ. ಸೋಮವಾರಪೇಟೆಯಿಂದ ಗೆಜ್ಜೆ ಹಣಕೊಡು, ಚಿಕ್ಕತೋಳೂರು ಮಾರ್ಗದಲ್ಲಿ ಪ್ರತಿ ದಿನ ಚಲಿಸುವ ಶಾಲಾ ವಾಹನ ಇದಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.






