ಲೇಖಕ: admin

ಸೋಮವಾರಪೇಟೆ NEWS DESK ಆ.2 : ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಆ. 18ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಕೆ. ಗಂಗಾಧರ್ ತಿಳಿಸಿದ್ದಾರೆ. ಇಲ್ಲಿನ ಕೊಡವ ಸಮಾಜದಲ್ಲಿ ಅಂದು ಬೆಳಿಗ್ಗೆ 9-30 ರಿಂದ 12-30ರ ವರೆಗೆ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 2ರಿಂದ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. 4-30ಕ್ಕೆ ಮತ ಎಣಿಕೆ ನಡೆಯಲಿರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಸಂಘದಲ್ಲಿ ತಮ್ಮ ಸದಸ್ಯತ್ವವನ್ನು ನವೀಕರಿಸಿ ರಶೀದಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಆ.4ರ ಸಂಜೆ 5ರ ವರೆಗೆ ಸಂಘದ ಕಚೇರಿಯಲ್ಲಿ ಸದಸ್ಯತ್ವ ನವೀಕರಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಘದ ವಾರ್ಷಿಕ ಸಭೆಯಲ್ಲಿ ಎಲ್ಲ ಸದಸ್ಯರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಿಳಿಸಿದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ ಹಾಗು ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಘದ ಕಚೇರಿಯಲ್ಲಿ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಲು ಆ. 7 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ…

Read More

ಸೋಮವಾರಪೇಟೆ NEWS DESK ಆ.2 : ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಮತ್ತು ಶನಿವಾರಸಂತೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಮಳೆಹಾನಿ ಜಾಗಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಅತೀ ಹೆಚ್ಚು ಮಳೆಯಾಗಿರುವ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ಡ ಕುಸಿತ, ಮನೆ ಕುಸಿತ, ಕೊಳೆರೋಗಕ್ಕೆ ತುತ್ತಾಗಿರುವ ಕಾಫಿ ತೋಟವನ್ನು ಪರಿಶೀಲಿಸಿ, ಹಾನಿಗೀಡಾಗಿರುವ ಮನೆಗಳನ್ನು ವೀಕ್ಷಿಸಿ, ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರ ಮೂಲಕ ಅಗತ್ಯ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು. ಶಾಂತಳ್ಳಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಜೇಡಿಗುಂಡಿಯಲ್ಲಿ ಗುಡ್ಡ ಕುಸಿತ, ಬಸವನಕಟ್ಟೆ, ನಗರಳ್ಳಿಯಲ್ಲಿ ಕಾಫಿ ತೋಟವನ್ನು ವೀಕ್ಷಿಸಿದರು. ಮಳೆ-ಗಾಳಿಗೆ ಕಾಫಿ ತೋಟದಲ್ಲಿ ಭಾರೀ ಪ್ರಮಾಣದ ನಷ್ಟವಾಗಿದ್ದು, ಮರಗಳು ಬಿದ್ದು ಕಾಫಿ ಗಿಡಗಳು ಮುರಿದಿರುವುದು ಒಂದೆಡೆಯಾದರೆ, ಅತಿಯಾದ ಮಳೆಗೆ ಕೊಳೆರೋಗ ಬಂದು ಕಾಫಿ ಕಾಯಿಗಳು ನೆಲಕ್ಕೆ ಬಿದ್ದಿರುವದರಿಂದ ಫಸಲು ನಷ್ಟ ಅನುಭವಿಸಬೇಕಾಗಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದು ತಕ್ಷಣ ಪರಿಹಾರ ಒದಗಿಸಲು ಕ್ರಮ…

Read More

ಮಡಿಕೇರಿ NEWS DESK ಆ.2 : ವಯನಾಡಿಗೆ ಅಜ್ಜ ಅಜ್ಜಿ ಮನೆಗೆ ಹೋಗಿ ಭೂ ಕುಸಿತದಲ್ಲಿ ಮೃತಪಟ್ಟ ವಿರಾಜಪೇಟೆ ತಾಲ್ಲೂಕಿನ ಗುಹ್ಯ ಗ್ರಾಮದ 4 ನೇ ತರಗತಿ ವಿದ್ಯಾರ್ಥಿ ರೋಹಿತ್ ನ ತಾಯಿ ಕವಿತಾ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿ ಪರಿಹಾರ ಕೊಡುವ ಭರವಸೆ ನೀಡಿದರು. ಈ ಸಂದರ್ಭ ಸುದರ್ಶನ ಅತಿಥಿಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಆ.2 : ಡಾ.ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಡಿಕೇರಿಯ ಸುದರ್ಶನ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಕೊಡಗು ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು. ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ. 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ…

Read More

ಮಡಿಕೇರಿ ಆ.2 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 29ನೇ ವರ್ಷದ “ಕಕ್ಕಡ-18” ಆಚರಣೆ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿರಾಟ್ ಹಿಂದೂಸ್ಥಾನ್ ಸಂಗಮ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಶ್ವ ವಿಖ್ಯಾತ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ, ಜಗದೀಶ್ ಶೆಟ್ಟಿ ಅವರು ಕೊಡವರ ಉಳಿವಿಗಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ “ಕೊಡವ ಲ್ಯಾಂಡ್” ಪರವಾದ ಹೋರಾಟಕ್ಕೆ ಸರ್ವರೂ ಬೆಂಬಲ ನೀಡಬೇಕೆಂದು ಕರೆ ನೀಡಿದರು. ಅತ್ಯಂತ ಸೂಕ್ಷ್ಮ ಆದಿಮ ಸಂಜಾತ ಬುಡಕಟ್ಟು ಸಮುದಾಯದ ಕೊಡವರು ಮತ್ತು ಕೊಡವ ನೆಲೆ ಉಳಿಯಬೇಕಾದರೆ “ಕೊಡವ ಲ್ಯಾಂಡ್” ಘೋಷಣೆ ಅಗತ್ಯವಾಗಿದೆ. ವಿಭಿನ್ನತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತ ದೇಶದಲ್ಲಿ ಹಿಂದೂ ಧರ್ಮದಡಿ ವಿಶಿಷ್ಟ ಆಚಾರ, ವಿಚಾರ, ಸಂಸ್ಕೃತಿಯನ್ನು ಅನುಸರಿಸುವ ಅನೇಕ ಸಮುದಾಯಗಳಿವೆ. ಇವುಗಳಲ್ಲಿ ಆದಿಮ ಸಂಜಾತ ಕೊಡವ ಬುಡಕಟ್ಟು ಸಮುದಾಯ ಕೂಡ ಒಂದು. 1956 ರವರೆಗೆ…

Read More

ಮಡಿಕೇರಿ ಆ.2 NEWS DESK : ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 4455 ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ಸ್ ಹಾಗೂ 896 ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫ಼ೀಸರ್ಸ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಪದವೀಧರ ವಿದ್ಯಾರ್ಥಿಗಳು ಆಗಸ್ಟ್, 21 ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್ https://www.ibps.in/ವೀಕ್ಷಿಸಬಹುದಾಗಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ 20,566 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಪ್ರಸ್ತುತ ವರ್ಷದಲ್ಲಿ ಈಗಾಗಲೇ ಎರಡು ಬ್ಯಾಚ್‍ಗಳಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿರುವ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫ಼ೌಂಡೇಶನ್(ರಿ) ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಆಗಸ್ಟ್, 08 ರಂದು ಉಚಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ ಪದವೀಧರ ವಿದ್ಯಾರ್ಥಿಗಳು ಆಗಸ್ಟ್, 07 ರೊಳಗೆ ಮೊಬೈಲ್ ಸಂಖ್ಯೆ 8660217739 ನ್ನು…

Read More

ಮಡಿಕೇರಿ ಆ.2 NEWS DESK : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಈ ಸೌಲಭ್ಯ ಒದಗಿಸಲು ಸೇವಾ…

Read More

ಮಡಿಕೇರಿ ಆ.2 NEWS DESK : ಕೆದಮುಳ್ಳೂರು ಗ್ರಾಮದ ಮಳೆಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

Read More

ಕುಶಾಲನಗರ ಆ.2 NEWS DESK : ಕುಶಾಲನಗರ ತಾಲೂಕು ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ನದಿ ತಟದಲ್ಲಿ ನೆಲೆಸಿರುವ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರ ಶಾಸಕರು ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಪಂಚಾಯಿತಿ ಆಡಳಿತ ಮಂಡಳಿಯ ತುರ್ತು ಸಭೆ ನಡೆಯಿತು. ಗುಡ್ಡೆ ಹೊಸೂರು ಗ್ರಾ.ಪಂ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ತೆಪ್ಪದ ಕಂಡಿ ಬಳಿ ಕಾವೇರಿ ನದಿ ನೀರಿನ ಪ್ರಮಾಣ ಪ್ರತಿ ವರ್ಷ ಅಪಾಯದ ಅಂಚು ಮೀರಿ ಹರಿಯುತ್ತಿದ್ದು ಇದರಿಂದ ಅಲ್ಲಿನ ನಿವಾಸಿಗಳಿಗೆ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಅಲ್ಲಿ ನೆಲೆಸಿರುವ 22 ಮನೆಗಳನ್ನು ಸ್ಥಳಾಂತರ ಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪಂಚಾಯಿತಿ ಅಧ್ಯಕ್ಷ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಯಿತು. ಕೆಲವೊಂದು ನಿವಾಸಿಗಳಿಗೆ ಈಗಾಗಲೇ ಬಸವನಹಳ್ಳಿ ಬಳಿ ನಿವೇಶನ ಗುರುತಿಸಿ ನೀಡಲಾಗಿದ್ದರೂ, ಫಲಾನುಭವಿಗಳು ಮತ್ತೆ ನದಿ…

Read More

ಮಡಿಕೇರಿ ಆ.2 NEWS DESK : ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ , ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆಗಳ…

Read More