ಮಡಿಕೇರಿ ಆ.2 NEWS DESK : ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಜಿಲ್ಲೆಯ ಗಡಿ ಆನೆಚೌಕೂರು ನಲ್ಲಿ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ , ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡ ಟಿ.ಪಿ.ರಾಮೇಶ್ ಹಾಜರಿದ್ದರು.
ಲೇಖಕ: admin
ಕುಶಾಲನಗರ ಆ.2 NEWS DESK : ತಾಯಂದಿರು ಎರಡು ವರ್ಷಗಳವರೆಗೆ ಮಗುವಿಗೆ ಎದೆಹಾಲು ಕುಡಿಸುವುದರಿಂದ ಮಕ್ಕಳ ಆರೋಗ್ಯ ವೃದ್ಧಿಸುತ್ತದೆ ಮತ್ತು ತಾಯಂದಿರನ್ನು ಕಾಡುವ ಸ್ತನ ಕ್ಯಾನ್ಸರ್ ದೂರವಾಗುತ್ತದೆ ಎಂದು ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಶಿವಕುಮಾರ್ ಕರೆ ನೀಡಿದರು. ಕೊಡಗು ಜಿ.ಪಂ, ಕುಶಾಲನಗರ ತಾ.ಪಂ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಗಳ ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ” ವಿಶ್ವ ಸ್ತನ್ಯಪಾನ ಸಪ್ತಾಹ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಯಿಯ ಎದೆಹಾಲು ಹಾಲನ್ನು ಮಗುವಿಗೆ ಕುಡಿಸುವುದರಿಂದ ತಾಯಿ ಮಗುವಿನಬಾಂಧವ್ಯ ಹೆಚ್ಚಿ, ಮಗುವಿನ ರೋಗನಿರೋಧಕ ಶಕ್ತಿಯೂ ವೃದ್ಧಿಸುತ್ತದೆ ಎಂದು ಡಾ.ಶಿವಕುಮಾರ್ ಹೇಳಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಇಂದೂಧರ್ ಮಾತನಾಡಿ, ತಿಂಗಳವರೆಗೆ ಮಗುವಿಗೆ ತಾಯಿ ಹಾಲು ಹೊರತಾಗಿ ಬೇರೇನೂ ಕುಡಿಸಬಾರದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಧುಸೂದನ್, ಶಾಲಾ ಮಕ್ಕಳ ಆರೋಗ್ಯ ತಪಾಸಣಾ ಘಟಕದ ವೈದ್ಯರಾದ ಡಾ.ಮೇಲಪ್ಪ, ಡಾ.ನಿವೇದಿತಾ, ಡಾ.ಭರತ್, ತಾಲ್ಲೂಕು ಆರೋಗ್ಯಾಧಿಕಾರಿ ಹೆಚ್.ಕೆ.ಶಾಂತಿ, ಶುಶ್ರೂಷಕಿ ಇಂದಿರಾ ಹಾಜರಿದ್ದರು.
ಮಡಿಕೇರಿ ಆ.2 NEWS DESK : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಎಲೆಕ್ಟ್ರಿಕ್ ಬಸ್ ಮಗುಚಿಕೊಂಡಿರುವ ಘಟನೆ ಕೊಡಗರಹಳ್ಳಿ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಲೆಕ್ಟಿಕ್ ಬಸ್ ಎದುರು ಜೀಪೊಂದು ಏಕಾಏಕಿ ನುಗ್ಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಮಗುಚಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಆ.2 NEWS DESK : ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನʼವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರೊಂದಿಗೆ ಈ ಪ್ರತಿಷ್ಠಿತ ನ್ಯಾನೋ ಟೆಕ್ನಾಲಜಿ ಸಮಾವೇಶದಲ್ಲಿ ಭಾಗವಹಿಸಲು ನನಗೆ ಹೆಮ್ಮೆ ಎನಿಸುತ್ತಿದೆ. ನಾನು ಮೊದಲನೆಯದಾಗಿ ಪ್ರತಿಷ್ಠಿತ ಪ್ರೊ.ಸಿ.ಎನ್.ಆರ್. ರಾವ್ ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ.ಅರಿಂದಮ್ ಘೋಷ್ ಅವರಿಗೆ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲಿ ನಡೆಯುವ ಇಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಸಮಾವೇಶದಲ್ಲಿ ಭಾಗವಹಿಸುವುದು ನನಗೆ ಯಾವತ್ತೂ ಸ್ಪೂರ್ತಿದಾಯಕ ಹಾಗೂ ಸಂತಸದ ವಿಚಾರ. ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸುವ ಕಾರ್ಯದಲ್ಲಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ್ಮ ರಾಜ್ಯ ಎಂದಿಗೂ ಮುಂಚೂಣಿಯಲ್ಲಿದೆ. ಐಐಎಸ್ಸಿ, ಜೆಎನ್‌ಸಿಎಎಸ್‌ಆರ್, ಎನ್‌ಸಿಬಿಎಸ್, ಸಿಇಎನ್‌ಎಸ್ ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು…
ಪಾಟ್ನಾ ಆ.2 NEWS DESK : ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಔರಂಗಾಬಾದ್, ಜೆಹಾನಾಬಾದ್, ಸರನ್, ರೋಹ್ತಾಸ್, ನಳಂದಾ ಮತ್ತು ಜಮುಯಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಟ್ನಾ ಮತ್ತು ವೈಶಾಲಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ. ಔರಂಗಾಬಾದ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಗರಿಷ್ಠ ನಾಲ್ವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಜೆಹಾನಾಬಾದ್‌ನಲ್ಲಿ, ತಾಂಡ್ವಾ ಪ್ರದೇಶದ ಸರೇನ್ ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಸರನ್‌ನ ಮಾಂಝಿ ಪೊಲೀಸ್ ಠಾಣೆ ವ್ಯಾಪ್ತಿಯ ನರ್ವನ್ ಗ್ರಾಮದಲ್ಲಿ ಬುಧವಾರ ಸಂಜೆ 48 ವರ್ಷದ ವ್ಯಕ್ತಿಯೊಬ್ಬರು ಸಡಿಲು ಬಡಿದು ಸಾವನ್ನಪ್ಪಿದ್ದಾರೆ. ದನ ಮೇಯಿಸಲು ಊರ ಹೊರಗೆ ಹೋಗಿದ್ದ ವೇಳೆ…
ನಾಪೋಕ್ಲು ಆ.2 NEWS DESK : ಪಟ್ಟಣದ ಇಂದಿರಾನಗರದಲ್ಲಿ ಬರೆ ಕುಸಿದಿದ್ದು, ಮೂರು ಮನೆಗಳಿಗೆ ಹಾನಿಯಾಗಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪರೀತ ಮಳೆ ಗಾಳಿಯಿಂದಾಗಿ ನಗರದ ನಿವಾಸಿ ಮಂಜುಳಾ, ವಿನಾಯಕ, ರಾಣಿ ಎಂಬವರ ಮನೆಗಳ ಸಮೀಪ ಬರೆ ಕುಸಿತು ಮನೆಗೆ ತೀವ್ರ ಅಪಾಯ ಮಟ್ಟಕ್ಕೆ ತಲುಪಿದ್ದು, ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ. ಈ ಸಂದರ್ಭ ನಿವಾಸಿಗಳು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ವಾಸವಾಗಿದ್ದು, ಇದುವರೆಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ ಇದೀಗ ಕೆಳಭಾಗದಲ್ಲಿ ಲೇಔಟ್ ಮಾಡಲು ಯಂತ್ರಗಳ ಮುಖಾಂತರ ಚರಂಡಿ ತೆಗೆದಿರುವುದರಿಂದಾಗಿ ಸಮಸ್ಯೆ ಉದ್ಭವಿಸಿದೆ ಎಂದು ಆರೋಪಿಸಿದರು. ಹೆಚ್ಚಿನ ಅನಾಹುತ ಸಂಭವಿಸುವುದರ ಮುನ್ನ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ. ಮಡಿಕೇರಿ ತಾಲೂಕು ಬಿಜೆಪಿ ಉಪಾಧ್ಯಕ್ಷ ಮನು ಮಹೇಶ್ ಮಾತನಾಡಿ, ಮೂರು ಮನೆಗಳಿಗೆ ಅಪಾಯ ತಟ್ಟುವ ಭೀತಿ ಇದೆ. ಕಂದಾಯ ಇಲಾಖೆಯ ಮೂಲಕ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ ಎಂದರು. ಈ ಸಂದರ್ಭ ಕಂಗಂಡ…
ಮಡಿಕೇರಿ ಆ.2 NEWS DESK : ತಾಯಿಯ ಎದೆಹಾಲು ಪ್ರಕೃತಿದತ್ತವಾದ ದೇವರ ಕೊಡುಗೆಯಾಗಿದೆ. ಎದೆಹಾಲಿನಿಂದ ಮಗುವಿನ ಆರೋಗ್ಯ ಮತ್ತು ಬೆಳವಣಿಗೆ ಜೊತೆಗೆ ಭವಿಷ್ಯದ ವ್ಯಕ್ತಿಯಾಗಿ ರೂಪಿಸುವ ಚೈತನ್ಯ ಶಕ್ತಿ ಅಡಗಿದ್ದು ಮಗು ಜನಿಸಿದ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ 1991 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಯುನೆಸೆಫ್, ಡಬ್ಲ್ಯು ಬಿ ಡಬ್ಲ್ಯು ಸಹಯೋಗದಲ್ಲಿ ಆರಂಭಿಸಲಾಯಿತು. ಪ್ರತಿ ವರ್ಷ ಆಗಸ್ಟ್ 1 ರಿಂದ 7 ರವರೆಗೆ ಸಪ್ತಾಹದೊಂದಿಗೆ ಈ ಕುರಿತು ತಾಯಂದಿರಿಗೆ ಹೆಚ್ಚಿನ ಅರಿವು ಮೂಡಿಸುವ ಜಾಗೃತಿ ಕಾರ್ಯ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತಿದೆ. ಇತ್ತೀಚಿನ ಆಧುನಿಕ ಯುಗದಲ್ಲಿ ಮಹಿಳೆಯರಲ್ಲಿ ತಪ್ಪು ಕಲ್ಪನೆಗಳಿಂದ, ಉದ್ಯೋಗಸ್ಥ ಮಹಿಳೆಯರಿಗೆ ಸಮಯದ ಅಭಾವದಿಂದಲೋ ಅಥವಾ ತಪ್ಪು ತಿಳುವಳಿಕೆಯಿಂದ ಆದಷ್ಟು ಬೇಗ ಮಗುವಿಗೆ ಎದೆ ಹಾಲು ಬಿಡಿಸಿ ಬಾಟಲಿ ಹಾಲನ್ನು ನೀಡಲು ಮುಂದಾಗುತ್ತಿರುವುದು ವಿಷದಾನಿಯ. ಜೀವನ ಮಟ್ಟ ಕಡಿಮೆ ಇರುವ, ಶಿಕ್ಷಣ ಮಟ್ಟ ಕಡಿಮೆ ಇರುವುದು, ಎದೆಹಾಲು ಕೊಡುವ ಬಗ್ಗೆ ಶುಚಿತ್ವಕ್ಕೆ…
ಸುಂಟಿಕೊಪ್ಪ ಆ.2 NEWS DESK : ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಗಾಳಿ ಮಳೆಯ ಪ್ರಮಾಣ ಇಳಿಮುಖಗೊಂಡಿದ್ದರೂ ಅಲ್ಲಲ್ಲಿ ಅವಾಂತರಗಳು ಸೃಷ್ಟಿಸುತ್ತಲೇ ಇದೆ. ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಮಾಹಿತಿ ತಿಳಿದು ಕಾರ್ಯಪ್ರವೃತ್ತರಾದ ಕೊಡಗರಹಳ್ಳಿ ಗ್ರಾ.ಪಂ ಪಿಡಿಒ ಸುಮೇಶ್, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದಿಂದ ತ್ವರಿತಗತಿಯಲ್ಲಿ ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಸಿಬ್ಬಂದಿ ಧನಂಜಯ ಇದ್ದರು.
ಮಡಿಕೇರಿ NEWS DESK ಆ.1 : ಅಧಿಕ ಮಳೆಯಿಂದ ಕೊಡಗು ಜಿಲ್ಲೆ ನಲುಗಿ ಹೋಗಿರುವ ಹಂತದಲ್ಲೇ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡವಾಮೆರ ಕೊಂಡಾಟ ಸಂಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಕೊಡಗು ಅತವೃಷ್ಟಿಯಿಂದ ತತ್ತರಿಸಿ ಹೋಗಿದ್ದು, ಶಾಲಾಕಾಲೇಜುಗಳಿಗೆ ಬರುವ ಮಕ್ಕಳಿಗೆ ತೊಂದರೆಯಾಗಬಹುದೆಂದು ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪರಿಸ್ಥಿತಿಗನುಗುಣವಾಗಿ ರಜೆ ಘೋಷಿಸುತ್ತಿದೆ. ರಜೆ ಕುರಿತು ಜಿಲ್ಲಾಡಳಿತದಿಂದ ಬಿಡುಗಡೆಯಾಗುವ ಮಾಹಿತಿಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕಾದು ಕುಳಿತಿರುತ್ತಾರೆ. ಆದರೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಸಹಿ ಮತ್ತು ಮೊಹರನ್ನು ನಕಲಿ ಮಾಡಿದ್ದಾರೆ, ಅಸಲಿ ಯಾವುದು, ನಕಲಿ ಯಾವುದು ಎನ್ನುವ ಬಗ್ಗೆ ಜನ ಗೊಂದಲ ಮತ್ತು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ಆತಂಕಕಾರಿ ಬೆಳವಣಿಗೆ ನಡೆಯದಂತೆ ಎಚ್ಚರಿಕೆಯ ಸಂದೇಶ ರವಾನಿಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ಬೆಳ್ಯಪ್ಪ ಅವರ ನಿರ್ದೇಶನದ…
ಮಡಿಕೇರಿ NEWS DESK ಆ.1 : ಮಳೆಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಿರುವುದು ಬಿಟ್ಟರೆ ಬೇರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆAದು ಬಿಜೆಪಿ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಟೀಕಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಸಂಕಷ್ಟದಲ್ಲಿರುವ ಜನರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ, ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು. ಅಧಿಕ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪರಿಹಾರದ ರೂಪದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಮನೆ ಕಳೆದುಕೊಂಡವರಿಗೆ ಮನೆ ಬಾಡಿಗೆ ನೀಡಬೇಕು ಮತ್ತು ನೂತನ ಮನೆ ನಿರ್ಮಿಸಿಕೊಡಬೇಕು. ಕಾಫಿ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿದ್ದು, ಸರ್ಕಾರ ಬೆಳೆ ಪರಿಹಾರವನ್ನು ಶೀಘ್ರ ನೀಡಬೇಕು. ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಭಾರೀ ಗಾಳಿಮಳೆಯಿಂದ ಹೆಚ್ಚಿನ…






