ಮಡಿಕೇರಿ ಜೂ.14 NEWS DESK : ಅನುದಾನದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದಿಂದಲೇ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿರುವುದರಿಂದ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆ ಕೆಪಿಸಿಸಿ ವಕ್ತಾರ ಹಾಗೂ ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗಿಲ್ಲ ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ವರನ್ನೂ ಒಗ್ಗೂಡಿಸಿಕೊಂಡು ಸರ್ವರ ವಿಕಾಸಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುತ್ತಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರಕ್ಕೆ ಲಕ್ಷ್ಮಣ್ ಅವರು ಪಾಠ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅವರು ಮೊದಲು ಧ್ವನಿ ಎತ್ತಲಿ ಎಂದು ಒತ್ತಾಯಿಸಿದ್ದಾರೆ. ಕಳೆದ ಹತ್ತು ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಹಿಂದುಳಿದ ವರ್ಗ, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ಏಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಿದೆ. ಆದರೆ ಹಲವು ದಶಕಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಈ…
ಲೇಖಕ: admin
ಸುಂಟಿಕೊಪ್ಪ ಜೂ.14 NEWS DESK : ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆಯು ಗುಪ್ತಮತದಾನದ ಮೂಲಕ ನಡೆಯಿತು. ಮತದಾನ ಸಂಚಾಲಕರು ಹಾಗೂ ಮತದಾರ ಸಾಕ್ಷರತಾ ಅಧಿಕಾರಿ ಸರಳಾ ಮಾತನಾಡಿ, ದೇಶವನ್ನು ಕಟ್ಟುವ ತೀಕ್ಷ್ಣ ಆಯುಧವೇ ಮತದಾನ ಎಂದರು. ಸಂವಿಧಾನವು ನಮಗೆ ಮತದಾನದಂತಹ ಪವಿತ್ರವಾದ ಹಕ್ಕುನ್ನು ನೀಡಿದೆ. ದೇಶಕಟ್ಟುವ ಕಾಯಕದಲ್ಲಿ ಪ್ರಜೆಗಳು ಭಾಗಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ಬಗ್ಗೆ ವಿವರಿಸಿದರು. ಕಾಲೇಜಿನಲ್ಲಿ ಅಸ್ತಿತ್ವದಲ್ಲಿರುವ ಮತದಾನ ಸಾಕ್ಷರತಾ ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದ ಅವರು, ನಾಳಿನ ಸುಂದರ ದೇಶವನ್ನು ಕಟ್ಟಲು ಇರುವ ತೀಕ್ಷ್ಣವಾದ ಆಯುಧವೇ ಮತದಾನ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಯುವ ಮತದಾರರು ಪ್ರಜಾಪ್ರಭುತ್ವದ ಭವಿಷ್ಯ. ದೇಶದ ಭವಿಷ್ಯಕ್ಕಾಗಿ ಉತ್ತಮ ನಾಯಕರನ್ನು ಆಯ್ಕೆ ಮಾಡಲು ಯುವಕರು ತಮ್ಮ ಮತದಾನದ ಶಕ್ತಿಯನ್ನು ಬುದ್ಧಿವಂತಿಕೆಯಿಂದ ಬಳಸಬೇಕೆಂದು ಕರೆ ನೀಡಿದ ಅವರು, ಈ ಉದ್ದೇಶದಿಂದ ಕಾಲೇಜಿನಲ್ಲಿ ಮಾದರಿ ಚುನಾವಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.…
ಸೋಮವಾರಪೇಟೆ ಜೂ.14 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಹಾಗೂ ವಾರ್ಷಿಕ ಮಹಾಸಭೆಯು ಜೂ.18 ರಂದು ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಬಿ.ಮಾದಮಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸಂಘದ ಹಿರಿಯ ಸದಸ್ಯರುಗಳಾದ ಎಂ.ಎಸ್.ಶಿವಮೂರ್ತಿ, ಜಿ.ಎಸ್. ಹೂವಯ್ಯ, ಹೆಚ್.ಕೆ. ಕುಟ್ಟಪ್ಪ, ಎ.ಯು.ವಿಶಾಲಾಕ್ಷಿ, ಗೌರಮ್ಮ, ಎಸ್.ಆರ್.ಪುಟ್ಟಣಯ್ಯ, ಡಿ.ಪಿ.ಲೇಶಮ್ಮ, ಬಿ.ಎನ್.ರಂಗಸ್ವಾಮಿ, ಡಿ.ಎಸ್.ಸದಾಶಿವ, ಹೆಚ್.ಎಸ್. ಗುಂಡಪ್ಪ, ಕೆ.ಕೆ.ಅಯ್ಯಪ್ಪ ಮತ್ತು ಕೆ.ಎಸ್.ನಾಗರಾಜು ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಬಿ.ಎಂ.ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಜೂ.14 NEWS DESK : ಬಳಗುಂದ ತೋಟಗಾರಿಕೆ ಕ್ಷೇತ್ರ ಮತ್ತು ಕೂಡಿಗೆ ತೋಟಗಾರಿಕಾ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ತೆಂಗು ಮತ್ತು ಅಡಿಕೆ ಸಸಿಗಳು ಇಲಾಖಾ ದರದಲ್ಲಿ ರೈತರಿಗೆ ವಿತರಿಸಲು ಲಭ್ಯವಿರುವುದಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಡಾ.ಮಂಜುನಾಥ್ ಶೆಟ್ಟಿ ತಿಳಿಸಿದ್ದಾರೆ. ತೆಂಗು ಗಿಡವೊಂದಕ್ಕೆ ರೂ.75 ಹಾಗೂ ಅಡಿಕೆ ಗಿಡಕ್ಕೆ ರೂ.25 ನಿಗಧಿಗೊಳಿಸಲಾಗಿದೆ. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ಸಸಿಗಳನ್ನು ನಾಟಿ ಮಾಡಲು ನಿಯಮಾನುಸಾರ ಪ್ರೋತ್ಸಾಹಧನವನ್ನು ನರೇಗಾ ಮುಖಾಂತರ ನೀಡಲು ಅವಕಾಶವಿದೆ ಎಂದು ಡಾ.ಮಂಜುನಾಥ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಬಳಗುಂದ ತೋಟಗಾರಿಕೆ ಕ್ಷೇತ್ರ 9844360764, ಕೂಡಿಗೆ ತೋಟಗಾರಿಕೆ ಕ್ಷೇತ್ರ 8762937704 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.
ಸೋಮವಾರಪೇಟೆ ಜೂ.14 : ನಿವೇಶನ ರಹಿತ ಕೂಲಿ ಕಾರ್ಮಿಕರಿಗೆ, ಬಡವರಿಗೆ, ಆದಿವಾಸಿಗಳಿಗೆ ಸರ್ಕಾರ ನಿವೇಶನ ಕಲ್ಪಿಸಬೇಕೆಂದು ಆಗ್ರಹಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಯೂನಿಯನ್ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ನೇತೃತ್ವದಲ್ಲಿ ವಿವೇಕಾನಂದ ಸರ್ಕಲ್‍ನಿಂದ ಪ್ರಮುಖ ಸೋಮವಾರಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಕಾರರು ಜೇಸಿ ವೇದಿಕೆಯಲ್ಲಿ ಸಮಾವೇಶಗೊಂಡ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿದರು. ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರು ಸ್ವಂತ ನಿವೇಶನವಿಲ್ಲದೆ ಮಾಲೀಕರ ಲೈನ್ ಮನೆಯಲ್ಲಿ ವಾಸಮಾಡುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ನಿವೇಶನಕ್ಕಾಗಿ ಹೋರಾಟ ಮಾಡಲಾಗುತ್ತಿದೆ. ಮಾದಾಪುರ, ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಪೈಸಾರಿ ಜಾಗ ಗುರುತಿಸಿ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಆದರೆ ಇದುವರೆಗೆ ನಿವೇಶನ ರಹಿತರಿಗೆ ನಿವೇಶನ ನೀಡಿಲ್ಲ ಎಂದು ಸೋಮಪ್ಪ ದೂರಿದರು. ಜಿಲ್ಲೆಯಲ್ಲಿರುವ ಪೈಸಾರಿ ಜಾಗ ಉಳ್ಳವರ ಪಾಲಾಗುತ್ತಿದೆ. ಸ್ವಾತಂತ್ರ್ಯ ಸಿಕ್ಕಿ 7 ದಶಕಗಳು ಕಳೆದರೂ ಕಾರ್ಮಿಕರಿಗೆ ವಾಸಕ್ಕೆ ಮನೆ ಕೊಡದ ಸರ್ಕಾರಗಳಿಗೆ ಧಿಕ್ಕಾರವಿರಲಿ ಎಂದರು. ಜಿಲ್ಲೆಯಲ್ಲಿ ಕಾಡಾನೆ, ಹುಲಿದಾಳಿಗೆ ಕಾರ್ಮಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ.…
ಬೆಂಗಳೂರು ಜೂ.14 NEWS DESK : ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಭಾರತೀಯ ಸೇನೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಮತ್ತು ಲಯನ್ಸ್ ಕ್ಲಬ್ ಬ್ಲಡ್ ಬ್ಯಾಂಕ್‌ಗಳ ಸಹಯೋಗದೊಂದಿಗೆ ಬಾಣಸವಾಡಿ ಮಿಲಿಟರಿ ನಿಲ್ದಾಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಿಸನ್ ಕಮಾಂಡರ್, ಭಾರತೀಯ ಸೇನೆಯು ಸಮಾಜ ಕಲ್ಯಾಣಕ್ಕೆ ಅಚಲವಾದ ಬದ್ಧತೆ ಮತ್ತು ಮಾನವೀಯ ಗುಣಗಳನ್ನು ಹೊಂದಿದೆ ಎಂದರು. ಜೀವ ಉಳಿಸುವಲ್ಲಿ ರಕ್ತದಾನದ ಮಹತ್ವವನ್ನು ವಿವರಿಸಿದ ಅವರು, ಪ್ರತಿಯೊಬ್ಬರೂ ರಕ್ತದಾನವನ್ನು ತಮ್ಮ ಜೀವನದ ಒಂದು ಭಾಗವಾಗಿ ಮಾಡಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಬಾಣಸವಾಡಿ ಮಿಲಿಟರಿ ಠಾಣೆಯ ರಕ್ತದಾನ ಅಭಿಯಾನವು ಆರೋಗ್ಯ ಮತ್ತು ಕಲ್ಯಾಣ ಉಪಕ್ರಮಗಳನ್ನು ಬೆಂಬಲಿಸಲು ಭಾರತೀಯ ಸೇನೆಯ ನಿರಂತರ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಇದು ವೈದ್ಯಕೀಯ ಸೌಲಭ್ಯಗಳಿಗೆ ಹೆಚ್ಚು ಅಗತ್ಯವಿರುವ ಸಂಪನ್ಮೂಲಗಳನ್ನು ಒದಗಿಸುವುದು ಮಾತ್ರವಲ್ಲದೆ ನಾಗರಿಕ ಕರ್ತವ್ಯ ಮತ್ತು ಸಹಾನುಭೂತಿಯ ಪ್ರಬಲ ಉದಾಹರಣೆಯಾಗಿದೆ ಎಂದು ತಿಳಿಸಿದರು. ಭಾರತೀಯ ಸೇನೆಯು ಆರೋಗ್ಯಕರ ಮತ್ತು ಹೆಚ್ಚು ಸ್ಥಿತಿಸ್ಥಾಪಕ ಸಮಾಜಕ್ಕೆ ಕೊಡುಗೆ ನೀಡುವ ಪ್ರಯತ್ನಗಳಲ್ಲಿ ಸಕ್ರಿಯವಾಗಿ…
ಬೆಂಗಳೂರು ಜೂ.14 NEWS DESK : ಕಾಳು ಮೆಣಸಿನ ದರ ದೇಶದ ಮಾರುಕಟ್ಟೆಯಲ್ಲಿ ಏರುಮುಖವಾಗಿ ಸಾಗುತ್ತಿದೆ. ಕಳೆದ ಜನವರಿ ತಿಂಗಳಿನಲ್ಲಿ ಕಿಲೋಗೆ 500-520 ರ ಸಮೀಪ ಇದ್ದ ಕಾಳು ಮೆಣಸಿನ ದರ ಈಗ ಕೆಜಿಗೆ 700 ಕ್ಕೆ ತಲುಪಿದೆ. ಬುಧವಾರ ಕೊಚಿನ್, ಸಕಲೇಶಪುರ ಹಾಗೂ ಚಿಕ್ಕಮಗಳೂರಿನ ಮಾರುಕಟ್ಟೆಗಳಲ್ಲಿ ಕಾಳು ಮೆಣಸು 700 ರೂಪಾಯಿಗಳವರೆಗೆ ಮಾರಾಟವಾಯಿತು. ಕೊಡಗಿನ ವಿವಿದ ಪಟ್ಟಣಗಳಲ್ಲಿ ಮೆಣಸಿನ ಬೆಲೆ 680-695 ರ ವರೆಗೆ ಇತ್ತು. ಈ ಮೊದಲು 2018 ರಲ್ಲಿ ಮೆಣಸು ಸರ್ವಕಾಲಿಕ ದಾಖಲೆಯ 800 ರೂಪಾಯಿಗಳ ವರೆಗೆ ತಲುಪಿತ್ತು. ನಂತರ ವಿಯಟ್ನಾಂ ಮತ್ತು ಶ್ರೀಲಂಕಾದಿಂದ ಅಗ್ಗದ ಕಾಳು ಮೆಣಸು ಆಮದಾಗಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಕಾಳು ಮೆಣಸಿಗೆ ಬೇಡಿಕೆ ಕಡಿಮೆಯಾಗಿ ಬೆಲೆ ಕುಸಿತ ಕಂಡಿದ್ದು ಬೆಳೆಗಾರರಲ್ಲಿ ಆತಂಕವನ್ನೂಮೂಡಿಸಿತ್ತು.ಇದೀಗ ಬೆಲೆ ಮತ್ತೆ ಏರುಮುಖವಾಗುತ್ತಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸವನ್ನು ಮೂಡಿಸಿದೆ. ವಿಶ್ವದಲ್ಲಿ ವಿಯಟ್ನಾಂ ಕಾಳು ಮೆಣಸು ಬೆಳೆಯ ಅತ್ಯಂತ ದೊಡ್ಡ ಉತ್ಪಾದಕನಾಗಿದ್ದು 2019 ರಲ್ಲಿ ಸುಮಾರು ಮೂರು ಲಕ್ಷ ಟನ್…
ಬೆಂಗಳೂರು ಜೂ.14 NEWS DESK : ರಾಜ್ಯದ ವಕೀಲ ಸಮುದಾಯವನ್ನು ಸಂಭವನೀಯ ಹಲ್ಲೆ , ಬೆದರಿಕೆ , ಕಿರುಕುಳದಂತಹ ಕೃತ್ಯಗಳಿಂದ ರಕ್ಷಿಸಲು ರಾಜ್ಯ ಸರ್ಕಾರವು “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ Karnataka Prohibition of violence against advocates act ̳̄2023(KPVA act) ಜಾರಿಗೆ ತಂದಿದೆ. ಈ ಕುರಿತು ಜೂನ್ 10ರಂದು ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು ನೂತನ ಕಾಯ್ದೆ , ಆ ದಿನದಿಂದಲೇ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅದರಂತೆ, ಇನ್ನು ಮುಂದೆ ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ನಿಷೇಧಿಸಲಾಗಿದ್ದು, ಒಂದೊಮ್ಮೆ ಇಂತಹ ಕೃತ್ಯಗಳು ನಡೆದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗಲಿದೆ. ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ, ವಕೀಲರು ಪ್ರತಿವಾದಿ ಕಕ್ಷಿದಾರರ ದುರುದ್ದೇಶಪೂರಿತ ಮತ್ತು ನಿಷ್ಪ್ರಯೋಜಕ ಕಾನೂನು ಕ್ರಮಕ್ಕೆ ಗುರಿಯಾಗುತ್ತಾರೆ, ಅದು ಅವರ ಕರ್ತವ್ಯಗಳ ಕಾರ್ಯಕ್ಷಮತೆ ಮತ್ತು ನ್ಯಾಯದ ಆಡಳಿತಕ್ಕೆ…
ಮಡಿಕೇರಿ ಜೂ.14 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಅವರು ಜೂ.15 ಮತ್ತು 16 ರಂದು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಜೂ.15ರ ಬೆಳಗ್ಗೆ 8.30ಕ್ಕೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿರುವ ಯದುವೀರ್ ಅವರು, 10 ಗಂಟೆಗೆ ಭಾಗಮಂಡಲ, 11 ಗಂಟೆಗೆ ನಾಪೋಕ್ಲುವಿನಲ್ಲಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಗಂಟೆಗೆ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಅವರು, 2 ಗಂಟೆಗೆ ಪಾರಾಣೆ, 3.30 ಗಂಟೆಗೆ ಮೂರ್ನಾಡು ಹಾಗೂ 5 ಗಂಟೆಗೆ ನೆಲ್ಲಿಹುದಿಕೇರಿಯಲ್ಲಿ ಸಭೆ ನಡೆಸಲಿದ್ದಾರೆ. ಜೂ.16ರಂದು ಬೆಳಗ್ಗೆ 9.30ಕ್ಕೆ ಹೆಬ್ಬಾಲೆ, 11 ಗಂಟೆಗೆ ಕೊಡ್ಲಿಪೇಟೆ, ಮಧ್ಯಾಹ್ನ 12 ಗಂಟೆಗೆ ಶನಿವಾರಸಂತೆ, 2 ಗಂಟೆಗೆ ಸೋಮವಾರಪೇಟೆ, 3 ಗಂಟೆಗೆ ಮಾದಾಪುರ, 4 ಗಂಟೆಗೆ ಸುಂಟಿಕೊಪ್ಪ ಹಾಗೂ 5 ಗಂಟೆಗೆ ಕುಶಾಲನಗರದಲ್ಲಿ ಸಭೆ ನಡೆಸಲಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.
ಮಡಿಕೇರಿ ಜೂ.14 NEWS DESK : 2023-24 ನೇ ಸಾಲಿನಲ್ಲಿ ಆಯವ್ಯಯ ಕಂಡಿಕೆ-144 ಘೋಷಣೆಯನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು ಪಡೆಯುವ ಸಾಲಕ್ಕೆ ರೂ.2 ಕೋಟಿಗಳವರೆಗೆ ಸಮಾನಾಂತರ ಖಾತರಿ ನೀಡುವ ಯೋಜನೆಯನ್ನು ವಿಸ್ತರಿಸಿ ಆದೇಶಿಸಲಾಗಿದ್ದು ಅರ್ಹ ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು. ದೂ.ಸಂ. 08272-225531, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು. ದೂ.ಸಂ. 9480843155, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು. ದೂ.ಸಂ. 08276-281115 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ದೂ.ಸಂ. 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.






