ಮಡಿಕೇರಿ ಜೂ.25 NEWS DESK : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಬೇಕಿದ್ದು, ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಈ ಬಾರಿ ಕೆಂಪೇಗೌಡರ ಆಡಳಿತ ಹಾಗೂ ಅವರ ಜೀವನ ಚರಿತ್ರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧರಿಸಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೆಂಪೇಗೌಡರ ಆಡಳಿತ ವ್ಯವಸ್ಥೆಯನ್ನು ಪರಿಚಯಿಸಲು ಶಾಲಾ ಕಾಲೇಜು ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ತಾಲ್ಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ…
ಲೇಖಕ: admin
ಮಡಿಕೇರಿ ಜೂ.25 NEWS DESK : ಕಾಂಗ್ರೆಸ್ ಶಾಸಕರ ಕುಮ್ಮಕ್ಕಿನಿಂದ ಬಿಜೆಪಿ ಕಾರ್ಯಕರ್ತರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಿದರೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸುವ ಹಕ್ಕು ವಿರೋಧ ಪಕ್ಷಗಳಿಗಿದೆ. ಆದರೆ ಜಿಲ್ಲೆಯ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುವವರ ವಿರುದ್ಧ ಸುಳ್ಳು ದೂರು ದಾಖಲಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ವಿರಾಜಪೇಟೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ದೂರು ನೀಡಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು. ದುರಾಡಳಿತ, ಭ್ರಷ್ಟಾಚಾರ, ಆಡಳಿತ ವೈಫಲ್ಯ, ಅಭಿವೃದ್ಧಿ ಶೂನ್ಯ ವ್ಯವಸ್ಥೆಯನ್ನು ಮುಚ್ಚಿ ಹಾಕಿ ಜನರ ಹಾದಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ.…
ನಾಪೋಕ್ಲು ಜೂ.25 NEWS DESK : ಕಕ್ಕಬ್ಬೆ ವಲಯ ಕಾಂಗ್ರೆಸ್ ವತಿಯಿಂದ ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿಸಿಸಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ವಲಯ ಕಾಂಗ್ರೆಸ್ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಬಾಚಮಂಡ ರಾಜ ಪೂವಣ್ಣ, ಉದಿಯoಡ ಶುಭಾಷ್, ಪೊನ್ನೋಲ್ತಂಡ ರಘು ಚಿನ್ನಪ್ಪ, ಬಾಚಮಂಡ ಭರತ್, ಬಡಕಡ ದೀನ ಪುವಯ್ಯ, ಪುಂಗೆರ ಉಲ್ಲಾಸ್, ಚೊವಂಡ ಜೋಯಪ್ಪ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜೂ.25 NEWS DESK : ಪ್ರತಿಭಟನೆಯ ಒಂದು ಭಾಗವಾಗಿರುವ ಪ್ರತಿಕೃತಿ ದಹನವನ್ನು ರಾಜಕೀಯ ದೃಷ್ಟಿಕೋನದಲ್ಲಿ ನೋಡಬೇಕೆ ಹೊರತು ವೈಯುಕ್ತಿಕವಾಗಿ ಪರಿಗಣಿಸಿ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕಾಂಗ್ರೆಸ್ ನ ಬೆದರಿಕೆಗಳಿಗೆ ಬಿಜೆಪಿ ಅಂಜುವುದಿಲ್ಲವೆಂದು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಜನಸಾಮಾನ್ಯರಿಗೆ ಹೊರೆಯಾಗುವ ರೀತಿಯಲ್ಲಿ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನು ನೆಪ ಮಾಡಿಕೊಂಡು ಕೊಡಗಿನ ಕಾಂಗ್ರೆಸ್ಸಿಗರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ವಿರೋಧ ಪಕ್ಷವಾಗಿರುವ ಬಿಜೆಪಿ ಆಡಳಿತ ಪಕ್ಷದ ಜನವಿರೋಧಿ ಧೋರಣೆ ವಿರುದ್ಧ ಜನಪರವಾಗಿ ಪ್ರತಿಭಟನೆ ನಡೆಸಿದೆ. ಸಾಂಕೇತಿಕವಾಗಿ ಕಾಂಗ್ರೆಸ್ ನಾಯಕರ ಪ್ರತಿಕೃತಿ ದಹಿಸಿದ್ದು, ಇದು ಪ್ರತಿಭಟನೆಯ ಒಂದು ಭಾಗವಾಗಿದೆಯಷ್ಟೆ. ಕಾಂಗ್ರೆಸ್ ಪಕ್ಷ ಕೂಡ…
ಮಡಿಕೇರಿ, ಜೂ.24 NEWS DESK : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುವುದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಭಿನಂದಿಸಿದ ಅವರು, ಬರುವ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಎಲ್ಲರೂ ಸಂಘಟಿತ ಪ್ರಯತ್ನ ನಡೆಸಬೇಕು ಎಂದರು. ಪ್ರತಿಭಾವಂತ ಜಿಲ್ಲೆಗಳು ಎನಿಸಿರುವ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಮೊದಲಿನಿಂದಲೂ ಈ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಗಳಿಸುತ್ತಾ ಬಂದಿವೆ. ಹಾಗೆಯೇ, ಮಲೆನಾಡಾದ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಕೂಡ ಪ್ರತಿಭಾವಂತರಿದ್ದು, ಇಲ್ಲಿನ ಜನತೆ ಕೂಡ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಜಿಲ್ಲೆಯ ಮಕ್ಕಳು ಕೂಡ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ…
ಮಡಿಕೇರಿ ಜೂ.25 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಪ್ರಯುಕ್ತ “ಅಮೃತ ಸೋಮೇಶ್ವರ” ಸಾಕ್ಷ್ಯ ಚಿತ್ರ ಲೋಕಾಪ೯ಣೆಗೊಂಡಿತು. ಸೋಮೇಶ್ವರ ದೇವಾಲಯದ ಸಭಾ ಭವನದಲ್ಲಿ ಆಯೋಜಿತ ಸಭಾ ಕಾಯ೯ಕ್ರಮದಲ್ಲಿ ಅಮೃತ ಸೋಮೇಶ್ವರ ಸಾಕ್ಷ್ಯ ಚಿತ್ರವನ್ನು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಲೋಕಾಪ೯ಣೆ ಮಾಡಿದರು.ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖರು ಹಾಜರಿದ್ದರು. ಸಾಕ್ಷ್ಯ ಚಿತ್ರ ನಿಮಿ೯ಸಿ, ನಿದೇ೯ಶಿಸಿದ ಪತ್ರಕತ೯ ಅನಿಲ್ ಹೆಚ್.ಟಿ ಮತ್ತು ರೀನಾ ಅನಿಲ್ ದಂಪತಿಯನ್ನು ಈ ಸಂದಭ೯ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಹೆಸರಾಂತ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಸೋಮೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಮಾಜಿ ಅಧ್ಯಕ್ಷ ಜಿ.ಸೋಮೇಶ್, ನಿದೇ೯ಶಕ ಎಸ್.ಡಿ.ವಿಜೇತ್, ದೇವಿಬಳಗದ ಅಧ್ಯಕ್ಷೆ ರತಿ ನಂದಕುಮಾರ್, ಚಿತ್ರಲೇಖ ಸನ್ಮಾನಿಸಿ ಗೌರವಿಸಿದರು. ಶ್ರೀ ಸೋಮೇಶ್ವರ ದೇವಾಲಯ ಇತಿಹಾಸ, ದೇವಾಲಯ ಮಹತ್ವದ ಕುರಿತ 45 ನಿಮಿಷಗಳ ಸಾಕ್ಷ್ಯ ಚಿತ್ರ ದೇವಾಲಯಕ್ಕೆ ಸಂಬಂಧಿಸಿದಂತೆ ಭವಿಷ್ಯಕ್ಕೆ ಉತ್ತಮ ದಾಖಲೆಯಾಗಿದೆ ಎಂದು…
ಮಡಿಕೇರಿ ಜೂ.25 NEWS DESK : ಕುಶಾಲನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕುಟ್ಟಂಡ ಪ್ರಮೋದ್ ಮುತ್ತಪ್ಪ ನೇಮಕಗೊಂಡಿದ್ದಾರೆ. ಪ್ರಮೋದ್ ಅವರು ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಪುರಸಭೆ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಧಿಕಾರದ ಸದಸ್ಯರಾಗಿ ವಿ.ಎಸ್.ಸಜಿ, ಕೆ.ಆರ್.ಕಿರಣ್ ಕುಮಾರ್ ಮತ್ತು ಕೆ.ಆರ್.ಸಂಗೀತ ಅವರುಗಳನ್ನು ನೇಮಕ ಮಾಡಲಾಗಿದೆ.
ನಾಪೋಕ್ಲು ಜೂ.25 NEWS DESK : ಪ್ರತಿಕೃತಿ ದಹನ, ಅಣುಕು ಶವಯಾತ್ರೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಿದ್ದು, ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸುತ್ತಿದ್ದಾರೆ. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್, ಭಾಗಮಂಡಲ ವಲಯ ಅಧ್ಯಕ್ಷ ಕೋಳಿ ಬೈಲ್ ವೆಂಕಟೇಶ್, ಡಿಸಿಸಿ ಸದಸ್ಯ ಸುನಿಲ್ ಪತ್ರವೋ, ಅಕ್ರಮ ಸಕ್ರಮ ಸಮಿತಿ ಮಡಿಕೇರಿ ತಾಲೂಕು ಅಧ್ಯಕ್ಷ ನೆರವಂಡ ಉಮೇಶ್, ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ ಬೇಬ, ಭಾಗಮಂಡಲ ಮಾಜಿ ವಲಯ ಅಧ್ಯಕ್ಷ ದೇವಂಗೋಡಿ ಹರ್ಷ, ಚೆಯಂಡಾಣೆ ಗ್ರಾ.ಪಂ ಉಪಾಧ್ಯಕ್ಷ, ವಿನೋದ್ ಕೋಡಿರ. ಚೇರಂಬಾಣೆ ಗ್ರಾ.ಪಂ ಸದಸ್ಯೆ ಬಿಂದು., ಕೊಟ್ಟುಕತ್ತಿರ ದಿವ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿತೈಷಿಗಳು ನಾಯಕರುಗಳು ಪಕ್ಷದ ಕಾರ್ಯಕರ್ತರು…
ಕುಶಾಲನಗರ ಜೂ.25 NEWS DESK : ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ, ತಾಲೂಕು ಮಟ್ಟದ ಆಡಳಿತ ಮಂಡಳಿಗೆ ಚುನಾವಣೆಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಘಟಕದ ಚುನಾವಣಾ ಅಧಿಕಾರಿ ಎಸ್.ಆರ್.ಜಿತೇಂದ್ರ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಅಖಿಲ ಭಾರತ ವೀರಶೈವ ಮಹಾಸಭಾ ಮೊದಲನೇ ಹಂತದ ಚುನಾವಣೆ ತಾಲೂಕು ಮತ್ತು ಜಿಲ್ಲಾ ಘಟಕಗಳಿಗೆ ನಡೆಯಲಿದೆ. ಚುನಾವಣೆ ಮೂಲಕ ಅಧ್ಯಕ್ಷರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಆಯ್ಕೆ ನಡೆಯುವುದು ಎಂದು ತಿಳಿಸಿದ್ದಾರೆ. ನಾಮಪತ್ರ ಸ್ವೀಕಾರ ಈ ತಿಂಗಳ 27 ರಿಂದ ಆರಂಭವಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜು.4 ಆಗಿರುತ್ತದೆ ಎಂದು ಹೇಳಿದ್ದಾರೆ. ಜು.5 ನಾಮಪತ್ರ ಪರಿಶೀಲನೆ, ಜು.8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆ ದಿನಾಂಕವಾಗಿದೆ. ಜು.21ರಂದು ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ಮತದಾನದ ನಂತರ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟಣೆ ಆಗಲಿದೆ ಎಂದು ಅವರು ಮಾಹಿತಿ ಒದಗಿಸಿದರು.…
ಮಡಿಕೇರಿ, ಜೂ.24 NEWS DESK : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಅವರಲ್ಲಿ ಭ್ರಾತ್ವತ್ವ ಬೆಳೆಸುವ ಮೂಲಕ ಸಮಾಜದ ಉತ್ತಮ ಹಾಗೂ ಜವಾಬ್ದಾರಿ ನಾಗರಿಕರನ್ನಾಗಿ ರೂಪಿಸಲು ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಕರೆ ನೀಡಿದರು. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರಿಗೆ ಒಂದು ವಾರ ಕಾಲ ಏರ್ಪಡಿಸಿದ್ದ ಜಿಲ್ಲಾಮಟ್ಟದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್…






