ಲೇಖಕ: admin

ಮಡಿಕೇರಿ ಜೂ.24 NEWS DESK : ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕಲಿಕೆಯ ಸಮಯದಲ್ಲೇ ಚುನಾವಣೆಯ ಮಹತ್ವ, ಚುನಾವಣೆಯ ಪ್ರಕ್ರಿಯೆ, ಮತದಾನದ ಮಹತ್ವ, ಮತದಾನ ಪ್ರಕ್ರಿಯೆ,ಶಾಲಾ ಸಂಬಂಧಿಸಿದ ಸಂಸತ್ತಿನ  ಚಟುವಟಿಕೆಗಳ ಅರಿವು ಮೂಡಿಸುವ ಉದ್ದೇಶದಿಂದ  ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. 4ನೇ ತರಗತಿಯಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ನಾಮಪತ್ರ ಸಲ್ಲಿಕೆ ಪ್ರಕಾರದಿಂದ ಹಿಡಿದು, ಮತಯಾಚನೆ, ಮತದಾನ ಪ್ರಕ್ರಿಯೆ, ಗುರುತು ಮಾಡುವಿಕೆ ನಡೆಸಲಾಯಿತು. ಫಲಿತಾಂಶ ಎಣಿಕೆಯ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕರುಗಳು ಮುನ್ನಡೆ-ಹಿನ್ನಡೆ ಗಳಿಸಿಕೊಂಡು ಅಂತಿಮವಾಗಿ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಲಾಯಿತು.

Read More

ನಾಪೋಕ್ಲು ಜೂ.24 NEWS DESK : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ವತಿಯಿಂದ ವಾರ್ಷಿಕ ಮಾಹಿತಿ ಕಾರ್ಯಾಗಾರ ನಡೆಯಿತು. ಮಡಿಕೇರಿಯ ಜ್ಞಾನ ವಿಕಾಸ ಕೇಂದ್ರದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉದ್ಘಾಟಿಸಿ, ಜ್ಞಾನ ವಿಕಾಸ ಕೇಂದ್ರದ ಧ್ಯೇಯವೋದ್ದೇಶಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಜ್ಞಾನ ವಿಕಾಸ ಕೇಂದ್ರದ ಯೋಜನಾಧಿಕಾರಿ ಪುರುಷೋತ್ತಮ, ಅರಕಲಗೋಡು ತಾಲ್ಲೂಕಿನ ಸಮನ್ವಯಧಿಕಾರಿ ಸಪ್ನಾ, ಮಡಿಕೇರಿ ತಾಲ್ಲೂಕಿನ ಸಮನ್ವಯಧಿಕಾರಿ ಮಾಲಿನಿ ಹಾಗೂ ಎಲ್ಲಾ ತಾಲ್ಲೂಕಿನ ಸೇವಾಪ್ರತಿನಿಧಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.  

Read More

ಮಡಿಕೇರಿ ಜೂ.24 NEWS DESK : ಬಿಜೆಪಿಯವರಿಗೆ ನಿಜವಾಗಿಯೂ ಜನಸಾಮಾನ್ಯರ ಮೇಲೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಇಳಿಕೆ ಮಾಡಿಸಲಿ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಲೆ ಏರಿಕೆಯ ನೆಪವೊಡ್ಡಿ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಮತ್ತು ಜನಪ್ರಿಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಗುರಿಯಾಗಿಸಿದ ಕೀಳು ಮಟ್ಟದ ರಾಜಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿಯ ವರ್ತನೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರಾಡಳಿತದ ಫಲವಾಗಿ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಡವರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಬಿಜೆಪಿ 5 ಪ್ರಮುಖ ಗ್ಯಾರಂಟಿಗಳ ಮೂಲಕ ಜನಪ್ರಿಯತೆ ಗಳಿಸಿರುವ…

Read More

ಕುಶಾಲನಗರ, ಜೂ.24 NEWS DESK : ಶಿಕ್ಷಕರು ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಉತ್ತಮ ಪರಿಸರ ಸಂರಕ್ಷಕರಾಗಿ ರೂಪಿಸುವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ( ಎನ್.ಎಸ್.ಎಸ್.) ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಸಹಯೋಗದೊಂದಿಗೆ ಶಾಲಾವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಭ್ರಮಾಚರಣೆಯಲ್ಲಿ ನೇರಳೆ ಗಿಡ ನೆಟ್ಟು ಮಾತನಾಡಿದರು. ಭವಿಷ್ಯದ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸುವ ದಿಸೆಯಲ್ಲಿ ಅರಣ್ಯ ಇಲಾಖೆಯು ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಶಾಲಾವರಣ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು. ಅರಣ್ಯ ಮತ್ತು ಪರಿಸರ…

Read More

ಕುಶಾಲನಗರ, ಜೂ.24 NEWS DESK : ರಾಜ್ಯದಲ್ಲಿ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕೊಡಗು ಜಿಲ್ಲೆಯು ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿ- ಪೋಷಕ ವೃಂದಕ್ಕೆ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದರು. ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಏರ್ಪಡಿಸಿದ್ದ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಶೈಕ್ಷಣಿಕ ವಿಚಾರಗಳ ಕುರಿತು ಮಾಹಿತಿ ನೀಡಿದರು. ಇದರೊಂದಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದೆ. ಗುಣಾತ್ಮಕ ಫಲಿತಾಂಶ ಪಡೆಯಲು ಕಾರಣರಾದ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ಪರಿಶ್ರಮ ಬಹಳ ಮುಖ್ಯವಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಕೂಡ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ…

Read More

ಮಡಿಕೇರಿ ಜೂ.24 NEWS DESK : ಬೆಳಕು ಟ್ರಸ್ಟ್ ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಪೊನ್ನಂಪೇಟೆಯ ಮೂಕಳೇರ ಟೈನಿ ಪೂಣಚ್ಚ (ತಾಮನೆ ಮುಕ್ಕಾಟೀರ ನಾಲ್ಕೇರಿ) ಅವರ ಸಾಹಿತ್ಯ ಸೇವೆಗಾಗಿ ರಾಷ್ಟ್ರ ಮಟ್ಟದ ಅಕ್ಕಮಹಾದೇವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಮಡಿಕೇರಿ, ಜೂ.24 NEWS DESK : ಉತ್ತಮ ಪರಿಸರ ಸಂರಕ್ಷಣೆ ಹಾಗೂ ಜೀವ ಸಂಕುಲದ ಉಳಿವಿಗೆ ಬೇಕಾದ ಶುದ್ಧ ಆಮ್ಲಜನಕ ಒದಗಿಸಿ ಪರಿಸರ ಸಮತೋಲನ ಕಾಪಾಡಿಕೊಂಡು ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದರು. ಮಡಿಕೇರಿ ತಾಲ್ಲೂಕಿನ‌ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಅರಣ್ಯ ಇಲಾಖೆಯ ಮಡಿಕೇರಿ ವಲಯ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪರಿಸರ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಸಸಿ ನೆಡುವ ಮೂಲಕ ವನ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೊಡಗಿನಲ್ಲಿ ಉತ್ತಮ ಮಳೆ ಬಿದ್ದು ಜೀವನದಿ…

Read More

ಮಡಿಕೇರಿ ಜೂ.24 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ ಐದು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು , ವರದಿಗಳು 2023 ರ ಜನವರಿಯಿಂದ 2023ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದೖಢೀಕರಣವಿರಬೇಕು. ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕು. ಟಿವಿ ಮಾಧ್ಯಮದವರು…

Read More

ಮಡಿಕೇರಿ ಜೂ.22 NEWS DESK : ಪೆಟ್ರೋಲ್-ಡೀಸೆಲ್ ದರ ಹೆಚ್ಚಳದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮಂದಿಯ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ ದಬ್ಬಾಳಿಕೆಯ ಮತ್ತು ಬೆದರಿಕೆಯ ತಂತ್ರ ಅನುಸರಿಸುತ್ತಿದೆ. ಇದಕ್ಕೆ ಬಿಜೆಪಿ ಎಂದಿಗೂ ಜಗ್ಗುವುದಿಲ್ಲವೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆದಂತೆ ವಿರಾಜಪೇಟೆಯಲ್ಲಿಯೂ ಪ್ರತಿಭಟನೆ ನಡೆದಿದೆ. ಹೀಗಿದ್ದೂ, ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗದ ಪ್ರಕರಣವನ್ನು ವಿರಾಜಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿದೆ. ಇಂತಹ ಪ್ರಕರಣಗಳಿಗೆ ಬಿಜೆಪಿ ಎಂದಿಗೂ ಹೆದರುವುದಿಲ್ಲ. ಇದನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದರು. ಪ್ರತಿಭಟನೆಯಿಂದ ಯಾವುದೇ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಮತ್ತು ಪ್ರತಿಭಟನೆಗೆ ಪೂರ್ವಾನುಮತಿಯನ್ನು ಪಡೆಯಲಾಗಿತ್ತು ಎಂದು ಲೋಕೇಶ್ ಸ್ಪಷ್ಟಪಡಿಸಿದರು. ಕಳೆದ ಒಂದು ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಜನತೆ ತಿರಸ್ಕರಿಸಿರುವುದಲ್ಲದೆ, ವಿರಾಜಪೇಟೆ…

Read More

ಮಡಿಕೇರಿ ಜೂ.22 NEWS DESK : ಕೊಡಗಿನ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆತು ವಿರಾಜಪೇಟೆ ಕ್ಷೇತ್ರದ ಶಾಸಕ, ಕೊಡವ ಸಮೂಹದ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ಬಿಜೆಪಿ ಪ್ರಮುಖರು ದಹಿಸಿರುವುದು ಖಂಡನೀಯವೆAದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾನೊಬ್ಬ ಕೊಡವತಿಯಾಗಿ ಮಾತನಾಡುತ್ತಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲವೆಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ ಅವರು, ಬಿಜೆಪಿ ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು. ಇಂಧನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಲಾಗಿದ್ದು, ಅದರಲ್ಲಿ ಸ್ಥಳೀಯ ಸಂಸ್ಕೃತಿಯ ಬಗ್ಗೆ ಅರಿವಿರುವ ಕೊಡವ ಮಹಿಳೆಯರು ಪಾಲ್ಗೊಂಡಿರುವುದು ಬೇಸರ ತರಿಸಿದೆ. ಬಿಜೆಪಿಯ ಇಂತಹ ನಡೆಗಳು ಆ ಪಕ್ಷದ ಅವನತಿಗೆ ಹಾದಿಯಾಗಿದೆ ಎಂದರು. ಕೊಡವರಿಗೆ ಹುಟ್ಟು ಸಾವಿನ ಸಂದರ್ಭ ಅವರದ್ದೇ ಆದ ಆಚರಣೆಗಳು, ಪದ್ಧತಿ ಪರಂಪರೆಗಳಿವೆ. ಬೀದಿಯಲ್ಲಿ ಕೊಡವ ಸಮೂಹಕ್ಕೆ ಸೇರಿದ ಜನಪ್ರತಿನಿಧಿಯ ಪ್ರತಿಕೃತಿ ದಹಿಸಲಾಗಿದೆ. ಈ ಸಂದರ್ಭ ಬಿಜೆಪಿಯಲ್ಲಿನ ಕೆಲವು…

Read More