ಲೇಖಕ: admin

ಮಡಿಕೇರಿ NEWS DESK ಮಾ.1 : ದಲಿತರ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಫೆ.22ರಂದು ಮಡಿಕೇರಿ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿದ ಸಂಘಟನೆ ಸಾರ್ವಜನಿಕವಾಗಿ ಲೆಕ್ಕಪತ್ರಗಳನ್ನು ಮಂಡಿಸಬೇಕೆಂದು ವಿ.ನಾಗರಾಜ್ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಹೆಚ್.ಎಸ್.ಕೃಷ್ಣಪ್ಪ, ಜಿಲ್ಲಾ ಸಂಘಟನಾ ಸಂಯೋಜಕರಾದ ರಜನಿಕಾಂತ್ ವಿ.ಆರ್, ಹೆಚ್.ಎನ್.ಯೋಗೇಶ್ ಕುಮಾರ್ ಹಾಗೂ ಜಿಲ್ಲಾ ಮಹಿಳಾ ಸಂಯೋಜಕಿ ಓಮನ ಜೆ.ಎಂ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಆಯೋಜಕರು ಹಣ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಕೊಡಗು ಜಿಲ್ಲೆಯ ಇಬ್ಬರು ಶಾಸಕರಿಗೆ ಪ್ರಶಸ್ತಿ ನೀಡುವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾವೇಶದಲ್ಲಿ 5 ಸಾವಿರ ಮಂದಿ ಸೇರಲಿದ್ದಾರೆ. ಸುಮಾರು ನೂರು ಬೈಕ್ ಗಳೊಂದಿಗೆ ಪೂರ್ವಿಕರ ಭಾವಚಿತ್ರವಿರುವ ಬೃಹತ್ ಮೆರವಣಿಗೆ ಸಾಗಲಿದೆ ಎಂದು ಪ್ರಚಾರ ಪಡೆದು ಹಣ ಸಂಗ್ರಹಿಸಿದ್ದಾರೆ. ಅಲ್ಲದೆ 37 ದಲಿತ ಸಂಘಟನೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ ಎಂದು ಸುಳ್ಳು ಹೇಳಿಕೆ…

Read More

ಮಡಿಕೇರಿ, NEWS DESK ಮಾ.1 : ನಾಪೋಕ್ಲುವಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ನನ್ನ ಪುತ್ರ ಭಾಗಿಯಾಗಿಲ್ಲ, ಆದರೆ, ನನ್ನ ಪುತ್ರ ಗೌತಮ್ ಗೆ ಹಲ್ಲೆ ಮಾಡಿದ್ದಾನೆ ಎಂದು ಕೆಲವು ವ್ಯಕ್ತಿಗಳು ಆರೋಪ ಮಾಡಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಪುತ್ರನ ವಿರುದ್ಧ ಆರೋಪ ಮಾಡುತ್ತಿರುವವರು ದೇವಸ್ಥಾನದಲ್ಲಿ ಪ್ರಮಾಣ ಮಾಡಿ ‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಹೇಳಿದರೆ, ಶಿಕ್ಷೆಯನ್ನು ನಾನೇ ಕೊಡಿಸುತ್ತೇನೆ ಎಂದು ಸವಾಲೆಸೆದರು. ನಾಪೋಕ್ಲುವಿನಲ್ಲಿ ಪ್ರತಿಭಟನೆ ನಡೆಸುವ ಸಂದರ್ಭ ನನ್ನ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಘಟನೆಗೂ, ನನಗೂ ಏನು ಸಂಬಂಧವಿದೆ ಎಂದು ಪ್ರಶ್ನಿಸಿದರು. ರಾಜಕೀಯ ಲಾಭಕ್ಕಾಗಿ ಘಟನೆಯನ್ನು ಬಳಸುತ್ತಿರುವುದು ತಪ್ಪು, ನನ್ನ ರಾಜೀನಾಮೆ ಕೇಳಲು ಹೈಕಮಾಂಡ್ ಇದ್ದಾರೆ, ಬೇರೆಯವರು ಕೇಳುವ ಅಗತ್ಯವಿಲ್ಲ ಎಂದರು. ನಾಪೋಕ್ಲು ಜಮಾಅತ್‌ನ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ ಮಕ್ಕಳ ನಡುವಿನ ಜಗಳವನ್ನು ಧರ್ಮಧರ್ಮಗಳ ನಡುವೆ ತಂದು ಹಾಕಿ…

Read More

ವಿರಾಜಪೇಟೆ, NEWS DESK ಮಾ.1: ವಿರಾಜಪೇಟೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನವನ್ನು ಅಧ್ಯಯನ ಹಬ್ಬ ಎನ್ನುವ ದೃಷ್ಟಿಕೋನದಿಂದ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ನಿಶಾ ರವರು ಮಾತನಾಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಇಂದು ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ಉತ್ತಮವಾಗಿ ತಯಾರಿಸಿ, ತಾವು ತಯಾರಿಸಿದ ಮಾದರಿಗಳಿಗೆ ಸೂಕ್ತವಾದ ವಿವರಣೆಯನ್ನು ಸಹ ನೀಡಿರುತ್ತಾರೆ. ವಿಜ್ಞಾನವು ನಿಂತ ನೀರಾಗದೇ ಸಂಶೋಧನಾ ಪ್ರವೃತ್ತಿಗೆ ಒಳಪಟ್ಟಿದೆ. ವಿಜ್ಞಾನವು ರಾಷ್ಟ್ರದ ಪ್ರಗತಿಗೆ ಬುನಾದಿಯಾಗಿದೆ ಎಂದು ಹೇಳಿದರು. ವೈಜ್ಞಾನಿಕವಾಗಿ ವಿದ್ಯಾರ್ಥಿಗಳು ಜ್ಞಾನವನ್ನು ಬೆಳೆಸಿಕೊಂಡಲ್ಲಿ ಮಾತ್ರ ಪ್ರಗತಿಗೆ ಪೂರಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಾಲಾ ವಿದ್ಯಾರ್ಥಿ ನಾಯಕಿ ಶಿಖಾ ಮುತ್ತಮ್ಮ ಮಾತನಾಡಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮಗಳು ನಡೆಯುತ್ತಿದ್ದು…

Read More

ಮಡಿಕೇರಿ, NEWS DESK ಮಾ.1 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ನಾಪೋಕ್ಲುವಿನಲ್ಲಿ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಅವರನ್ನು ಇಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದೂ ಆಚರಣೆಗಳಿಗೆ ಅಡ್ಡಿಪಡಿಸುವ ಕಾರ್ಯ ರಾಜ್ಯದ ವಿವಿಧೆಡೆ ನಡೆಯುತ್ತಿದ್ದು, ಕೋಮು ಕಿಡಿಗೇಡಿಗಳ ಈ ಕೃತ್ಯ ಖಂಡನೀಯವೆಂದರು. ಹಿಂದೂ ಸಂಘಟನೆಯ ಕಾರ್ಯಕರ್ತ ಗೌತಮ್ ಮೇಲಿನ ಹಲ್ಲೆ ಗಂಭೀರ ಪ್ರಕರಣವಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿರುವುದು ಸಂತೋಷ ತಂದಿದೆ. ಕಿಡಿಗೇಡಿಗಳಿಗೆ ಕಠಿಣ ಕಾನೂನು ಕ್ರಮದ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು. ಹಿಂದೂ ಸಮಾಜದ ಆಚರಣೆಗಳ ಮೇಲೆ ಕಲ್ಲು ತೂರಾಟ ಮಾಡಿಸುವ ಕೆಲಸಗಳು ರಾಜ್ಯದ ಹಲವು ಭಾಗಗಳಲ್ಲಿ ನಡೆದಿದೆ. ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕೆ ಪ್ರೇರಣೆ ನೀಡುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮಾಜಿ ಸಚಿವ ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪಕ್ಷದ…

Read More

ಮಡಿಕೇರಿ NEWS DESK ಮಾ.1 : ಕಾಡಾನೆ ದಾಳಿಯಿಂದ ಮದೆ ಗ್ರಾ.ಪಂ ವ್ಯಾಪ್ತಿಯ ಬೆಟ್ಟತ್ತೂರು ಗ್ರಾಮದ ವಿದ್ಯಾರ್ಥಿನಿ ಪೂಜಾ ಮೃತಪಟ್ಟಿರುವುದು ಅತ್ಯಂತ ವಿಷಾದಕರ. ಈ ಘಟನೆಯನ್ನು ಸರಕಾರ ಹಾಗೂ ಅರಣ್ಯ ಸಚಿವರು ಗಂಭೀರವಾಗಿ ಪರಿಗಣಿಸುವ ಮೂಲಕ ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ವಿದ್ಯಾರ್ಥಿನಿಯ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣವಾಗಿದೆ. ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ಹಾವಳಿ ಇರುವ ಕುರಿತು ಗ್ರಾಮಸ್ಥರು ಗಮನ ಸೆಳೆದಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆAದು ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಕಾಡಾನೆ, ಹುಲಿ ಮತ್ತಿತರ ವನ್ಯಜೀವಿಗಳ ದಾಳಿಯಾಗುತ್ತಿದೆ. ಕಾಫಿ ತೋಟಗಳಲ್ಲಿ ಕಾರ್ಯನಿರ್ವಹಿಸಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಮಾನವ ಜೀವಹಾನಿ, ಜಾನುವಾರುಗಳ ಬಲಿ ಮತ್ತು ಅಪಾರ ಬೆಳೆ ನಷ್ಟವಾಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಗ್ರಾಮಸ್ಥರ ಮನವಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ.…

Read More

ನವದೆಹಲಿ, ಮಾರ್ಚ್ 1, 2026: ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮನೆಮಾಡಿರುವ ಬೆನ್ನಲ್ಲೇ, ಭಾರತೀಯ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿಸುದ್ದಿ ನೀಡಿವೆ. ಇಂದಿನಿಂದ (ಮಾರ್ಚ್ 1) ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ನಗರವಾರು ದರ ಇಳಿಕೆಯ ವಿವರ: ತೈಲ ಮಾರುಕಟ್ಟೆ ಕಂಪನಿಗಳಾದ IOCL, HPCL ಮತ್ತು BPCL ನಿರ್ಧಾರದಂತೆ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹28 ರಿಂದ ₹31 ರವರೆಗೆ ಕಡಿತಗೊಳಿಸಲಾಗಿದೆ: ನವದೆಹಲಿ: ₹28 ಇಳಿಕೆಯಾಗಿದ್ದು, ಹಳೆಯ ದರ ₹1768.5 ರಿಂದ ಈಗ ₹1740.5 ಕ್ಕೆ ಕುಸಿದಿದೆ. ಕೋಲ್ಕತ್ತಾ: ಗರಿಷ್ಠ ₹31 ಕಡಿತದೊಂದಿಗೆ ಬೆಲೆ ₹1844.5 ಕ್ಕೆ ತಲುಪಿದೆ. ಮುಂಬೈ: ₹28.5 ಇಳಿಕೆಯಾಗಿ ₹1692 (ಅಂದಾಜು) ದರ ನಿಗದಿಯಾಗಿದೆ. ಚೆನ್ನೈ: ₹29.5 ರಷ್ಟು ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಏನು? ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ಇಳಿಕೆಯಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ…

Read More

ಬೆಂಗಳೂರು, ಮಾರ್ಚ್ 1, 2026: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಚಿತ್ರತಂಡ ಬಿಡುಗಡೆ ಮಾಡಿದ ಹೊಸ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಾಯಕಿಯ ಮುಖ ಮರೆಮಾಚಿದ ಬಗ್ಗೆ ವ್ಯಕ್ತವಾದ ಆಕ್ರೋಶದ ನಂತರ ಚಿತ್ರತಂಡ ಕಿಯಾರಾ ಅಡ್ವಾಣಿ ಅವರ ಮುಖ ತೋರಿಸಿದೆಯಾದರೂ, ಇದು ಹೊಸ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಟೀಕೆಗೆ ಕಾರಣವಾದ ಪ್ರಚಾರದ ಶೈಲಿ ಇತ್ತೀಚೆಗೆ ಬಿಡುಗಡೆಯಾದ ‘ಟಾಕ್ಸಿಕ್’ ಟೀಸರ್‌ನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಅವರಂತಹ ಘಟಾನುಘಟಿ ನಟಿಯರಿದ್ದರೂ ಯಾರ ಮುಖವನ್ನೂ ತೋರಿಸಿರಲಿಲ್ಲ. ಕೇವಲ ಯಶ್ ಅವರನ್ನು ಮಾತ್ರ ಹೈಲೈಟ್ ಮಾಡಲಾಗುತ್ತಿದೆ ಎಂಬ ಟೀಕೆ ಕೇಳಿಬಂದಿತ್ತು. ಈ ಬೆನ್ನಲ್ಲೇ ಮಾರ್ಚ್ 2ರಂದು ಬಿಡುಗಡೆಯಾಗಲಿರುವ ಮೊದಲ ಹಾಡು ‘ತಬಾಹಿ’ (Tabaahi) ಪೋಸ್ಟರ್‌ನಲ್ಲಿಯೂ ಕಿಯಾರಾ ಅವರ ಮುಖವನ್ನು ಮರೆಮಾಚಲಾಗಿತ್ತು. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. 12:59 PM | March 2nd #Tabaahi #ToxicTheMovie@TheNameIsYash#Nayanthara @advani_kiara@humasqureshi @rukminitweets…

Read More

ಬೆಂಗಳೂರು, ಮಾರ್ಚ್ 1, 2026: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಿದೆ. ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ದುಬೈ ಸೇರಿದಂತೆ ವಿವಿಧೆಡೆ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಎಕ್ಸ್ (X) ಸಂದೇಶದ ಮುಖ್ಯಾಂಶಗಳು: ಗಂಭೀರ ಪರಿಗಣನೆ: ಇಸ್ರೇಲ್, ಇರಾನ್, ಯುಎಇ ಮತ್ತು ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೆಹಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ: ಈ ಸಂಬಂಧ ನವದೆಹಲಿಯಲ್ಲಿರುವ ಕರ್ನಾಟಕ ಭವನದ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಲಾಗಿದ್ದು, ವಿದೇಶಾಂಗ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬಳ್ಳಾರಿಯ 32 ಮಂದಿ ದುಬೈನಲ್ಲಿ ಬಾಕಿ: ಮಾಜಿ ಸಚಿವ ನಾಗೇಂದ್ರ ಅವರು ನೀಡಿದ ಮಾಹಿತಿಯಂತೆ, ಬಳ್ಳಾರಿ ಮೂಲದ 32…

Read More

ಮಡಿಕೇರಿ, NEWS DESK ಮಾ.1: ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ, ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ , ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ದೂ:- 08272 221077 , 08272 221099 ವಾಟ್ಸಾಪ್ ಸಂಖ್ಯೆ(Only message):- 8550001077

Read More