NEWS DESK *ಶ್ರೀ ಚಾಮುಂಡೇಶ್ವರಿ ಜನ್ಮೋತ್ಸವ* *ಜುಲೈ 27 ರಂದು ಇಂದು ಶನಿವಾರ ಆಷಾಢ ಕೃಷ್ಣ ಸಪ್ತಮಿ ರೇವತಿ ನಕ್ಷತ್ರದ ದಿನ ಜಗನ್ಮಾತೆ ಮೈಸೂರು ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಉತ್ಸವ* ಶ್ರೀ ಚಾಮುಂಡೇಶ್ವರಿ ಪೌರಾಣಿಕ ಹಿನ್ನಲೆಯುಳ್ಳ ದೇವತೆಯಾಗಿದ್ದು, ‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನೆಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟ ವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು. ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆ ಗಳಿಸಿ, ಶ್ರೀ…
ಲೇಖಕ: admin
ಮಡಿಕೇರಿ ಜು.27 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ತ್ರೈಮಾಸಿಕ ‘ಕೊಡವೋಲೆ’ ಸಂಚಿಕೆಯನ್ನು ಸಾಹಿತಿ ಕಲಾವಿದರಿಗೆ ಅವಕಾಶ ನೀಡುವ ಸಲುವಾಗಿ ಪ್ರಕಟಿಸಲಾಗುತ್ತಿದೆ. ಈಗಾಗಲೇ ಹಲವಾರು ಸಂಚಿಕೆ ಬಿಡುಗಡೆಯಾಗಿದೆ. ಆದ್ದರಿಂದ ಎಲ್ಲಿಯೂ ಪ್ರಕಟವಾಗದ ತಮ್ಮ ಸ್ವಂತ ರಚನೆಯ ಕೊಡವ ಭಾಷೆಯಲ್ಲಿ ರಚಿಸಿದ ಕಥೆ, ಕವನ, ಚುಟುಕ, ವೈಚಾರಿಕ ಲೇಖನ, ನಗೆಹನಿ, ಪ್ರಬಂಧ, ಸಂಶೋಧನಾ ಲೇಖನಗಳನ್ನು ಇ-ಮೇಲ್ (kodava.acadamy@gmail.com) ಅಥವಾ ನುಡಿ ಫಾಂಟ್‌ನಲ್ಲಿ ಟೈಪ್ ಮಾಡಿ ಇಲ್ಲವೆ ಕೈ ಬರಹದಲ್ಲಿ ಅಚ್ಚುಕಟ್ಟಾಗಿ ಬರೆದು ದಿನಾಂಕ 31.08.2024ರ ಒಳಗಾಗಿ ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮ್ಯಾನ್ಸ್ ಕಾಂಪೌ0ಡ್, ಮಡಿಕೇರಿ-571201 ಈ ಕಚೇರಿಗೆ ತಲುಪಿಸಲು ಕೋರಲಾಗಿದೆ. ಅರ್ಹವಾದುದ್ದನ್ನು ಮುಂದಿನ ‘ಕೊಡವೋಲೆ’ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು. ಬರಹಗಾರರು ಬರೆದು ಕಳುಹಿಸುವಾಗ ಹೆಸರು ಮತ್ತು ಪೂರ್ಣ ವಿಳಾಸ ನಮೂದಿಸಬೇಕು ಮತ್ತು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಬ್ಯಾಂಕ್ ಖಾತೆಯ ವಿವರವುಳ್ಳ ಪಾಸ್‌ಬುಕ್‌ನ ಜೆರಾಕ್ಸ್ ಪ್ರತಿಯನ್ನು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿ ದೂರವಾಣಿ 08272-229074…
ಸೋಮವಾರಪೇಟೆ ಜು.27 NEWS DESK : ಜೈ ಜವಾನ್ ಮಾಜೀ ಸೈನಿಕರ ಸಂಘದ ಆಶ್ರಯದಲ್ಲಿ ಪಟ್ಟಣದ ಪತ್ರಿಕಾಭವನ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಈರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜೀ ಸೈನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದೇಶಾಭಿಮಾನಿಗಳು ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಈರಪ್ಪ, ಕಾರ್ಗಿಲ್ ಯುದ್ಧದ ಸಂದರ್ಭ ದೇಶದ ಗಡಿಯಲ್ಲಿ ಆದ ಬೆಳವಣಿಗೆ, ಹುತಾತ್ಮರಾದ ಸೈನಿಕರ ಕೆಚ್ಚೆದೆಯ ಹೋರಾಟ, ಪಾಕಿಸ್ತಾನದ ಕಪಟ ಬುದ್ಧಿಯ ಬಗ್ಗೆ ವಿವರಿಸಿದರು. ಈಗಾಗಲೇ ಭಾರತದೊಳಗೆ ಅಕ್ರಮವಾಗಿ ಬಾಂಗ್ಲಾ ವಲಸಿಗರು ನುಗ್ಗಿದ್ದು, ಇವರಿಂದ ದೇಶದ ಆಂತರಿಕ ಭದ್ರತೆಗೆ ಆತಂಕವಿದೆ. ಒಂದು ವೇಳೆ ಯುದ್ಧದ ಸನ್ನಿವೇಶ ನಿರ್ಮಾಣವಾದರೆ ದೇಶದ ಗಡಿಯಲ್ಲಿರುವ ಸೈನಿಕರಷ್ಟೇ ಮಂದಿ ದೇಶದ ಆಂತರಿಕ ಭದ್ರತೆಗೂ ಬೇಕಾಗುತ್ತದೆ. ಈ ವಿಷಯದ ಬಗ್ಗೆ ಗಂಭೀರ ಚಿಂತನೆ ಹರಿಸಬೇಕಿದೆ ಎಂದರು. ರೋಟರಿ ಸಂಸ್ಥೆಯ ಅಧ್ಯಕ್ಷ ಸಿ.ಕೆ.ಶಿವಕುಮಾರ್ ಮಾತನಾಡಿ, ಕಾರ್ಗಿಲ್ ಯುದ್ಧದಿಂದ ಭಾರತದ ಸೈನ್ಯದ…
ಮಡಿಕೇರಿ ಜು.26 NEWS DESK : ಸೂರ್ಲಬಿಯಿಂದ ಹಮ್ಮಿಯಾಲ, ಮಾಂದಲಪಟ್ಟಿ ಮೂಲಕ ಮಡಿಕೇರಿಗೆ ಸೇರುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆ ಅಭಿವೃದ್ಧಿಗಾಗಿ ಹಲವು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಬೆಲೆಯೇ ಇಲ್ಲದಾಗಿದೆ. ಮುಚ್ಚಿಕೊಂಡಿದೆ. ಅತಿಯಾದ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಪಾದಾಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ. ಮುಟ್ಲು ಗ್ರಾಮದ ಜನ ಯಾವುದೇ ಬಸ್ ವ್ಯವಸ್ಥೆ ಇಲ್ಲದೆ ಇದೇ ರಸ್ತೆಯ ಮೂಲಕ ಸೂರ್ಲಬಿಗೆ ನಡೆದುಕೊಂಡೇ ಬರಬೇಕಾಗಿದೆ. ತಕ್ಷಣ ಗ್ರಾ.ಪಂ ಮತ್ತು ಆಡಳಿತ ವ್ಯವಸ್ಥೆ ಸೂರ್ಲಬಿ, ಹಮ್ಮಿಯಾಲ, ಮುಟ್ಲು ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಬೇಕೆAದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.26 NEWS DESK : ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕ ಗಾಳಿ, ಮಳೆಯಾಗುತ್ತಿದ್ದು ಮನೆಗಳಿಗೆ ಹಾನಿಯಾಗಿದೆ. ನೀರುಗುಂದ ಗ್ರಾಮದ ನಿವಾಸಿ ಎನ್.ಯು.ತ್ಯಾಗರಾಜ ಎಂಬುವವರ ಮನೆ ನೆಲಸಮಗೊಂಡಿದೆ. ಕಳೆದ ವರ್ಷ ಇದೇ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಗೊಳಗಾಗಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಪರಿಹಾರ ಸಿಗಲಿಲ್ಲ ಎಂದು ತ್ಯಾಗರಾಜ ಪತ್ರಿಕೆಗೆ ಮಾಹಿತಿ ನೀಡಿದರು. ಈ ವರ್ಷ ಅಧಿಕ ಮಳೆಯಾಗುತ್ತಿರುವುದರಿಂದ ಅಂಗ ವೈಫಲ್ಯ ಹೊಂದಿರುವ ನಾನು ಬೆಂಗಳೂರಿನಲ್ಲಿರುವ ನÀನ್ನ ಮಗನ ಮನೆಯಲ್ಲಿ ತಂಗಿದ್ದೆ. ಹಾಗಾಗಿ ಅನಾಹುತ ತಪ್ಪಿದೆ, ನನ್ನ ಮನೆ ಸಂಪೂರ್ಣ ನೆಲಸಮವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ಜು.26 NEWS DESK : ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿ ಉತ್ತಮವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಜಲಾಶಯಗಳು, ಜಲಪಾತಗಳು, ಹಳ್ಳ ಕೊಳ್ಳ, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಇದರಿಂದ ಅಂತರ್ಜಲವು ಸಹ ಹೆಚ್ಚಾಗಿದೆ. ಹೀಗಾಗಿ ಯಾವುದೇ ರೀತಿ ಹಾನಿ…
ಮಡಿಕೇರಿ ಜು.26 NEWS DESK : ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲಾವ್ಯಾಪಿ ಅಪಾರ ಹಾನಿ ಸಂಭವಿಸಿದ್ದು, ಮುಂಜಾಗೃತಾ ಕ್ರಮವಾಗಿ ಜು.27 ರಂದು ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜ್ ಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೆ ದಾಖಲೆಯ 100 ಇಂಚು ಮಳೆಯಾಗಿದೆ. ಗಾಳಿಯ ರಭಸದಿಂದ ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಮರಗಳು, ವಿದ್ಯುತ್ ಕಂಬಗಳು, ಬರೆಗಳು, ಮನೆಗಳು ಧರೆಗುರುಳಿವೆ. ವ್ಯಾಪಕ ಮಳೆಯಿಂದ ಸೋಮವಾರಪೇಟೆ – ಶಾಂತಳ್ಳಿ ಮುಖ್ಯ ರಸ್ತೆಯ ಜೇಡಿಗುಂಡಿ ಬಳಿ ನಿರಂತರವಾಗಿ ಬರೆ ಕುಸಿಯುತ್ತಿದ್ದು, ರಸ್ತೆ ಸಂಪೂರ್ಣ ಮುಚ್ಚಿ ಹೋಗಿದೆ. ಜೆಸಿಬಿ ಗಳ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಕೊಡ್ಲಿಪೇಟೆಯ ಶಿವರಳ್ಳಿ ಗ್ರಾಮದ ಲಕ್ಷ÷್ಮಮ್ಮ, ಸಂಪಿಗೆದಾಳು ಗ್ರಾಮದ ಭಾಗ್ಯ, ಶನಿವಾರಸಂತೆ ಹೋಬಳಿಯ ವಡಯನಪುರ ಗ್ರಾಮದ ಗೌರಮ್ಮ, ಶನಿವಾರಸಂತೆಯ ಬಿಲಾಳ, ಹಾರೆ ಹೊಸೂರು ಗ್ರಾಮದ ಗಂಗಾಧರ ಅವರ ಮನೆಗಳಿಗೆ ಭಾರೀ ಗಾಳಿ ಮಳೆಯಿಂದ…
ಮಡಿಕೇರಿ ಜು.26 NEWS DESK : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 9 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಇಂಗ್ಲಿಷ್ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿರವರ ಕಚೇರಿ, ಹೊಸ ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.26 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘’ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ರಾಣಿ ಮದ್ರಾಸ್ ಮೈಸೂರು, ಹಿಮಂತ್ಸಾ ಸಿಂಗ್ ಕಾ ಲಿನೆನ್ ಹಾಸನ, ತಾಜ್ ರೆಸಾರ್ಟ್, ಮಡಿಕೇರಿ, ಕಲ್ಯಾಣಿ ಮೋಟರ‍್ಸ್, ಮಡಿಕೇರಿ, ಪೆಂಟೆಟೆಕ್, ಮಡಿಕೇರಿ, ಎಸ್‌ಎಲ್‌ಎನ್ ಕಾಫಿ ವರ್ಕ್ ಲಿ. ಕೂಡಿಗೆ, ಮುತ್ತೂಟ್ ಪೈನಾನ್ಸ್, ಮೈಸೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿಗಿಂತ ಕಡಿಮೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ…
ಕುಶಾಲನಗರ ಜು.26 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆ, ಅತ್ತೂರು ಹಾರಂಗಿ ಜ್ಞಾನಗಂಗಾ ಶಾಲೆ ಹಾಗೂ ಕುಶಾಲನಗರ ಮಾಜಿ ಸೈನಿಕರ ಸಂಘದ ವತಿಯಿಂದ ಕುಶಾಲನಗರದ ಮುಳ್ಳುಸೋಗೆಯಲ್ಲಿರುವ ಮಾಜಿ ಸೈನಿಕರ ಸಂಘದ ಸಭಾಂಗಣದಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಸೇವೆಯನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜ್ಞಾನಗಂಗಾ ವಸತಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಎನ್.ಸಿ.ಸಿ.ಕೆಡೆಟ್ ಗಳು ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ನಿವೃತ್ತರಾಗಿರುವ ಸೈನಿಕರು ಮತ್ತು ಸಂಘದ ಮಾಜಿ ಸೈನಿಕರಿಗೆ ಪುಷ್ಪ ನೀಡಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮಾಜಿ ಸೈನಿಕರು ಕಾರ್ಗಿಲ್ ಯುದ್ಧದ ತಮ್ಮ ಅನುಭವವನ್ನು ಹಂಚಿಕೊಂಡರು. ಅಧ್ಯಕ್ಷತೆ ವಹಿಸಿದ್ದರ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಪಿ.ಎ.ನಂಜುಂಡ ಮಾತನಾಡಿ, ಸೈನಿಕರು ಶಿಶ್ತು, ಸಮಯ ಪಾಲನೆ, ರಾಷ್ಟ್ರ ಪ್ರೇಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ, ರಾಷ್ಟ್ರಭಿಮಾನ ಇರುವ ಉದ್ದೇಶದಿಂದ ನಮ್ಮ…






