ಮಡಿಕೇರಿ ಜೂ.20 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಬಡವರು ಹಾಗೂ ಕಾರ್ಮಿಕ ವರ್ಗವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆರೋಪಿಸಿ ಸಿಪಿಐಎಂನ ವಿರಾಜಪೇಟೆ ಘಟಕ ಪ್ರತಿಭಟನೆ ನಡೆಸಿತು. ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಸಿಪಿಐಎಂ ಪ್ರಮುಖರು ಹಾಗೂ ಕಾರ್ಯಕರ್ತರು ಸರಕಾರ ತನ್ನ ನಿರ್ಧಾರವನ್ನು ಬದಲಾಯಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ ಅಧಿಕಾರಕ್ಕೆ ಬರುವ ಮೊದಲು ಹಲವು ಗ್ಯಾರಂಟಿಗಳ ಆಮಿಷವೊಡ್ಡಿದ್ದ ಕಾಂಗ್ರೆಸ್ ಇದೀಗ ಸರಕಾರ ರಚನೆಯಾದ ನಂತರ ಜನಸಾಮಾನ್ಯರಿಗೆ ಹೊರೆಯಾಗುವ ರೀತಿಯಲ್ಲಿ ಬೆಲೆ ಏರಿಕೆಯಲ್ಲಿ ತೊಡಗಿದೆ ಎಂದು ಟೀಕಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡೂ ಅಧಿಕ ತೆರಿಗೆ ವಿಧಿಸಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಇದು ಬಡವರು ಹಾಗೂ ಕಾರ್ಮಿಕ ವರ್ಗದ ಮೇಲೆ ಪರಿಣಾಮ ಬೀರುತ್ತಿದ್ದು, ಜೀವನ ಸಾಗಿಸುವುದೇ…
ಲೇಖಕ: admin
ಸಿದ್ದಾಪುರ ಜೂ.19 NEWS DESK (ಅಂಚೆಮನೆ ಸುಧಿ) : ನೆಲ್ಲಿಹುದಿಕೇರಿ, ಅಭ್ಯತ್ ಮಂಗಲ, ವಾಲ್ನೂರು ತ್ಯಾಗತ್ತೂರು, ರಂಗಸಮುದ್ರ, ಅರೆಕಾಡು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳಿಂದಾಗುತ್ತಿರುವ ನಷ್ಟಕ್ಕೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ. ನೀರು ಮತ್ತು ಆಹಾರ ಹುಡುಕಿಕೊಂಡು ಬರುತ್ತಿರುವ ಆನೆಗಳ ಹಿಂಡು ಕಾಫಿ ತೋಟಗಳು ಮಾತ್ರವಲ್ಲದೆ ಮನೆಯಂಗಳಕ್ಕೂ ದಾಳಿ ಮಾಡಿ ದಾಂಧಲೆ ನಡೆಸುತ್ತಿವೆ. ಕಾಡಾನೆಗಳ ದಾಳಿಯಿಂದ ಇಲ್ಲಿನ ಜನ ಆತಂಕದಲ್ಲಿದ್ದು, ಅರಣ್ಯ ಇಲಾಖೆ ಅಸಹಾಯಕವಾಗಿದೆ. ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೆ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಮತ್ತು ತೋಟಗಳಿಗೆ ಆನೆಗಳು ಸ್ಥಳಾಂತರಗೊಳ್ಳುತ್ತಿವೆಯೇ ಹೊರತು ಮರಳಿ ಕಾಡು ಸೇರುತ್ತಿಲ್ಲ. ಈ ಭಾಗದಲ್ಲಿ 6 ರಿಂದ 10 ಕಾಡಾನೆಗಳ ಹಿಂಡು ಸೇರಿಕೊಂಡಿದ್ದು, ಇವುಗಳಲ್ಲಿ ಕಾಲು ನೋವಿನಿಂದ ಕುಂಟುತ್ತಿರುವ ಆನೆಯೂ ಇದೆ. ಇದು ತೋಟಗಳ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ದೃಶ್ಯ ಸೆರೆಯಾಗಿದೆ. ಹತ್ತಾರು ಕಾಡಾನೆಗಳು ತೋಟ ಮತ್ತು ಕೃಷಿಭೂಮಿಗೆ ಹಾನಿಗೊಳಿಸುತ್ತಿದ್ದು, ಕೃಷಿಕ ವರ್ಗ ಆತಂಕದೊಂದಿಗೆ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಿದೆ.…
ಮಡಿಕೇರಿ ಜೂ.20 NEWS DESK : ಸುಂಟಿಕೊಪ್ಪದ ಕೆ.ಸೌಮ್ಯಶ್ರಿ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ದೊರಕಿದೆ. ಮಂಗಳೂರು ವಿ,ವಿ,ಯ ಅನ್ವಯಿಕ ಸಸ್ಯಶಾಸ್ತ್ರವಿಭಾಗದ ಪ್ರೊ.ರಾಜು ಕೃಷ್ಣ ಚಲನ್ನಾವರ್ ಮಾಗ೯ದಶ೯ನದಲ್ಲಿ ಸೌಮ್ಯಶ್ರೀ ಮಂಡಿಸಿದ ಔಷಧೀಯ ಸಸ್ಯಗಳ ಸಾರಗಳಿಂದ ಸಂಭಾವ್ಯ ನೈಸಗಿ೯ಕ ಜೈವಿಕ ಸಕ್ರಿಯ ಸಂಯುಕ್ತಗಳ ತಪಾಸಣೆ ಮತ್ತು ಮಲೇರಿಯಾ ಹರಡುವ ಸೊಳ್ಳೆಗಳ ಮೇಲೆ ಅವುಗಳ ಪರಿಣಾಮ ಎಂಬ ವಿಚಾರದ ಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ ಲಭ್ಯವಾಗಿದೆ. ಡಾ.ಸೌಮ್ಯ ಶ್ರೀ ಸುಂಟಿಕೊಪ್ಪದ ಅಶ್ವಿನಿ ಮೆಡಿಕಲ್ಸ್ ನ ಗೋಪಾಲಭಟ್, ತಾರಾ ದಂಪತಿಯ ಸೊಸೆಯಾಗಿದ್ದು. ಕೆ.ನಿಖಿಲ್ ಭಟ್ ಅವರ ಪತ್ನಿಯಾಗಿದ್ದಾರೆ. ಕಾಸರಗೋಡು ಕಾಕುಂಜೆಯ ಶಂಕರನಾರಾಯಣ ಭಟ್, ಮಾಲತಿ ಭಟ್ ಅವರ ದ್ವಿತೀಯ ಪುತ್ರಿಯಾಗಿದ್ದಾರೆ.
ಮಡಿಕೇರಿ ಜೂ.20 NEWS DESK : ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ (ಐ.ಎಮ್.ಎ) 2024ನೇ ಸಾಲಿನ ‘ಕರ್ನಾಟಕ ರಾಜ್ಯ ಶಾಖೆ ವೈದ್ಯರ ದಿನ’ ಪ್ರಶಸ್ತಿಗೆ ಮಡಿಕೇರಿಯ ಡಾ.ಮೋಹನ್ ಅಪ್ಪಾಜಿ ಅವರು ಆಯ್ಕೆಯಾಗಿದ್ದಾರೆ. ಜು.1 ರಂದು ಬೆಂಗಳೂರಿ ಮೆಡಿಕಲ್ ಕಾಲೇಜು ಆವರಣದಲ್ಲಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಮೋಹನ್ ಅಪ್ಪಾಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ನಾಪೋಕ್ಲು ಜೂ.20 NEWS DESK : ಮೈಸೂರಿನಲ್ಲಿ ನಡೆದ ಗೋಜು ವಾರಿಯರ್ಸ್ ಕಪ್ ರಾಷ್ಟ್ರಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಹಳೆ ತಾಲೂಕಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಸಿಂತ್ಯಾ ಕಟಾ ವಿಭಾಗದಲ್ಲಿ ತೃತೀಯ, ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕೆ.ಪಿ.ಅಂಜನ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಅದ್ವಿಕ್ ಭೀಮಯ್ಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಇವರು ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಮತ್ತು ಧೀರಜ್ ಕಾರ್ಯಪ್ಪ ಸಹೋದರರಿಂದ ತರಬೇತಿ ಪಡೆಯುತ್ತಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.20 NEWS DESK : ಕಕ್ಕಬೆಯ ನಾಲಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗ್ರಾಮದ ಪರದಂಡ ವಿಠಲ, ಕೋಡಿಮಣಿಯಂಡ ರವಿ ಹಾಗೂ ಪಟ್ಟೆಮನೆ ಕೃಷ್ಣ ನೋಟ್ ಪುಸ್ತಕ ನೀಡಿದರು. ಇವರ ಕೊಡುಗೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಎಂ. ಹೆಚ್ ರಝಿನ, ಅತಿಥಿ ಶಿಕ್ಷಕರಾದ ಕೆ.ಪಿ.ಗೌರಮ್ಮ , ಬಿ.ಎಸ್.ಶಾರಿಕ ಸ್ಮರಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.19 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಟ್ಯಾಬ್ ವಿತರಣೆ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ನಿಗಧಿತ ಗುರಿಗಳಿಗೆ ತಕ್ಕಷ್ಟು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳು ಬಾರದಿರುವುದರಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ : ಫಲಾಪೇಕ್ಷಿಯು 1 ಎಕರೆಯಿಂದ 5 ಎಕರೆ ವ್ಯವಸಾಯದ ಜಮೀನು ಹೊಂದಿದ್ದು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದುಕೊಂಡಿರಬಾರದು. ಅಂತವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಪಂಪ್ ಮೋಟಾರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 13 ಕೊಳವೆ ಬಾವಿಗಳು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 10…
ಸೋಮವಾರಪೇಟೆ ಜೂ.20 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಖಂಡಿಸಿ ಸೋಮವಾರಪೇಟೆಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ಬಂದ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ತಕ್ಷಣ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಮುಂದುವರಿಯಲು ಅಸಮರ್ಥವಾಗಿದೆ, ನೌಕರರಿಗೆ ವೇತನ ನೀಡುವುದಕ್ಕೂ ಹಣವಿಲ್ಲದ ಪರಿಸ್ಥಿತಿಯಲ್ಲಿದೆ ಎಂದು ಟೀಕಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ದರ ದುಬಾರಿಯಾಗಲಿದ್ದು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ಜನರ ಹಾದಿ ತಪ್ಪಿಸುವುದಕ್ಕಾಗಿ ನೀಟ್ ಪರೀಕ್ಷೆಯ ಕುರಿತು ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಯಾರನ್ನೂ ನಾವು ಸಮರ್ಥಿಸಿಕೊಳ್ಳುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷಯಾಗಲಿ. ಆದರೆ ಸರಕಾರ ಮೊದಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಿ ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ…
ಮಡಿಕೇರಿ ಜೂ.20 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜೂ.22 ರಂದು ಸಂಜೆ 4 ಗಂಟೆಯಿಂದ ‘ಸಾಮೂಹಿಕ ಸತ್ಯನಾರಾಯಣ’ ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಜೂ.20 NEWS DESK : ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಜೂ.21 ರಂದು ಬೆಳಗ್ಗೆ 11.30 ರಿಂದ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ಜೂನ್, 21 ರಂದು ಮಧ್ಯಾಹ್ನ 2.30 ರಿಂದ 3.30 ಗಂಟೆಯವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾಬಾಯಿ ಕೋರಿದ್ದಾರೆ.






