ಪುತ್ತೂರು ಜೂ.20 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರ ತಂಡವು 2024-25ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10 ಕಿ.ಮೀ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಸತತ ಮೂರನೇ ಬಾರಿಗೆ ಚಾಂಪಿಯನ್‍ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಶ್ರವಣಬೆಳಗೊಳದ ಬಾಹುಬಲಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಈ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ಸಿ.ಎಸ್.ವಿದ್ಯಾ ತೃತೀಯ ಸ್ಥಾನ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಕೆ.ಜೀಕ್ಷಿತಾ. 4ನೇ ಸ್ಥಾನ, ದ್ವಿತೀಯ ವರ್ಷದ ಡೇಟಾ ಸೈನ್ಸ್ ವಿಭಾಗದ ಅಶ್ವಿನಿ 8ನೇ ಸ್ಥಾನ ಹಾಗೂ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಎ.ಮಂಜುಶ್ರೀ 10ನೇ ಸ್ಥಾನ, ದ್ವಿತೀಯ ವರ್ಷದ ಡೇಟಾ ಸೈನ್ಸ್ ವಿಭಾಗದ ಎನ್.ಎಸ್.ಸುಪ್ರೀತಾ 18ನೇ ಸ್ಥಾನ ಹಾಗೂ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಬಿಂದುಶ್ರೀ 19ನೇ ಸ್ಥಾವನ್ನು ಪಡೆದು ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.…
ಲೇಖಕ: admin
ಸೋಮವಾರಪೇಟೆ ಜೂ.20 NEWS DESK : ರಾಜ್ಯ ಸರಕಾರದ ನಿವೃತ್ತ ನೌಕರರಿಗೂ ಆರೋಗ್ಯ ಸಂಜೀವಿನಿ ಸೇವೆಯನ್ನು ವಿಸ್ತರಿಸಬೇಕೆಂದು ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಹೇಳಿದರು. ಸೋಮವಾರಪೇಟೆ ಮಹಿಳಾ ಸಹಕಾರ ಸಮಾಜದ ಸಭಾಂಗಣದಲ್ಲಿ ನಡೆದ ನಿವೃತ್ತ ನೌಕರರ ಸಂಘದ ಬೆಳ್ಳಿಹಬ್ಬ ಆಚರಣೆ ಮತ್ತು ಸಂಘದ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಹುತೇಕ ನಿವೃತ್ತ ನೌಕರರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ಪಿಂಚಣಿ ಹಣ ಆಸ್ಪತ್ರೆ ಬಿಲ್‌ಗೂ ಸಾಕಾಗುವುದಿಲ್ಲ.ಈ ನಿಟ್ಟಿನಲ್ಲಿ ಆರೋಗ್ಯ ಸಂಜೀವಿನಿ ಸೇವೆ ಎಲ್ಲಾ ನಿವೃತ್ತ ನೌಕರರಿಗೂ ದೊರಕುವಂತಾಗಬೇಕು ಎಂದರು. ನಿವೃತ್ತರು ಮತ್ತು ಕುಟುಂಬ ಪಿಂಚಣಿದಾರರ ಸಮಸ್ಯೆಗಳನ್ನು ಆಲಿಸಿ ಜಿಲ್ಲಾ ಸಮಿತಿಯ ಗಮನಕ್ಕೆ ತಂದು ರಾಜ್ಯ ಸಮಿತಿಯೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. 2008-09ರಲ್ಲಿ ಕೊಡಗು ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ನಿವೃತ್ತ ನೌಕರರ ಸಂಘದಲ್ಲಿ ಮರಣ ನಿಧಿಯನ್ನು ಪ್ರಾರಂಭಿಸಲಾಗಿದ್ದು, ಇದು ಸಂಘದ ಸದಸ್ಯರ ಕುಟುಂಬಕ್ಕೆ ಅನುಕೂಲವಾಗಿದೆ ಎಂದರು. ಇದೇ ಸಂದರ್ಭ ನಿವೃತ್ತ ಶಿಕ್ಷಕ…
ಮಡಿಕೇರಿ ಜೂ.20 NEWS DESK : ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿವಿಧ ವಿಮಾ ಕಂಪೆನಿಗಳ ಸಹಯೋಗದೊಂದಿಗೆ ಅಪಘಾತ ವಿಮೆಯನ್ನು ಒದಗಿಸಲು ವಿಶೇಷ ಅಭಿಯಾನ ನಡೆಸುತ್ತಿದೆ. 18 ರಿಂದ 65 ವರ್ಷ ವಯಸ್ಸಿನ ಒಳಗೆ ಇರುವವರು ವಾರ್ಷಿಕ 549 ರೂ. ಅಥವಾ 749 ರೂ. ಪ್ರೀಮಿಯಂನೊಂದಿಗೆ ಸಮಗ್ರ ಅಪಘಾತ ವಿಮಾ ಯೋಜನೆಯ ಫಲಾನುಭವಿಗಳಾಗಬಹುದು. ಅಪಘಾತದಿಂದ ಆಗುವ ಸಾವುಗಳು ಅಂದರೆ, ರಸ್ತೆ ಅಪಘಾತ, ಹಾವು ಕಡಿತ, ಬೆಂಕಿ, ವಿದ್ಯುದಾಘಾತ, ಸಿಡಿಲು, ನೀರಲ್ಲಿ ಮುಳುಗುವಿಕೆ ಮತ್ತಿತರ ಈ ಯೋಜನೆಯಲ್ಲಿ ಒಳಪಡಿಸಲಾಗಿದೆ. ಮೃತರ ಸಂಬಂಧಿಕರು ಕ್ರಮವಾಗಿ 549 ರೂ. ವಿಮಾ ಯೋಜನೆಗೆ 10 ಲಕ್ಷ ರೂ. ಹಾಗೂ 749 ರೂ. ಯೋಜನೆಗಳಿಗೆ 15 ಲಕ್ಷ ರೂ. ವಿಮೆಯನ್ನು ಪಡೆಯುತ್ತಾರೆ. 60 ಸಾವಿರ ರೂ.ಗಳವರೆಗೆ ಒಳ ರೋಗಿ ವೆಚ್ಚ ಹಾಗೂ 30 ಸಾವಿರ ರೂ.ವರೆಗಿನ ಹೊರ ರೋಗಿ ವೆಚ್ಚವನ್ನು ಈ ಯೋಜನೆಯು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗೆ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು…
ಮಡಿಕೇರಿ ಜೂ.20 NEWS DESK : ನಗರದ ಸರ್ಕಾರಿ ವಸ್ತುಸಂಗ್ರಹಾಲಯ ಕಟ್ಟಡದ ಸಂರಕ್ಷಣೆ ಮತ್ತು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂರಕ್ಷಣಾ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ 2024 ರ ಫೆಬ್ರವರಿ, 21 ರಿಂದ ವಸ್ತು ಸಂಗ್ರಹಾಲಯಕ್ಕೆ ವೀಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರಸ್ತುತ ಸಂರಕ್ಷಣಾ ಕಾಮಗಾರಿ ಕಾರ್ಯಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜೂ.16 ರಿಂದ ವೀಕ್ಷಕರಿಗೆ ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಅನುವು ಮಾಡಲಾಗಿದೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ಬಿ.ಪಿ.ರೇಖಾ ತಿಳಿಸಿದ್ದಾರೆ.
ಮಡಿಕೇರಿ ಜೂ.20 NEWS DESK : ಭಾಗಮಂಡಲದ ಕೆವಿಜಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಲಿತ ಮೆಕ್ಯಾನಿಕ್ ಮೋಟಾರ್ ವೆಹಿಕಲ್ ವೃತ್ತಿ ವಿಭಾಗದ ಹಳೆ ವಿದ್ಯಾರ್ಥಿಗಳು ಸಂಸ್ಥೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಕಮಿಟಿ ಬಿ ಯ ಅಧ್ಯಕ್ಷ ಡಾ. ಕೆ.ವಿ.ರೇಣುಕ ಪ್ರಸಾದ್ ಸ್ಮಾರ್ಟ್ ಕ್ಲಾಸಿಗೆ ಚಾಲನೆ ನೀಡಿದರು. ವಿ.ಟಿ.ಯು. ಬೆಳಗಾಮಿನ ಎಕ್ಸಿಕ್ಯೂಟಿವ್ ಕೌನ್ಸಿಲ್ ಮೆಂಬರ್ ಡಾ. ಯು.ಜೆ.ಉಜ್ವಲ್ ಪ್ರಸ್ತುತ ಸ್ಮಾರ್ಟ್ ಕ್ಲಾಸಿನ ಮಹತ್ವ, ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ, ಸಂಸ್ಥೆ ಬೆಳವಣಿಗೆಗೆ ಆಡಳಿತ ಮಂಡಳಿಯ ಕೊಡುಗೆ ಮತ್ತು ಸಹಕಾರದ ಬಗ್ಗೆ ಮಾತನಾಡಿದರು. ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕೆ.ವಿ.ಶ್ರೀಕಾಂತ್ ಪ್ರಾಸ್ತಾವಿಕ ನುಡಿಗಳನ್ನಡಿದರು. ಸಿ.ಕೆ.ವಿನೋದ್ ಸ್ವಾಗತಿಸಿದರು, ಕಿರಿಯ ತರಬೇತಿ ಅಧಿಕಾರಿ ಪುನೀತ್ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಈ ಸಂಸ್ಥೆಯಲ್ಲಿ ಕಲಿತ ಹಳೆ ವಿದ್ಯಾರ್ಥಿ ಲಕ್ಷ್ಮೀಶ ಅವರನ್ನು ಸನ್ಮಾನಿಸಲಾಯಿತು.
ಸುಂಟಿಕೊಪ್ಪ,ಜೂ.19 NEWS DESK : ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. ಇತ್ತೀಚೆಗೆ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಗಾನಶ್ರೀ ಹಾಗೂ ಸಹಾಯಕ ವಲಯ ಅರಣ್ಯ ಅಧಿಕಾರಿ ಜಗದೀಶ್ ರವರು ಚಾಲನೆ ನೀಡಿದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ಪರಿಸರದ ಮಹತ್ವವನ್ನು ಕುರಿತು ಸಂವಾದವಾದ ಮೂಲಕ ಸುತ್ತಲಿನ ಕ್ರಿಮಿಕೀಟ ಹಾಗೂ ಪ್ರಾಣಿಗಳ ಜೀವನ ಕ್ರಮ ಹಾಗೂ ಸ್ವಚ್ಛಂದ ಪರಿಸರದ ಅಗತ್ಯತೆಯನ್ನು ವಲಯ ಅರಣ್ಯಾಧಿಕಾರಿ ಗಾನಶ್ರೀ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ಕೊಟ್ಟರು. 2020ರ ಜೂನ್ 15ರಂದು ಭಾರತ ಚೀನಾ ಗಡಿಯಲ್ಲಿ ನಡೆದ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆಯ ಮೂಲಕ ಯೋಧ ನಮನವನ್ನು ಸಲ್ಲಿಸಿದರು. ಹುತಾತ್ಮ ಯೋಧರ ಕುರಿತು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಕುಮಾರಿ ಶ್ರೀಶ ಮಾತನಾಡಿದರು.…
ಕುಶಾಲನಗರ ಜೂ.19 NEWS DESK : ಸರಕಾರಿ ಶಾಲೆಗಳ ಬಲವರ್ಧನೆಗೆ ಆಂಗ್ಲ ಮಾಧ್ಯಮ ಶಾಲೆಗಳ ಸಂಯೋಜನೆ ಅಗತ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಇಂದಿಲ್ಲಿ ಹೇಳಿದರು. ಕುಶಾಲನಗರ ತಾಲೂಕು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಶಾಲೆಗಾಗಿ 51, 600 ವೆಚ್ಚದಲ್ಲಿ ಅಳವಡಿಸಲಾದ ಸಿ.ಸಿ ಕ್ಯಾಮೆರಾವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದುವರಿದು ಮಾತನಾಡಿದ ಅವರು ಶೈಕ್ಷಣಿಕ ವರ್ಷದಲ್ಲಿ ಮಡಿಕೇರಿ ಕ್ಷೇತ್ರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ. ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹೆಬ್ಬಾಲೆ ಸೇರಿದಂತೆ ಮೂರು ಶಾಲೆಗಳಿಗೆ ಒಂದನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದರು. ನಂತರ ಜಿಲ್ಲಾ ಪಂಚಾಯತ್ ಅನುದಾನದಿಂದ 1 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡ ಗಂಡು ಮಕ್ಕಳ ಶೌಚಾಲಯವನ್ನು ಉದ್ಘಾಟಿಸಿ ಶಾಲಾ ಮಕ್ಕಳು ಸ್ವಚ್ಛತೆಯನ್ನು ಕಾಪಾಡಿಕೊಂಡು ಶೌಚಾಲಯವನ್ನು ಬಳಸಿಕೊಳ್ಳಬೇಕು. ಹಾಗೆ ಪರಿಸರ ದಿನದ…
ಮಡಿಕೇರಿ ಜೂ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ ಎಂದರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ತಲುಪಿದಲ್ಲಿ ಸಾರ್ಥಕವಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಯಾವುದೇ ರೀತಿಯ ಕುಂದುಕೊರತೆ ಇದ್ದಲ್ಲಿ ಮನವಿ ಮಾಡುವಂತಾಗಬೇಕು. ಬಗೆಹರಿಸುವಂತಹಗಳನ್ನು ಸ್ಥಳದಲ್ಲಿಯೇ ತಿಳಿಸಲಾಗುವುದು. ಇಲ್ಲದಿದ್ದಲ್ಲಿ 15 ದಿನದೊಳಗೆ ಬಗೆಹರಿಸಲಾಗುವುದು ಎಂದರು. ಸಾರ್ವಜನಿಕರ ಮನೆ ಬಾಗಿಲಿಗೆ…
ಮಡಿಕೇರಿ ಜೂ.19 NEWS DESK : ಅಂತರರಾಷ್ಟ್ರೀಯ 10 ನೇ ಯೋಗ ದಿನಾಚರಣೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಪೂರ್ವಭಾವಿ ಸಭೆ ಬುಧವಾರ ನಡೆಯಿತು. ಜೂ.21 ರಂದು ನಡೆಯುವ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನಿರ್ದೇಶನ ನೀಡಿದರು. ಸ್ವಚ್ಚತೆ ಕಾಪಾಡುವುದು ಮತ್ತು ಕುಡಿಯುವ ನೀರು ಕಲ್ಪಿಸುವುದು ಮತ್ತಿತರ ಸಂಬಂಧ ನಗರಸಭೆ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು. ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಜೂನ್,…
ಮಡಿಕೇರಿ ಜೂ.19 NEWS DESK : ವಿರಾಜಪೇಟೆಯ ನಮ್ಮ ಕ್ಲಿನಿಕ್ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ಸಿಬ್ಬಂದಿಗಳ ಜೊತೆ ಚರ್ಚಿಸಿ ಕಾರ್ಯ ವೈಖರಿಯ ವಿವರ ಪಡೆದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.






