ಮಡಿಕೇರಿ ಜೂ.19 NEWS DESK : ಹಟ್ಟಿಹೊಳೆ,ಗರಗಂದೂರು,ದೇವಸ್ತೂರು ದುರ್ಬಲ ಪ್ರದೇಶಗಳಿಗೆ ಎನ್ಡಿಆರೆಫ್ ತಂಡ ಭೇಟಿ ನೀಡಿ ವೀಕ್ಷಿಸಿದರು.
ಲೇಖಕ: admin
ನಾಪೋಕ್ಲು ಜೂ.19 NEWS DESK : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾಲೇಜು ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಸ್.ಬಿ ಅಪ್ಪಾಜಿ ಗೌಡ ಹಾಗೂ ಹಿರಿಯ ಮಾಧ್ಯಮ ವರದಿಗಾರ, ರಮ್ಯ ಸ್ಟುಡಿಯೋ ಮಾಲೀಕ ದುಗ್ಗಳ ಸದಾನಂದ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಕಾವೇರಿ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ಕಾಲೇಜಿನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟ0ಡ ಮೇರಿ ಚಿಟ್ಟಿಯಪ್ಪ, ಕಾಳೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮಾವತಿ ಮುಕ್ಕಾಟಿ, ಪದ್ಮಾ ಗಣಪತಿ, ರಾಜು ದೇವಯ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಂಚಾಲಕ ಎಲ್.ಸಿ.ರಂಗಸ್ವಾಮಿ , ಕ್ರೀಡಾ ಸಮಿತಿ ಸಂಚಾಲಕರು, ದೈಹಿಕ ನಿರ್ದೇಶಕರು ಕೆ.ಎಸ್.ಶಿವರಾಜಕುಮಾರ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಮನೋಜ್ ಕುಮಾರ್, ವಿದ್ಯಾರ್ಥಿ ಪ್ರತಿನಿಧಿ ಮೊಹಮ್ಮದ್ ಶಮಿಮ್ ,ಕೆ.ಹೆಚ್.ನಿಷ್ಮ, ಎಂ.ವಿ.ಇರ್ಫಾನ್, ಎಂ.ಐ.ರಕ್ಷತಾ, ಬಿ.ಪಿ.ನಿತಿನ್ , ಎಂ.ವಿ.ಕೀರ್ತಿ. ಕನ್ನಡ ಪ್ರಾಧ್ಯಾಪಕಿ ಹರಿಣಿ, ಉಪನ್ಯಾಸಕ ವೇಣು…
ಮಡಿಕೇರಿ ಜೂ.19 NEWS DESK : ‘ಸ್ವಂತಕ್ಕಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎನ್ನುವ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಸಾಲಿನ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ಜೂ.21 ರಂದು ನಡೆಯಲಿದೆ ಎಂದು ಆಯುಷ್ ಇಲಾಖಾ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, 2015ರಲ್ಲಿ ಆರಂಭಗೊಂಡ ಯೋಗ ದಿನಾಚರಣೆ ದಶಕದ ಆಚರಣೆಯ ಹಂತದಲ್ಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಗೌಡ ಸಮಾಜದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗ ದಿನಾಚರಣೆಯ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಯೋಗ ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ::: 19 ಆಸನಗಳ ಪ್ರಾತ್ಯಕ್ಷಿಕೆ ::: ನಗರದ ಯೋಗ ಸಂಘಟನೆಯ ಸಂಚಾಲಕರಾದ ಕೆ.ಕೆ.ಮಹೇಶ್ ಕುಮಾರ್…
ಮಂಗಳೂರು ಜೂ.19 NEWS DESK : ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಜೂ.24 ರಿಂದ ಜೂ 30ರ ವರೆಗೆ ಗೋವಾ ಪೋಂಡಾದಲ್ಲಿನ ಶ್ರೀ ರಾಮನಾಥ ದೇವಸ್ಥಾನದಲ್ಲಿ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶಿನವನ್ನು ಹಿಂದೂ ಜನಜಾಗೃತಿ ಸಮಿತಿಯ ಚಂದ್ರ ಮೊಗವೀರ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಹಿಂದೂ ರಾಷ್ಟ್ರಕ್ಕೆ ಸಂಬಂಧಿತ ವಿವಿಧ ವಿಷಯಗಳ ಬಗ್ಗೆ ವಿಶೇಷ ಗಣ್ಯರ ಸಂವಾದದ ಜೊತೆಗೆ ಹಿಂದೂ ರಾಷ್ಟ್ರದ ಅಡಿಪಾಯಕ್ಕಾಗಿ ಚರ್ಚೆ ನಡೆಯುವುದು ಎಂದರು. ಈ ಅಧಿವೇಶನಕ್ಕೆ ಅಮೇರಿಕಾ, ಇಂಗ್ಲೆಂಡ್. ದಕ್ಷಿಣ ಆಫ್ರಿಕಾ, ಘಾನಾ, ನೇಪಾಳ ಮತ್ತು ಬಾಂಗ್ಲಾದೇಶದ ಪ್ರತಿನಿಧಿಗಳು ಬರುವರು. ಜೊತೆಗೆ ಭಾರತದ 26 ರಾಜ್ಯಗಳಿಂದ ಸಾವಿರಕ್ಕಿಂತಲೂ ಹೆಚ್ಚಿನ ಸಂಘಟನೆಗಳು 2000 ಕ್ಕಿಂತಲೂ ಹೆಚ್ಚಿನ ಪ್ರತಿನಿಧಿಗಳು, ಇಂದೋರಿನ ಮಹಾಮಂಡಲೇಶ್ವರ ಸ್ವಾಮಿ, ಪ್ರಣವಾನಂದ ಸರಸ್ವತಿ ಮಹಾರಾಜ, ಇಂಟರ್ನ್ಯಾಷನಲ್ ವೇದಾಂತ ಸೊಸೈಟಿಯ ನಿರ್ಗುಣಾನಂದಗಿರಿ ಮಹಾರಾಜ್, ಛತ್ತೀಸ್ಗಡದ ಶ್ರೀ ರಾಮಬಾಲಕದಾಸ ಮಹಾತ್ಯಾಗಿ ಮಹಾರಾಜ, ಛತ್ತಿಸ್ಗಡದ ಶದಾಣಿ ದರ್ಬಾರಿನ ಡಾ.ಯಧಿಷ್ಠಿರಲಾಲ್ ಮಹಾರಾಜ ಸೇರಿದಂತೆ ಸಂತರು, ಶ್ರೀರಾಮ…
ಮಡಿಕೇರಿ ಜೂ.19 NEWS DESK : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹನ್ ಅವರಿಗೆ “ಸ್ಪಂದನ ಸಿರಿ ಸಾಮಾಜಿಕ ಸೇವಾ ವಿಭೂಷಣ ಪ್ರಶಸ್ತಿ” ಲಭಿಸಿದೆ. ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ 13ನೇ ವಾರ್ಷಿಕೋತ್ಸವದ ಅಂಗವಾಗಿ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಅಖಿಲ ಭಾರತ ಸ್ಪಂದನ ಸಿರಿ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನದಲ್ಲಿ ಪುಷ್ಪಗಿರಿ ಮಹಾ ಸಂಸ್ಥಾನ ಮಠದ ಡಾ.ಸೋಮೇಶ್ವರ ಸ್ವಾಮೀಜಿ, ಸಾಹಿತಿ ಶೈಲಜಾ, ಸ್ಪಂದನ ಸಿರಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕಲಾವತಿ ಮಧುಸೂದನ್ ಹಾಗೂ ಮತ್ತಿತರರು ಗಾಯತ್ರಿ ನರಸಿಂಹನ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ಜೂ.19 NEWS DESK : ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡುವ ಮತ್ತು ಉಜ್ವಲ ಭವಿಷ್ಯ ರೂಪಿಸುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸಬೇಕು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ.ಪಂಕಜಾಕ್ಷನ್ ಅವರು ಕರೆ ನೀಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಇಂದಿನಿಂದ ಜೂ.24 ರವರೆಗೆ ಶಿಕ್ಷಕರಿಗಾಗಿ ನಡೆಯುವ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿ ಶಿಬಿರಗಳು ಬದಲಾವಣೆಗೆ ದಾರಿಯಾಗಿದೆ, ಶಿಸ್ತು ರೂಪಿಸುತ್ತದೆ. ಸಮಾಜಮುಖಿಯಾಗಿ ಬೆಳೆಯಲು ಸಹಕರಿಸುತ್ತದೆ, ಸಕಾರಾತ್ಮಕ ಚಿಂತನೆ, ದೃಢತೆ, ವಿಶ್ವಾಸ ಹೆಚ್ಚಾಗುತ್ತದೆ ಮತ್ತು ನಕಾರಾತ್ಮಕ ಚಿಂತನೆ ಬಿಡಲು ಸಹಕಾರಿಯಾಗಿದೆ ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಎಲ್ಲರಿಗೂ ಉತ್ತಮ ಸಂದೇಶವನ್ನು ನೀಡುತ್ತದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಉತ್ತಮ ಮಾರ್ಗದರ್ಶನದಲ್ಲಿ ಕೊಂಡೊಯ್ಯಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ…
ಸೋಮವಾರಪೇಟೆ ಜೂ.19 NEWS DESK : ವಿವಿಧ ಹಾಡಿಗಳಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಹಾಡಿ ನಿವಾಸಿಗಳ ಸಮಸ್ಯೆ ಆಲಿಸಿದರು. ಕಿಬ್ಬೆಟ್ಟ ಹಾಡಿಗೆ ಭೇಟಿ ನೀಡಿದ ಸಂದರ್ಭ 17 ಕುಟುಂಬಗಳಲ್ಲಿ 10 ಕುಟುಂಬದವರಿಗೆ ಆಧಾರ್ ಕಾರ್ಡ್ ದೊರೆತ್ತಿಲ್ಲ ಎಂದು ಹಾಡಿ ನಿವಾಸಿಗಳು ದೂರಿದರು. ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಯನ್ನು ಶಾಸಕರು ಪ್ರಶ್ನಿಸಿದ ಸಂದರ್ಭ ತಾಂತ್ರಿಕದೋಷ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದು, ತಾಲ್ಲೂಕು ಕೇಂದ್ರದಲ್ಲಿ ವಿವಿಧ ಇಲಾಖಾಧಿಕಾರಿಗಳನ್ನು ಕರೆಯಿಸಿ ಆಧಾರ್‍ಕಾರ್ಡ್ ಆಂದೋಲನ ಹಮ್ಮಿಕೊಂಡು ಗಿರಿಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹಾಡಿಯೊಳಗೆ ಎರಡು ನೀರಿನ ಸಿಸ್ಟನ್‍ಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಜಿ.ಪಂ ಇಂಜಿನಿಯರಿಂಗ್ ವಿಭಾಗದ ಎಇಇ ವೀರೇಂದ್ರ ಕುಮಾರ್ ಅವರಿಗೆ ಸೂಚಿಸಿದರು. ಒಳಗುಂದ ಹಾಡಿಯಲ್ಲಿ ಸಮಸ್ಯೆ ಆಲಿಸಿದ ಶಾಸಕರು, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪಿಡಿಒ ಅವರನ್ನು ವಿಚಾರಿಸಿದರು. ಬೋರ್‍ವೆಲ್ ಕೊರೆಸಿ 2 ವರ್ಷಗಳಾದರೂ, ನೀರು…
ಮಡಿಕೇರಿ ಜೂ.19 NEWS DESK : ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಇತ್ತೀಚೆಗೆ ಬಿಜೆಪಿ ವತಿಯಿಂದ ರಾಜ್ಯವ್ಯಾಪಿ ತೀವ್ರ ಹೋರಾಟವನ್ನು ನಡೆಸಲಾಗಿದೆ. ಆದರೆ ಸರಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ವಹಿಸಿದೆ. ಕಾಂಗ್ರೆಸ್ ಸರಕಾರದ ತಪ್ಪು ನಿರ್ಧಾರದಿಂದಾಗಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಆಟೋ, ಟ್ಯಾಕ್ಸಿ ಪ್ರಯಾಣ ದರವೂ ದುಬಾರಿಯಾಗಲಿದೆ. ಜನಸಾಮಾನ್ಯರಿಗೆ ಇದು ದೊಡ್ಡ ಹೊರೆಯಾಗಲಿದೆ ಎಂದು ಟೀಕಿಸಿದರು. ಜನವಿರೋಧಿ ಸರಕಾರ ಎಲ್ಲಾ ಹಂತದಲ್ಲೂ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಸರಣಿ ಆತ್ಮಹತ್ಯೆ, ಕೊಲೆಗಳು, ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಸಾವಿಗೆ ಭ್ರಷ್ಟ ವ್ಯವಸ್ಥೆಯೇ ಕಾರಣವಾಗಿದೆ. ಈ ಸರಕಾರ ಜನರ ನೆಮ್ಮದಿಯನ್ನು ಕೆಡಿಸಿದೆ ಎಂದು ಆರೋಪಿಸಿದರು.…
ಮೈಸೂರು ಜೂ.19 NEWS DESK : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಯೋಗ ಸಂಗೀತ, ಮೈಸೂರು ಪರಂಪರೆ’, ಕೃತಿ ಬಿಡುಗಡೆ, ಯೋಗ ದರ್ಶಿನಿ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.21 ರಂದು ಜರುಗಲಿದೆ. ಮೈಸೂರಿನ ಓದುಗ ಪ್ರಕಾಶನ, ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಭಾರತೀ ಯೋಗಧಾಮದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿಜಯಗಿರಿ, ಉತ್ತನಹಳ್ಳಿಯ ಭಾರತೀ ಯೋಗಧಾಮದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಭಾರತೀಯ ಯೋಗಧಾಮದ ಸಂಸ್ಥಾಪಕ ಡಾ.ಕೆ.ಎಲ್.ಶಂಕರನಾರಾಯಣ ಜೋಯ್ಸ್ ಉದ್ಘಾಟಿಸಲಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ‘ಯೋಗ ಸಂಗೀತ, ಮೈಸೂರು ಪರಂಪರೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಲಕ್ಷ ವೃಕ್ಷ ಆಂದೋಲನದ ರೂವಾರಿ ಹಾಗೂ ಮುಡಾ ಮಾಜಿ ಅಧ್ಯಕ್ಷ ಶ್ರೀ ಎಚ್.ವಿ.ರಾಜೀವ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮೈಸೂರು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಎ.ಪಿ.ನಾಗೇಶ್, ಲೇಖಕ ಶ್ರೀ ಐತಿಚಂಡ ರಮೇಶ್ ಉತ್ತಪ್ಪ, ಓದುಗ…
ಮಡಿಕೇರಿ ಜೂ.19 NEWS DESK : ಐಮಂಗಲ ಭದ್ರಕಾಳಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.






