ಮಡಿಕೇರಿ ಜೂ.19 NEWS DESK : ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿಯ 2ನೇ ಹಂತದ ಹೋರಾಟವಾಗಿ ಜೂ.20ರಂದು ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಜನಪರವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ತೀವ್ರ ಹೋರಾಟವನ್ನು ನಡೆಸಲಾಗಿದೆ. ಆದರೆ ಸರಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ವಹಿಸಿದೆ. ಎರಡನೇ ಹಂತದ ಪ್ರತಿಭಟನೆಗೂ ಸ್ಪಂದನೆ ದೊರೆಯದಿದ್ದಲ್ಲ್ಲಿ ಗ್ರಾಮ ಮಟ್ಟದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಲ್ಲಿಯವರೆಗೆ ಹೋರಾಟವನ್ನು ರೂಪಿಸಲಾಗುವುದು ಎಂದರು. ಜನಪರ ಕಾಳಜಿಯಿಂದ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಗುರುವಾರ ನಡೆಸುತ್ತಿರುವ ಪ್ರತಿಭಟನೆಗೆ ಸಾರ್ವಜನಿಕರು, ಆಟೋ, ಟ್ಯಾಕ್ಸಿ ಮತ್ತಿತರ ವಾಹನ ಚಾಲಕರುಗಳು ಕೂಡ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ…
ಲೇಖಕ: admin
ಮಡಿಕೇರಿ ಜೂ.19 NEWS DESK : ಪಿಕ್‌ಅಪ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಗೋಣಿಕೊಪ್ಪ- ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಘಟನೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗೋಣಿಕೊಪ್ಪ ಗ್ರಾ.ಪಂ ಮಾಜಿ ಸದಸ್ಯೆ ಪ್ರಭಾವತಿ ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂಬದಿ ಸವಾರರಾದ 10ನೇ ತರಗತಿ ವಿದ್ಯಾರ್ಥಿನಿ ಅನು ಚಿಕಿತ್ಸೆ ಫಲಿಸದೆ ಇಂದು ನಿಧನ ಹೊಂದಿದ್ದಾಳೆ. ಪಿಕ್‌ಅಪ್ ವಾಹನ ಚಾಲಕನನ್ನು ವಶಕ್ಕೆ ಪಡೆದಿರುವ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಭಾವತಿ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗೋಣಿಕೊಪ್ಪ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ಅನು, ಶ್ರೀಜಾ ಎಂಬುವವರ ಪುತ್ರಿಯಾಗಿದ್ದು, ಪ್ರಭಾವತಿ ಅವರ ಬಳಿ ಮನೆ ಪಾಠ ಹೇಳಿಸಿಕೊಳ್ಳುತ್ತಿದ್ದಳು. ಇಬ್ಬರು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ಜೂ.18 NEWS DESK : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ವಿರುದ್ಧ ಕೊಡಗಿನಲ್ಲಿಯೂ ಆಕ್ರೋಶ ವ್ಯಕ್ತವಾಗಿದ್ದು, ವೀರಶೈವ ಲಿಂಗಾಯತ ಸಮಾಜ ಪ್ರತಿಭಟನೆ ನಡೆಸಿದೆ. ವಿವಿಧ ವೀರಶೈವ ಲಿಂಗಾಯತ ಸಂಘಟನೆಗಳು ಇಂದು ಸ್ವಾಮೀಜಿಗಳ ಸಮ್ಮುಖದಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಕಲ್ಲುಮಠದ ಮಹಾಂತ ಸ್ವಾಮೀಜಿ ಮಾತನಾಡಿ ಇಂದು ಸಮಾಜದಲ್ಲಿ ಹಿಂಸೆ, ಕ್ರೌರ್ಯ ಹೆಚ್ಚುತ್ತಿದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ರೇಣುಕಾ ಸ್ವಾಮಿಯನ್ನು ಹಿಂಸೆಕೊಟ್ಟು ಕೊಲೆ ಮಾಡಿದ್ದಾರೆ, ಅವರ ಕುಟುಂಬ ಅನಾಥವಾಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು. ಈ ರೀತಿಯ ಕೃತ್ಯಗಳು ನೆಡೆಯದಂತೆ ಯಾವುದೇ ಸರ್ಕಾರ ಇರಲಿ ಎಚ್ಚರಿಕೆ ವಹಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಮಾತನಾಡಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕಾರ್ಯ…
ಮಡಿಕೇರಿ ಜೂ.18 NEWS DESK : ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು, ತಕ್ಷಣ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕು ಸಾಗಾಣೆ ವೆಚ್ಚ ಹೆಚ್ಚಾಗಲಿದ್ದು, ಅಗತ್ಯ ವಸ್ತುಗಳ ಬೆಲೆಯೂ ದುಬಾರಿಯಾಗಲಿದೆ. ಇದು ಜನಸಾಮಾನ್ಯರ ಮೇಲೆ ದೊಡ್ಡ ಹೊರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದ್ವಿಚಕ್ರ ವಾಹನ, ಕಾರು ಮತ್ತಿತರ ವಾಹನಗಳ ಮೂಲಕ ಉದ್ಯೋಗಕ್ಕೆ ತೆರಳುವ ನೌಕರರು, ಆಟೋರಿಕ್ಷಾ, ಟ್ಯಾಕ್ಸಿ ಮಾಲೀಕ, ಚಾಲಕರಿಗೂ ಬೆಲೆ ಏರಿಕೆಯಿಂದ ಜೀವನ ಕಷ್ಟವಾಗಲಿದೆ. ಕಳೆದ 10 ವರ್ಷಗಳಲ್ಲಿ ನಿರಂತರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಇದೀಗ ಮತ್ತೆ ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಬಸ್ ಗಳಲ್ಲಿ ಉಚಿತ…
ಮಡಿಕೇರಿ ಜೂ.18 NEWS DESK : ಬೆಳೆವಿಮೆ ಸಂಬಂಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳೆವಿಮೆ ಸೌಲಭ್ಯ ಬಳಸಿಕೊಳ್ಳುವಲ್ಲಿ ರೈತರಿಗೆ ಮತ್ತಷ್ಟು ಮಾಹಿತಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಾಕಷ್ಟು ದಾಸ್ತಾನು ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, 2024ರ ಮುಂಗಾರು ಹಂಗಾಮಿಗೆ 2024 ರ ಮೇ, 20 ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಭತ್ತ ಮತ್ತು ಮುಸುಕಿನ ಜೋಳದ…
ಮಡಿಕೇರಿ ಜೂ.18 NEWS DESK : ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೊಲೀಸರು ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಸೂಚಿಸಿದ್ದಾರೆ. ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿಗರನ್ನು ಕಂಡು ಗರಂ ಆಗಿ ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು. ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ಜಲಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ವಾತಾವರಣ ನಿರ್ಮಾಣವಾಗಬಾರದು ಎಂದರು. ಸಿಬ್ಬಂದಿಗಳು ಕಾವಲು ಕಾಯುವಂತೆ ನಿರ್ದೇಶನ ನೀಡಿದ ಪೊನ್ನಣ್ಣ, ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇದ್ದರೆ ಒದಗಿಸುವುದಾಗಿ ತಿಳಿಸಿದರು. ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳುವಳಿಕೆ ಫಲಕ ಅಳವಡಿಸುವಂತೆ ಸಬ್ ಇನ್ಸ್‍ಪೆಕ್ಟರ್‍ಗೆ ಸೂಚನೆ ನೀಡಿದರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೊನ್ನಣ್ಣ…
ಮಡಿಕೇರಿ ಜೂ.18 NEWS DESK : ವಿರಾಜಪೇಟೆ ಪುರಸಭೆ ವ್ಯಪ್ತಿಯಲ್ಲಿ ಜೂ.19 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್‍ರಾಜಾ ಹಾಗೂ ಎಲ್ಲಾ ಅಧಿಕಾರಿಗಳನ್ನೊಳಗೊಂಡು ಸಭೆ ನಡೆಯಲಿದ್ದು, ಪುರಸಭೆ ವ್ಯಾಪ್ತಿಯ ಎಲ್ಲಾ ನಾಗರೀಕರು ಆಗಮಿಸುವಂತೆ ಕೋರಿದೆ.
ಬೆಂಗಳೂರು ಜೂ.18 NEWS DESK : ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ (40) ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದರುಂತದಲ್ಲಿ ಮೃತರ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ: ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮೃತ ವಿಜಯಕುಮಾರ್ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ.
ಮಡಿಕೇರಿ ಜೂ.18 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಸನ್ಮಾನಿಸಿ ಅಭಿನಂದಿಸಿತು. ಮೈಸೂರಿನ ಕುವೆಂಪು ನಗರದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದ ನಿಯೋಗ ಸಂಸದ ಯದುವೀರ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿ, ಗೆಲುವಿನ ಹರ್ಷವನ್ನು ಹಂಚಿಕೊಂಡಿತು. ಈ ಸಂದರ್ಭ ಮಾತನಾಡಿದ ಯದುವೀರ್ ಅವರು ಗೆಲುವಿಗಾಗಿ ಶ್ರಮಿಸಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಕೊಡಗು ಜಿಲ್ಲೆಯ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ ಅವರು, ಜಿಲ್ಲೆಯಲ್ಲಿ ಸಂಸದರ ಕಚೇರಿ ತೆರೆದು ಜನರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದರು. ಏನೇ ಸಮಸ್ಯೆಗಳಿದ್ದರೂ ತಮ್ಮ ಆಪ್ತ ಸಹಾಯಕರ ಮೂಲಕ ನನ್ನ ಗಮನ ಸೆಳೆಯಿರಿ ಎಂದು ತಿಳಿಸಿದರು. ಅಪ್ರು ರವೀಂದ್ರ ಮಾತನಾಡಿ ನೂತನ ಸಂಸದರಿಂದ ಕೊಡಗಿನ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಿದೆ, ಅಭಿವೃದ್ಧಿ ಕಾರ್ಯಗಳಿಗೆ…
ಸೋಮವಾರಪೇಟೆ ಜೂ.18 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಜಂಗಮ ಅರ್ಚಕರ ಸಂಘದ ವತಿಯಿಂದ ಲೋಕ ಕಲ್ಯಾಣಕ್ಕಾಗಿ ವರದ ಶಂಕರ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಪಟ್ಟಣದ ವಿರಕ್ತ ಮಠದ ಆವರಣದಲ್ಲಿ ಸಂಘದ ಕಾರ್ಯದರ್ಶಿ ಬಸವ ಕುಮಾರ ಶಾಸ್ತ್ರಿ ಪುರೋಹಿತ್ವದಲ್ಲಿ ಅರ್ಚನೆ, ಅಷ್ಟೋತ್ತರ ಹಾಗೂ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಎಫ್.ಸಿ.ಹಿರೇಮಠ್, ನಾಡಿನೆಲ್ಲೆಡೆ ಸುಭಿಕ್ಷೆ ನೆಲೆಸಬೇಕು, ಶಾಂತಿ, ನೆಮ್ಮದಿ ಇರಬೇಕು. ಕಾಲಕಾಲಕ್ಕೆ ಮಳೆ, ಬೆಳೆ ಚೆನ್ನಾಗಿ ಆಗಬೇಕು ಎಂದು ಲೋಕ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಲಾಗಿದೆ ಎಂದರು. ಸಂಘದ ಉಪಾಧ್ಯಕ್ಷ ಅಮ್ಮತ್ತಿ ಮಹೇಶ್, ಖಜಾಂಚಿ ಅಭಿಮಠ ಮಹೇಶ್, ಪದಾಧಿಕಾರಿಗಳಾದ ಚಂದ್ರಶೇಖರ್, ವೀರಯ್ಯ, ನಂದೀಶ್, ತ್ರಿಶಂಕು ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಅರ್ಚಕರುಗಳು ಪಾಲ್ಗೊಂಡಿದ್ದರು.






