ಮಡಿಕೇರಿ ಜ.16 NEWS DESK : ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯಡಿ 2025-26ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೊಂದಣಿಗೆ ಮಾ.31 ರವರೆಗೆ ಅವಕಾಶವಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್.ಡಿ.ರವಿಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು, ಸಹಕಾರ ಬ್ಯಾಂಕ್‍ಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ. ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು: ಅರ್ಜಿ ನಮೂನೆ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 2 ಭಾವಚಿತ್ರ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಠ 04 ಸದಸ್ಯರ ಕುಟುಂಬ ಒಂದಕ್ಕೆ ರೂ. 500 ಗಳ ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ…
ಲೇಖಕ: admin
ಮಡಿಕೇರಿ ಜ.16 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಜನವರಿ, 17 ಮತ್ತು 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪಾಧ್ಯಕ್ಷರು ಜ.17 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ವುಡ್ ಸ್ಟಾಕ್ ರೆಸಾರ್ಟ್‍ನಲ್ಲಿ ಕೊಡಗು ಪತ್ರಕರ್ತರ ಸಂಘ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜ.18 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.16 NEWS DESK : ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದವಾದ ಯಾವುದೇ ಲಿಂಕ್‍ಗಳು ತಮ್ಮ ಇ-ಮೇಲ್, ಫೇಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಲ್ಲಿ ಅದನ್ನು ತೆರೆಯುವ ಪ್ರಯತ್ನ ಮಾಡಬೇಡಿ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಮನವಿ ಮಾಡಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರನ್ನು ವಂಚಿಸುವ, ಕೆಟ್ಟ ಸಂದೇಶಗಳನ್ನು ಪಸರಿಸುವ ‘ಸೈಬರ್ ಕ್ರೈಂ’ಗಳ ಕುರಿತು ಜನಸಾಮಾನ್ಯರು ಜಾಗೃತರಾಗಬೇಕು ಎಂದರು. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಅಶ್ಲೀಲ ಸಂದೇಶವನ್ನು ಹರಡಿರುವ ಬಗ್ಗೆ ಇದೇ ಜ.13 ರಂದು ಸೈಬರ್ ಕ್ರೈಂ ವಿಭಾಗದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಿ, ಪರಿಶೀಲಿಸುವ ಕಾರ್ಯ ನಡೆದಿರುವುದಾಗಿ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಸಾಮಾಜಿಕ ಜಾಲತಾಣದ ವಿವಿಧ ಮಾಧ್ಯಮಗಳ ಮೂಲಕ ವಂಚನೆಯ ಸಂಚನ್ನು ದುಷ್ಕರ್ಮಿಗಳು ರೂಪಿಸಿ, ಜನ…
ಮಡಿಕೇರಿ ಜ.16 NEWS DESK : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಸಂಕ್ರಾಂತಿ ದೀಪಾರಾಧನೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಟ್ರಸ್ಟ್ ಆವರಣದಲ್ಲಿ ಮಹಿಳೆಯರು ಸಾಲು ಹಣತೆ ಬೆಳಗಿದರು. ಟ್ರಸ್ಟ್‌ನ ಭಜನಾ ತಂಡದ ಸದಸ್ಯರು ಭಜನೆ ಮೂಲಕ ಮೆರುಗು ನೀಡಿದರು. ಸಾರ್ವಜನಿಕರು ಹಾಗೂ ದಾನಿಗಳ ಸಹಕಾರದಿಂದ ನೂತನವಾಗಿ ಖರೀದಿಸಲಾದ ಧ್ವನಿವರ್ಧಕವನ್ನು ಕಲಾವಿದ ಸುಭಾಷ್ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಭಜನೆ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 53 ಸಾವಿರ ರೂ. ವೆಚ್ಚದಲ್ಲಿ ಧ್ವನಿವರ್ಧಕ ಖರೀದಿಸಲಾಗಿದೆ. ಇದಕ್ಕೆ ಗ್ರಾಮದ ಸಾರ್ವಜನಿಕರು, ದಾನಿಗಳು ನೆರವಾಗಿದ್ದಾರೆ ಎಂದರು. ಹಿಂದುಗಳ ಎಲ್ಲಾ ಹಬ್ಬ ಹರಿದಿನಗಳನ್ನು ಟ್ರಸ್ಟ್ ವತಿಯಿಂದ ಸಾರ್ವಜನಿಕವಾಗಿ ಆಚರಿಸಿ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಈಗಿನ ತಲೆಮಾರಿಗೆ ಪರಿಚಯಿಸುವ ಕಾರ್ಯವೂ ಆಗುತ್ತಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಕುಮಾರ್ ಮಾತನಾಡಿ, ವಿನಾಯಕ ಸೇವಾ ಟ್ರಸ್ಟ್ ಭಜನೆ ಮೂಲಕ ಎಲ್ಲರನ್ನೂ ಒಂದುಗೂಡಿಸುವ…
ಉಡುಪಿ ಜ.16 NEWS DESK : ಜಾಗತಿಕ ಸವಾಲುಗಳಿಗೆ ಉತ್ತರ ನೀಡಲು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸಾಧ್ಯವಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಮತ್ತು ಅವರ ಫಲಿತಾಂಶಗಳ ಸುಧಾರಣೆಗೆ ಖಾಸಗಿ ಸಂಸ್ಥೆಗಳ ಪಾತ್ರ ದೊಡ್ಡದು ಎಂದು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷರಾದ ಮೋಹನ್ ಆಳ್ವಾ ತಿಳಿಸಿದರು. ಉಡುಪಿ ಜಿಲ್ಲಾ ಕುಪ್ಮಾ ಸಮಿತಿ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಯೊಳಗೆ ವ್ಯಾಪಾರ ಮನೋಧರ್ಮದ ಬದಲಾಗಿ ಸೇವಾ ಮನೋಭಾವವೇ ಮೂಲವಾಗಬೇಕು. ಅನಗತ್ಯ ಟೀಕೆ ಟಿಪ್ಪಣಿಗಳಿಗೆ ಚಿಂತಿಸದೆ ಫಲಿತಾಂಶದ ಕಡೆಗೆ ದುಡಿಯುವ ಮನಸ್ಸು ನಮ್ಮದಾಗಬೇಕು. ಪ್ರತೀ ಜಿಲ್ಲೆಗಳಲ್ಲೂ ಕುಪ್ಮಾ ಸಂಘಟನೆ ಬಲವಾಗಬೇಕು ಎಂದು ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಮಾತನಾಡಿ, ಇಲಾಖೆ ಮತ್ತು ಕುಪ್ಮಾ ಸಂಘಟನೆ ಜೊತೆಗೂಡಿ ಕೆಲಸ ನಿರ್ವಹಿಸಬೇಕು. ಪ್ರತೀ ಮಗುವಿಗೂ ಶಿಕ್ಷಣ ಸಿಗಲು ಖಾಸಗಿ ಸಂಸ್ಥೆಗಳ ಪಾಲು ದೊಡ್ಡದು ಎಂದು ಶುಭಹಾರೈಸಿದರು. ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷರಾದ ರಾಧಾಕೃಷ್ಣ ಶೆಣೈ ಮಾತನಾಡಿ, ಎಲ್ಲಾ…
ಮಡಿಕೇರಿ ಜ.16 NEWS DESK : ಮತದಾರರ ಪಟ್ಟಿ ಪರಿಷ್ಕರಣೆ (ಎಸ್‍ಐಆರ್) ಸಂವಿಧಾನಬಾಹಿರ ಕ್ರಮವಾಗಿದ್ದು, ಇದರಿಂದ ಕೋಟ್ಯಾಂತರ ಮಂದಿ ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐನ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್ ಅವರು ಇತ್ತೀಚೆಗೆ ದೇಶದ 11 ರಾಜ್ಯಗಳಲ್ಲಿ ನಡೆಸಿದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 7 ಕೋಟಿ ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿದಿದ್ದಾರೆ. ಇನ್ನುಳಿದಿರುವ 19 ರಾಜ್ಯಗಳಲ್ಲಿ ಪರಿಷ್ಕರಣೆ ನಡೆದರೆ ಇನ್ನೆಷ್ಟು ಕೋಟಿ ಮತದಾರರು ಮತದಾನದ ಹಕ್ಕಿನಿಂದ ವಂಚಿರಾಗಬಹುದು ಎನ್ನುವ ಆತಂಕ ಎದುರಾಗಿದೆ ಎಂದರು. ಮತದಾನದ ಹಕ್ಕನ್ನು ಸಾಬೀತು ಪಡಿಸಬೇಕಾದರೆ ಜನನ ಪ್ರಮಾಣ ಪತ್ರ, ಆಸ್ತಿ ಪತ್ರ, ಪಾಸ್ ಪೋರ್ಟ್ ಮೊದಲಾದ ದಾಖಲೆಗಳನ್ನು ಒದಗಿಸಬೇಕೆನ್ನುವ ನಿಯಮ ರೂಪಿಸಲಾಗಿದೆ. ಹಿರಿಯ ನಾಗರಿಕರು ಜನನ ಪ್ರಮಾಣ ಪತ್ರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆಯಲು ಸಾಧ್ಯವೇ, ದೇಶದಲ್ಲಿರುವ ಎಲ್ಲಾ ಪ್ರಜೆಗಳ ಬಳಿ ಸ್ವಂತ ಆಸ್ತಿ ಇದೆಯೇ, ಪಾಸ್ ಪೋರ್ಟ್…
ಕೋಲ್ಕತ್ತ ಜ.16 NEWS DESK : ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳ ಹಿರಿಯ ಮುಖಂಡರು ಹಾಗೂ ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯರಾದ ಚಂದ್ರಶೇಖರ್ ಬೋಸ್ ಅವರು ಶುಕ್ರವಾರ ನಿಧನರಾದರು. ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೋಲ್ಕತ್ತದ ಬಿಧಾನ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು ಎಂದು ಸಿಪಿಐ(ಎಂ) ಪಕ್ಷದ ಮೂಲಗಳು ತಿಳಿಸಿವೆ. ದೀರ್ಘ ಕಾಲದಿಂದ ಸಕ್ರಿಯ ರಾಜಕೀಯ ಹಾಗೂ ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಬೋಸ್ ಅವರು, ಶತಾಯುಷಿಯಾಗಿಯೂ ಸಂಘಟನಾ ಚಟುವಟಿಕೆಯಲ್ಲಿ ತೊಡಗಿರುವ ಅಪರೂಪದ ನಾಯಕನಾಗಿದ್ದರು. ಚಂದ್ರಶೇಖರ್ ಬೋಸ್ ಅವರು ತಮ್ಮ ಪುತ್ರ, ಸೊಸೆ ಹಾಗೂ ಮೊಮ್ಮಗನನ್ನು ಅಗಲಿದ್ದಾರೆ.
ಮಡಿಕೇರಿ ಜ.16 NEWS DESK : ಜಿಲ್ಲೆಯ ತಿತಿಮತಿ ಮತ್ತು ಬಾಳೆಲೆ ಉಪ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ತಡೆಯುವ ಕುರಿತು ಸೂಕ್ತ ಸೂಚನೆಗಳನ್ನು ನೀಡಿದರು.
ಮಡಿಕೇರಿ ಜ.16 NEWS DESK : ಬಾಲ್ಯದಿಂದಲೇ ಹಿಂದೂ ಸಂಸ್ಕಾರವನ್ನು ಮನವರಿಕೆ ಮಾಡಿಕೊಡುವ ಮತ್ತು ಧರ್ಮ ಬೋಧನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಮೂರ್ನಾಡಿನಲ್ಲಿ ಹಿಂದೂ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು. ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮೂರ್ನಾಡಿನ ಶಿಕ್ಷಕರು ಹಾಗೂ ಅರ್ಚಕರಾದ ಶ್ರೀಹರಿ ಮತ್ತು ಮಮತಾ ಶ್ರೀಹರಿಯವರ ನಿವಾಸದ ಪೂಜಾ ಕೇಂದ್ರದಲ್ಲಿ ದೀಪ ಬೆಳಗಿಸಿ ಮಕ್ಕಳು ಮತ್ತು ಪೋಷಕರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೇಂದ್ರವನ್ನು ಉದ್ಘಾಟಿಸಲಾಯಿತು. ನಂತರ ಮಕ್ಕಳಿಗೆ ಧರ್ಮ ಬೋಧನೆಯನ್ನು ನೀಡಿ ಸಂಸ್ಕಾರ ಪಾಠ ಮಾಡಲಾಯಿತು. ಹಾದಿ ತಪ್ಪಿ ಖಿನ್ನತೆಗೆ ಒಳಗಾಗುತ್ತಿರುವ ಮತ್ತು ದುಶ್ಚಟಗಳಿಗೆ ಬಲಿಯಾಗುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಪೋಷಕರ ಒತ್ತಡದ ಜೀವನದ ನಡುವೆ ಮಕ್ಕಳಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಮನಗಂಡು ಹಾಗೂ ಹಿಂದೂ ಧರ್ಮ ಬೋಧನೆಯನ್ನು ವ್ಯಾಪಕಗೊಳಿಸುವ ಉದ್ದೇಶದಿಂದ ಹಿಂದೂ ಬಾಲ ಸಂಸ್ಕಾರ ಕೇಂದ್ರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲಿ ವಿವಿಧೆಡೆ ಕೇಂದ್ರ ಆರಂಭಗೊಳ್ಳಲಿದೆ ಎಂದು ಪ್ರಮುಖರು ವಿವರಿಸಿದರು. ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ…
ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಹೋಬಳಿ ನಾಗರಿಕರ ಹೋರಾಟ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಎಂ.ಎ.ಉಸ್ಮಾನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಡಿ.ರಾಜು ರೈ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ಪ್ರವಾಸಿ ಮಂದಿರದಲ್ಲಿ ನೂತನ ಸಮಿತಿಯನ್ನು ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಾಗೇಶ್ ಪೂಜಾರಿ, ಪಟ್ಟೆಮನೆ.ಪಿ.ಉದಯಕುಮಾರ್, ಹೆಚ್.ಎಸ್.ಮುತ್ತಪ್ಪ, ಖಜಾಂಚಿಯಾಗಿ ರಮೇಶ್ ಶೇಟ್, ಸಹಕಾರ್ಯದರ್ಶಿಗಳಾಗಿ ಆರ್.ರಮೇಶ್ ಪಿಳ್ಳೆ, ಕೆ.ಎಸ್.ಅನಿಲ್‍ಕುಮಾರ್, ಎ.ಎಂ.ಶರೀಫ್, ಸಂತೋಷ್ (ದೀನು), ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಸ್.ಅಶೋಕ್ ನೇಮಕಗೊಂಡರು. ಸಮಿತಿ ಸದಸ್ಯರುಗಳಾಗಿ ಯಂಕನ ಶ್ರೀರಾಮ, ಗೌರವಧ್ಯಕ್ಷರುಗಳಾಗಿ ಎಸ್.ಎ.ವಹೀದ್‍ಜಾನ್, ಜಿನ್ನಪ್ಪ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು. ನಂತರ ಎಂ.ಎ.ಉಸ್ಮಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಗ್ರಾಮದಲ್ಲಿರುವ 18 ವರ್ಷ ಮೇಲ್ಪಟ್ಟ ಯುವಕರನ್ನು ಸಂಘಟನೆಗೆ ಸೇರಿಸಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಹೋರಾಟ ನಡೆಸಲು ಸಭೆಯಲ್ಲಿ ಅಂಗೀಕರಿಸಲಾಯಿತು. ಸುಂಟಿಕೊಪ್ಪ ಪಟ್ಟಣವು ಹೋಬಳಿ ಕೇಂದ್ರವಾಗಿದ್ದು, ಸಾಕಷ್ಟು ಭೌಗೋಳಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಅವುಗಳನ್ನು ಪರಿಹರಿಸುವ ದಿಸೆಯಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆ ಪೂರಕವಾಗಿ ಸ್ಪಂದಿಸದಿರುವುದು, ಮೂಲಭೂತ ಸೌಕರ್ಯಗಳನ್ನು…






