ಲೇಖಕ: admin

ಮಡಿಕೇರಿ ಜೂ.16 NEWS DESK : ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ವ್ಯಾಪ್ತಿಯಲ್ಲಿ 2400 ಎಕರೆ ಜಮೀನಿನ ಬಾಬ್ತು ಭೂ ಪರಿವರ್ತನೆಯನ್ನು ಕೋರಿ ಇದುವರೆವಿಗೂ ಯಾವುದೇ ಮನವಿಗಳು ಸ್ವೀಕೃತವಾಗಿರುವುದಿಲ್ಲ ಹಾಗೂ ಸದರಿ ಜಮೀನುಗಳ ಭೂ ಪರಿವರ್ತನೆಯನ್ನು ಮಾಡಿರುವುದಿಲ್ಲ ಎಂಬ ಅಂಶವನ್ನು ಈ ಮೂಲಕ ಸ್ಪಷ್ಟೀಕರಿಸಲಾಗಿದೆ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.16 NEWS DESK : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ಭಾನುವಾರ ನಡೆದಿದೆ. ಗದ್ದೆಹಳ್ಳದ ಪಟ್ಟೆಮನೆ ನಿವಾಸಿ ಲೋಕೇಶ್ (60) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸುಂಟಿಕೊಪ್ಪದಿಂದ ಗದ್ದೆಹಳ್ಳದ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ವೊಂದು ಹಿಂಬದಿಯಿಂದ ಡಿಕ್ಕಿಯಾಗಿದೆೆ ಎಂದು ಹೇಳಲಾಗಿದೆ. ಅಪಘಾತದಿಂದ ಲೋಕೇಶ್ ಅವರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸಂದರ್ಭ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಸುಂಟಿಕೊಪ್ಪ ಪೊಲೀಸರು ಖಾಸಗಿ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗದ್ದೆಹಳ್ಳ ಭಾಗದ ಹೆದ್ದಾರಿ ತಿರುವಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜೂ.16 NEWS DESK : ಭಾರತ ಮುಂದಿನ 15 ವರ್ಷಗಳಲ್ಲಿ ಫುಡ್ ಹಬ್ ಆಗಿ ಬದಲಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಅಧಿಕ ಮೌಲ್ಯವಿರುವ ಹಣ್ಣುಗಳನ್ನು ಬೆಳೆಯಲು ಬೆಳೆಗಾರರು ಮುಂದಾಗಬೇಕು. ಆ ಮೂಲಕ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ನವದೆಹಲಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮಹಾ ನಿರ್ದೇಶಕ ಡಾ.ಎಸ್.ಕೆ.ಸಿಂಗ್ ತಿಳಿಸಿದ್ದಾರೆ. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆದ ಬೆಣ್ಣೆಹಣ್ಣು ಕ್ಷೇತ್ರೋತ್ಸವ ಹಾಗೂ ವೈವಿಧ್ಯತೆ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘವನ್ನು ಆರಂಭಿಸಲಾಗಿದ್ದು, ಬೆಳೆಗಾರರು ಸಂಘದಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರೈತರು ನೇರವಾಗಿ ಹಣ್ಣಿನ ಗಿಡಗಳನ್ನು ಖರೀದಿ ಮಾಡಿದರೆ ಹೆಚ್ಚು ವೆಚ್ಚವಾಗುತ್ತದೆ. ಸಂಘದ ಮೂಲಕ ಎಲ್ಲರೂ ಒಗ್ಗೂಡಿ ಖರೀದಿಸಿದಾಗ ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಇದರಿಂದ ಇತರೆ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಕೊಡಗು ಸೇರಿದಂತೆ ರಾಜ್ಯದ ಪ್ರಮುಖ ಆಯ್ದ ಭಾಗದಲ್ಲಿ ಆಫ್ ಸೀಸನ್ ಲಿಚ್ಚಿ, ಬಟರ್ ಫ್ರೂಟ್ ಸೇರಿದಂತೆ ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಬಹುದಾಗಿದೆ. ಹೆಚ್ಚು…

Read More

ಮಡಿಕೇರಿ ಜೂ.16 NEWS DESK : ಗೋಣಿಕೊಪ್ಪ ಪಟ್ಟಣದ ಕೀರೆಹೊಳೆಯ ಜಾಗ ಒತ್ತುವರಿಯಾಗಿದ್ದರೆ ತಕ್ಷಣ ತೆರವು ಕಾರ್ಯಾಚರಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಸೂಚನೆ ನೀಡಿದ್ದಾರೆ. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿರುವ ‘ಟ್ರಾö್ಯಸ್ ಬ್ಯಾರಿಕೇಡ್’ ನ್ನು ಉದ್ಘಾಟಿಸಿ ವನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೀರೆಹೊಳೆಯನ್ನು ಹಿಂದಿನಂತೆ ಸಂರಕ್ಷಿಸಬೇಕಾಗಿದೆ, ಈ ಕಾರ್ಯಕ್ಕೆ ಮರು ಚಾಲನೆ ನೀಡಬೇಕು. ನದಿ, ತೊರೆ, ಹಳ್ಳಕೊಳ್ಳ ಹಾಗೂ ಜಲಾಶಯವನ್ನು ನಾಶ ಮಾಡಿ ಅಭಿವೃದ್ಧಿ ಮಾಡಬೇಕಿಲ್ಲ, ಅರಣ್ಯ, ಪರಿಸರ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಪ್ರತಿಪಾದಿಸಿದರು. ಕೀರೆಹೊಳೆಯಲ್ಲಿ ಟ್ರ್ಯಾಸ್ ಬ್ಯಾರಿಕೇಡ್ ಅಳವಡಿಸಿರುವುದರಿಂದ ಘನತ್ಯಾಜ್ಯ ವಿಲೇವಾರಿಗೆ ಸಹಕಾರಿಯಾಗಿದೆ. ಇದೊಂದು ರೀತಿಯ ಸಣ್ಣ ಪ್ರಯೋಗ ಎಂದರು. ಮನೆ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯಕ್ಕಾಗಿ ಮನವಿಗಳು ಬರುತ್ತವೆ, ಆದರೆ ಸ್ವಚ್ಚತಾ ಕಾರ್ಯಕ್ಕೆ ಮನವಿ ಮಾಡುವುದು ಕಡಿಮೆ. ‘ಕ್ಲೀನ್ ಕೂರ್ಗ್’ ತಂಡದವರು ಕೀರೆಹೊಳೆ…

Read More

ಕುಶಾಲನಗರ ಜೂ.15 NEWS DESK : ಕೊಡಗು ಜಿಲ್ಲೆಯ ಕುಶಾಲನಗರದ ಯುವ ಪ್ರತಿಭೆ ನಟಿ ಮಧುರ ಗೌಡ ಅವರು ನಟಿಸಿರುವ ಕನ್ನಡ ಚಲನಚಿತ್ರ ‘ಸಂಭವಾಮಿ ಯುಗೇ ಯುಗೇ’ ಈ ತಿಂಗಳ 21 ರಂದು ಬಿಡುಗಡೆಗೊಳ್ಳಲಿದೆ. ರಾಜ್ಯದಾದ್ಯಂತ ಏಕಕಾಲದಲ್ಲಿ ಪ್ರದರ್ಶನಗೊಳ್ಳಲಿರುವ ಮಧುರ ಗೌಡ ನಾಯಕಿಯಾಗಿ ನಟಿಸಿರುವ ಕನ್ನಡ ಚಲನಚಿತ್ರ ಕುಶಾಲನಗರದ ಸಿನಿ ಫ್ಲೆಕ್ಸ್ ಥಿಯೇಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಮಧುರ ಗೌಡ ಕುಶಾಲನಗರ ನಿವಾಸಿಗಳಾದ ಬೆಳ್ಯನ ಸುರೇಶ್ ಹಾಗೂ ಬಬಿತಾ ದಂಪತಿಗಳ ಪುತ್ರಿ.

Read More

ಕುಶಾಲನಗರ ಜೂ.15 NEWS DESK : ಕುಶಾಲನಗರ ವಾರದ ಸಂತೆ ನಡೆಯುವ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ತಲೆದೋರಿರುವ ಕೆಲವು ಸಮಸ್ಯೆಗಳನ್ನು ತಕ್ಷಣ ನಿವಾರಣೆ ಮಾಡುವ ನಿಟ್ಟಿನಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿದರು. ಕಳೆದ ಕೆಲವು ವರ್ಷಗಳಿಂದ ಕುಶಾಲನಗರ ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಾರದ ಸಂತೆ ನಡೆಯುತ್ತಿದ್ದು ಸಾರ್ವಜನಿಕರಿಂದ ಹಲವು ದೂರುಗಳು ಕೇಳಿ ಬಂದಿವೆ. ಸಂತೆ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ, ಹೆದ್ದಾರಿಯಲ್ಲಿ ವಾಹನ ಸಂಚಾರ ಸಮಸ್ಯೆ, ಸಂತೆ ಆವರಣದಲ್ಲಿ ಕಸ ವಿಲೇವಾರಿ ಸಮಸ್ಯೆಗಳ ಸೇರಿದಂತೆ ಸಮರ್ಪಕವಾಗಿ ಸಂತೆ ನಡೆಸುವ ಸಂಬಂಧ ಸ್ಥಳೀಯ ಪೊಲೀಸ್, ಕೃಷಿ ಮಾರುಕಟ್ಟೆ ಅಧಿಕಾರಿಗಳು ಮತ್ತು ಸಂತೆ ವ್ಯಾಪಾರಿಗಳ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಸಂತೆ ಪ್ರಾರಂಭವಾಗುವ ಸಂದರ್ಭ ಸಂಬಂಧಿಸಿದ ಅಧಿಕಾರಿಗಳು ಆ ಬಗ್ಗೆ ಗಮನಿಸಿ ಕ್ರಮ ಕೈಗೊಳ್ಳುವುದು. ಮಾರುಕಟ್ಟೆಯಲ್ಲಿ ಕೆಲವು ಮಧ್ಯವರ್ತಿಗಳು ವ್ಯಾಪಾರಿಗಳ ಮೇಲೆ ಅನಾವಶ್ಯಕ ಹಣ ವಸೂಲಿ ಬಗ್ಗೆ ದೂರುಗಳು…

Read More

ಮಡಿಕೇರಿ ಜೂ.15 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಎನ್‌ಡಿಎ ಮಿತ್ರ ಪಕ್ಷ ಜಾತ್ಯತೀತ ಜನತಾದಳದ ಪ್ರಮುಖರು ಮೂರ್ನಾಡಿನಲ್ಲಿ ಆತ್ಮೀಯವಾಗಿ ಬರ ಮಾಡಿಕೊಂಡರು. ಹೂವಿನ ಹಾರ ಹಾಕಿ, ಅಭಿನಂದನೆ ಸಲ್ಲಿಸಿ ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಜೆಡಿಎಸ್ ಹಾಗೂ ಬಿಜೆಪಿ ಪ್ರಮುಖರಿಗೆ ಸಂಸದ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬದ್ಧನಾಗಿರುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಮೂರ್ನಾಡು ವಲಯಾಧ್ಯಕ್ಷ ಶರತ್ ಕುಂತೋಡಿ, ನಗರಾಧ್ಯಕ್ಷ ಗಣೇಶ್ ಮತ್ತಿತರ ಪ್ರಮುಖರು, ಕಾರ್ಯಕರ್ತರು ಹಾಗೂ ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.

Read More

ಪರಿಶಿಷ್ಟ ಪಂಗಡದ ಕಾನೂನು ಪದವೀಧರರು : ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬಂಧ 2024-25ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ 3 ವರ್ಷಗಳ ಅಥವಾ ಪಿಯುಸಿ ನಂತರ 5 ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 15 ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿಯನ್ನು ಆನ್‍ಲೈನ್ ಮೂಲಕ…

Read More

ಮಡಿಕೇರಿ ಜೂ.15 NEWS DESK : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಾಡಾನೆಗಳ ಉಪಟಳ ನಿಯಂತ್ರಿಸುವಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವೈಜ್ಞಾನಿಕ ಕಾರ್ಯಕ್ರಮ ರೂಪಿಸಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದರು. ಕಾಡಾನೆ ಹಾವಳಿ ನಿಯಂತ್ರಿಸುವ ಸಂಬಂಧ ಸೋಲಾರ್ ತಂತಿಬೇಲಿ ಅಳವಡಿಸುವುದು, ಟ್ರಂಚ್‍ಗಳ ನಿರ್ಮಾಣ, ರೈಲ್ವೆ ಬ್ಯಾರಿಕೇಡ್ ಸೇರಿದಂತೆ ಹಲವು ಕ್ರಮ ಕೈಗೊಳ್ಳಬಹುದು ಎಂದರು. ಕೊಡಗು ವನ್ಯಜೀವಿ ಸಂಸ್ಥೆಯ ಮಾಜಿ ಅಧ್ಯಕ್ಷ ಕರ್ನಲ್(ನಿ) ಸಿ.ಪಿ.ಮುತ್ತಣ್ಣ ಮಾತನಾಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಚಲನವಲನಗಳ ಬಗ್ಗೆ ದಿನನಿತ್ಯ ಗಮನಹರಿಸಿ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು. ಕಾಡಾನೆ ಹಾವಳಿಯಿಂದ ಕೃಷಿಬೆಳೆ ಸಂರಕ್ಷಿಸುವಲ್ಲಿ ಅಗತ್ಯ ಕ್ರಮವಹಿಸಬೇಕಿದೆ. ಹಾಗೆಯೇ ಸ್ಥಳೀಯರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಿ, ಕಾಡಾನೆಗಳಿಂದ ರಕ್ಷಿಸಬೇಕಿದೆ ಎಂದು ಮುತ್ತಣ್ಣ ಸಲಹೆ ಮಾಡಿದರು. ಹೆಚ್ಚಿನ ತೊಂದರೆ ನೀಡುವ ಕಾಡಾನೆಗಳನ್ನು…

Read More

ಮಡಿಕೇರಿ ಜೂ.15  NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕರಿಸಿದರು. ನಗರದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ರಿಜಿಸ್ಟ್ರಾರ್ ಅಜ್ಜಿಕುಟ್ಟೀರ ಗಿರೀಶ್ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ಎಸ್.ತಮ್ಮಯ್ಯ, ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಬಾಚರಣಿಯಂಡ ಅಪ್ಪಣ್ಣ, ಕೊಡಗು ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಬಳಗದವರು ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು. ಅಧಿಕಾರ ಸ್ವೀಕಾರಕ್ಕೆ ಮೊದಲು ಮುಕ್ಕೋಡ್ಲು ವ್ಯಾಲಿ ಡ್ಯೂ ತಂಡದವರಿಂದ ಬಟ್ಟೆಪಾಟ್ ಹಾಡುವುದರ ಮೂಲಕ ಅಧ್ಯಕ್ಷರನ್ನು ಸಭಾಂಗಣಕ್ಕೆ ಕರೆತರಲಾಯಿತು. ನೆಲ್ಲಕ್ಕಿ ನಡುಬಾಡೆಯಲ್ಲಿ ಬಾಳೋಪಾಟ್ ತಂಡದವರು ಕಾವೇರಿ ಮಾತೆಯನ್ನು ಸ್ಥುತಿಸಿ ಹಾಡಿದರು. ನಂತರ ಚಾಮೆರ ದಿನೇಶ್ ಬೆಳ್ಯಪ್ಪನವರು ಒಕ್ಕಣೆ ಕಟ್ಟಿ ದೇವರ ಹೆಸರಿನಲ್ಲಿ ಅಧ್ಯಕ್ಷರ ಮುಂದಿನ ದಿನಗಳ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲೆಂದು ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅಕಾಡೆಮಿಯ ಸರ್ವಸದಸ್ಯರ ನೇಮಕಾತಿಯ ನಂತರ…

Read More